ರಾಜ್ಯ

ಸ್ಯಾಂಡಲ್‍ವುಡ್ ನಟ ನಿಖಿಲ್, ರೇವತಿ ದಂಪತಿಗೆ ಗಂಡು ಮಗು

ಬೆಂಗಳೂರು: ಸ್ಯಾಂಡಲ್‍ವುಡ್ ನಟ ನಿಖಿಲ್ ಕುಮಾರಸ್ವಾಮಿ ದಂಪತಿಗೆ ಇಂದು ಗಂಡು ಮಗು ಜನನವಾಗಿದೆ.ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ರೇವತಿ ಜನ್ಮ ನಿಡಿದ್ದಾರೆ. ಈ ಹಿನ್ನಲೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ತಾಯಿ, ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಮಾಜಿ ಸಿಎಂ ಹೆಚ್‍ಡಿಕೆ ಆಸ್ಪತ್ರೆಗೆ ಭೇಟಿ ನೀಡಿ ತಾಯಿ, ಮಗುವಿನ ಆರೋಗ್ಯ ವಿಚಾರಿಸಿದ್ದಾರೆ. ಹೆಚ್.ಡಿ ಕುಮಾರಸ್ವಾಮಿಯವರ ಪ್ರೀತಿಯ ಪುತ್ರ ನಿಖಿಲ್ ಕುಮಾರ್ ಸ್ವಾಮಿ ಪತ್ನಿ ರೇವತಿಗೆ ಕೆಲವು ದಿನಗಳ ಹಿಂದೆ ನಗರದ ಹೆಚ್‍ಎಸ್‍ಆರ್ […]

ಸ್ಯಾಂಡಲ್‍ವುಡ್ ನಟ ನಿಖಿಲ್, ರೇವತಿ ದಂಪತಿಗೆ ಗಂಡು ಮಗು Read More »

ಬೆಂಗಳೂರಿನಲ್ಲಿ ಮತ್ತೊಂದು ಸಿಲಿಂಡರ್ ಸ್ಪೋಟ| ಮೂವರು ದೇಹ ಛಿದ್ರಗೊಂಡು ದಾರುಣ ಸಾವು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಸಿಲಿಂಡರ್ ಸ್ಪೋಟದ ಸದ್ದು ಕೇಳಿಸಿದ್ದು, ಮತ್ತೊಂದು ದುರಂತ ಸಂಭವಿಸಿದೆ. ಮೊನ್ನೆಯಷ್ಟೇ ಅಪಾರ್ಟ್ ಮೆಂಟ್ ನಲ್ಲಿ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸಜೀವ ದಹನಗೊಂಡ ಘಟನೆ ಮಾಸುವ ಮುನ್ನವೇ ಇದೀಗ ಅಂಥದ್ದೇ ಮತ್ತೊಂದು ಅವಘಡ ಸಂಭವಿಸಿದೆ. ಬೆಂಗಳೂರಿನ ನಗರ್ತಪೇಟೆಯಲ್ಲಿ ಮನೆಯೊಳಗೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು, ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಚಾಮರಾಜಪೇಟೆಯ ರಾಯನ್ ಸರ್ಕಲ್ ಬಳಿಯ ಮನೆಯೊಂದರಲ್ಲಿ ಈ ದುರಂತ ಸಂಭವಿಸಿದೆ

ಬೆಂಗಳೂರಿನಲ್ಲಿ ಮತ್ತೊಂದು ಸಿಲಿಂಡರ್ ಸ್ಪೋಟ| ಮೂವರು ದೇಹ ಛಿದ್ರಗೊಂಡು ದಾರುಣ ಸಾವು Read More »

ಪಾಣತ್ತೂರು ಬಸ್ ದುರಂತ ಪ್ರಕರಣ| ವಿಶೇಷ ಪ್ರಕರಣವೆಂದು ಪರಿಗಣಿಸಿ ಪರಿಹಾರ ಮಂಜೂರು|

ಪುತ್ತೂರು: ಪುತ್ತೂರಿನ ಬಲ್ನಾಡುವಿನಿಂದ ಕೇರಳದ ಪಾಣತ್ತೂರಿಗೆ ಹೊರಟಿದ್ದ ಮದುವೆ ದಿಬ್ಬಣದ ಬಸ್ ಕೇರಳದ ಕಾಸರಗೋಡು ಜಿಲ್ಲೆಯ ಪಾಣತ್ತೂರು ಸಮೀಪದ ಪರಿಯಾರಂ ಎಂಬಲ್ಲಿ ಪಲ್ಟಿಯಾಗಿ ಬಸ್‌ನಲ್ಲಿದ್ದ 7 ಮಂದಿ ದಾರುಣ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಪರಿಹಾರ ಘೋಷಿಸಿದೆ. ವಿಮೆ ಅವಕಾಶ ಇಲ್ಲದಿದ್ದರೂ ಅಪಘಾತದಲ್ಲಿ ಮೃತಪಟ್ಟಿರುವ ಕುಟುಂಬಕ್ಕೆ ಪರಿಹಾರಕ್ಕಾಗಿ ಪುತ್ತೂರು ಶಾಸಕ ಸಂಜೀವ ಮಠಂದೂರು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಅವರ ಮನವಿಯಂತೆ ವಿಶೇಷ ಪ್ರಕರಣವೆಂದು ಪರಿಗಣಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೃತರ ಕುಟುಂಬಕ್ಕೆ ತಲಾ

ಪಾಣತ್ತೂರು ಬಸ್ ದುರಂತ ಪ್ರಕರಣ| ವಿಶೇಷ ಪ್ರಕರಣವೆಂದು ಪರಿಗಣಿಸಿ ಪರಿಹಾರ ಮಂಜೂರು| Read More »

ರಾಜ್ಯದಲ್ಲಿ ವಿಚಿತ್ರ ಜ್ವರ ಪತ್ತೆ| 170ಕ್ಕೂ ಅಧಿಕ ಮಕ್ಕಳು ಆಸ್ಪತ್ರೆಗೆ ದಾಖಲು|

ದಾವಣಗೆರೆ : ರಾಜ್ಯದಲ್ಲಿ ಮಕ್ಕಳಿಗೆ ವಿಚಿತ್ರ ರೀತಿಯ ಜ್ವರ ಕಂಡುಬಂದಿದ್ದು, ನೂರಾರು ಮಕ್ಕಳನ್ನು ಬಾಧಿಸುತ್ತಿದ್ದು, 171 ಮಕ್ಕಳು ಆಸ್ಪತ್ರೆಗೆ ದಾಖಲಾಗುವಂತಾಗಿದೆ. ದಾವಣಗೆರೆ ಜಿಲ್ಲೆಯಲ್ಲಿ ಹೀಗೆ ಹೊಸ ಮಾದರಿಯ ಜ್ವರ ಕಾಣಿಸಿಕೊಂಡಿದ್ದು, ಇಲ್ಲಿ ಹೊಸ ಥರದ ಡೆಂಘೆ ಜ್ವರ ಕಂಡುಬಂದಿದೆ. 171 ಮಕ್ಕಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ದಾವಣಗೆರೆ ಜಿಲ್ಲಾಸ್ಪತ್ರೆಯ ಮಕ್ಕಳ ವಿಭಾಗ, ಬಾಪೂಜಿ ಆಸ್ಪತ್ರೆ ಹಾಗೂ ಎಸ್.ಎಸ್. ಹೈಟೆಕ್ ಆಸ್ಪತ್ರೆಯಲ್ಲಿ ಒಟ್ಟು 171 ಮಕ್ಕಳು ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಇವರಲ್ಲಿ 45 ಮಕ್ಕಳು ಶಂಕಿತ ಡೆಂಘೆ ಜ್ವರದಿಂದ ಬಳಲುತ್ತಿದ್ದಾರೆ. ಎಲ್ಲರಿಗೂ

ರಾಜ್ಯದಲ್ಲಿ ವಿಚಿತ್ರ ಜ್ವರ ಪತ್ತೆ| 170ಕ್ಕೂ ಅಧಿಕ ಮಕ್ಕಳು ಆಸ್ಪತ್ರೆಗೆ ದಾಖಲು| Read More »

ಅರಣ್ಯಕ್ಕೆ ಬಿಟ್ಟ ಕೋತಿ ಗೊಬ್ಬರದ ಲಾರಿ ಏರಿ ಮತ್ತೆ ಪೇಟೆಗೆ | ಆ ಮರ್ಕಟನ ಕತೆಯೇ ರೋಚಕ|

ಚಿಕ್ಕಮಗಳೂರು: ರೇಗಿಸಿದವನ ಮೇಲೆ ಮತ್ತು ಇತರರ ಮೇಲೆ ದಾಳಿ ಮಾಡಿದ ಹಿನ್ನಲೆ ಕೋತಿಯನ್ನು ಸೆರೆಹಿಡಿದು 22 ಕಿ.ಮೀ. ದೂರದ ದಟ್ಟ ಅರಣ್ಯಕ್ಕೆ ಬಿಡಲಾಗಿದ್ದ ಕೋತಿ ನಾಲ್ಕೇ ದಿನಕ್ಕೆ ಗೊಬ್ಬರದ ಲಾರಿ ಏರಿ ಮತ್ತೆ ಅದೇ ಜಾಗಕ್ಕೆ ಬಂದಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಡೆದಿದೆ. ಸೆಪ್ಟೆಂಬರ್ 16 ರಂದು ಕೊಟ್ಟಿಗೆಹಾರ ಸಮೀಪದ ತುರುವೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿದ್ದ ಕೋತಿಯನ್ನು ಹಿಡಿಯಲು ಹೋದಾಗ ಅರಣ್ಯ ಇಲಾಖೆ ಸಿಬ್ಬಂದಿ ಜೊತೆ ಹೋಗಿದ್ದ ಆಟೋ ಚಾಲಕ ಕೋತಿಗೆ ರೇಗಿಸಿದ್ದರಿಂದ

ಅರಣ್ಯಕ್ಕೆ ಬಿಟ್ಟ ಕೋತಿ ಗೊಬ್ಬರದ ಲಾರಿ ಏರಿ ಮತ್ತೆ ಪೇಟೆಗೆ | ಆ ಮರ್ಕಟನ ಕತೆಯೇ ರೋಚಕ| Read More »

ಲಾರಿ- ಕ್ಯಾಂಟರ್ ಢಿಕ್ಕಿ| 8 ಎಮ್ಮೆಗಳ ಸಹಿತ ಓರ್ವ ಸ್ಥಳದಲ್ಲೇ ಸಾವು, ಮೂವರು ಗಂಭೀರ|

ವಿಜಯಪುರ: ಲಾರಿ-ಕ್ಯಾಂಟರ್ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಕೊಲ್ಹಾರ ತಾಲೂಕಿನ ರೋಣಿಹಾಳ ಬಳಿ ಹೆದ್ದಾರಿಯಲ್ಲಿ ಮಂಗಳವಾರ ನಡೆದಿದೆ. ಎಮ್ಮೆಗಳನ್ನು ತುಂಬಿಕೊಂಡು ಹುಬ್ಬಳ್ಳಿಯಿಂದ ಸೋಲಾಪುರ ಕಡೆಗೆ ಹೊರಟಿದ್ದ ಕ್ಯಾಂಟರ್ ಹಾಗೂ ವಿಜಯಪುರದಿಂದ ಹುಬ್ಬಳ್ಳಿ ಕಡೆಗೆ ಸರಕು ತುಂಬಿಕೊಂಡು ಹೊರಟಿದ್ದ ಲಾರಿ ಮಧ್ಯೆ ಅಪಘಾತ ಸಂಭವಿಸಿದೆ. ಕ್ಯಾಂಟರ್ ನಲ್ಲಿದ್ದ ಎಂಟು ಎಮ್ಮೆಗಳೂ ಅಪಘಾತದ ರಭಸಕ್ಕೆ ವಾಹನದ ಒಳಗೇ ಜೀವ ಕಳೆದುಕೊಂಡಿವೆ. ಲಾರಿಯಲ್ಲಿ ಸಿಲುಕಿದವರನ್ನು ಅಗ್ನಿಶಾಮಕದಳದ ಸಿಬ್ಬಂದಿ ಸ್ಥಳೀಯರ ಸಹಕಾರದಿಂದ ಹೊರತೆಗೆಯುವ ಕಾರ್ಯಾಚರಣೆ

ಲಾರಿ- ಕ್ಯಾಂಟರ್ ಢಿಕ್ಕಿ| 8 ಎಮ್ಮೆಗಳ ಸಹಿತ ಓರ್ವ ಸ್ಥಳದಲ್ಲೇ ಸಾವು, ಮೂವರು ಗಂಭೀರ| Read More »

ಇಂದು ಸಿಇಟಿ ಫಲಿತಾಂಶ ಪ್ರಕಟ

ಬೆಂಗಳೂರು: ವೃತ್ತಿಪರ ಶಿಕ್ಷಣ ಪ್ರವೇಶಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆ -ಸಿಇಟಿ ಬರೆದ ವಿದ್ಯಾರ್ಥಿಗಳ ಫಲಿತಾಂಶ ಇಂದು(ಸೆ.20) ಪ್ರಕಟವಾಗಲಿದೆ. 2021 ನೇ ಸಾಲಿನ ಸಿಇಟಿ ಆಗಸ್ಟ್ 28 ರಿಂದ 30ರವರೆಗೆ ನಡೆದಿತ್ತು.ಕರ್ನಾಟಕ ಪರೀಕ್ಷಾ ಪ್ರಾಧಿಕಾರ 20 ದಿನಗಳಲ್ಲೇ ಸಿಇಟಿ ಫಲಿತಾಂಶ ಪ್ರಕಟಿಸಲಿದೆ. ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಪ್ರಾಧಿಕಾರದ ಕಚೇರಿಯಲ್ಲಿ ಫಲಿತಾಂಶ ಪ್ರಕಟಿಸಲಿದ್ದಾರೆ. ನಂತರ ಸಂಜೆ 4 ಗಂಟೆಗೆ https://cetonline.karnataka.gov.in/kea ವೆಬ್ ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.

ಇಂದು ಸಿಇಟಿ ಫಲಿತಾಂಶ ಪ್ರಕಟ Read More »

ದೇವರನಾಡಲ್ಲಿ ದೇವ ಮೆಚ್ಚದ ಕಾರ್ಯ| ಬಾಲ್ಯವಿವಾಹಕ್ಕೆ ಸಾಥ್ ನೀಡಿದ ಹಲವರ ಮೇಲೆ‌ ಕೇಸ್|

ಮಲಪ್ಪುರಂ: ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಅಪ್ರಾಪ್ತೆಯೊಬ್ಬಳನ್ನು ಅದೇ ಸಮುದಾಯದ 25 ವರ್ಷದ ಯುವಕನಿಗೆ ಮದುವೆ ಮಾಡಿಕೊಟ್ಟ ಘಟನೆ ಮಲಪ್ಪುರಂ ಜಿಲ್ಲೆಯಲ್ಲಿ ನಡೆದಿದೆ. ಇದೊಂದು ಬಾಲ್ಯ ವಿವಾಹ ಅಪರಾಧವಾಗಿದ್ದು, ಈ ಸಂಬಂಧ ಪೋಷಕರ ಮತ್ತು ಮದುವೆ ಆಯೋಜಿಸಿದವರ ಹಾಗೂ ಯುವಕನ ವಿರುದ್ಧ ಕೇಸ್ ದಾಖಲಿಸಲಾಗಿದೆ. ಮಲಪ್ಪುರಂ ಜಿಲ್ಲೆಯ ಕರುವರಕುಂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಡಿಯೊಗ್ರಾಫರ್, ಅಡುಗೆ ತಯಾರಿಸಿದವರು, ಅತಿಥಿಗಳನ್ನು ಕೂಡ ಬಾಲ್ಯ ವಿವಾಹ ನಿಷೇಧ ಕಾಯಿದೆ ಅಡಿಯಲ್ಲಿ ಬುಕ್ ಮಾಡಲು ಚಿಂತನೆ ನಡೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ

ದೇವರನಾಡಲ್ಲಿ ದೇವ ಮೆಚ್ಚದ ಕಾರ್ಯ| ಬಾಲ್ಯವಿವಾಹಕ್ಕೆ ಸಾಥ್ ನೀಡಿದ ಹಲವರ ಮೇಲೆ‌ ಕೇಸ್| Read More »

ವಿಡಿಯೋದಲ್ಲಿರುವುದು ನಾನಲ್ಲ, ಅದೊಂದು ಫೇಕ್ ವಿಡಿಯೋ- ಸೆಕ್ಸ್ ವಿಡಿಯೋ ರಿಲೀಸ್ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿದ ಡಿವಿಎಸ್

ಬೆಂಗಳೂರು: ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಅವರು ವಿಡಿಯೋ ಕಾಲ್ ನಲ್ಲಿ ಅಶ್ಲೀಲವಾಗಿ ಮಾತನಾಡಿರುವುದು, ಲೈಂಗಿಕತೆಯಲ್ಲಿ ತೊಡಗಿರುವುದು ವಿಡಿಯೋ ಬಿಡುಗಡೆಯಾಗಿದೆ. ಕೇಂದ್ರದ ಮಾಜಿ ಸಚಿವ, ಮುಖ್ಯಮಂತ್ರಿ ಆಗಿದ್ದ ಸದಾನಂದ ಗೌಡರ ವಿಡಿಯೋ ವೈರಲ್ ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆಗೆ ಕಾರಣವಾಗಿದೆ. ಆಡಳಿತಾರೂಢ ಬಿಜೆಪಿ ಪಕ್ಷಕ್ಕೆ ಮುಜುಗರ ಉಂಟು ಮಾಡಿದೆ. ಯುವತಿಯೊಬ್ಬಳ ಜೊತೆ ವಿಡಿಯೋ ಕಾಲ್​ನಲ್ಲಿ ಸದಾನಂದ ಗೌಡ ಅಸಭ್ಯವಾಗಿ ಮಾತನಾಡಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಇನ್ನೊಂದು ಕಡೆ ಇದೊಂದು ಪೇಕ್ ವಿಡಿಯೋ ಎಂದು ಕೆಲವರು ಸಮರ್ಥಿಸಿರುವುದನ್ನು ಕೂಡ

ವಿಡಿಯೋದಲ್ಲಿರುವುದು ನಾನಲ್ಲ, ಅದೊಂದು ಫೇಕ್ ವಿಡಿಯೋ- ಸೆಕ್ಸ್ ವಿಡಿಯೋ ರಿಲೀಸ್ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿದ ಡಿವಿಎಸ್ Read More »

ಡಿ.ವಿ ಸದಾನಂದ ಗೌಡರದ್ದು ಎನ್ನಲಾದ ಸೆಕ್ಸ್ ವಿಡಿಯೋ ವೈರಲ್?

ಮಂಗಳೂರು: ರಮೇಶ್ ಜಾರಕಿಹೊಳಿ ಸೆಕ್ಸ್ ವಿಡಿಯೋ ವೈರಲ್ ಆದ ಬಳಿಕ ಕೇಂದ್ರ ಮಾಜಿ ಸಚಿವ, ಬಿಜೆಪಿಯ ಪ್ರಭಾವಿ ಮುಖಂಡ, ರಾಜ್ಯದ ಮಾಜಿ ಮುಖ್ಯಮಂತ್ರಿ ಸದಾನಂದ ಗೌಡರನ್ನು ಹೋಲುವ ವ್ಯಕ್ತಿಯ ನಗ್ನ ದೃಶ್ಯಾವಳಿಯ ವಿಡಿಯೋವೊಂದು ವೈರಲ್ ಆಗಿದೆ. ಕಳೆದ ಹಲವು ವರ್ಷಗಳಿಂದ ಸದಾನಂದ ಗೌಡರ ವಿಡಿಯೋ ಇದೆ ಎಂದು ಸುದ್ದಿ ಹಬ್ಬುತ್ತಿದ್ದು, ಇದೀಗ ನಿಜವಾಗುವ ಮೂಲಕ ಸದಾನಂದ ಗೌಡರು ಕೂಡಾ ರಮೇಶ್ ಜಾರಕಿಹೋಳಿ ಸಾಲಿಗೆ ಸೇರ್ಪಡೆಯಾಗಿದ್ದಾರೆಯೇ ಎಂಬ ಅನುಮಾನ ಕಾಡುತ್ತಿದೆ. ವಿಡಿಯೋದಲ್ಲಿ ಅದು ತೋರಿಸಿ ಇದು ತೋರಿಸಿ ಎಂದು

ಡಿ.ವಿ ಸದಾನಂದ ಗೌಡರದ್ದು ಎನ್ನಲಾದ ಸೆಕ್ಸ್ ವಿಡಿಯೋ ವೈರಲ್? Read More »