Uncategorized

ಅ.2 ಕ್ಕೆ ಮುದ್ದು ಪ್ರಾಣಿಗಳ ಪ್ರದರ್ಶನ; ಚಾರ್ಲಿ 777 ಸಿನಿಮಾ ಖ್ಯಾತಿಯ ‌ಶ್ವಾನ ಭಾಗಿ

ಮೈಸೂರು: ಅ.2ರಂದು ದಸರಾ ರಾಜ್ಯ ಮಟ್ಟದಲ್ಲಿ ನಗರದ ಹಾಕಿ ಮೈದಾನದಲ್ಲಿ ಮುದ್ದು ಪ್ರಾಣಿಗಳ ಪ್ರದರ್ಶನ ನಡೆಯಲಿದ್ದು, ಇದರಲ್ಲಿ ಚಾರ್ಲಿ 777 ಸಿನಿಮಾ ಖ್ಯಾತಿಯ ಶ್ವಾನ ಭಾಗವಹಿಸುತ್ತಿರುವುದು ವಿಶೇಷವಾಗಿದೆ.

ಅ.2 ಕ್ಕೆ ಮುದ್ದು ಪ್ರಾಣಿಗಳ ಪ್ರದರ್ಶನ; ಚಾರ್ಲಿ 777 ಸಿನಿಮಾ ಖ್ಯಾತಿಯ ‌ಶ್ವಾನ ಭಾಗಿ Read More »

ನಕಲಿ ವೆಬ್ ಸೈಟ್ ತೆರೆದು ವಂಚನೆ; 3ಮಂದಿಯ ಬಂಧನ

ಬೆಂಗಳೂರು: ವಿಆರ್‌ಎಲ್‌ ಮೂವರ್ಸ್ ಅಂಡ್‌ ಪ್ಯಾಕರ್ಸ್‌ ಎಂಬ ಹೆಸರಿನಲ್ಲಿ ನಕಲಿ ವೆಬ್‌ಸೈಟ್‌ ಓಪನ್ ಮಾಡಿ ಸಾರ್ವಜನಿಕರಿಗೆ ವಂಚನೆ ಮಾಡುತ್ತಿದ್ದ ಬಿಹಾರ ಮೂಲಕ 3ಮಂದಿ ಆರೋಪಿಗಳನ್ನು ಈಶಾನ್ಯ ವಿಭಾಗದ ಸಿಇಎನ್‌ ಪೊಲೀಸರು ಬಂಧಿಸಿದ್ದಾರೆ. ಯಶವಂತಪುರದಲ್ಲಿ ನೆಲೆಸಿದ್ದ ಬ್ರಹ್ಮದೇವ್‌ ಯಾದವ್‌ (25), ಮುಕೇಶ್‌ ಕುಮಾರ್‌ ಯಾದವ್‌, ವಿಜಯ್‌ ಕುಮಾರ್‌ ಯಾದವ್‌ (22) ಬಂಧಿತರು. ನಗರದಿಂದ ಹಲವು ಕಡೆಗೆ ದ್ವಿಚಕ್ರ ವಾಹನ ಕಳುಹಿಸಲು ಗೂಗಲ್‌ಗೆ ಹೋಗಿ ಪ್ಯಾಕರ್ಸ್‌ ಅಂಡ್‌ ಮೂವರ್ಸ್‌ ಎಂದು ನಮೂದಿಸಿದರೆ ವಿಆರ್‌ಎಲ್‌ ಮೂವರ್ಸ್‌ ಅಂಡ್‌ ಪ್ಯಾಕರ್ಸ್‌ ಎಂಬ ಹೆಸರಿನಲ್ಲಿ

ನಕಲಿ ವೆಬ್ ಸೈಟ್ ತೆರೆದು ವಂಚನೆ; 3ಮಂದಿಯ ಬಂಧನ Read More »

ಕ್ರಿಕೆಟ್ ಬೆಟ್ಟಿಂಗ್ ಪ್ರಕರಣ; ಕಾನ್ಸ್ ಟೇಬಲ್ ವಿರುದ್ಧ ದೂರು ದಾಖಲು

ಬೆಂಗಳೂರು: ಕ್ರಿಕೆಟ್‌ ಬೆಟ್ಟಿಂಗ್‌ ಪ್ರಕರಣಕ್ಕೆ ಸಂಬಂಧಿಸಿ ಸದಾಶಿವನಗರ ಕಾನ್ಸ್‌ ಟೇಬಲ್‌ ಶಿವಕುಮಾರ್‌ ಮೇಲೆ ಸುಲಿಗೆ ಆರೋಪ ಕೇಳಿ ಬಂದಿದ್ದು, ಸುಮಾರು ಮೂರು ಲಕ್ಷ ಹಣ ವಸೂಲಿ ಮಾಡಿರುವ ಬಗ್ಗೆ ದೂರು ದಾಖಲಾಗಿದೆ. ಸಹಕಾರದ ನಗರದ ಉದ್ಯಮಿಗೆ ಬೆದರಿಸಿ ಹಣ ಪಡೆದ ಆರೋಪ ಕೇಳಿಬಂದಿದೆ. ಈ ಬಗ್ಗೆ ಈಶಾನ್ಯ ವಿಭಾಗ ಡಿಸಿಪಿಐಗೆ ಸಹಕಾರ ನಗರದ ಉದ್ಯಮಿ ಯೋಗೇಶ್‌ ದೂರು ನೀಡಿದ್ದಾರೆ. ಹಾಲು ಉದ್ಯಮಿಯಾಗಿರುವ ಯೋಗೇಶ್‌ ಗೆ ಪೊಲೀಸ್‌ ಪೇದೆ ಶಿವಕುಮಾರ್‌ ಕ್ರಿಕೆಟ್‌ ಬೆಟ್ಟಿಂಗ್‌ ವಿಚಾರವಾಗಿ ಹೆದರಿಸಿದ್ದರು ಎನ್ನಲಾಗಿದೆ. ಮೂರು

ಕ್ರಿಕೆಟ್ ಬೆಟ್ಟಿಂಗ್ ಪ್ರಕರಣ; ಕಾನ್ಸ್ ಟೇಬಲ್ ವಿರುದ್ಧ ದೂರು ದಾಖಲು Read More »

ಸೆ.17 ರಂದು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ

ಬೆಂಗಳೂರು : 2022ರ ಸೆಪ್ಟೆಂಬರ್ 17 ರಂದು ನಡೆಯು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಲು ಸಚಿವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2022 ರ ಸೆಪ್ಟೆಂಬರ್ 17 ರಂದು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಅಂಗವಾಗಿ ಕಲ್ಯಾಣ ಕರ್ನಾಟಕ ಭಾಗದ 7 ಜಿಲ್ಲೆಗಳಲ್ಲಿ ಈ ಕೆಳಗೆ ಸೂಚಿಸಿರುವಂತೆ ಮುಖ್ಯಮಂತ್ರಿಗಳು, ಸಚಿವರು ಹಾಗೂ ಜಿಲ್ಲಾಧಿಕಾರಿಗಳನ್ನು ದ್ವಜಾರೋಹಣ ಮಾಡಲು ನೇಮಿಸಲಾಗಿದೆ.

ಸೆ.17 ರಂದು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ Read More »

ನಿಂತಿದ್ದ ಬಸ್ ಹಿಂದಕ್ಕೆ ಚಲಿಸಿ ಭಾರಿ ದೊಡ್ಡ ಆಪತ್ತಿನಿಂದ ರಕ್ಷಿಸಿದ ಫಿಲೋಮಿನಾ ಕಾಲೇಜು ವಿದ್ಯಾರ್ಥಿ

ಪುತ್ತೂರು : ನಿಲ್ಲಿಸಿದ್ದ ಬಸ್‌ ಹಿಮ್ಮುಖವಾಗಿ ಚಲಿಸಿದಾಗ, ಚಾಲಕನ ಹಿಂದಿನ ಸೀಟ್‌ನಲ್ಲಿ ಕುಳಿತಿದ್ದ ವಿದ್ಯಾರ್ಥಿ ಸಿಜಾನ್ ಹಸನ್ ತಕ್ಷಣ ಬಸ್ ಅನ್ನು ನಿಯಂತ್ರಿಸಿ ಜನರ ರಕ್ಷಣೆ ಮಾಡಿದ್ದಾನೆ. ಪುತ್ತೂರು ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್‌ನಲ್ಲಿ ಅನೇಕ ಪ್ರಯಾಣಿಕರ ಜೊತೆಗೆ, ಸೇಂಟ್ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿ ಸಿಜಾನ್ ಕುಳಿತಿದ್ದರು. ಇದ್ದಕ್ಕಿದ್ದಂತೆ ಬಸ್ ಹಿಮ್ಮುಖವಾಗಿ ಚಲಿಸಲಾರಂಭಿಸಿತು. ತಕ್ಷಣ ಚಾಲಕನ ಸೀಟಿಗೆ ಜಿಗಿದ ಸಿಜಾನ್ ಬ್ರೇಕ್ ಹಾಕಿ ಬಸ್ ಅನ್ನು ನಿಲ್ಲಿಸಿದರು. ಅಷ್ಟರಲ್ಲಿ ಇನ್ನೊಂದು ಬಸ್‌ನ ಚಾಲಕ ಬಂದು ಹ್ಯಾಂಡ್

ನಿಂತಿದ್ದ ಬಸ್ ಹಿಂದಕ್ಕೆ ಚಲಿಸಿ ಭಾರಿ ದೊಡ್ಡ ಆಪತ್ತಿನಿಂದ ರಕ್ಷಿಸಿದ ಫಿಲೋಮಿನಾ ಕಾಲೇಜು ವಿದ್ಯಾರ್ಥಿ Read More »

ರಾಜ್ಯದ ಗ್ರಾಮ ವಿದ್ಯುತ್ ಪ್ರತಿನಿಧಿಗಳಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು : ರಾಜ್ಯದ 3,854 ಗ್ರಾಮ ವಿದ್ಯುತ್ ಪ್ರತಿನಿಧಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಗ್ರಾಮ ವಿದ್ಯುತ್ ಪ್ರತಿನಿಧಿಗಳ ಸೇವೆ ಕಾಯಂ ಮಾಡಲಾಗುವುದು ಎಂದು ಇಂಧನ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ. ವಿಧಾನಸಭೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಸಚಿವರು, ರಾಜ್ಯದಲ್ಲಿ 2004 ರಿಂದ ಗ್ರಾಮ ವಿದ್ಯುತ್ ಸಹಾಯಕರಾಗಿ ಕೆಲಸ ಮಾಡುತ್ತಿರುವ 3,854 ಮಂದಿ ಗ್ರಾಮ ವಿದ್ಯುತ್ ಪ್ರತಿನಿಧಿಗಳ ಸೇವೆ ಕಾಯಂಗೊಳಿಸುವ ಸಂಬಂಧ ಶೀಘ್ರವೇ, ಸಿಎಂ ಬಸವರಾಜ ಬೊಮ್ಮಾಯಿ ಜೊತೆಗೆ ಸಮಾಲೋಚಿಸಿ, ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು

ರಾಜ್ಯದ ಗ್ರಾಮ ವಿದ್ಯುತ್ ಪ್ರತಿನಿಧಿಗಳಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ Read More »

ಮೈಸೂರು ದಸರಾಗೆ ಮೋದಿ ಬರ್ತಾ ಇಲ್ಲ| ಪಿಎಂ ಕಚೇರಿಯಿಂದ‌ ರವಾನೆಯಾಗಿದೆ ಮಾಹಿತಿ

ಸಮಗ್ರ ನ್ಯೂಸ್: ವಿಶ್ವವಿಖ್ಯಾತ ಮೈಸೂರು ದಸರಾ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಬರಲಿದ್ದಾರೆ. ಅವರು ದಸರಾ ಜಂಬೂಸವಾರಿಯನ್ನು ಉದ್ಘಾಟಿಸಲಿದ್ದಾರೆ ಎನ್ನಲಾಗಿತ್ತು. ಆದ್ರೇ ಪ್ರಧಾನಿ ಮೋದಿ ದಸರಾ ಮಹೋತ್ಸವಕ್ಕೆ ಬರಲ್ಲ ಎಂಬುದಾಗಿ ಪಿಎಂ ಕಚೇರಿಯಿಂದ ಸಿಎಂ ಕಚೇರಿಗೆ ಮಾಹಿತಿ ನೀಡಲಾಗಿದೆ ಎನ್ನಲಾಗಿದೆ. ಈ ಕುರಿತಂತೆ ಪಿಎಂ ಕಚೇರಿಯ ಉನ್ನತ ಮೂಲಗಳಿಂದ ತಿಳಿದು ಬಂದಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮಗಳ ಪಟ್ಟಿಯಲ್ಲಿ ಬದಲಾವಣೆಯಾಗಿದೆ. ಅವರು ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಬರುವುದಿಲ್ಲ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಕಚೇರಿಗೆ ಪಿಎಂ

ಮೈಸೂರು ದಸರಾಗೆ ಮೋದಿ ಬರ್ತಾ ಇಲ್ಲ| ಪಿಎಂ ಕಚೇರಿಯಿಂದ‌ ರವಾನೆಯಾಗಿದೆ ಮಾಹಿತಿ Read More »

ಎಕ್ಸೆಲ್ ಕಾಲೇಜು ವಿದ್ಯಾರ್ಥಿನಿ ದೀಕ್ಷಾ ಎನ್ ಸಿಇಆರ್ ಟಿ ನಡೆಸಿದ ಪರೀಕ್ಷೆ ಯಲ್ಲಿ ರಾಷ್ಟ್ರ ಮಟ್ಟದಲ್ಲಿ ಪ್ರಥಮ ಸ್ಥಾನ

ಸಮಗ್ರ ನ್ಯೂಸ್: ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿ ದೀಕ್ಷಾ ಬಿ.ಎನ್ ಅವರು ಎನ್ ಸಿಇಆರ್ ಟಿ ನಡೆಸಿದ ಪ್ರವೇಶ ಪರೀಕ್ಷೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಈ ಹಿಂದೆ ದ್ವಿತೀಯ ಪಿಯುಸಿ ಪರೀಕ್ಷೆ ಯಲ್ಲಿ 593 ಅಂಕಗಳನ್ನು ಪಡೆದು ರಾಜ್ಯಕ್ಕೆ ಆರನೇ‌ ರಾಂಕ್ ಪಡೆದಿದ್ದರು. ಸಿಇಟಿ ಪರೀಕ್ಷೆ ಯಲ್ಲಿಯೂ ಉತ್ತಮ ಫಲಿತಾಂಶ ಗಳಿಸಿದ್ದಾರೆ. ಎನ್ ಸಿಇಆರ್ ಟಿ ಗಳಲ್ಲಿ ಆಯ್ಕೆಯಾದವರು ರೀಜನಲ್ ಇನ್ಸ್ಟಿಟ್ಯೂಟ್ ಆಫ್ ಎಜುಕೇಶನ್ ಗಳಲ್ಲಿ ವಿದ್ಯಾಭ್ಯಾಸ ಕ್ಕೆ ಅವಕಾಶ ವಿರುತ್ತದೆ.ಹಾಗೂ ಮೈಸೂರಿನ ಆರ್

ಎಕ್ಸೆಲ್ ಕಾಲೇಜು ವಿದ್ಯಾರ್ಥಿನಿ ದೀಕ್ಷಾ ಎನ್ ಸಿಇಆರ್ ಟಿ ನಡೆಸಿದ ಪರೀಕ್ಷೆ ಯಲ್ಲಿ ರಾಷ್ಟ್ರ ಮಟ್ಟದಲ್ಲಿ ಪ್ರಥಮ ಸ್ಥಾನ Read More »

ಮುಖ್ಯಮಂತ್ರಿಗಳ ವಿಶೇಷ ಅನುದಾನ ಬಿಡುಗಡೆ

ಬೆಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ 23 ಶಾಸಕರುಗಳ ವಿಧಾನಸಭಾ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ನಡವಳಿ ಹೊರಡಿಸಿದ್ದು, ಹಿಂದುಳಿದ ಕಲ್ಯಾಣ ಇಲಾಖೆಯಿಂದ ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ 23 ಶಾಸಕರುಗಳ ವಿಧಾನಸಭಾ ಕ್ಷೇತ್ರಗಳಿಗೆ ರೂ.93.24 ಕೋಟಿಗಳ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಈ ಅನುದಾನವನ್ನು ವಿವಿಧ ಅಭಿವೃದ್ಧಿ ಕಾರ್ಯಕ್ರಮ ಮತ್ತು ಕಟ್ಟಡ ಕಾಮಗಾರಿಗಳನ್ನು ಕೈಗೆತ್ತಿಕಳ್ಳಲು ಸೂಚಿಸಿದ್ದಾರೆ.

ಮುಖ್ಯಮಂತ್ರಿಗಳ ವಿಶೇಷ ಅನುದಾನ ಬಿಡುಗಡೆ Read More »

ಚಲಿಸುತ್ತಿದ್ದ ರೈಲಿಗೆ ಹತ್ತಲು ಯತ್ನಿಸಿ, ಪ್ಲಾಟ್ ಫಾರಂ ನಿಂದ ಕೆಳಗೆ ಬಿದ್ದು, ತಂದೆ ಮಗ ಮೃತ್ಯು

ಸಮಗ್ರ ನ್ಯೂಸ್: ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿ ಪ್ಲಾಟ್ ಫಾರಂನಿಂದ ಕೆಳಗೆ ಬಿದ್ದು ತಂದೆ, ಮಗ ಮೃತಪಟ್ಟ ಘಟನೆಯೊಂದು ಭದ್ರಾವತಿ ರೈಲ್ವೆ ನಿಲ್ದಾಣದ ಪ್ಲಾಟ್ ಫಾರಂ 1ರಲ್ಲಿ ಘಟನೆ ನಡೆದಿದೆ. ತಾಳಗುಪ್ಪ – ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ರೈಲಿಗೆ ಸಿಲುಕಿದ ಇಬ್ಬರು ಸಾವನ್ನಪ್ಪಿದರು. ರವಿವಾರ ರಾತ್ರಿ ರೈಲು ಹತ್ತುವಾಗ ಕಾಲು ಜಾರಿ ಬಿದ್ದು ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಮೋಹನ್ ಪ್ರಸಾದ್ (70 ವ) ಮತ್ತು ಅಮರನಾಥ್ (30 ವ) ಮೃತರು ಎಂದು

ಚಲಿಸುತ್ತಿದ್ದ ರೈಲಿಗೆ ಹತ್ತಲು ಯತ್ನಿಸಿ, ಪ್ಲಾಟ್ ಫಾರಂ ನಿಂದ ಕೆಳಗೆ ಬಿದ್ದು, ತಂದೆ ಮಗ ಮೃತ್ಯು Read More »