Uncategorized

ನಡುಕ ಹುಟ್ಟಿಸುತ್ತಿರುವ ನಿಫಾ ವೈರಾಣು ಜ್ವರ

ಸಮಗ್ರ ನ್ಯೂಸ್:ನಿಫಾ ವೈರಸ್, ಆರ್.ಯನ್.ಎ(RNA) ಗುಂಪಿಗೆ ಸೇರಿದ ಪಾರಾಮಿಕ್ಸೊ ವೈರಾಣು ಪ್ರಭೇಧಕ್ಕೆ ಸೇರಿದ ವೈರಾಣು ಆಗಿರುತ್ತದೆ. 1999ರಲ್ಲಿ ಮಲೇಷಿಯಾದ ಒಂದು ಸಣ್ಣ ಹಳ್ಳಿಯಾದ ಸಂಗೈ ನಿಫಾ ಎಂಬ ಜಾಗದಲ್ಲಿ ಮೊದಲು ಕಾಣಿಸಿಕೊಂಡ ಕಾರಣದಿಂದ “ನಿಫಾ ವೈರಸ್” ಎಂದು ಕರೆಯಲ್ಪಡುತ್ತದೆ. ಈ ಹಳ್ಳಿಯ ಹಂದಿ ಸಾಕುವ ರೈತರಲ್ಲಿ ಮೊದಲು ಈ ಜ್ವರ ಕಾಣಿಸಿಕೊಂಡು ಮೆದುಳಿನ ಊರಿಯೂತ ಮತ್ತು ಉಸಿರಾಟದ ತೊಂದರೆ ಉಂಟುಮಾಡಿ, ನೂರಾರು ಮಂದಿ ಅಸುನೀಗಿದ್ದರು. 300 ಮಂದಿಗೆ ರೋಗ ತಗುಲಿ 100 ಮಂದಿ ಅಸುನೀಗಿದ್ದರು. ರೋಗ ಪೀಡಿತ […]

ನಡುಕ ಹುಟ್ಟಿಸುತ್ತಿರುವ ನಿಫಾ ವೈರಾಣು ಜ್ವರ Read More »

ಶಾಲಾ ಮಕ್ಕಳ ಮೇಲೆ ಹರಿದ ಯಮಸ್ವರೂಪಿ ಬಸ್| ಇಬ್ಬರು ಮಕ್ಕಳು ಗಂಭೀರ; ಐವರು ಕೂದಲೆಳೆಯಲ್ಲಿ ಪಾರು

ಸಮಗ್ರ ನ್ಯೂಸ್: ಬಸ್ಸಿಗಾಗಿ ಕಾಯುತ್ತಾ ನಿಂತಿದ್ದ ಶಾಲಾ ಮಕ್ಕಳ ಮೇಲೆ ಖಾಸಗಿ ಬಸ್ಸೊಂದು ಹರಿದ ಪರಿಣಾಮ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡ ಆತಂಕಕಾರಿ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕಾವಲ್ ದುಗ್ಲಾಪುರ ಗೇಟ್ ನಲ್ಲಿ ನಡೆದಿದೆ. ತುಳಸಿ (15) ನಿವೇದಿತ (14) ಎಂಬ ಇಬ್ಬರು ವಿದ್ಯಾರ್ಥಿನಿಯರ ಸ್ಥಿತಿ ಗಂಭೀರವಾಗಿದೆ. ಇವರನ್ನು ತಕ್ಷಣವೇ ತುರ್ತು ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ರವಾನಿಸಲಾಗಿದೆ. ಘಟನೆ ವೇಳೆ ಸ್ಥಳದಲ್ಲಿದ್ದ ಐವರು ಮಕ್ಕಳು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಓವರ್ ಸ್ಪೀಡ್ ನಿಂದ

ಶಾಲಾ ಮಕ್ಕಳ ಮೇಲೆ ಹರಿದ ಯಮಸ್ವರೂಪಿ ಬಸ್| ಇಬ್ಬರು ಮಕ್ಕಳು ಗಂಭೀರ; ಐವರು ಕೂದಲೆಳೆಯಲ್ಲಿ ಪಾರು Read More »

ಬಂಟ್ವಾಳ:ಪರವಾನಗಿ ಇಲ್ಲದೆ ಹಿಂಸಾತ್ಮಕ ರೀತಿಯಲ್ಲಿ ಗೋ ಸಾಗಾಟ| ಪ್ರಕರಣ ದಾಖಲು

ಸಮಗ್ರ ನ್ಯೂಸ್:ಯಾವುದೇ ಪರವಾನಿಗೆ ಇಲ್ಲದೇ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು ಸಾಗಿಸುತ್ತಿರುವುದನ್ನು ಪತ್ತೆ ಹಚ್ಚಿ ಗೋಕಳ್ಳ ಜಿಹಾದಿಗಳನ್ನು ಬೆಂಡೆತ್ತಿದ ಘಟನೆ ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಮುಳಿಯದಲ್ಲಿ ನಡೆದಿದೆ. ಪಾತೂರು ಗ್ರಾಮದ ಮಂಜೇಶ್ವರ ನಿವಾಸಿ ಮೂಸಾ ಎಂಬವರು ಮೂವರ ಜೊತೆ ಗೂಡ್ಸ್ ವಾಹನದಲ್ಲಿ ಮುಳಿಯ ಎಂಬಲ್ಲಿಂದ 5 ಜಾನುವಾರುಗಳನ್ನು ಖರೀದಿ ಮಾಡಿಕೊಂಡು ಗೂಡ್ಸ್ ವಾಹನದಲ್ಲಿ ಕಜೆ ಎಂಬಲ್ಲಿಗೆ ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ಅಳಿಕೆ ಗ್ರಾಮದ ಮುಳಿಯ ಎಂಬಲ್ಲಿ ಜಯ ಪ್ರಶಾಂತ, ಲಕ್ಷೀಶ ಹಾಗೂ ಇತರ ಮೂರು ಮೋಟಾರು ಸೈಕಲ್

ಬಂಟ್ವಾಳ:ಪರವಾನಗಿ ಇಲ್ಲದೆ ಹಿಂಸಾತ್ಮಕ ರೀತಿಯಲ್ಲಿ ಗೋ ಸಾಗಾಟ| ಪ್ರಕರಣ ದಾಖಲು Read More »

ಕರಾವಳಿಯಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ| ಮಹಿಳೆಯನ್ನು ಕಾರಿನಲ್ಲಿ ಕರೆದೊಯ್ದ ಆರೋಪದಲ್ಲಿ ಅನ್ಯಕೋಮಿನ ಕಾರು ಚಾಲಕನ ಮೇಲೆ ಹಲ್ಲೆ

ಸಮಗ್ರ ನ್ಯೂಸ್: ಮಹಿಳೆಯನ್ನು ತನ್ನ ಕಾರಲ್ಲಿ ಕರೆದೊಯ್ಯುತ್ತಿದ್ದ ಎಂಬ ಕಾರಣಕ್ಕೆ ಕಾರಲ್ಲಿ ಹೋಗುತ್ತಿದ್ದ ಅನ್ಯಕೋಮಿನ ವ್ಯಕ್ತಿಗೆ ಕೆಲ ಯುವಕರು ತಡೆದು ಹಲ್ಲೆ ನಡೆಸಿದ್ದಾರೆನ್ನಲಾದ ಘಟನೆ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ತೊಡಿಕಾನದಿಂದ ವರದಿಯಾಗಿದೆ. ಸದ್ಯ ಸುಳ್ಯ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆಂದು ತಿಳಿದುಬಂದಿದೆ. ತಾಲೂಕಿ‌ನ ಅರಂತೋಡು ಕಡೆ ಟ್ಯಾಪಿಂಗ್ ಕೆಲಸ ವಹಿಸಿಕೊಂಡು ಮಾಡುತ್ತಿದ್ದ ಅನ್ಯಕೋಮಿನ ವ್ಯಕ್ತಿ ಮಹಿಳೆಯೊಬ್ಬರನ್ನು ತನ್ನ ಕಾರಲ್ಲಿ ಸುತ್ತಾಡಿಸುತ್ತಿದ್ದಾನೆ ಎಂಬ ಅನುಮಾನದಿಂದ ಕೆಲ ಯುವಕರು ಕಾರನ್ನು ಹಿಂಬಾಲಿಸುತ್ತಿದ್ದರು ಎನ್ನಲಾಗಿದೆ. ಇಂದು ಸಂಜೆ ಆತ ಮಹಿಳೆಯನ್ನು ಸುಳ್ಯಕ್ಕೆ

ಕರಾವಳಿಯಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ| ಮಹಿಳೆಯನ್ನು ಕಾರಿನಲ್ಲಿ ಕರೆದೊಯ್ದ ಆರೋಪದಲ್ಲಿ ಅನ್ಯಕೋಮಿನ ಕಾರು ಚಾಲಕನ ಮೇಲೆ ಹಲ್ಲೆ Read More »

‘ಗೃಹಲಕ್ಷ್ಮಿ’ ಯೋಜನೆ ಮತ್ತೆ ಮುಂದೂಡಿಕೆ| ತಿಂಗಳಾಂತ್ಯಕ್ಕೆ ಸಿಗಲಿದೆ ₹2000

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದ 4 ನೇ ಗ್ಯಾರಂಟಿ ಮನೆಯ ಯಜಮಾನಿಗೆ 2,000 ರೂ. ಮಾಸಾಶನ ನೀಡುವ ಗೃಹಲಕ್ಷ್ಮೀ ಯೋಜನೆ ಉದ್ಘಾಟನೆ ದಿನಾಂಕ ಮತ್ತೆ ಮುಂದೂಡಿಕೆಯಾಗಿದ್ದು, ಆಗಸ್ಟ್ 29 ಅಥವಾ ಆ.30ಕ್ಕೆ ಚಾಲನೆ ನೀಡುತ್ತೇವೆ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 29 ಅಥವಾ 30 ಕ್ಕೆ ಚಾಲನೆ ನೀಡಲಾಗುವುದು ಐದು ಗ್ಯಾರಂಟಿ ಯೋಜನೆಗಳ ಪೈಕಿ ಮೂರು ಈಗಾಗಲೇ ಈಡೇರಿಸಲಾಗಿದೆ. ಗೃಹಲಕ್ಷ್ಮೀ ಈ ಮಾಹೆಯಲ್ಲಿ ಜಾರಿಗೆ ತರಲಾಗುತ್ತಿದ್ದು, ಐದನೇ ಗ್ಯಾರಂಟಿ

‘ಗೃಹಲಕ್ಷ್ಮಿ’ ಯೋಜನೆ ಮತ್ತೆ ಮುಂದೂಡಿಕೆ| ತಿಂಗಳಾಂತ್ಯಕ್ಕೆ ಸಿಗಲಿದೆ ₹2000 Read More »

ಮಂಗಳೂರು: ಮಾಜಿ ಉಪಕುಲಪತಿ ಕೆ.ಬೈರಪ್ಪ ನಿಧನ

ಸಮಗ್ರ ನ್ಯೂಸ್: ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಉಪಕುಲಪತಿ ಪ್ರೊ.ಕೆ.ಬೈರಪ್ಪ(69) ಅವರು ಜು .31 ರಂದು ಬೆಳಿಗ್ಗೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು 2014 ಜೂನ್ ನಿಂದ 2019 ಜೂನ್ ವರೆಗೆ ಮಂಗಳೂರು ವಿಶ್ವ ವಿದ್ಯಾಲಯದಲ್ಲಿ ಉಪ ಕುಲಪತಿಗಳಾಗಿ ಕಾರ್ಯನಿರ್ವಹಿಸಿದ್ದಾರೆ. ಬಳಿಕ ನಿವೃತ್ತಿ ಹೊಂದಿ ಆದಿ ಚುಂಚನ ಗಿರಿಯಲ್ಲಿ ಸಹಕುಲಪತಿಗಳಾಗಿ ಕಾರ್ಯ ನಿರ್ವಹಿಸುತಿದ್ದರು. ಬೆಳಗಾವಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದಕ್ಕೆ ತೆರಳಲು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ಸಂದರ್ಭದಲ್ಲಿ ತೀವ್ರ ಹೃದಯಾಘಾತಗೊಂಡು ಕೊನೆಯುಸಿರೆಳೆದಿದ್ದಾರೆ.

ಮಂಗಳೂರು: ಮಾಜಿ ಉಪಕುಲಪತಿ ಕೆ.ಬೈರಪ್ಪ ನಿಧನ Read More »

ಮಂಗಳೂರು: ನೀರಿನಲ್ಲಿ ಮುಳುಗಿ ಯುವಕರಿಬ್ಬರು ಮೃತ್ಯು

ಸಮಗ್ರ ನ್ಯೂಸ್: ಮಂಗಳೂರು ನಗರದ ಪಡೀಲ್ ಅಳಪೆ ಪಡ್ಪು ರೈಲ್ವೇ ಬ್ರಿಡ್ಜ್ ಸಮೀಪ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಮೃತಪಟ್ಟ ಘಟನೆ ಜು. 30 ರಂದು ನಡೆದಿದೆ. ಅಳಪೆ ಪಡ್ಪುರೆಂಜ ನಿವಾಸಿ ವರುಣ್ (27) ಮತ್ತು ಎಕ್ಕೂರು ಕೆಎಚ್‌ಬಿ ಕಾಲನಿ ನಿವಾಸಿ ವೀಕ್ಷಿತ್ (28) ಮೃತಪಟ್ಟ ಯುವಕರು. ಜು.30 ರಂದು ಸಂಜೆ ವೇಳೆ 6 ಮಂದಿ ಗೆಳೆಯರು ಒಟ್ಟಾಗಿ ಕ್ರಿಕೆಟ್ ಆಡಲು ತೆರಳಿದ್ದರು. ಈ ಸಂದರ್ಭ ವರುಣ್ ಮತ್ತು ವೀಕ್ಷಿತ್ ರೈಲ್ವೆಯ ಟ್ರಾಕ್ ಪಕ್ಕದ ಹಳ್ಳದ ದಡದಲ್ಲೇ

ಮಂಗಳೂರು: ನೀರಿನಲ್ಲಿ ಮುಳುಗಿ ಯುವಕರಿಬ್ಬರು ಮೃತ್ಯು Read More »

ಭಾರೀ ಮಳೆ ಹಿನ್ನೆಲೆ| ದ.ಕ ಜಿಲ್ಲೆಯಲ್ಲಿ ಶಾಲಾ ಕಾಲೇಜಿಗೆ ರಜೆ ವಿಸ್ತರಣೆ

ಸಮಗ್ರ ನ್ಯೂಸ್: ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಪ್ರೌಢಶಾಲೆಗಳಿಗೆ ಜು.27ರಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿದ್ದಾರೆ.

ಭಾರೀ ಮಳೆ ಹಿನ್ನೆಲೆ| ದ.ಕ ಜಿಲ್ಲೆಯಲ್ಲಿ ಶಾಲಾ ಕಾಲೇಜಿಗೆ ರಜೆ ವಿಸ್ತರಣೆ Read More »

ಉಡುಪಿ: ಡಿಕ್ಕಿಯಾದ ಕಾರನ್ನು ಎಳೆದೊಯ್ದ ಟ್ರಕ್| ಭಯಾನಕ ವಿಡಿಯೋ ವೈರಲ್

ಸಮಗ್ರ ನ್ಯೂಸ್: ಉಡುಪಿಯಲ್ಲಿ ಮೂವರನ್ನು ಹೊತ್ತೊಯ್ಯುತ್ತಿದ್ದ ಕಾರನ್ನು ಡಂಪರ್ ಟ್ರಕ್ ಎರಡು ಕಿ.ಮೀ ವರೆಗೆ ಎಳೆದುಕೊಂಡು ಹೋಗುತ್ತಿರುವುದನ್ನು ತೋರಿಸುವ ವಿಡಿಯೋ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ವರದಿಗಳ ಪ್ರಕಾರ, ಎರಡು ವಾಹನಗಳು ಡಿಕ್ಕಿ ಹೊಡೆದು ಕಾರು ಟ್ರಕ್ ಅಡಿಯಲ್ಲಿ ಸಿಲುಕಿಕೊಂಡ ನಂತರ ಈ ಘಟನೆ ನಡೆದಿದೆ. ಸ್ಥಳೀಯ ನಿವಾಸಿಗಳು ವಾಹನವನ್ನು ಹಿಂಬಾಲಿಸಿ ಅಂತಿಮವಾಗಿ ಚಾಲಕನನ್ನು ನಿಲ್ಲಿಸಿದ್ದಾರೆ. ನಂತರ ಟ್ರಕ್ ಚಾಲಕನನ್ನು ಬಂಧಿಸಲಾಯಿತು.

ಉಡುಪಿ: ಡಿಕ್ಕಿಯಾದ ಕಾರನ್ನು ಎಳೆದೊಯ್ದ ಟ್ರಕ್| ಭಯಾನಕ ವಿಡಿಯೋ ವೈರಲ್ Read More »

ಸುಳ್ಯ: ಹೊಳೆಯ ಪಾಲ ದಾಟುತ್ತಿರುವ ವೇಳೆ ಆಯತಪ್ಪಿ ಬಿದ್ದು ನೀರಲ್ಲಿ‌ ಕೊಚ್ಚಿ ಹೋದ ವ್ಯಕ್ತಿ!!

ಸಮಗ್ರ ನ್ಯೂಸ್: ಹೊಳೆಯ ಪಾಲ ದಾಟುತ್ತಿರುವ ಸಂದರ್ಭದಲ್ಲಿ ಆಯ ತಪ್ಪಿ ಬಿದ್ದು ವ್ಯಕ್ತಿಯೊಬ್ಬರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ಘಟನೆ ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಕೂರ್ನಡ್ಕದಿಂದ ವರದಿಯಾಗಿದೆ. ನೀರು ಪಾಲಾಗಿರುವ ವ್ಯಕ್ತಿಯನ್ನು ಕೇರಳ ಮೂಲದವರು ಎಂದು ಹೇಳಲಾಗಿದ್ದು ತೋಟದಲ್ಲಿ ‌ಕೂಲಿ ಕೆಲಸ ಮುಗಿಸಿ ಹಿಂತಿರುಗುವ ವೇಳೆಯಲ್ಲಿ ಘಟನೆ ಸಂಭವಿಸಿರುವುದಾಗಿ ತಿಳಿದು ಬಂದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಸುಳ್ಯ ಪೊಲೀಸರು ಭೇಟಿ ನೀಡಿ ಕಾಣೆಯಾಗಿರುವ ವ್ಯಕ್ತಿಗಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಸುಳ್ಯ: ಹೊಳೆಯ ಪಾಲ ದಾಟುತ್ತಿರುವ ವೇಳೆ ಆಯತಪ್ಪಿ ಬಿದ್ದು ನೀರಲ್ಲಿ‌ ಕೊಚ್ಚಿ ಹೋದ ವ್ಯಕ್ತಿ!! Read More »