ರಾಜ್ಯ

ಬೆಂಗಳೂರಿನಲ್ಲಿ ತಡರಾತ್ರಿ ನಡೆಯಿತು ಅರೆನಗ್ನ ರೇವ್ ಪಾರ್ಟಿ| ಡ್ರಗ್ಸ್ ನಶೆಯಲ್ಲಿದ್ದ ಹಲವರು ಪೊಲೀಸ್ ವಶಕ್ಕೆ|

ಬೆಂಗಳೂರು: ಆನೇಕಲ್ ಸಮೀಪ ಮಧ್ಯರಾತ್ರಿ ರೇವ್ ಪಾರ್ಟಿ ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಡ್ರಗ್ಸ್ ನಶೆಯಲ್ಲಿದ್ದ ಕೆಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ರೆಸಾರ್ಟ್ ಗೆ ಹೊಂದಿಕೊಂಡಿರುವ ನಿರ್ಜನ ಪ್ರದೇಶದಲ್ಲಿ ರೇವ್ ಪಾರ್ಟಿ ನಡೆಸಲಾಗಿದೆ. ಉದ್ಯಮಿಗಳ ಮಕ್ಕಳು, ವಿದ್ಯಾರ್ಥಿಗಳು ಹಾಗೂ ಉದ್ಯೋಗಿಗಳು ಡಿಜೆ. ಕಲರ್ ಫುಲ್ ಲೈಟಿಂಗ್, ಡ್ರಗ್ಸ್ ನೊಂದಿಗೆ ಭರ್ಜರಿ ಪಾರ್ಟಿ ನಡೆಸಿದ್ದಾರೆ. ಮಾಹಿತಿ ತಿಳಿದ ಪೊಲೀಸರು ದಾಳಿ ಮಾಡಿದ್ದಾರೆ. ಪೊಲೀಸ್ ದಾಳಿಯ ವೇಳೆ ಅಲ್ಲಿದ್ದವರು ಪರಾರಿಯಾಗಿದ್ದು, ಬೆನ್ನಟ್ಟಿದ ಪೊಲೀಸರು 12 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆನೇಕಲ್ ಸಮೀಪದ […]

ಬೆಂಗಳೂರಿನಲ್ಲಿ ತಡರಾತ್ರಿ ನಡೆಯಿತು ಅರೆನಗ್ನ ರೇವ್ ಪಾರ್ಟಿ| ಡ್ರಗ್ಸ್ ನಶೆಯಲ್ಲಿದ್ದ ಹಲವರು ಪೊಲೀಸ್ ವಶಕ್ಕೆ| Read More »

ಪೆಟ್ರೋಲ್, ಡೀಸೆಲ್‌ ಬೆಲೆ ಇಳಿಸೋದಕ್ಕಾಗಲ್ಲ, ಅಂತಹ ಪರಿಸ್ಥಿತಿ ಇದೆ – ಯಡಿಯೂರಪ್ಪ

ಬೆಂಗಳೂರು: ಇಂದಿನ ಪರಿಸ್ಥಿತಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸುವುದು ಕಷ್ಟ ಎಂದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸದ್ಯದ ಸ್ಥಿತಿಯಲ್ಲಿ ಇಂಧನ ದರ ಇಳಿಸಲು ಸಾಧ್ಯವಿಲ್ಲದ ಪರಿಸ್ಥಿತಿ ಇದೆ ಎಂದು ಹೇಳಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿದೆ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದರೆ ಇವತ್ತಿನ ಪರಿಸ್ಥಿತಿಯಲ್ಲಿ ಇಂಧನ ದರ ಇಳಿಕೆ ಮಾಡುವ ಸ್ಥಿತಿಯಲ್ಲಿ ನಮ್ಮ ಸರ್ಕಾರ ಇಲ್ಲ. ಕೇಂದ್ರ ಸರ್ಕಾರ ಮುಂದಿನ ದಿನಗಳಲ್ಲಿ ಯಾವ ತೀರ್ಮಾನ ತೆಗೆದುಕೊಳ್ಳುತ್ತೋ

ಪೆಟ್ರೋಲ್, ಡೀಸೆಲ್‌ ಬೆಲೆ ಇಳಿಸೋದಕ್ಕಾಗಲ್ಲ, ಅಂತಹ ಪರಿಸ್ಥಿತಿ ಇದೆ – ಯಡಿಯೂರಪ್ಪ Read More »

ಪೆಟ್ರೋಲ್, ಡೀಸೆಲ್ ಜಿಎಸ್ ಟಿ ಅಡಿ ಸೇರಿಸಲು ನಿರಾಕರಿಸಿದ ಜಿಎಸ್ ಟಿ ಮಂಡಳಿ| ಹಲವು ತೆರಿಗೆಗಳ ಏರಿಳಿತ| ವರದಿ‌ ಮಂಡಿಸಿದ ನಿರ್ಮಲಾ ಸೀತಾರಾಮನ್

ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಕೈಗೊಂಡ ನಿರ್ಧಾರಗಳ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರಕಟಿಸಿದ್ದಾರೆ.ಕೌನ್ಸಿಲ್ ಸಭೆಯಲ್ಲಿ ಕೊರೋನಾ ಸಂಬಂಧಿತ ಔಷಧಿಗಳ ಮೇಲಿನ ರಿಯಾಯಿತಿ ತೆರಿಗೆ ದರಗಳನ್ನು ಡಿಸೆಂಬರ್ 31 ರವರೆಗೆ ವಿಸ್ತರಿಸಿದೆ.ಆದರೆ, ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್‌ಟಿ ಅಡಿಯಲ್ಲಿ ಸೇರಿಸಲು ಒಪ್ಪಿಗೆ ದೊರೆತಿಲ್ಲ. ದರ ಬದಲಾದ ವಸ್ತುಗಳ ಪಟ್ಟಿ ಔಷಧೀಯ ಇಲಾಖೆಯಿಂದ ಶಿಫಾರಸು ಮಾಡಲಾದ 7 ಔಷಧಿಗಳ ಮೇಲಿನ ಜಿಎಸ್‌ಟಿಯನ್ನು ಡಿಸೆಂಬರ್ 31, 2021 ರವರೆಗೆ 12% ರಿಂದ 5% ಕ್ಕೆ ಇಳಿಸಲಾಗಿದೆ. ಕ್ಯಾನ್ಸರ್

ಪೆಟ್ರೋಲ್, ಡೀಸೆಲ್ ಜಿಎಸ್ ಟಿ ಅಡಿ ಸೇರಿಸಲು ನಿರಾಕರಿಸಿದ ಜಿಎಸ್ ಟಿ ಮಂಡಳಿ| ಹಲವು ತೆರಿಗೆಗಳ ಏರಿಳಿತ| ವರದಿ‌ ಮಂಡಿಸಿದ ನಿರ್ಮಲಾ ಸೀತಾರಾಮನ್ Read More »

ಮೈಸೂರು: ನಟ ದರ್ಶನ್ ಫಾರ್ಮ್ ಹೌಸ್ ನಲ್ಲಿ ಅಪ್ರಾಪ್ತೆಯ ಅತ್ಯಾಚಾರ| ಆರೋಪಿ ಬಂಧನ

ಮೈಸೂರು, ಸೆಪ್ಟೆಂಬರ್ 17: ಸ್ಯಾಂಡಲ್ ವುಡ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಾಲೀಕತ್ವದ ಫಾರಂ ಹೌಸ್‌ನಲ್ಲಿ ವ್ಯಕ್ತಿಯೊಬ್ಬ ಅಪ್ರಾಪ್ತೆಯ ಮೇಲೆ ಅತ್ಯಾಾಚಾರ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಟಿ. ನರಸೀಪುರ ರಸ್ತೆಯಲ್ಲಿರುವ ಫಾರಂ ಹೌಸ್‌ನಲ್ಲಿ ಕೆಲಸ‌ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಕುಟುಂಬವೊಂದರ ಅಪ್ರಾಪ್ತೆ ಮೇಲೆ ಸೆ.13ರಂದು ಸೋಮವಾರ ರಾತ್ರಿ ಅದೇ ತೋಟದಲ್ಲಿ ಕುದುರೆಗೆ ಲಾಳ ಹೊಡೆಯುವ ಕೆಲಸ ಮಾಡಿಕೊಂಡಿದ್ದ ವ್ಯಕ್ತಿ ಅತ್ಯಾಚಾರ ನಡೆಸಿದ್ದಾನೆ ಎಂಬುದು ಗೊತ್ತಾಗಿದೆ.ಈ ಸಂಬಂಧ ಮೈಸೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯಿದೆಯಡಿ ಪ್ರಕರಣ

ಮೈಸೂರು: ನಟ ದರ್ಶನ್ ಫಾರ್ಮ್ ಹೌಸ್ ನಲ್ಲಿ ಅಪ್ರಾಪ್ತೆಯ ಅತ್ಯಾಚಾರ| ಆರೋಪಿ ಬಂಧನ Read More »

ಎಡಿಜಿಪಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಅರ್ಜಿ ಅಂಗೀಕಾರ| ಒಪ್ಪಿಗೆ ಸೂಚಿಸಿದ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್|

ಬೆಂಗಳೂರು: ಎಡಿಜಿಪಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಅರ್ಜಿಗೆ ಪೊಲೀಸ್​​ ಮಹಾನಿರ್ದೇಶಕ ಪ್ರವೀಣ್ ಸೂದ್​ರಿಂದ ಒಪ್ಪಿಗೆ ಸಿಕ್ಕಿದೆ. ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಅರ್ಜಿಗೆ ಡಿಜಿ, ಐಜಿಪಿ ಒಪ್ಪಿಗೆ ಸೂಚಿಸಿದ್ದಾರೆ. ಕ್ಲಿಯರೆನ್ಸ್ ನೀಡಿ ರಾಜ್ಯ ಸರ್ಕಾರಕ್ಕೆ ಕಡತ ರವಾನೆ ಮಾಡಲಾಗಿದೆ. ಸರ್ಕಾರದ ಗೃಹ ಇಲಾಖೆಗೆ ಕಡತ ರವಾನಿಸಲಾಗಿದೆ. ಇನ್ನು ರಾಜ್ಯ ಸರ್ಕಾರದ ‌ಮಟ್ಟದಲ್ಲಿ ಒಪ್ಪಿಗೆ ಸೂಚಿಸುವುದು ಬಾಕಿ ಇದೆ. ಎಡಿಜಿಪಿ ಭಾಸ್ಕರ್ ರಾವ್ ಅವರು ಸೇವೆಯಿಂದ ಸ್ವಯಂ ನಿವೃತ್ತಿ ಆಶಿಸಿ ಕರ್ನಾಟಕ ಸರ್ಕಾರಕ್ಕೆ ಅರ್ಜಿ ಸಲ್ಲಿಸಿರುವುದು ಈ

ಎಡಿಜಿಪಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಅರ್ಜಿ ಅಂಗೀಕಾರ| ಒಪ್ಪಿಗೆ ಸೂಚಿಸಿದ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್| Read More »

ರಾಷ್ಟ್ರೀಯ ನಿರುದ್ಯೋಗ ದಿನ ಆಚರಿಸಿದ ಯುವ ಕಾಂಗ್ರೆಸ್ – ಬೃಹತ್ ಪ್ರತಿಭಟನಾ ಜಾಥ ಆಯೋಜನೆ

ಬೆಂಗಳೂರು: ದೇಶದ ಯುವ ಸಮೂಹ ಸೇರಿದಂತೆ ಎಲ್ಲಾ ವರ್ಗಗಳನ್ನು ಅತೀವ ಸಂಕಷ್ಟಕ್ಕೆ ದೂಡಿರುವ, ಅತಿ ಹೆಚ್ಚು ನಿರುದ್ಯೋಗ ಸೃಷ್ಟಿ ಮಾಡಿರುವ ಪ್ರಧಾನಮಂತ್ರಿ ನರೇಂದ್ರಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರದ ವಿರುದ್ಧ ಪ್ರದೇಶ ಯುವ ಕಾಂಗ್ರೆಸ್ಸಿನಿಂದ ರಾಷ್ಟ್ರೀಯ ನಿರುದ್ಯೋಗ ದಿನ ಆಚರಿಸಲಾಯಿತು. ನರೇಂದ್ರ ಮೋದಿ ಅವರ ಜನ್ಮ ದಿನವನ್ನು ರಾಷ್ಟ್ರೀಯ ನಿರುದ್ಯೋಗ ದಿನವನ್ನಾಗಿ ಆಚರಿಸುತ್ತಿದ್ದು, ಕೇಂದ್ರ ಸರ್ಕಾರದ ವಿರುದ್ಧ ಯುವ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಯುವ ಕಾಂಗ್ರೆಸ್ಸಿನ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿ.ವಿ ಮತ್ತು ರಾಜ್ಯ ಯುವ ಕಾಂಗ್ರೆಸ್

ರಾಷ್ಟ್ರೀಯ ನಿರುದ್ಯೋಗ ದಿನ ಆಚರಿಸಿದ ಯುವ ಕಾಂಗ್ರೆಸ್ – ಬೃಹತ್ ಪ್ರತಿಭಟನಾ ಜಾಥ ಆಯೋಜನೆ Read More »

ಸ್ವಯಂ ನಿವೃತ್ತಿ ಗಾಗಿ ಪತ್ರ ಬರೆದ ಎಡಿಜಿಪಿ ಭಾಸ್ಕರ ರಾವ್| ಈ ನಿರ್ಧಾರದ ಹಿಂದಿನ‌ ಅಸಲಿಯತ್ತೇನು?

ಬೆಂಗಳೂರು : ರೈಲ್ವೆ ಪೊಲೀಸ್ ವಿಭಾಗದ ಎಡಿಜಿಪಿ ಆಗಿರುವ ಭಾಸ್ಕರ್ ರಾವ್ ಅವರು ಸೇವೆಯಿಂದ ಸ್ವಯಂ ನಿವೃತ್ತಿ ಬಯಸಿ ರಾಜ್ಯ ಸರಕಾರಕ್ಕೆ ಪತ್ರ ಬರೆದಿದ್ದಾರೆ. ಭಾಸ್ಕರ ರಾವ್ ಅವರು, ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ತಾನು ಸ್ವಯಂನಿವೃತ್ತಿ ಪಡೆಯುತ್ತಿದ್ದೇನೆ. ಈ ಸಂಬಂಧ ನನ್ನ ಕೋರಿಕೆಯನ್ನು ಪರಿಗಣಿಸಬೇಕು ಎಂದು ಕೋರಿರುವ ಪತ್ರವನ್ನು ರಾಜ್ಯ ಸರಕಾರಕ್ಕೆ ನೀಡಿರುವುದಾಗಿ ಹೇಳಲಾಗುತ್ತಿದೆ. ಸ್ವಯಂ ನಿವೃತ್ತಿ ಪಡೆದ ಬಳಿಕ ಭಾಸ್ಕರ್ ರಾವ್ ಅವರು ರಾಜಕೀಯ ಪ್ರವೇಶಿಸಲಿದ್ದಾರೆ ಎನ್ನಲಾಗುತ್ತಿದೆ. ರಾಜಕೀಯ ಪ್ರವೇಶದ ಬಳಿಕ ಬಸವನಗುಡಿ ಅಥವಾ ಮಲ್ಲೇಶ್ವರ

ಸ್ವಯಂ ನಿವೃತ್ತಿ ಗಾಗಿ ಪತ್ರ ಬರೆದ ಎಡಿಜಿಪಿ ಭಾಸ್ಕರ ರಾವ್| ಈ ನಿರ್ಧಾರದ ಹಿಂದಿನ‌ ಅಸಲಿಯತ್ತೇನು? Read More »

ಕೆ ಎಸ್ಆರ್ ಟಿಸಿ ಬಸ್ಸೊಳಗೆ ಕಿಸ್ ನೀಡಿ ಇಳಿದು ಹೋದ ಕಾಮುಕ| ಅನಿರೀಕ್ಷಿತ ಘಟನೆಯಿಂದ ದಂಗಾದ ಯುವತಿ

ಬೆಂಗಳೂರು: ದೇಶದಲ್ಲಿ ಹೆಣ್ಮಕ್ಕಳ ಮೇಲೆ ಒಂದಿಲ್ಲೊಂದು ದೌರ್ಜನ್ಯಗಳು ನಡೆಯುತ್ತಿದ್ದು ಇಡೀ ಮಹಿಳಾ ಸಮಾಜ ಆತಂಕಗೊಳ್ಳುವಂತಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ನಗರದ ಬಸ್ಸೊಂದರಲ್ಲಿ ವಿಚಿತ್ರ ಘಟನೆ ನಡೆದಿದ್ದು ಮಹಿಳಾ ಪ್ರಯಾಣಿಕರನ್ನು ಆತಂಕಕ್ಕೆ ಈಡು ಮಾಡಿದೆ.ಸಿನಿಮಾ ರೀತಿಯಲ್ಲಿ ಕಾಮುಕನೊಬ್ಬ ವಿದ್ಯಾರ್ಥಿನಿಗೆ ಬಸ್ನಲ್ಲಿ ಕಿಸ್ ಮಾಡಿ ಓಡಿ ಹೋಗಿದ್ದಾನೆ. ಬಳ್ಳಾರಿಯಿಂದ ಬೆಂಗಳೂರಿಗೆ ಬರ್ತಿದ್ದ ಕೆಎಸ್ಆರ್ಟಿಸಿ ಬಸ್ ಹೆಸರುಘಟ್ಟ ಕ್ರಾಸ್ ತಲುಪುತ್ತಿದ್ದ ಹಾಗೆ ಮುತ್ತು ಕೊಟ್ಟ ಮಹಾಶಯ ಬಸ್ ಇಳಿದು ಹೋಗಿದ್ದಾನೆ. ಯುವತಿ ನಿದ್ದೆ ಮಂಪರಿನಲ್ಲಿದ್ದ ಕಾರಣ ಕೂಡಲೇ ಪ್ರತಿರೋಧಿಸಲು ಸಾಧ್ಯವಾಗಿಲ್ಲ. ಏನು

ಕೆ ಎಸ್ಆರ್ ಟಿಸಿ ಬಸ್ಸೊಳಗೆ ಕಿಸ್ ನೀಡಿ ಇಳಿದು ಹೋದ ಕಾಮುಕ| ಅನಿರೀಕ್ಷಿತ ಘಟನೆಯಿಂದ ದಂಗಾದ ಯುವತಿ Read More »

ದೇಗುಲಗಳ ತೆರವು ಕುರಿತಂತೆ ಸರಕಾರದ ನಡೆ ಖಂಡಿಸಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

ಮಂಗಳೂರು: ಮೈಸೂರು ಪುರಾತನ ದೇವಸ್ಥಾನ ದ್ವಂಸ ಮತ್ತು ರಾಜ್ಯದಾದ್ಯಂತ ದೇವಸ್ಥಾನಗಳನ್ನು ತೆರವುಗೊಳಿಸುವ ಸರಕಾರದ ನಡೆಯನ್ನು ವಿಶ್ವ ಹಿಂದು ಪರಿಷತ್ ಬಜರಂಗದಳ ಖಂಡಿಸಿ ನಗರದ ಕದ್ರಿ ಮಲ್ಲಿಕಟ್ಟೆ ದ್ವಾರದ ಬಳಿ ಬಳಿ ಸೆ.16 ರ ಗುರುವಾರ ಪ್ರತಿಭಟನೆ ನಡೆಸಿತು. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಆದಿಶಕ್ತಿ ಶ್ರೀ ಮಹದೇವಮ್ಮ ಭೈರವೇಶ್ವರ ಪುರಾತನ ದೇವಸ್ಥಾನವನ್ನು ಬಲವಂತದಿಂದ ಒಡೆದು ಹಾಕಿರುವ ಈ ಕೃತ್ಯವನ್ನು ಹಾಗು ರಾಜ್ಯದಾದ್ಯಂತ ದೇವಸ್ಥಾನಗಳನ್ನು ತೆರವುಗೊಳಿಸುವ ಸರ್ಕಾರದ ನಡೆಯನ್ನು ಖಂಡಿಸಿದ ವಿಶ್ವ ಹಿಂದು ಪರಿಷತ್ ಬಜರಂಗದಳ ತಕ್ಷಣ ಸರಕಾರ

ದೇಗುಲಗಳ ತೆರವು ಕುರಿತಂತೆ ಸರಕಾರದ ನಡೆ ಖಂಡಿಸಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ Read More »

ಮೈಸೂರು: ದೇಗುಲಗಳ ತೆರವಿಗೆ ತಾತ್ಕಾಲಿಕ ಬ್ರೇಕ್

ಮೈಸೂರು : ಮೈಸೂರಿನಲ್ಲಿ ದೇಗುಲಗಳ ತೆರವು ಕಾರ್ಯಕ್ಕೆ ಮೈಸೂರು ಜಿಲ್ಲಾಡಳಿತವು ತಾತ್ಕಾಲಿಕ ಬ್ರೇಕ್ ಹಾಕಿದ್ದು, ರಾಜ್ಯ ಸರ್ಕಾರದ ಮುಂದಿನ ಆದೇಶ ಬರೋವರೆಗೆ ಯಾಥಾಸ್ಥಿತಿ ಮುಂದುವರೆಸಲು ಆದೇಶ ನೀಡಿದೆ. ನಂಜನಗೂಡು ದೇಗುಲ ತೆರುವು ಕಾರ್ಯ ವಿಚಾರಕ್ಕೆ ರಾಜ್ಯ ಸರ್ಕಾರ ನೋಟಿಸ್ ಬಂದಿದ್ದು, ಹೀಗಾಗಿ ಸದ್ಯಕ್ಕೆ ಮೈಸೂರಿನಲ್ಲಿ ದೇಗುಲಗಳ ತೆರವು ಕಾರ್ಯಕ್ಕೆ ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ. ಸರ್ಕಾರದ ನಿರ್ದೇಶನ ಬರುವವರೆಗೆ ಯಾವುದೇ ದೇಗುಲಗಳ ತೆರವು ಕಾರ್ಯಾಚರಣೆ ಇರುವುದಿಲ್ಲ ಎಂದು ಮೈಸೂರು ಜಿಲ್ಲಾಧಿಕಾರಿ ಗೌತಮ್ ತಿಳಿಸಿದ್ದಾರೆ.

ಮೈಸೂರು: ದೇಗುಲಗಳ ತೆರವಿಗೆ ತಾತ್ಕಾಲಿಕ ಬ್ರೇಕ್ Read More »