ರಾಜ್ಯ

ಬಲ‌ಕಳೆದುಕೊಂಡ‌ ಮುಂಗಾರು| ಮತ್ತೆ ಬರ ಭೀತಿಯತ್ತ ಕರ್ನಾಟಕ

ಸಮಗ್ರ ನ್ಯೂಸ್: ಕರ್ನಾಟಕದ ಪಶ್ಚಿಮ ಘಟ್ಟಗಳ ಭಾಗ, ಕರಾವಳಿ, ಹಲವು ಒಳನಾಡು ಜಿಲ್ಲೆಗಳಲ್ಲಿ ಅಬ್ಬರಿಸಿದ್ದ ಮುಂಗಾರು ಮಳೆ ಇದೀಗ ತಗ್ಗಿದೆ. ರಾಜ್ಯಾದ್ಯಂತ ದುರ್ಬಲಗೊಂಡಿದ್ದು, ಕರಾವಳಿ ಹಾಗೂ ಮಲೆನಾಡು ಸೇರಿ ಕೇವಲ 7 ಜಿಲ್ಲೆಗಳಲ್ಲಿ ಮಾತ್ರವೇ ಭಾರೀ ಮಳೆ ನಿರೀಕ್ಷೆ ಇದೆ. ಉಳಿದಂತೆ ಒಣಹವೆ ಮುಂದುವರಿಯುವ ಸಾಧ್ಯತೆಗಳು ಇವೆ ಎಂದು ಭಾರತೀಯ ಹವಾಮಾನ ಇಲಾಖೆಯ (ಐಎಂಡಿ) ರಾಜ್ಯದ ಪ್ರಾದೇಶಿಕ ಕೇಂದ್ರ ಮುನ್ಸೂಚನೆ ನೀಡಿದೆ. ಕಳೆದ ಎರಡು ವಾರಗಳಿಂದ ಸಾಧಾರಣದಿಂದ ಭಾರೀ, ಅತೀ ಭಾರೀ ಮಳೆ ಕಂಡಿದ್ದ ರಾಜ್ಯದ ವಿವಿಧ […]

ಬಲ‌ಕಳೆದುಕೊಂಡ‌ ಮುಂಗಾರು| ಮತ್ತೆ ಬರ ಭೀತಿಯತ್ತ ಕರ್ನಾಟಕ Read More »

ರಾಜ್ಯದ ಸರ್ಕಾರಿ ಬಸ್ ಗಳಲ್ಲಿ ಧೂಮಪಾನ, ತಂಬಾಕು, ಗುಟ್ಕಾ ಸೇವನೆ ಸಂಪೂರ್ಣ ನಿಷೇದ| ತಪ್ಪಿದಲ್ಲಿ ಬೀಳಲಿದೆ ಭಾರೀ ದಂಡ

ಸಮಗ್ರ ನ್ಯೂಸ್: ರಾಜ್ಯದ ಪ್ರಯಾಣಿಕರ ಆರೋಗ್ಯ ಮತ್ತು ಹಿತದೃಷ್ಟಿಯಿಂದ ಸಾರಿಗೆ ಇಲಾಖೆಯ ಎಲ್ಲಾ ನಿಗಮಗಳ ಸಾರ್ವಜನಿಕ ಬಸ್ಸುಗಳಲ್ಲಿ ಗುಟ್ಕಾ, ತಂಬಾಕು ಸೇವನೆ ಹಾಗೂ ಧೂಮಪಾನ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲು ಸಾರಿಗೆ ಸಚಿವರು ಆದೇಶಿಸಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯರಾದ ಶ್ರೀ ಮೋಹನ್ ಕುಮಾರ್ ದಾನಪ್ಪ ಅವರು ರಾಜ್ಯದ ಸಾರ್ವಜನಿಕ ಬಸ್ಸುಗಳಲ್ಲಿ ತಂಬಾಕು, ಗುಟ್ಕಾ ತಿನ್ನುವುದು ಹಾಗೂ ಧೂಮಪಾನ ಮಾಡುವುದರಿಂದ ಇತರೆ ಪ್ರಯಾಣಿಕರಿಗೆ, ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳಿಗೆ ತೊಂದರೆಯಾಗುತ್ತಿರುವುದನ್ನು ಗಮನಿಸಿ,

ರಾಜ್ಯದ ಸರ್ಕಾರಿ ಬಸ್ ಗಳಲ್ಲಿ ಧೂಮಪಾನ, ತಂಬಾಕು, ಗುಟ್ಕಾ ಸೇವನೆ ಸಂಪೂರ್ಣ ನಿಷೇದ| ತಪ್ಪಿದಲ್ಲಿ ಬೀಳಲಿದೆ ಭಾರೀ ದಂಡ Read More »

ರಾಜ್ಯದಲ್ಲಿ ಮತ್ತೆ ದುರ್ಬಲಗೊಳ್ಳಲಿದೆ ಮುಂಗಾರು| ಜು.10ರಿಂದ ಮಳೆ‌ ಪ್ರಮಾಣ ತೀವ್ರ ಕುಸಿತಗೊಳ್ಳುವ ಸಾಧ್ಯತೆ

ಸಮಗ್ರ ನ್ಯೂಸ್: ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲವು ವಾರಗಳಿಂದ ನಿರೀಕ್ಷಿತ ಮಳೆ ಆಗದೇ ಕೇವಲ ತಂಪು ವಾತಾವರಣ ನಿರ್ಮಾಣವಾಗಿದೆ. ಇನ್ನೂ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಚುರುಕಾಗಿದ್ದು, ಅಬ್ಬರಿಸಿದ್ದ ಮುಂಗಾರು ಮಳೆ ಏಕಾಎಕಿ ದುರ್ಬಲಗೊಂಡಿದೆ. ಭಾರೀ ಮಳೆ ಬಂದ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮತ್ತೆ ಬಿಸಿಲಿನ ವಾತಾವರಣ ಸೃಷ್ಟಿಯಾಗಿದೆ. ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಇಂದಿನ ಮುನ್ಸೂಚನೆ ಪ್ರಕಾರ, ಶುಕ್ರವಾರವರೆಗೆ ಮಾತ್ರವೇ ರಾಜ್ಯದಲ್ಲಿ ಮಳೆ ಆಗಲಿದೆ. ‘ರೆಡ್

ರಾಜ್ಯದಲ್ಲಿ ಮತ್ತೆ ದುರ್ಬಲಗೊಳ್ಳಲಿದೆ ಮುಂಗಾರು| ಜು.10ರಿಂದ ಮಳೆ‌ ಪ್ರಮಾಣ ತೀವ್ರ ಕುಸಿತಗೊಳ್ಳುವ ಸಾಧ್ಯತೆ Read More »

ರಾ.ಹೆದ್ದಾರಿ 275ರ ಮಾಣಿ – ಸಂಪಾಜೆ ರಸ್ತೆ ದುರಸ್ತಿಗೆ 49.22 ಕೋಟಿ ಅನುದಾನ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಹಾಗೂ ಒಳನಾಡು ಪ್ರದೇಶಗಳ ಸಂಪರ್ಕ ಕೊಂಡಿಯಾಗಿರುವ ರಾ.ಹೆ. 275ರ ಮಾಣಿ-ಸಂಪಾಜೆ ಹೆದ್ದಾರಿಯ ದುರಸ್ತಿ ಕಾಮಗಾರಿಗೆ ಕೇಂದ್ರ ಸರ್ಕಾರ 49.22 ಕೋಟಿ ರು.ಗಳ ವಿಶೇಷ ಅನುದಾನ ಮಂಜೂರು ಮಾಡಿದೆ. ಇದರ ಬೆನ್ನಲ್ಲೇ ಈ ಹೆದ್ದಾರಿಯನ್ನು ಚತುಷ್ಪಥವಾಗಿ ಮೇಲ್ದರ್ಜೆಗೇರಿಸುವ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ಪ್ರಕ್ರಿಯೆ ತ್ವರಿತಗೊಳಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಮಂಗಳವಾರ ಹೆದ್ದಾರಿ ಸಚಿವಾಲಯದ ಕಾರ್ಯದರ್ಶಿ ಬಿ. ಉಮಾಶಂಕರ್ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ. ದೆಹಲಿಯಲ್ಲಿ

ರಾ.ಹೆದ್ದಾರಿ 275ರ ಮಾಣಿ – ಸಂಪಾಜೆ ರಸ್ತೆ ದುರಸ್ತಿಗೆ 49.22 ಕೋಟಿ ಅನುದಾನ Read More »

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಜುಲೈ 8 ರಿಂದ 10 ರವರೆಗೆ ಮೂರು ದಿನಗಳ ಕಾಲ ಅತಿ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ, ಮಲೆನಾಡು ಹಾಗೂ ಘಟ್ಟ ಪ್ರದೇಶಗಳಲ್ಲಿ ಅತಿ ಭಾರೀ ಮಳೆಯಾಗುವ ಸಾಧ್ಯೆತ ಇದೆ ರಾಜ್ಯ ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ 50-60 ಕಿ.ಮೀ. ವೇಗದ ಗಾಳಿ ಸಹಿತ ಭಾರೀ ಮಳೆಯಾಗಲಿದ್ದು, ಬೆಳಗಾವಿ ಘಟ್ಟ ಪ್ರದೇಶ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ ಮುನ್ಸೂಚನೆ Read More »

ಮೂರು ತಿಂಗಳಲ್ಲಿ 57 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ, ಸಾಲಮನ್ನಾ‌ ಬಗ್ಗೆ ಪರಿಶೀಲನೆ – ಸಿಎಂ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದ ಯುವಜನತೆಗೆ ಇಲ್ಲೊಂದು ಭರವಸೆಯ ಸುದ್ದಿ ಇದೆ. ಮುಂಬರುವ ಮೂರು ತಿಂಗಳ ಅವಧಿಯಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಬರೋಬ್ಬರಿ 57 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಲಬುರಗಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದ ಸ್ಥಳೀಯ ವೃಂದದ 15 ಸಾವಿರ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಸೇರಿದಂತೆ ಒಟ್ಟು 57 ಸಾವಿರ

ಮೂರು ತಿಂಗಳಲ್ಲಿ 57 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ, ಸಾಲಮನ್ನಾ‌ ಬಗ್ಗೆ ಪರಿಶೀಲನೆ – ಸಿಎಂ Read More »

ಭಾರೀ ಮಳೆ‌ ಹಿನ್ನೆಲೆ| ದ. ಕನ್ನಡ ಸೇರಿ ವಿವಿಧ ಜಿಲ್ಲೆಗಳಲ್ಲಿ ನಾಳೆ(ಜು.8) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ರಾಜ್ಯದ ಹಲವು ಕಡೆ ಮಳೆ ಅಬ್ಬರ ಮುಂದುವರೆದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಾಳೆಯೂ ಹಲವು ಕಡೆ ಶಾಲೆಗಳಿಗೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ನೀಡಲಾಗಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನಲ್ಲಿ ನಿರಂತರ ಮಳೆ ಹಿನ್ನೆಲೆಯಲ್ಲಿ ಸಾಗರ ತಾಲೂಕಿನ ಶಾಲಾ, ಕಾಲೇಜುಗಳಿಗೆ ನಾಳೆ ರಜೆ ನೀಡಲಾಗಿದೆ. ಸಾಗರ ತಹಶೀಲ್ದಾರ್ ಪ್ರತಿಭಾ ಶಾಲೆ ಕಾಲೇಜುಗಳಿಗೆ ರಜೆ ನೀಡಿ ಆದೇಶ ಹೊರಡಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ

ಭಾರೀ ಮಳೆ‌ ಹಿನ್ನೆಲೆ| ದ. ಕನ್ನಡ ಸೇರಿ ವಿವಿಧ ಜಿಲ್ಲೆಗಳಲ್ಲಿ ನಾಳೆ(ಜು.8) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Read More »

ರಾಜ್ಯಾದ್ಯಂತ ಮುಂದಿನ‌ 3 ದಿನ ಭಾರೀ ಮಳೆ ಸಾಧ್ಯತೆ| 11 ಜಿಲ್ಲೆಗಳಲ್ಲಿ ಆರೆಂಜ್ ಹಾಗೂ 8 ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಮುಂದಿನ 48 ಗಂಟೆಗಳ ಕಾಲ ವರುಣನ ಆರ್ಭಟ ಹೆಚ್ಚಾಗಲಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆಯು (IMD) ಭಾರಿ ಮಳೆ ಮುನ್ನೆಚ್ಚರಿಕೆ ನೀಡಿದೆ. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಅತಿ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ರಾಜ್ಯದ ಒಟ್ಟು 11 ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದ್ದು, ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇರುವ 8 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಜಾರಿ ಮಾಡಲಾಗಿದೆ. ವಿಶೇಷವಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ

ರಾಜ್ಯಾದ್ಯಂತ ಮುಂದಿನ‌ 3 ದಿನ ಭಾರೀ ಮಳೆ ಸಾಧ್ಯತೆ| 11 ಜಿಲ್ಲೆಗಳಲ್ಲಿ ಆರೆಂಜ್ ಹಾಗೂ 8 ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ Read More »

ಭಾರೀ ಮಳೆ ಹಿನ್ನಲೆ| ರಾಜ್ಯದ ಈ ಜಿಲ್ಲೆಗಳಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದ ವಿವಿಧ ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಐದು ತಾಲ್ಲೂಕುಗಳ ಶಾಲಾ-ಕಾಲೇಜು ಹಾಗೂ ಅಂಗನವಾಡಿಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ, ಜೋಯಿಡಾ, ದಾಂಡೇಲಿ ಹಾಗೂ ಯಲ್ಲಾಪುರ ತಾಲ್ಲೂಕುಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಈ ಐದೂ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಬರುವ

ಭಾರೀ ಮಳೆ ಹಿನ್ನಲೆ| ರಾಜ್ಯದ ಈ ಜಿಲ್ಲೆಗಳಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ Read More »

ಗೃಹಜ್ಯೋತಿ ಪರಿಷ್ಕರಣೆ ವೇಳೆ ಹೊಸ ಬಾಡಿಗೆದಾರರು ಆತಂಕಪಡುವ ಅಗತ್ಯವಿಲ್ಲ – ಬೆಸ್ಕಾಂ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹ ಜ್ಯೋತಿ’ ಯೋಜನೆಯ ಫಲಾನುಭವಿಗಳ ಮಾಹಿತಿ ಪರಿಶೀಲನಾ ಪ್ರಕ್ರಿಯೆಯು ಜುಲೈ 1, 2026 ರಿಂದ ಆರಂಭವಾಗಿದ್ದು, ಬಾಡಿಗೆದಾರರು ತಮ್ಮ ಆಧಾರ್ ವಿವರಗಳ ನವೀಕರಣ (ಅಪ್ಡೇಟ್) ಕುರಿತು ಯಾವುದೇ ಗೊಂದಲ ಅಥವಾ ಆತಂಕ ಪಡಬೇಕಾಗಿಲ್ಲ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಸ್ಪಷ್ಟಪಡಿಸಿದೆ. ​ಮನೆ ಮನೆ ಸಮೀಕ್ಷೆ ನಡೆಸಲಿರುವ ಬೆಸ್ಕಾಂ ಮೀಟರ್ ರೀಡರ್ ಹಾಗೂ ಸಿಬ್ಬಂದಿ, ಹಳೆಯ ಬಾಡಿಗೆದಾರರ ಆಧಾರ್ ವಿವರಗಳನ್ನು ತೆಗೆದುಹಾಕಿ ಪ್ರಸ್ತುತ ವಾಸವಿರುವ ಬಾಡಿಗೆದಾರರ ಆಧಾರ್ ಸಂಖ್ಯೆಯನ್ನು

ಗೃಹಜ್ಯೋತಿ ಪರಿಷ್ಕರಣೆ ವೇಳೆ ಹೊಸ ಬಾಡಿಗೆದಾರರು ಆತಂಕಪಡುವ ಅಗತ್ಯವಿಲ್ಲ – ಬೆಸ್ಕಾಂ Read More »