ಮಂಗಳೂರು: ಕೆತ್ತಿಕಲ್ ಅವೈಜ್ಞಾನಿಕ ಕಾಮಗಾರಿ ನೋಡಿ ದಂಗಾದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್| ಉನ್ನತ ಮಟ್ಟದ ತನಿಖೆಗೆ ಸೂಚಿಸಿದ ಸಚಿವರು
ಸಮಗ್ರ ನ್ಯೂಸ್: ಮಂಗಳೂರು ನಗರದ ಹೊರವಲಯದ ಕೆತ್ತಿಕಲ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ಗುಡ್ಡ ಕಡಿದಿರುವ ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಗುಡ್ಡವನ್ನು ಬೇಕಾಬಿಟ್ಟಿ ಅಗೆದು ಮಣ್ಣು ತೆಗೆಯಲಾಗಿದೆ. ಇಲ್ಲಿ ಮಣ್ಣು ಲಾಬಿಯ ಕೈವಾಡವೂ ಇದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ನಿರಂತರ ಮಳೆಯಾಗುತ್ತಿರುವುದರಿಂದ ಇಲ್ಲಿ ಭೂ ಕುಸಿತದ ಅಪಾಯ ಇದೆ. ಈ ಅವಾಂತರಕ್ಕೆ ಯಾರು ಕಾರಣ ಎಂಬ ಬಗ್ಗೆ ತನಿಖೆ ನಡೆಸಲಾಗುವುದು ಎಂದರು. ಈ ತನಿಖೆಗೆ […]