ರಾಜ್ಯ

ದೇಶಾದ್ಯಂತ ಇಂದು ಸಂಭ್ರಮದ 79ನೇ ಸ್ವಾತಂತ್ರ್ಯ ದಿನಾಚರಣೆ| ಪ್ರಧಾನಿ ಮೋದಿಯಿಂದ ಸತತ 12ನೇ ಬಾರಿ ಧ್ವಜಾರೋಹಣ

ಸಮಗ್ರ ನ್ಯೂಸ್: ಆಗಸ್ಟ್ 15 ರ ಇಂದು ಭಾರತವು 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ದೇಶಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ಪ್ರಯುಕ್ತ ಇಂದು ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿ, ದೇಶವನ್ನುದ್ದೇಶಿ ಮಾತನಾಡಲಿದ್ದಾರೆ. ಭಾರತವು ಆಗಸ್ಟ್ 15, 2025 ರಂದು ತನ್ನ 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಿದೆ, ಇದನ್ನು ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಐತಿಹಾಸಿಕ ಕೆಂಪು ಕೋಟೆಯಿಂದ ಮುನ್ನಡೆಸಲಿದ್ದಾರೆ. ಪ್ರಧಾನ ಮಂತ್ರಿಗಳು ಐತಿಹಾಸಿಕ ಸ್ಮಾರಕದ ಕೋಟೆಯಿಂದ ರಾಷ್ಟ್ರಧ್ವಜಾರೋಹಣ ಮಾಡಿ ಇಡೀ ರಾಷ್ಟ್ರವನ್ನು […]

ದೇಶಾದ್ಯಂತ ಇಂದು ಸಂಭ್ರಮದ 79ನೇ ಸ್ವಾತಂತ್ರ್ಯ ದಿನಾಚರಣೆ| ಪ್ರಧಾನಿ ಮೋದಿಯಿಂದ ಸತತ 12ನೇ ಬಾರಿ ಧ್ವಜಾರೋಹಣ Read More »

ಧರ್ಮಸ್ಥಳ ವಿಚಾರದಲ್ಲಿ ದೊಡ್ಡ ಷಡ್ಯಂತ್ರ ನಡೆದಿದೆ – ಡಿಕೆಶಿ

ಸಮಗ್ರ ನ್ಯೂಸ್: “ಧರ್ಮಸ್ಥಳ ವಿಚಾರದಲ್ಲಿ ದೊಡ್ಡ ಷಡ್ಯಂತ್ರ ನಡೆದಿದೆ. ಇದನ್ನು ಯಾರು ಮಾಡಿದ್ದಾರೆ ಎಂದು ನಾನು ಹೇಳುವುದಿಲ್ಲ. ಧರ್ಮಸ್ಥಳದ ಆಡಳಿತ ಮಂಡಳಿ ಮೇಲೆ ಕಪ್ಪು ಚುಕ್ಕೆ ತರಲು ಅತ್ಯಂತ ವ್ಯವಸ್ಥಿತವಾಗಿ ಷಡ್ಯಂತ್ರ ರೂಪಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ವಿಧಾನಸಭೆ ಕಲಾಪದಲ್ಲಿ ಹಾಗೂ ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಶಿವಕುಮಾರ್ ಅವರು ಈ ವಿಚಾರವನ್ನು ಮಾತನಾಡಿದರು. “ನಾನು ಧರ್ಮಸ್ಥಳ ಕ್ಷೇತ್ರ ಹಾಗೂ ಆ ದೇವಸ್ಥಾನದ ಮೇಲೆ ನಂಬಿಕೆ ಇರುವವನು. ನನಗೆ ಧರ್ಮಾಧಿಕಾರಿಗಳ ಮೇಲೂ ನಂಬಿಕೆ ಇದೆ. ಅವರ

ಧರ್ಮಸ್ಥಳ ವಿಚಾರದಲ್ಲಿ ದೊಡ್ಡ ಷಡ್ಯಂತ್ರ ನಡೆದಿದೆ – ಡಿಕೆಶಿ Read More »

ಪಾಕಿಸ್ತಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಗುಂಡಿನ ದಾಳಿ|ಮೂವರು ಸಾವು, 60 ಮಂದಿಗೆ ಗಾಯ

ಸಮಗ್ರ ನ್ಯೂಸ್: ಪಾಕಿಸ್ತಾನದ ಕರಾಚಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಣೆಯು ಮಾರಣಾಂತಿಕ ತಿರುವು ಪಡೆದುಕೊಂಡಿದ್ದು, ಅಜಾಗರೂಕ ವೈಮಾನಿಕ ಗುಂಡಿನ ದಾಳಿಯಲ್ಲಿ 8 ವರ್ಷದ ಬಾಲಕಿ ಮತ್ತು ಹಿರಿಯ ನಾಗರಿಕ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ ಮತ್ತು 60 ಕ್ಕೂ ಹೆಚ್ಚು ಜನರು ಗುಂಡೇಟಿನಿಂದ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕರಾಚಿ ನಗರದಾದ್ಯಂತ ಘಟನೆಗಳು ನಡೆದಿದ್ದು, ಅಜೀಜಾಬಾದ್ನಲ್ಲಿ ಯುವತಿಗೆ ಗುಂಡು ತಗುಲಿದ್ದರೆ, ಕೋರಂಗಿಯಲ್ಲಿ ಸ್ಟೀಫನ್ ಎಂಬ ವ್ಯಕ್ತಿ ಸಾವನ್ನಪ್ಪಿದ್ದಾನೆ. ಒಟ್ಟಾರೆಯಾಗಿ, ಈ ನಗರವ್ಯಾಪಿ ಘಟನೆಗಳಲ್ಲಿ ಕನಿಷ್ಠ 64 ನಿವಾಸಿಗಳು ಗುಂಡೇಟಿನಿಂದ ಗಾಯಗೊಂಡಿದ್ದಾರೆ

ಪಾಕಿಸ್ತಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಗುಂಡಿನ ದಾಳಿ|ಮೂವರು ಸಾವು, 60 ಮಂದಿಗೆ ಗಾಯ Read More »

ದ.ಕ ಜಿಲ್ಲೆಗೆ ಮರು ನಾಮಕರಣ ವಿಚಾರ| ಎಲ್ಲರ ಅಭಿಪ್ರಾಯ ಸಂಗ್ರಹಿಸಿ‌ ತೀರ್ಮಾನ – ಕೃಷ್ಣ ಬೈರೇಗೌಡ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಗೆ ʼಮಂಗಳೂರುʼ ಎಂದು ಮರು ನಾಮಕರಣ ಮಾಡುವ ಸಂಬಂಧ ಪರ, ವಿರೋಧ ಮನವಿಗಳು ಸ್ವೀಕೃತವಾಗಿವೆ. ಜಿಲ್ಲಾಧಿಕಾರಿಯಿಂದ ವರದಿ ಬರುವುದು ಬಾಕಿಯಿದೆ. ಎಲ್ಲರ ಅಭಿಪ್ರಾಯ ಪಡೆದು ಸರಕಾರ ಮುಂದಿನ ತೀರ್ಮಾನ ಕೈಗೊಳ್ಳಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಬುಧವಾರ ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯ ಹರೀಶ್ ಪೂಂಜ ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ಮಂಗಳೂರು ಎಂದು ಮರು ನಾಮಕರಣ ಮಾಡುವ ಬಗ್ಗೆ ಗಮನ ಸೆಳೆದ ಸೂಚನೆಗೆ ಅವರು ಉತ್ತರಿಸಿದರು. ದಕ್ಷಿಣ ಕನ್ನಡ

ದ.ಕ ಜಿಲ್ಲೆಗೆ ಮರು ನಾಮಕರಣ ವಿಚಾರ| ಎಲ್ಲರ ಅಭಿಪ್ರಾಯ ಸಂಗ್ರಹಿಸಿ‌ ತೀರ್ಮಾನ – ಕೃಷ್ಣ ಬೈರೇಗೌಡ Read More »

ಬೆಳ್ತಂಗಡಿ: ಇನ್ನೋವಾ ಕಾರಿನಲ್ಲಿ ಹಿಂಸಾತ್ಮಕವಾಗಿ ಗೋಸಾಗಾಟ| ವಾಹನ ಮತ್ತು ಆರೋಪಿ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿ ಇನ್ನೋವಾ ಕಾರಿನಲ್ಲಿ ಹಿಂಸಾತ್ಮಕವಾಗಿ ದನ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದು ಬುಧವಾರ ಬೆಳಕಿಗೆ ಬಂದಿದ್ದು ವಾಹನ ಹಾಗೂ ಒಬ್ಬ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಾರ್ಮಾಡಿ ಕಡೆಯಿಂದ ಅತಿ ವೇಗದಲ್ಲಿ ಬಂದ ಇನ್ನೋವಾ ಕಾರು ಹಲವು ವಾಹನಗಳಿಗೆ ಢಿಕ್ಕಿ ಹೊಡೆದಿದೆ ಎಂದು ಹೇಳಲಾಗುತ್ತಿದ್ದು, ಗುರುವಾಯಕೆರೆಯಲ್ಲಿ ವಾಹನವನ್ನು ಸ್ಥಳೀಯರು ಹಾಗೂ ಸ್ಥಳದಲ್ಲಿದ್ದ ಟ್ರಾಫಿಕ್ ಪೊಲೀಸರು ತಡೆದಿದ್ದಾರೆ. ಈ ವೇಳೆ ಕಾರಿನಲ್ಲಿದ್ದ ಇಬ್ಬರು ಪರಾರಿಯಾಗಿದ್ದಾರೆ ಎನ್ನಲಾಗಿದ್ದು, ಇನ್ನೋವಾ ಕಾರಿನಲ್ಲಿ ಮೂರು ದನಗಳನ್ನು ಹಿಂಸಾತ್ಮಕವಾಗಿ ತುಂಬಿಕೊಂಡು

ಬೆಳ್ತಂಗಡಿ: ಇನ್ನೋವಾ ಕಾರಿನಲ್ಲಿ ಹಿಂಸಾತ್ಮಕವಾಗಿ ಗೋಸಾಗಾಟ| ವಾಹನ ಮತ್ತು ಆರೋಪಿ ಪೊಲೀಸ್ ವಶಕ್ಕೆ Read More »

ವಿಧಾನಸಭೆಯಲ್ಲಿ ಧರ್ಮಸ್ಥಳ ಪ್ರಕರಣದ ಬಿಸಿಬಿಸಿ ಚರ್ಚೆ| ಮಧ್ಯಂತರ ವರದಿ ನೀಡಲು ಸರ್ಕಾರ ನಕಾರ

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ಸಾಮೂಹಿಕ ಶವಗಳ ಹೂತಿಟ್ಟ ಆರೋಪ ಪ್ರಕರಣ ಸಂಬಂಧ ಎಸ್‌ಐಟಿ ತನಿಖೆ ನಡೆಯುತ್ತಿರುವ ವಿಷಯ ಸೋಮವಾರ ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ್ದು, ತನಿಖಾ ವರದಿಯನ್ನು ಬಿಡುಗಡೆ ಮಾಡುವಂತೆ ಬಿಜೆಪಿ ಒತ್ತಾಯಿಸಿದೆ. ಆದರೆ ಸರ್ಕಾರ ಮಧ್ಯಂತರ ವರದಿ ನೀಡಲು ನಿರಾಕರಿಸಿದೆ. ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಬಿಜೆಪಿ ಶಾಸಕ ಸುನೀಲ್ ಕುಮಾರ್, ಧರ್ಮಸ್ಥಳದಲ್ಲಿ ಅನಾಮಧೇಯ ವ್ಯಕ್ತಿಯೊಬ್ಬರು ನೂರಾರು ಶವಗಳನ್ನು ಹೂಳಿದ್ದಾರೆ ಎಂದು ಆರೋಪಿಸಿದ್ದಾರೆ, ಇದರಿಂದಾಗಿ ಸರ್ಕಾರ ಎಸ್‌ಐಟಿ ತನಿಖೆಗೆ ಆದೇಶಿಸಿದೆ. “ಇದುವರೆಗಿನ ತನಿಖೆಯಲ್ಲಿ ಏನಾಗಿದೆ ಎಂಬುದು ಯಾರಿಗೂ ತಿಳಿದಿಲ್ಲ,

ವಿಧಾನಸಭೆಯಲ್ಲಿ ಧರ್ಮಸ್ಥಳ ಪ್ರಕರಣದ ಬಿಸಿಬಿಸಿ ಚರ್ಚೆ| ಮಧ್ಯಂತರ ವರದಿ ನೀಡಲು ಸರ್ಕಾರ ನಕಾರ Read More »

ಸುಬ್ರಮಣ್ಯ ಕೆ. ಎಸ್. ಎಸ್ ಕಾಲೇಜಿನಲ್ಲಿ ವಿದ್ಯಾರ್ಥಿವೇತನ ಮಾಹಿತಿ ಕಾರ್ಯಕ್ರಮ 

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನಲ್ಲಿ ವಿದ್ಯಾರ್ಥಿ ವೇತನ ಕುರಿತಾದ ಮಾಹಿತಿ  ಕಾರ್ಯಕ್ರಮವನ್ನು ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಘಟಕ ಮತ್ತು ವಿದ್ಯಾರ್ಥಿ ಪರಿಷತ್ತು ವತಿಯಿಂದ  ಆಯೋಜಿಸಲಾಗಿತ್ತು.  ಕಾರ್ಯಕ್ರಮದಲ್ಲಿ ನಾರಾಯಣ  ನಾಯಕ್, ನಿವೃತ್ತ ಮುಖ್ಯೋಪಾಧ್ಯಾಯರು  ಬಂಟ್ವಾಳ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದರು. ವಿದ್ಯಾರ್ಥಿಗಳಿಗೆ ದೊರಕುವ  ವಿವಿಧ ಇಲಾಖೆ ಮತ್ತು ಸಂಸ್ಥೆಗಳಿಂದ ದೊರಕುವ ವಿದ್ಯಾರ್ಥಿ ವೇತನಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ದಿನೇಶ ಪಿ.ಟಿ    ವಹಿಸಿದ್ದರು. ವಿದ್ಯಾರ್ಥಿ ಪರಿಷತ್ತಿನ ಸಂಯೋಜಕರಾದ  ಮನೋಹರ್ ಸ್ವಾಗತಿಸಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ 

ಸುಬ್ರಮಣ್ಯ ಕೆ. ಎಸ್. ಎಸ್ ಕಾಲೇಜಿನಲ್ಲಿ ವಿದ್ಯಾರ್ಥಿವೇತನ ಮಾಹಿತಿ ಕಾರ್ಯಕ್ರಮ  Read More »

ಕಾರವಾರ ಶಾಸಕ ಸತೀಶ್ ಸೈಲ್ ಗೆ ಇಡಿ ಶಾಕ್| ಬೆಳ್ಳಂಬೆಳಗ್ಗೆ ನಿವಾಸದ ಮೇಲೆ ದಾಳಿ

ಸಮಗ್ರ ನ್ಯೂಸ್: ಕಾರವಾರ ಶಾಸಕ ಸತೀಶ್‌ ಸೈಲ್‌ (Satish Sail) ನಿವಾಸದ ಮೇಲೆ ಬುಧವಾರ ಜಾರಿ ನಿರ್ದೇಶಾನಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸದಾಶಿವಘಡದಲ್ಲಿರುವ ಅವರ ನಿವಾಸದ ಮೇಲೆ ಬುಧವಾರ ಮುಂಜಾನೆ ಏಕಾಏಕಿ ದಾಳಿ ನಡೆಸಲಾಗಿದೆ. ಅಕ್ರಮ ಹಣ ವರ್ಗಾವಣೆ ಹಾಗೂ ತೆರಿಗೆ ವಂಚನೆ ಆರೋಪದಡಿಯಲ್ಲಿ ಜಾರಿ ನಿರ್ದೇಶಾನಲಯ ಈ ದಾಳಿ ನಡೆಸಿದೆಯೆನ್ನಲಾಗಿದೆ. ಇದುವರೆಗೂ ಜಾರಿ ನಿರ್ದೇಶಾನಲಯದ ಅಧಿಕಾರಿಗಳು ಯಾವುದೇ ಮಾಹಿತಿ ಬಿಡುಗಡೆ ಮಾಡಿಲ್ಲ. ಶಾಸಕರ ನಿವಾಸದೊಳಗೆ ಹೊರಗಿನಿಂದ ಪ್ರವೇಶ ನಿರ್ಬಂಧಿಸಲಾಗಿದೆ. ಖಾಸಗಿ ವಾಹನಗಳಲ್ಲಿ ಯಾವುದೇ ಸುಳಿವು ನೀಡದೇ

ಕಾರವಾರ ಶಾಸಕ ಸತೀಶ್ ಸೈಲ್ ಗೆ ಇಡಿ ಶಾಕ್| ಬೆಳ್ಳಂಬೆಳಗ್ಗೆ ನಿವಾಸದ ಮೇಲೆ ದಾಳಿ Read More »

ಗಣೇಶ ಚತುರ್ಥಿ, ಈದ್ ಮಿಲಾದ್ ಗೆ ಡಿಜೆ ನಿಷೇಧ| ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

ಸಮಗ್ರ ನ್ಯೂಸ್: ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆಗಳ ಸಂದರ್ಭದಲ್ಲಿ ಡಿಜೆ ಸಿಸ್ಟಂಗಳನ್ನು ಉಪಯೋಗಿಸುವುದರಿಂದ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ, ವಯಸ್ಕರಿಗೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ತೊಂದರೆಯಾಗುವುದರೊಂದಿಗೆ ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ, ಸೌಹಾರ್ದತೆ ಮತ್ತು ಶಾಂತಿ ಕಾಪಾಡುವ ಸಲುವಾಗಿ ಗಣೇಶೋತ್ಸವ ಮತ್ತು ಈದ್ ಮಿಲಾದ್ ಹಬ್ಬಗಳ ಆಚರಣೆಗಳು ಪೂರ್ಣಗೊಳ್ಳುವವರೆಗೆ ರಾಜ್ಯಾದ್ಯಂತ ಡಿಜೆ ಸಿಸ್ಟಂಗಳ ಬಳಕೆಯನ್ನು ನಿಷೇಧಿಸಿ ಆದೇಶಿಸಲಾಗಿದೆ. ಎರಡು ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ಶಾಂತಿ ಮತ್ತು

ಗಣೇಶ ಚತುರ್ಥಿ, ಈದ್ ಮಿಲಾದ್ ಗೆ ಡಿಜೆ ನಿಷೇಧ| ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ Read More »

ಬಂಡೀಪುರ: ಕಾಡಾನೆ‌ ಜೊತೆ ಸೆಲ್ಫಿ ವೇಳೆ ದಾಳಿ| ಸ್ವಲ್ಪದರಲ್ಲೇ ಪಾರಾದವನಿಗೆ ಬಿತ್ತು 25 ಸಾವಿರ ದಂಡ

ಸಮಗ್ರ ನ್ಯೂಸ್: ಬಂಡೀಪುರ ಅರಣ್ಯದೊಳಗೆ ಆನೆಯ ಮುಂದೆ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಆನೆ ದಾಳಿಯಿಂದ ಪಾರಾಗಿದ್ದ ವ್ಯಕ್ತಿಗೆ ಅರಣ್ಯ ಇಲಾಖೆ ಶಾಕ್ ನೀಡಿದ್ದು, ಆತನ ಬಂಧಿಸಿ 25 ಸಾವಿರ ರೂ ದಂಡ ಹೇರಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದೊಳಗೆ ಹಾದುಹೋಗಿರುವ ಕೆಕ್ಕನಹಳ್ಳ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ಆನೆಯ ಮುಂದೆ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಆನೆ ದಾಳಿಯಿಂದ ಗಾಯಗೊಂಡು ಪರಾರಿಯಾಗಿದ್ದ ಆರೋಪಿಯನ್ನು ಸೋಮವಾರ ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದು 25,000 ರೂ ದಂಡ ವಿಧಿಸಿ ಮಾತ್ರವಲ್ಲದೆ ತಪ್ಪೊಪ್ಪಿಗೆ

ಬಂಡೀಪುರ: ಕಾಡಾನೆ‌ ಜೊತೆ ಸೆಲ್ಫಿ ವೇಳೆ ದಾಳಿ| ಸ್ವಲ್ಪದರಲ್ಲೇ ಪಾರಾದವನಿಗೆ ಬಿತ್ತು 25 ಸಾವಿರ ದಂಡ Read More »