ಕರಾವಳಿ ಭಾಗಕ್ಕೆ ಪಡಿತರ ವ್ಯವಸ್ಥೆ ಯಲ್ಲಿ ಕುಚ್ಚಿಗೆ ಅಕ್ಕಿ ನೀಡಲು ಮುಂದಾದ ರಾಜ್ಯ ಸರ್ಕಾರ- ಕೋಟ ಶ್ರೀನಿವಾಸ ಪೂಜಾರಿ
ಸಮಗ್ರ ನ್ಯೂಸ್ : ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಜನರಿಗೆ ಪಡಿತರ ವ್ಯವಸ್ಥೆಯಲ್ಲಿ ಕುಚ್ಚಿಗೆ ಅಕ್ಕಿ ವಿತರಿಸಲು ರಾಜ್ಯ ಸರಕಾರ ಮುಂದಾಗಿದೆ. ಈ ಜಿಲ್ಲೆಗಳ ಜನರಿಗೆ ಕುಚ್ಚಿಗೆ ಅಕ್ಕಿ ನೀಡಬೇಕು ಎಂಬುದು ಬಹುದಿನಗಳ ಬೇಡಿಕೆಯಾಗಿದ್ದು, ರಾಜ್ಯ ಸರಕಾರ ಆ ನಿಟ್ಟಿನಲ್ಲಿ ಚಿಂತನೆ ನಡೆಸಿದೆ ಎಂದು ವಿಧಾನಸೌಧದಲ್ಲಿ ಗುರುವಾರ ಈ ಕುರಿತು ಸಭೆ ನಡೆಸಿದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ರಾಜ್ಯದ ನಿಯೋಗ ಈಗಾಗಲೇ ಕೇರಳಕ್ಕೆ ಭೇಟಿ […]