ಬಂಟ್ವಾಳ: ಯಕ್ಷಗಾನವನ್ನು ಅರ್ಧಕ್ಕೇ ನಿಲ್ಲಿಸಿದ ಪೊಲೀಸರು| ವಿಡಿಯೋ ವೈರಲ್ ಬೆನ್ನಲ್ಲೇ ಸರ್ಕಾರದ ವಿರುದ್ಧ ಭಾರೀ ಆಕ್ರೋಶ
ಸಮಗ್ರ ನ್ಯೂಸ್: ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಸಮೀಪದ ಸಜೀಪಮುನ್ನೂರು ಎಂಬಲ್ಲಿ ಗಣೇಶೋತ್ಸವ ಪ್ರಯುಕ್ತ ನಡೆಯುತ್ತಿದ್ದ ಯಕ್ಷಗಾನ ಪ್ರದರ್ಶನವನ್ನು ಪೊಲೀಸರು ಅರ್ಧದಲ್ಲಿಯೇ ನಿಲ್ಲಿಸಿದ ವಿಚಾರ ಈಗ ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದೆ. ರಾತ್ರಿ 10 ಗಂಟೆ ನಂತರ ಧ್ವನಿವರ್ಧಕ ಬಳಸುವಂತಿಲ್ಲ ಎಂಬ ನಿಯಮವನ್ನು ಮುಂದಿಟ್ಟು ಯಕ್ಷಗಾನ, ನಾಟಕ ಮತ್ತಿತರ ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳನ್ನು ನಿಲ್ಲಿಸುವ ಘಟನೆಗಳು ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚೆಚ್ಚು ವರದಿಯಾಗುತ್ತಿವೆ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆಗಳಲ್ಲಿ ಯಕ್ಷಗಾನ ಪ್ರದರ್ಶನಗಳನ್ನು ಅರ್ಧದಲ್ಲಿಯೇ ನಿಲ್ಲಿಸಿದ […]










