Uncategorized

ಭೀಕರ ಅಪಘಾತ; ಸಂಸದರ ಪುತ್ರ ಸಾವು

ಸಮಗ್ರ ನ್ಯೂಸ್: ರಾಜ್ಯಸಭಾ ಸದಸ್ಯ ಎನ್​​.ಆರ್​. ಇಳಂಗೋವನ್ ಅವರ ಪುತ್ರ ರಾಕೇಶ್​ (22) ಗುರುವಾರ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟಿದ್ದಾರೆ. ಸಂಸದರ ಪುತ್ರ ಪುದುಚೇರಿಯಿಂದ ಚೆನ್ನೈಗೆ ಹೆಚ್ಚು ಪ್ರಯಾಣಿಕರೊಂದಿಗೆ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದರು.ನಿಯಂತ್ರಣ ತಪ್ಪಿದ ಕಾರು ರಸ್ತೆಯ ಡಿವೈಡರ್​ಗೆ ಡಿಕ್ಕಿ ಹೊಡೆದು ಅಪಘಾತದ ಸಂಭವಿಸಿದೆ. ರಾಕೇಶ್​ ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಬ್ಬ ಪ್ರಯಾಣಿಕ ಗಂಭೀರವಾರ ಗಾಯಗೊಂಡಿದ್ದಾರೆ.‘ಘಟನೆಗೆ ಸಂಬಂಧಿಸಿದಂತೆ ಇನ್ನು ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ. ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ರಾಕೇಶ್​ […]

ಭೀಕರ ಅಪಘಾತ; ಸಂಸದರ ಪುತ್ರ ಸಾವು Read More »

2023ರಿಂದ ದೇಶದಲ್ಲಿ 5ಜಿ ಮೇನಿಯಾ| ಶೀಘ್ರದಲ್ಲೇ ತರಂಗಾಂತರ ಹಂಚಿಕೆ – ಪ್ರಧಾನಿ ಮೋದಿ

ಸಮಗ್ರ ನ್ಯೂಸ್: ಮುಂದಿನ ವರ್ಷದೊಳಗಾಗಿ ದೇಶದಲ್ಲಿ 5ಜಿ ಮೊಬೈಲ್‌ ಸೇವೆ ಆರಂಭಕ್ಕೆ ಅಗತ್ಯವಿರುವ ತರಂಗಾಂತರಗಳ ಹರಾಜನ್ನು ಇದೇ ವರ್ಷ ನಡೆಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದರು. ನವದೆಹಲಿಯಲ್ಲಿ ನಡೆದ ‘ತಂತ್ರಜ್ಞಾನ ಆಧಾರಿತ ಅಭಿವೃದ್ಧಿ’ ಎಂಬ ವಿಷಯ ಕುರಿತ ವೆಬಿನಾರ್‌ನಲ್ಲಿ ಅವರು ಮಾತನಾಡುತ್ತಾ ಈ ವಿಷಯ ತಿಳಿಸಿದ್ದಾರೆ. 5ಜಿ ತಂತ್ರಜ್ಞಾನದಿಂದ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿಗೆ ಸಾಕಷ್ಟು ವೇಗ ಸಿಗಲಿದೆ. ವೈದ್ಯ ವಿಜ್ಞಾನದಲ್ಲಿಯೂ ತಂತ್ರಜ್ಞಾನ ಪ್ರಮುಖ ಪಾತ್ರ ವಹಿಸುತ್ತಿದ್ದು, ವೈದ್ಯಕೀಯ ಸಾಧನಗಳ ಉತ್ಪಾದನೆಗೂ ಗಮನ ಹರಿಸಬೇಕು’

2023ರಿಂದ ದೇಶದಲ್ಲಿ 5ಜಿ ಮೇನಿಯಾ| ಶೀಘ್ರದಲ್ಲೇ ತರಂಗಾಂತರ ಹಂಚಿಕೆ – ಪ್ರಧಾನಿ ಮೋದಿ Read More »

ಉಡುಪಿ: ಪವರ್ ಮ್ಯಾನ್ ಗಳಿಗೆ ಜೀವವಿಮೆ‌ ಮೌಲ್ಯ ಹೆಚ್ಚಳ – ಸಚಿವ ಸುನಿಲ್ ಕುಮಾರ್

ಸಮಗ್ರ ನ್ಯೂಸ್: ರಾಜ್ಯದ ಪವರ್ ಮನ್ ಗಳ ಜೀವವಿಮೆ ಪರಿಹಾರ ಮೊತ್ತವನ್ನು 25 ಲಕ್ಷ ರೂ.ನಿಂದ 50 ಲಕ್ಷ ರೂ.ಗೆ ಹೆಚ್ಚಿಸಲಾಗುವುದು ಎಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ಹೇಳಿದ್ದಾರೆ. ರಾಜ್ಯದಲ್ಲಿ ಪವರ್ ಮ್ಯಾನ್ ಗಳು ವಿದ್ಯುತ್ ಅಪಘಾತದಲ್ಲಿ ಮೃತಪಟ್ಟರೆ 25 ಲಕ್ಷ ರೂ. ಪರಿಹಾರ ನೀಡಲಾಗುತ್ತಿದೆ. ಈ ಜೀವ ಪರಿಹಾರ ಮೊತ್ತವನ್ನು 50 ಲಕ್ಷ ರೂ.ಗೆ ಹೆಚ್ಚಿಸಲಾಗುವುದು. ಗುಜರಾತ್ ಮಾದರಿಯಲ್ಲಿ ರಾಜ್ಯದ ಎಲ್ಲ ವಿದ್ಯುತ್ ಕಂಪನಿಗಳನ್ನು ಒಳಗೊಂಡ ಹೋಲ್ಡಿಂಗ್ ಕಂಪನಿ ನಿರ್ಮಾಣ ಪ್ರಸ್ತಾವನೆ ಇದೆ. ಇಲಾಖೆಯ

ಉಡುಪಿ: ಪವರ್ ಮ್ಯಾನ್ ಗಳಿಗೆ ಜೀವವಿಮೆ‌ ಮೌಲ್ಯ ಹೆಚ್ಚಳ – ಸಚಿವ ಸುನಿಲ್ ಕುಮಾರ್ Read More »

ಮಂಗಳೂರು: ಹೆರಿಗೆ ವೇಳೆ ತಾಯಿ – ಮಗು ಸಾವು

ಸಮಗ್ರ ನ್ಯೂಸ್: ಚೊಚ್ಚಲ ಹೆರಿಗೆ ಸಂದರ್ಭ ಗರ್ಭದಲ್ಲಿದ್ದ ಮಗು ಸಹಿತ ತಾಯಿ ಮೃತಪಟ್ಟ ಘಟನೆ ಫೆ. 24 ರಂದು ನಡೆದಿದೆ. ಮಾಣಿ ಸಮೀಪದ ಕಡೆಶಿವಾಲಯ ಬುಡೋಳಿ ನಿವಾಸಿಯಾಗಿದ್ದ ವಕೀಲೆ ಗಾಯತ್ರಿ (38) ಎಂಬವರುಮೃತರು. ಅವರು ಪುತ್ತೂರಿನಲ್ಲಿ ಸುಮಾರು 8 ವರ್ಷ ವಕೀಲ ವೃತ್ತಿ ಮಾಡಿದ್ದ ಗಾಯತ್ರಿಗೆ 2010ರಲ್ಲಿ ಪೆರ್ಲದ ಆನಡ್ಕ ಕಾಡಮನೆ ಸುಧಾಕರ್ ಅವರೊಂದಿಗೆ ವಿವಾಹವಾಗಿತ್ತು. 2017ರಿಂದ ನಗರದ ಲೇಡಿಹಿಲ್ ಸಮೀಪ ವಾಸ್ತವ್ಯ ಹೊಂದಿದ್ದರು. ಅಲ್ಲದೆ ವಕೀಲ ವೃತ್ತಿ ಪುನರಾರಂಭಿಸಿದ್ದರು. ಪುತ್ತೂರು ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಕಾನೂನು

ಮಂಗಳೂರು: ಹೆರಿಗೆ ವೇಳೆ ತಾಯಿ – ಮಗು ಸಾವು Read More »

ಸುಳ್ಯ : ಚಂದನ ಸಾಹಿತ್ಯ ವೇದಿಕೆ ವತಿಯಿಂದ ಚಂದನ ಕವಿ ಕಾವ್ಯ ಸಮ್ಮೇಳನ -2022

ಸಾಹಿತಿ,ಜ್ಯೋತಿಷಿ, ಸಂಘಟಕ, ಗಾಯಕ , ನಟ , ಚಿತ್ರ ನಿರ್ದೇಶಕರೂ ಆದ ಎಚ್ ಭೀಮರಾವ್ ವಾಷ್ಠರ್ ಕೋಡಿಹಾಳ ಇವರ 46ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದ ಪ್ರಯುಕ್ತ ಚಂದನ ಕವಿ ಕಾವ್ಯ ಸಮ್ಮೇಳನ -2022 ಸಾಹಿತ್ಯ ಸಮಾರಂಭವು ಫೆ20 ರಂದು ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಬಹಳ ಅದ್ದೂರಿಯಿಂದ ಅರ್ಥಪೂರ್ಣವಾಗಿ ಜರುಗಿತು. ರಾಜ್ಯ ಮಟ್ಟದ ಸಾಧಕರಿಗೆ ರಾಜ್ಯ ಪ್ರಶಸ್ತಿ ಪ್ರದಾನ, ರಾಜ್ಯ ಮಟ್ಟದ ಚಂದನ ಕವಿಗೋಷ್ಠಿ ಹಾಗೂ ಚಂದನ ಸೌರಭ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಅಚ್ಚುಕಟ್ಟಾಗಿ ನಡೆಯಿತು .

ಸುಳ್ಯ : ಚಂದನ ಸಾಹಿತ್ಯ ವೇದಿಕೆ ವತಿಯಿಂದ ಚಂದನ ಕವಿ ಕಾವ್ಯ ಸಮ್ಮೇಳನ -2022 Read More »

ಉಡುಪಿ: ಪಿ.ಯು ಪ್ರಾಯೋಗಿಕ ಪರೀಕ್ಷೆ ಮುಂದೂಡಿಕೆ

ಉಡುಪಿ: ಇಂದಿನಿಂದ ಪ್ರಾರಂಭಗೊಳ್ಳಬೇಕಿದ್ದ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಪ್ರಾಯೋಗಿಕ ಪರೀಕ್ಷೆಗಳನ್ನು ತಾಂತ್ರಿಕ ಕಾರಣಗಳಿಗಾಗಿ ನಾಳೆಗೆ ಮುಂದೂಡಲಾಗಿದೆ ಎಂದು ಡಿಡಿಪಿಯು ಮಾರುತಿ ತಿಳಿಸಿದ್ದಾರೆ. ಜಿಲ್ಲೆಯ ಎಲ್ಲಾ ಪದವಿಪೂರ್ವ ಕಾಲೇಜುಗಳಲ್ಲಿ ನಾಳೆಯಿಂದ ಪ್ರಾಯೋಗಿಕ ಪರೀಕ್ಷೆಗಳು ಪ್ರಾರಂಭಗೊಳ್ಳಲಿವೆ ಎಂದವರು ಹೇಳಿದ್ದಾರೆ. ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆಗಳನ್ನು ಇಂದಿನಿಂದ ಮಾ.25ರೊಳಗೆ ಮುಗಿಸಲು ರಾಜ್ಯ ಪ.ಪೂ. ಶಿಕ್ಷಣ ಮಂಡಳಿ ಸೂಚನೆ ನೀಡಿದೆ. ಅದರಂತೆ ಜಿಲ್ಲೆಯ ವೇಳಾಪಟ್ಟಿ ತಯಾರಿಸಲಾಗುವುದು ಎಂದು ಮಾರುತಿ ತಿಳಿಸಿದ್ದಾರೆ. ಇಂದು ನಡೆಯಬೇಕಿದ್ದ ಪ್ರಾಯೋಗಿಕ ಪರೀಕ್ಷೆಯನ್ನು ಮಾ.11ರಂದು ನಡೆಸಲಾಗುತ್ತಿದೆ ಎಂದೂ ಅವರು

ಉಡುಪಿ: ಪಿ.ಯು ಪ್ರಾಯೋಗಿಕ ಪರೀಕ್ಷೆ ಮುಂದೂಡಿಕೆ Read More »

ಸುರತ್ಕಲ್ ‌: ಆಸಿಫ್ ಆಪದ್ಬಾಂಧವ ಅವರ ಮೇಲೆ ಹಲ್ಲೆಗೆ ಮುಂದಾಗಿದ್ದ ಮಂಗಳಮುಖಿಯರು ಪೋಲಿಸ್ ವಶಕ್ಕೆ

ಸುರತ್ಕಲ್ : ಎನ್ಐಟಿಕೆ ಟೋಲ್ ಗೇಟ್ ವಿರುದ್ಧದ ಧರಣಿ ಸ್ಥಳಕ್ಕೆ ಮಧ್ಯರಾತ್ರಿ ನುಗ್ಗಿ ಮಂಗಳಮುಖಿಯರ ದಾಂಧಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ‌ಆರು ಮಂದಿ ಮಂಗಳಮುಖಿಯರನ್ನು‌ ಪೋಲಿಸರು‌ ಬಂಧಿಸಿದ್ದಾರೆ. ಬಂಧಿತರನ್ನು ಮಂಡ್ಯ ಮೂಲದ ವಾಸವಿ‌ ಗೌಡ(32), ದಾವಣಗೆರೆ ಮೂಲದ ಲಿಪಿಕಾ‌(19) , ಹಾಸನ ಮೂಲದ ಹಿಮಾ(24), ಮೈಸೂರು ಮೂಲದ ಆದ್ಯ (22) ಹಾಗೂ ಮಾಯಾ(28) ಮತ್ತು ರಾಮನಗರ ಜಿಲ್ಲೆಯ ಮೈತ್ರಿ(28) ಎಂದು ಗುರುತಿಸಲಾಗಿದೆ.

ಸುರತ್ಕಲ್ ‌: ಆಸಿಫ್ ಆಪದ್ಬಾಂಧವ ಅವರ ಮೇಲೆ ಹಲ್ಲೆಗೆ ಮುಂದಾಗಿದ್ದ ಮಂಗಳಮುಖಿಯರು ಪೋಲಿಸ್ ವಶಕ್ಕೆ Read More »

ಸುಳ್ಯದ ಕಾಲೇಜೊಂದರಲ್ಲಿ ಹಿಜಾಬ್ ಸಂಘರ್ಷ

ಸುಳ್ಯ: ರಾಜ್ಯಾದ್ಯಂತ ವಿವಾದಕ್ಕೆ ಕಾರಣವಾದ ಹಿಜಾಬ್ ವಿವಾದ ಸುಳ್ಯಕ್ಕೂ ಕಾಲಿಟ್ಟಿದ್ದು, ನೆಹರೂ ಮೆಮೊರಿಯಲ್ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಕೆಲವರು ಹಿಜಾಬ್ ಧರಿಸಿ ಬಂದ ಘಟನೆ ಇಂದು ವರದಿಯಾಗಿದೆ. ಹಿಜಾಬ್ ಧರಿಸಿದ ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ಪ್ರವೇಶ ನಿರಾಕರಿಸಿದ ಹಿನ್ನೆಲೆ ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿಗಳು ಒಂದುಗೂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಬಂದೋಬಸ್ತ್ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಸುಳ್ಯದ ಕಾಲೇಜೊಂದರಲ್ಲಿ ಹಿಜಾಬ್ ಸಂಘರ್ಷ Read More »

ರಾಜ್ಯದಲ್ಲಿ ಮತ್ತೆ ಭುಗಿಲೆದ್ದ ಹಿಜಾಬ್ ಸಂಘರ್ಷ – ಕಾಲೇಜುಗಳ ಮುಂದೆ ಹಿಜಾಬ್ ಮುಸ್ಲಿಂ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಬೆಂಗಳೂರು: ಹಿಜಾಬ್ ಧರಿಸಿ ಬರದಂತೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದರೂ, ಕೋರ್ಟ್ ಆದೇಶಕ್ಕೆ ಡೋಂಟ್ ಕೇರ್ ಎನ್ನುವಂತೆ ವಿದ್ಯಾರ್ಥಿಗಳು ಇಂದು ಕೂಡ ಹಿಜಾಬ್ ಧರಿಸಿಯೇ ಕಾಲೇಜುಗಳಿಗೆ ಆಗಮಿಸಿದ್ದಾರೆ. ಹಿಜಾಬ್ ಧರಿಸಿ ಬಂದಂತ ವಿದ್ಯಾರ್ಥಿಗಳು ಪ್ರಾಂಶುಪಾಲರು, ಉಪನ್ಯಾಸಕರೊಂದಿಗೆ ವಾಗ್ವಾದ ನಡೆಸಿರೋದು, ಗಲಾಟೆ ಮಾಡಿರೋ ಘಟನೆಗಳು ರಾಜ್ಯಾಧ್ಯಂತ ವರದಿಯಾಗಿದೆ. ಈ ಮೂಲಕ ರಾಜ್ಯದಲ್ಲಿ ಇಂದು ಆರಂಭಗೊಂಡಂತ ಪಿಯು, ಪದವಿ ಕಾಲೇಜು ಮೊದಲ ದಿನವೇ ಹಿಜಾಬ್ ಸಂಘರ್ಷ ತಾರಕಕ್ಕೇರಿದೆ. ವಿಜಯಪುರದ ಸರ್ಕಾರಿ ಪದವಿ ಕಾಲೇಜಿನಲ್ಲಿ ಹಿಜಾಬ್ ಧರಿಸಿ ಬಂದಂತ ವಿದ್ಯಾರ್ಥಿಗಳು, ತರಗತಿಗೂ

ರಾಜ್ಯದಲ್ಲಿ ಮತ್ತೆ ಭುಗಿಲೆದ್ದ ಹಿಜಾಬ್ ಸಂಘರ್ಷ – ಕಾಲೇಜುಗಳ ಮುಂದೆ ಹಿಜಾಬ್ ಮುಸ್ಲಿಂ ವಿದ್ಯಾರ್ಥಿಗಳಿಂದ ಪ್ರತಿಭಟನೆ Read More »

ಸುರತ್ಕಲ್‌ ಟೋಲ್ ಬಳಿ ಮಂಗಳಮುಖಿಯರಿಂದ ಸಾಮಾಜಿಕ ಕಾರ್ಯಕರ್ತ ಆಸೀಫ್ ಮೇಲೆ ಹಲ್ಲೆಗೆ ಯತ್ನ

ಸುರತ್ಕಲ್: ಸುರತ್ಕಲ್ ಟೋಲ್ ಗೇಟ್ ಮುಚ್ಚುವಂತೆ ಆಗ್ರಹಿಸಿ ಕೆಲವು ದಿನಗಳಿಂದ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸಾಮಾಜಿಕ ಕಾರ್ಯಕರ್ತ ಆಸೀಫ್ ಆಪತ್ಬಾಂಧವ ಮೇಲೆ ಮಂಗಳಮುಖಿಯರು ಹಲ್ಲೆಗೆ ಯತ್ನ ನಡೆದಿದೆ. ಸ್ಥಳೀಯ ಆಡಳಿತದ ಗಮನ ಸೆಳೆಯುವ ಸಲುವಾಗಿ ಆಸಿಫ್ ನಿರಂತರ ಪ್ರತಿಭಟನೆ ನಡೆಸುತ್ತಿದ್ದರು, ಅದರಂತೆ ಕಳೆದ ಮಧ್ಯರಾತ್ರಿ ಪ್ರತಿಭಟನೆಯಲ್ಲಿ ನಿರತರಾಗಿದ್ದ ಆಸಿಫ್‌ಅವರ ಬಳಿ ಇಬ್ಬರು ಮಂಗಳಮುಖಿಯರು ಆಗಮಿಸಿದ್ದರು, ಸ್ವಲ್ಪ ಸಮಯದ ನಂತರ ಮಂಗಳಮುಖಿಯರ ತಂಡ ಆಗಮಿಸಿ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಮಂಗಳಮುಖಿಯರು ಹಲ್ಲೆಗೆ

ಸುರತ್ಕಲ್‌ ಟೋಲ್ ಬಳಿ ಮಂಗಳಮುಖಿಯರಿಂದ ಸಾಮಾಜಿಕ ಕಾರ್ಯಕರ್ತ ಆಸೀಫ್ ಮೇಲೆ ಹಲ್ಲೆಗೆ ಯತ್ನ Read More »