ರಾಜ್ಯ

ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಸಿ.ಎಂ‌ ಉದಾಸಿ ಇನ್ನಿಲ್ಲ

ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದಂತ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಸಿಎಂ ಉದಾಸಿ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯ ಪೀಡಿತರಾಗಿದ್ದ ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಸಿಎಂ ಉದಾಸಿ(77)ಯವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇಂತಹ ಶಾಸಕ ಸಿಎಂ ಉದಾಸಿ, ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿರುವ ಹಾವೇರಿ ಜಿಲ್ಲೆ, ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಸಿ.ಎಂ.ಉದಾಸಿ ಅವರ ಪರಿಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್ ಮೂಲಕ […]

ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಸಿ.ಎಂ‌ ಉದಾಸಿ ಇನ್ನಿಲ್ಲ Read More »

ಸಿ ಇ ಟಿ ಮುಹೂರ್ತ ಫಿಕ್ಸ್ | ಆ. 28 29 ರಂದು ಪರೀಕ್ಷೆ : ಡಿಸಿಎಂ ಡಾ. ಎಎನ್

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದ ವೃತ್ತಿಪರ ಕೋರ್ಸ್ ಗಳ ಪ್ರವೇಶ ಪರೀಕ್ಷೆ ಸಿಇಟಿ ನಡೆಸಲು ರಾಜ್ಯ ಶಿಕ್ಷಣ ಸಚಿವಾಲಯ ನಿರ್ಧರಿಸಿದೆ. ಇಂದು ನಡೆದ ಸಭೆಯಲ್ಲಿ ಆಗಸ್ಟ್ ತಿಂಗಳ 28 ಮತ್ತು 29ರಂದು ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ ಅಶ್ವತ್ ನಾರಾಯಣ್ ತಿಳಿಸಿದ್ದಾರೆ. ಇಂದು ಉನ್ನತ ಮಟ್ಟದ ಶಿಕ್ಷಣ ತಜ್ಞರುಗಳು, ಇಲಾಖೆ ಅಧಿಕಾರಿಗಳು ಹಾಗೂ ಶಿಕ್ಷಣ ಸಚಿವ ಸುರೇಶ್ ಕುಮಾರ್ ಉಪಸ್ಥಿತಿಯಲ್ಲಿ ನಡೆದ ಸಭೆಯ ಬಳಿಕ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ

ಸಿ ಇ ಟಿ ಮುಹೂರ್ತ ಫಿಕ್ಸ್ | ಆ. 28 29 ರಂದು ಪರೀಕ್ಷೆ : ಡಿಸಿಎಂ ಡಾ. ಎಎನ್ Read More »

ಪ್ರಧಾನಿಗೆ ಆಗಾಗ ಸುದ್ದಿಯಲ್ಲಿರುವ ಶೋಕಿ: ಕರ್ನಾಟಕ ಕಾಂಗ್ರೆಸ್

ಬೆಂಗಳೂರು: ಮೋದಿ ಅವರಿಗೆ ಆಗಾಗ ಸುದ್ದಿಯಲ್ಲಿರುವುದು ಶೋಕಿ ಎಂದು ಟ್ವೀಟ್ ಮಾಡುವ ಮೂಲಕ ಕರ್ನಾಟಕ ಕಾಂಗ್ರೆಸ್ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಟೀಕಿಸಿದೆ. ಕೋವಿಡ್ ನಿಗ್ರಹಿಸುವಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಪ್ರಧಾನಿ ನರೇಂದ್ರಮೋದಿ ಅವರಿಗೆ ಆಗಾಗ ಸುದ್ದಿಯಲ್ಲಿರುವ ಶೋಕಿ, ಖಾಲಿ ಡಬ್ಬದಂತೆ ಟೆಲಿಪ್ರಾಂಪ್ಟರ್ ಎದುರು ಕುಳಿತು ಸದ್ದು ಮಾಡುವುದೇ ಅವರ ಖಯಾಲಿ. ಲಸಿಕೆ ನೀಡುವಲ್ಲಿ ವಿಫಲವಾಗಿ, ಹುರುಳಿಲ್ಲದ ಮಾತುಗಳನ್ನು ಹೆಡ್ ಲೈನ್ ಗಳನ್ನಾಗಿ ಸುವುದೇ ಮೋದಿ ತಂತ್ರ. ಧೈರ್ಯವಿದ್ದರೆ ಪತ್ರಿಕಾಗೋಷ್ಠಿ ನಡೆಸಿ ದೇಶದ

ಪ್ರಧಾನಿಗೆ ಆಗಾಗ ಸುದ್ದಿಯಲ್ಲಿರುವ ಶೋಕಿ: ಕರ್ನಾಟಕ ಕಾಂಗ್ರೆಸ್ Read More »

ಕೋವಿಡ್ 3ನೇ ಅಲೆ ಎದುರಿಸಲು ರಾಜ್ಯವನ್ನು ಸನ್ನದ್ಧವಾಗಿಸುವ ಗುರಿ | ₹1500 ಕೋ. ರೂ. ವೆಚ್ಚದಲ್ಲಿ ಮೂಲಸೌಕರ್ಯ ಅಭಿವೃದ್ಧಿ: ಡಾ. ಅಶ್ವಥ್ ನಾರಾಯಣ್

ಬೆಂಗಳೂರು: ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಸಹಯೋಗದಲ್ಲಿ ಕೋವಿಡ್ ಎರಡನೇ ಅಲೆಯನ್ನು ಸಮರ್ಪಕ ರೀತಿಯಲ್ಲಿ ಎದುರಿಸುತ್ತಿದೆ. ಇನ್ನು ಮೂರನೇ ಅಲೆಯ ಮುನ್ಸೂಚನೆ ಇದ್ದು ಅದನ್ನು ಎದುರಿಸಲು ರಾಜ್ಯವನ್ನು ಎಲ್ಲಾ ರೀತಿಯಲ್ಲಿ ಸನ್ನದ್ಧವಾಗಿರಿಸುವ ಗುರಿ ಹೊಂದಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಹೇಳಿದ್ದಾರೆ. ಇಂದು ನಡೆದ ಕೋವಿಡ್ ಟಾಸ್ಕ್ ಫೋರ್ಸ್ ಸಭೆಯ ಬಳಿಕ ಮಾತನಾಡಿದ ಅಶ್ವತ್ ನಾರಾಯಣ್, ರಾಜ್ಯದಲ್ಲಿ ಕೊರೋನ ಮೂರನೇ ಎದುರಿಸುವ ದೃಷ್ಟಿಯಲ್ಲಿ ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿಗೊಳಿಸಲು ₹1500 ಕೋಟಿ ವೆಚ್ಚ ಮಾಡಲು ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ಕೋವಿಡ್ 3ನೇ ಅಲೆ ಎದುರಿಸಲು ರಾಜ್ಯವನ್ನು ಸನ್ನದ್ಧವಾಗಿಸುವ ಗುರಿ | ₹1500 ಕೋ. ರೂ. ವೆಚ್ಚದಲ್ಲಿ ಮೂಲಸೌಕರ್ಯ ಅಭಿವೃದ್ಧಿ: ಡಾ. ಅಶ್ವಥ್ ನಾರಾಯಣ್ Read More »

ದ.ಕ ಜಿಲ್ಲೆಯಲ್ಲಿ ನಾಳೆ(ಜೂ.8)ಯಿಂದ ಟಫ್ ರೂಲ್ಸ್ ಜಾರಿ, ಅನಗತ್ಯ ತಿರುಗಾಟ ಮಾಡಿದರೆ ಜೋಕೆ- ಡಿಸಿ ರಾಜೇಂದ್ರ

ಮಂಗಳೂರು. ಜೂನ್ 7: ರಾಜ್ಯ ಸರ್ಕಾರ ರಾಜ್ಯವನ್ನು ಅನ್‌ಲಾಕ್ ಮಾಡುವುದಕ್ಕೆ ರೂಪುರೇಷೆ ಸಿದ್ಧಪಡಿಸುತ್ತಿದೆ. ಆದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರ ಮಂಗಳವಾರದಿಂದ ಪ್ರತ್ಯೇಕ ಟಫ್ ರೂಲ್ಸ್ ಜಾರಿಯಾಗಲಿದೆ. ಜೂ.8 ರಿಂದಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಠಿಣ ನಿಯಮ ಜಾರಿಯಾಗಲಿದ್ದು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಕೋವಿಡ್ ನಿಯಂತ್ರಣ ಸಭೆಯಲ್ಲಿ ಅಧಿಕಾರಿಗಳು ತೀರ್ಮಾನ ಮಾಡಿದ್ದಾರೆ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆದ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಜಂಟಿಯಾಗಿ ನಡೆದ ಸಭೆಯಲ್ಲಿ ತೀರ್ಮಾನ ಮಾಡಲಾಗಿದ್ದು, ಮಂಗಳೂರು ನಗರ ಭಾಗದಲ್ಲಿ ಹೆಚ್ಚಿನ

ದ.ಕ ಜಿಲ್ಲೆಯಲ್ಲಿ ನಾಳೆ(ಜೂ.8)ಯಿಂದ ಟಫ್ ರೂಲ್ಸ್ ಜಾರಿ, ಅನಗತ್ಯ ತಿರುಗಾಟ ಮಾಡಿದರೆ ಜೋಕೆ- ಡಿಸಿ ರಾಜೇಂದ್ರ Read More »

‘ಕೆಲಸ ಮಾಡುವ ಟೈಂನಲ್ಲಿ ವರ್ಗಾವಣೆ ಮಾಡಿದ್ರು. ಮಗಳು ತವರು ಮನೆ ಬಿಟ್ಟು ಹೋಗುವಂತೆ ಹೋಗ್ತಿದೇನೆ’- ರೋಹಿಣಿ ಸಿಂಧೂರಿ

ಮೈಸೂರು, ಜೂನ್ 7: ಮೈಸೂರು ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಹಾಗೂ ಮಹಾನಗರ ಪಾಲಿಕೆ ಆಯುಕ್ತೆಯಾಗಿದ್ದ ಶಿಲ್ಪಾನಾಗ್ ನಡುವಿನ ಜಟಾಪಟಿ ರಾಜ್ಯಮಟ್ಟದಲ್ಲಿ ಭಾರೀ ಚರ್ಚೆಗೆ ಒಳಗಾಗಿತ್ತು.ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್‌ರನ್ನು ವರ್ಗಾವಣೆ ಮಾಡಿ, ಅವರ ಜಾಗಕ್ಕೆ ಬೇರೆ ಅಧಿಕಾರಿಗಳನ್ನು ನಿಯೋಜಿಸಿದೆ.ಐಎಎಸ್ ಅಧಿಕಾರಿಯಾಗಿರುವ ರೋಹಿಣಿ ಸಿಂಧೂರಿಯನ್ನು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ ಹೆಚ್ಚುವರಿ ಆಯುಕ್ತರಾಗಿ ವರ್ಗಾವಣೆ ಮಾಡಿದ್ದು, 2020ರಲ್ಲಿ ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗುವುದಕ್ಕೂ ಮುನ್ನ ರೋಹಿಣಿ

‘ಕೆಲಸ ಮಾಡುವ ಟೈಂನಲ್ಲಿ ವರ್ಗಾವಣೆ ಮಾಡಿದ್ರು. ಮಗಳು ತವರು ಮನೆ ಬಿಟ್ಟು ಹೋಗುವಂತೆ ಹೋಗ್ತಿದೇನೆ’- ರೋಹಿಣಿ ಸಿಂಧೂರಿ Read More »

ಮುಖ್ಯಮಂತ್ರಿ ಆಮೇಲೆ ಆಗುವಿರಂತೆ, ಮೊದಲು ಕೋವಿಡ್ ನಿಯಂತ್ರಣದ ಕೆಲಸ ಮಾಡಿ: ಶಾಸಕರ ಕಿವಿಹಿಂಡಿದ ಯಡ್ಡಿ

ಬೆಂಗಳೂರು: ನಾಯಕತ್ವ ಬದಲಾವಣೆ, ಸಹಿ ಸಂಗ್ರಹಣೆ, ರಾಜಕೀಯ ಹೇಳಿಕೆಗಳನ್ನು ನೀಡುವುದನ್ನು ಬಿಟ್ಟು ನಿಮ್ಮ ಕ್ಷೇತ್ರದಲ್ಲಿ ಕೋವಿಡ್ ನಿಯಂತ್ರಣಕ್ಕೆ ಕೆಲಸ ಮಾಡಿ ಎಂದು ತಮ್ಮ ಶಾಸಕರಿಗೆ ಬಿಎಸ್ ಯಡಿಯೂರಪ್ಪ ಬುದ್ದಿವಾದ ಹೇಳಿದ್ದಾರೆ. ಯಡಿಯೂರಪ್ಪ ಅವರ ಪರವಾಗಿ ಸಹಿ ಸಂಗ್ರಹಿಸಿ ಹೈಕಮಾಂಡ್ ಗೆ ನೀಡುತ್ತೇವೆ ಎಂದು ಮಾಜಿ ಸಚಿವ ಹಾಗೂ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಹೇಳಿದ್ದರು. ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಬಿಜೆಪಿಯೊಳಗಡೆ ಅಧಿಕಾರ ಕಿತ್ತಾಟದ ಮಧ್ಯೆ ಈ ಹೇಳಿಕೆ ಬಂದಿತ್ತು. ಇದಕ್ಕೆ ಪ್ರತಿಪಕ್ಷಗಳು ಕೂಡ ಭಾರೀ ಟೀಕೆಯನ್ನು ಮಾಡಿದ್ದರು. ಇದರಿಂದ

ಮುಖ್ಯಮಂತ್ರಿ ಆಮೇಲೆ ಆಗುವಿರಂತೆ, ಮೊದಲು ಕೋವಿಡ್ ನಿಯಂತ್ರಣದ ಕೆಲಸ ಮಾಡಿ: ಶಾಸಕರ ಕಿವಿಹಿಂಡಿದ ಯಡ್ಡಿ Read More »

ಜೂನ್ 21ರಿಂದ ದೇಶವಾಸಿಗಳಿಗೆ ಉಚಿತ ಲಸಿಕೆ: ಪ್ರಧಾನಿ ಮೋದಿ ಘೋಷಣೆ

ನವದೆಹಲಿ: ಜೂನ್ 21ರಿಂದ ಕೇಂದ್ರದಿಂದಲೇ ಎಲ್ಲರಿಗೂ ಉಚಿತ ಕೊರೊನಾ ಲಸಿಕೆ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಇಂದು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಮೋದಿ ದೀಪಾವಳಿವರೆಗೂ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿಯಲ್ಲಿ ಉಚಿತ ಪಡಿತರ ವಿತರಿಸಲಾಗುವುದು ಎಂದು ತಿಳಿಸಿದರು. ಮೋದಿ ಭಾಷಣದ ಸಾರಾಂಶವೇನು?:ಕೊರೊನಾ ಎರಡನೇ ಅಲೆಯ ವಿರುದ್ಧ ಭಾರತ ಹೋರಾಡುತ್ತಿದ್ದು, ಅನೇಕು ತಮ್ಮವರನ್ನು ಕಳೆದುಕೊಂಡಿದ್ದಾರೆ. ಇದು 100 ವರ್ಷಗಳಲ್ಲಿಯೇ ಅತಿ ದೊಡ್ಡ ಮಹಾಮಾರಿ. ಕೋವಿಡ್ ವಿರುದ್ಧ ಹೋರಾಟದ ವೇಳೆ ದೇಶದಲ್ಲಿಯೇ ಹೊಸ ಆರೋಗ್ಯ ವ್ಯವಸ್ಥೆ

ಜೂನ್ 21ರಿಂದ ದೇಶವಾಸಿಗಳಿಗೆ ಉಚಿತ ಲಸಿಕೆ: ಪ್ರಧಾನಿ ಮೋದಿ ಘೋಷಣೆ Read More »

ಜೂ.14 ರ ಬಳಿಕ ರಾಜ್ಯ ಅನ್ ಲಾಕ್ ಪ್ಲ್ಯಾನ್ ಮಾಡ್ತಿದಾರೆ ಸಿಎಂ | ಹೇಗಿರುತ್ತೆ ಅನ್ಲಾಕ್ ಗೊತ್ತಾ?

ಬೆಂಗಳೂರು: ಕೊರೊನಾ ಮಹಾಮಾರಿ ಕಟ್ಟಿ ಹಾಕಲು ವಿಧಿಸಲಾಗಿರೋ ಸೆಕೆಂಡ್ ರೌಂಡ್ ಲಾಕ್ಡೌನ್ ಇಂದಿಗೆ ಮುಗಿದಿದ್ದು, ಇವತ್ತಿನಿಂದ ಮೂರನೇ ಭಾಗ ಶುರುವಾಗಿದೆ. ಹಿಂದಿನ ಗೈಡ್ಲೈನ್ಸ್ ಪ್ರಕಾರವೇ ಜೂನ್ 14ರವರೆಗೂ ಜನ ಮನೆಯಲ್ಲೇ ಲಾಕ್ ಆಗಿರಬೇಕಿದೆ. ಆದ್ರೆ ಜೂನ್ 14 ರ ಬಳಿಕ ರಾಜ್ಯ ಅನ್ಲಾಕ್ ಆಗುತ್ತಾ ಅಥವಾ ಮುಂದುವರಿಯುತ್ತಾ ಅನ್ನೋ ಕುತೂಹಲ ಈಗ ಜನರಿಗೆ ಉಳಿದಿದೆ. ಇವತ್ತಿನಿಂದ ಮತ್ತೊಂದು ಸುತ್ತಿನ ಒಂದು ವಾರದ ಲಾಕ್ ಡೌನ್ ‌ಶುರುವಾಗಿದ್ದು, ಜೂನ್ 14 ರವರೆಗೂ ವಿಸ್ತರಣೆಯಾಗಿರೋ ಈ ಲಾಕ್ಡೌನ್ಗೆ ತೆರೆ ಎಳೆಯೋ

ಜೂ.14 ರ ಬಳಿಕ ರಾಜ್ಯ ಅನ್ ಲಾಕ್ ಪ್ಲ್ಯಾನ್ ಮಾಡ್ತಿದಾರೆ ಸಿಎಂ | ಹೇಗಿರುತ್ತೆ ಅನ್ಲಾಕ್ ಗೊತ್ತಾ? Read More »

ಕೆಂಪೇಗೌಡ ವಿಮಾನ ನಿಲ್ದಾಣ ಬಳಿ ಸ್ಫೋಟ : ಕಾರ್ಮಿಕರಿಗೆ ಗಾಯ

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ಇಂದು ಮದ್ಯಾಹ್ನ ಸಿಲಿಂಡರ್ ಸ್ಫೋಟ ಸಂಭವಿಸಿದ್ದು, ಆರು ಮಂದಿ ಕಾರ್ಮಿಕರು ಗಾಯಗೊಂಡಿದ್ದಾರೆ. ವಿಮಾನ ನಿಲ್ದಾಣದ ಟರ್ಮಿನಲ್ ಹಾಗೂ ರಸ್ತೆಗೆ ಸಂಚಾರ ಸಂಕೇತಗಳ ಪಟ್ಟಿಗಳನ್ನು ಹಾಕುವ ಕೆಲಸ ಕೆಲ ದಿಗಳಿಂದ ನಡೆಯತ್ತಿತ್ತು. ಸ್ಥಳದಲ್ಲಿ ರಾಸಾಯನಿಕ ಡಬ್ಬಿ ಹಾಗೂ ಇತರೆ ಸಲಕರಣೆಗಳನ್ನು ಇರಿಸಲಾಗಿತ್ತು. ಇಂದು ಕೆಲಸಗಾರರು ಬಣ್ಣವನ್ನು ರಾಸಾಯನಿಕದ ಜೊತೆ ಮಿಶ್ರಣ ಮಾಡಿ ಸಿಲಿಂಡರ್ ಬಳಸಿ ಕಾಯಿಸುತ್ತಿದ್ದರು. ಇದೇ ಸಂದರ್ಭದಲ್ಲೇ ಏಕಾಏಕಿ ಸ್ಫೋಟ ಸಂಭವಿಸಿ ಬೆಂಕಿ ಹೊತ್ತಿಕೊಂಡಿದೆ ಪರಿಣಾಮ 6 ಮಂದಿ

ಕೆಂಪೇಗೌಡ ವಿಮಾನ ನಿಲ್ದಾಣ ಬಳಿ ಸ್ಫೋಟ : ಕಾರ್ಮಿಕರಿಗೆ ಗಾಯ Read More »