Uncategorized

ದಟ್ಟ ಅರಣ್ಯದೊಳಗೆ ಸುಟ್ಟ ಕಾರು, ಜೊತೆಗೊಂದು ಮೃತದೇಹ| ತನಿಖೆ ಕೈಗೊಂಡ ಪೊಲೀಸರು|

ಶಿವಮೊಗ್ಗ: ಇಲ್ಲಿನ ತೀರ್ಥಹಳ್ಳಿ ತಾಲ್ಲೂಕಿನ ಸಾಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಅರಣ್ಯದಲ್ಲಿ ಸುಟ್ಟ ಕಾರು ಮತ್ತು ಮೃತದೇಹ ಪತ್ತೆಯಾಗಿದೆ. ಕೆಲವು ದಿನಗಳ ಹಿಂದೆ ಕಾರು ಸುಟ್ಟು ಹೋಗಿರುವ ಶಂಕೆ ಇದ್ದು, ಬುಧವಾರ ಪ್ರಕರಣ ಬೆಳಕಿಗೆ ಬಂದಿದೆ. ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯ ಮಿಟ್ಲುಗೋಡು ಎಂಬ ಹಳ್ಳಿಯ ಸನಿಹದ ದಟ್ಟ ಅರಣ್ಯ ಪ್ರದೇಶದಲ್ಲಿ ಕಾರು ಸುಟ್ಟು ಕರಕಲಾಗಿ ಪತ್ತೆಯಾಗಿದೆ. ಕಾರಿನೊಳಗೆ ಮೃತದೇಹ ಸಹ ಸುಟ್ಟ ಸ್ಥಿತಿಯಲ್ಲಿ ಸಿಕ್ಕಿದೆ. ಕೆಲವು ದಿನಗಳ ಹಿಂದೆ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ. […]

ದಟ್ಟ ಅರಣ್ಯದೊಳಗೆ ಸುಟ್ಟ ಕಾರು, ಜೊತೆಗೊಂದು ಮೃತದೇಹ| ತನಿಖೆ ಕೈಗೊಂಡ ಪೊಲೀಸರು| Read More »

ವಿಶ್ವವಿಖ್ಯಾತ ದಸರಾ‌ ಉತ್ಸವಕ್ಕೆ ದಿನಗಣನೆ| ಈ ಬಾರಿ ಮಾಜಿ ಸಿಎಂ ಎಸ್ ಎಂ ಕೃಷ್ಣರಿಂದ ನಾಡಹಬ್ಬಕ್ಕೆ ಚಾಲನೆ

ಮೈಸೂರು: ನಾಡ ಹಬ್ಬ ದಸರಾ ಉದ್ಘಾಟಕರ ಹೆಸರು ಘೋಷಣೆಯಾಗಿದ್ದು ಈ ಬಾರಿಯ ದಸರಾ ಹಬ್ಬವನ್ನು ಮಾಜಿ ಸಿಎಂ ಎಸ್‍.ಎಂ ಕೃಷ್ಣ ಉದ್ಘಾಟಿಸಲಿದ್ದಾರೆ. ಮಂಗಳವಾರ (ಸೆ.28) ಸಂಜೆ ದಸರಾ ಹಬ್ಬದ ಸಿದ್ಧತೆ ಕುರಿತು ಚರ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಅಕ್ಟೋಬರ್ 7ರಿಂದ ಆರಂಭವಾಗಲಿರುವ ನಾಡಹಬ್ಬ ದಸರಾ ಮಹೋತ್ಸವವನ್ನು ಉದ್ಘಾಟಿಸಲು ಹಿರಿಯ ಮುತ್ಸದ್ಧಿ, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ರವರಿಗೆ ಆಹ್ವಾನ ನೀಡಲು ರಾಜ್ಯಸರ್ಕಾರ ನಿರ್ಧರಿಸಿದೆ. ಅಕ್ಟೋಬರ್ 7 ರಿಂದ ಪ್ರಾರಂಭವಾಗಲಿರುವ ದಸರಾ

ವಿಶ್ವವಿಖ್ಯಾತ ದಸರಾ‌ ಉತ್ಸವಕ್ಕೆ ದಿನಗಣನೆ| ಈ ಬಾರಿ ಮಾಜಿ ಸಿಎಂ ಎಸ್ ಎಂ ಕೃಷ್ಣರಿಂದ ನಾಡಹಬ್ಬಕ್ಕೆ ಚಾಲನೆ Read More »

ಕೇಸ್ ಹಿಂಪಡೆಯಲೊಪ್ಪದ‌ ಪತ್ನಿಯ ಮೂಗು‌ ಕತ್ತರಿಸಿದ ಪತಿರಾಯ! ಕೋಪದಲ್ಲಿ ತುಂಡಾಗಿದ್ದು ಮತ್ತೆ ಬಂದೀತೇ?

ಭೋಪಾಲ್: ಮೂಗು ಮನುಷ್ಯನ ಸೌಂದರ್ಯಕ್ಕೆ ಹಿಡಿದ ಕೈಗನ್ನಡಿ. ಅಂತಹ‌ ಮೂಗು ಇಲ್ಲವಾದರೆ ಆ ದೃಶ್ಯ ಊಹಿಸಲೂ ಆಗದು. ಆದರೆ ಕೋಪದಲ್ಲೊಬ್ಬ ಪತಿ ಮಹಾಶಯ ತನ್ನ ಪತ್ನಿಯ ಮೂಗನ್ನೇ ಕಚ್ಚಿ ತುಂಡರಿಸುವುದೇ? ಇಂತಹ ಆಘಾತಕಾರಿ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಇಲ್ಲಿನ ರಾತ್ಲಾಮ್ ಜಿಲ್ಲೆಯಲ್ಲಿ ಘಟನೆ ನಡೆದಿದೆ.ತನ್ನ ಇಬ್ಬರು ಹೆಣ್ಣು ಮಕ್ಕಳ ಎದುರಲ್ಲೇ ಪತ್ನಿಯ ಮೂಗನ್ನು ಕಚ್ಚಿದ ಪತಿ ಕ್ರೌರ್ಯ ಮೆರೆದಿದ್ದು, ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಆಲೌಟ್ ಆಂಜುಮನ್ ಕಾಲೋನಿಯಯಲ್ಲಿರುವ ಪತ್ನಿ

ಕೇಸ್ ಹಿಂಪಡೆಯಲೊಪ್ಪದ‌ ಪತ್ನಿಯ ಮೂಗು‌ ಕತ್ತರಿಸಿದ ಪತಿರಾಯ! ಕೋಪದಲ್ಲಿ ತುಂಡಾಗಿದ್ದು ಮತ್ತೆ ಬಂದೀತೇ? Read More »

ಪೆಟ್ರೋಲ್, ಡೀಸೆಲ್‌ ಬೆಲೆ ಇಳಿಸೋದಕ್ಕಾಗಲ್ಲ, ಅಂತಹ ಪರಿಸ್ಥಿತಿ ಇದೆ – ಯಡಿಯೂರಪ್ಪ

ಬೆಂಗಳೂರು: ಇಂದಿನ ಪರಿಸ್ಥಿತಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸುವುದು ಕಷ್ಟ ಎಂದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸದ್ಯದ ಸ್ಥಿತಿಯಲ್ಲಿ ಇಂಧನ ದರ ಇಳಿಸಲು ಸಾಧ್ಯವಿಲ್ಲದ ಪರಿಸ್ಥಿತಿ ಇದೆ ಎಂದು ಹೇಳಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿದೆ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದರೆ ಇವತ್ತಿನ ಪರಿಸ್ಥಿತಿಯಲ್ಲಿ ಇಂಧನ ದರ ಇಳಿಕೆ ಮಾಡುವ ಸ್ಥಿತಿಯಲ್ಲಿ ನಮ್ಮ ಸರ್ಕಾರ ಇಲ್ಲ. ಕೇಂದ್ರ ಸರ್ಕಾರ ಮುಂದಿನ ದಿನಗಳಲ್ಲಿ ಯಾವ ತೀರ್ಮಾನ ತೆಗೆದುಕೊಳ್ಳುತ್ತೋ

ಪೆಟ್ರೋಲ್, ಡೀಸೆಲ್‌ ಬೆಲೆ ಇಳಿಸೋದಕ್ಕಾಗಲ್ಲ, ಅಂತಹ ಪರಿಸ್ಥಿತಿ ಇದೆ – ಯಡಿಯೂರಪ್ಪ Read More »

ರಾಷ್ಟ್ರೀಯ ನಿರುದ್ಯೋಗ ದಿನ ಆಚರಿಸಿದ ಯುವ ಕಾಂಗ್ರೆಸ್ – ಬೃಹತ್ ಪ್ರತಿಭಟನಾ ಜಾಥ ಆಯೋಜನೆ

ಬೆಂಗಳೂರು: ದೇಶದ ಯುವ ಸಮೂಹ ಸೇರಿದಂತೆ ಎಲ್ಲಾ ವರ್ಗಗಳನ್ನು ಅತೀವ ಸಂಕಷ್ಟಕ್ಕೆ ದೂಡಿರುವ, ಅತಿ ಹೆಚ್ಚು ನಿರುದ್ಯೋಗ ಸೃಷ್ಟಿ ಮಾಡಿರುವ ಪ್ರಧಾನಮಂತ್ರಿ ನರೇಂದ್ರಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರದ ವಿರುದ್ಧ ಪ್ರದೇಶ ಯುವ ಕಾಂಗ್ರೆಸ್ಸಿನಿಂದ ರಾಷ್ಟ್ರೀಯ ನಿರುದ್ಯೋಗ ದಿನ ಆಚರಿಸಲಾಯಿತು. ನರೇಂದ್ರ ಮೋದಿ ಅವರ ಜನ್ಮ ದಿನವನ್ನು ರಾಷ್ಟ್ರೀಯ ನಿರುದ್ಯೋಗ ದಿನವನ್ನಾಗಿ ಆಚರಿಸುತ್ತಿದ್ದು, ಕೇಂದ್ರ ಸರ್ಕಾರದ ವಿರುದ್ಧ ಯುವ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಯುವ ಕಾಂಗ್ರೆಸ್ಸಿನ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿ.ವಿ ಮತ್ತು ರಾಜ್ಯ ಯುವ ಕಾಂಗ್ರೆಸ್

ರಾಷ್ಟ್ರೀಯ ನಿರುದ್ಯೋಗ ದಿನ ಆಚರಿಸಿದ ಯುವ ಕಾಂಗ್ರೆಸ್ – ಬೃಹತ್ ಪ್ರತಿಭಟನಾ ಜಾಥ ಆಯೋಜನೆ Read More »

ಅದಾನಿ ಹೆಸರು ತೆರವು – ‘ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ವೆಂದೇ ಮುಂದುವರಿಕೆ

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೆಸರನ್ನು ’ಅದಾನಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ’ ಎಂದು ಬದಲಿಸಿದ್ದ ಏರ್ ಪೋರ್ಟ್ ನಿರ್ವಹಣೆ ಗುತ್ತಿಗೆ ಸಂಸ್ಥೆ ಅದಾನಿಯೂ ಮತ್ತೆ ಏರ್ ಪೋರ್ಟ್ ನ ಹಿಂದಿನ ಹೆಸರಿನಂತೆಯೇ ಬದಲಿಸಿದೆ ಎಂದು ಸಾಮಾಜಿಕ ಹೋರಾಟಗಾರ ದಿಲ್ ರಾಜ್ ಆಳ್ವ ತಿಳಿಸಿದ್ದಾರೆ. ನಗರದಲ್ಲಿಂದು ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, ” ಸ್ಥಳೀಯರ ಹೋರಾಟಕ್ಕೆ ಯಶಸ್ಸು ದೊರೆದಿತ್ತು, ಅದಾನಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಈಗ ಮತ್ತೆ ಮೊದಲಿನಂತೆಯೇ “ಮಂಗಳೂರು ಅಂತಾರಾಷ್ಟ್ರೀಯ ವಿಮಾನ

ಅದಾನಿ ಹೆಸರು ತೆರವು – ‘ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ವೆಂದೇ ಮುಂದುವರಿಕೆ Read More »

ರಾತ್ರಿಯಾಗ್ತಿದ್ದಂತೆ ರಸ್ತೆಗಿಳಿಯೋ ಮೊಸಳೆ

ಮಂಡ್ಯ: ರಾತ್ರಿಯಾಗ್ತಿದ್ದಂತೆ ಭಾರೀ ಗಾತ್ರದ ಮೊಸಳೆಯೊಂದು ರಸ್ತೆಯಲ್ಲಿ ಕಾಣಿಸಿಕೊಂಡು ಜನರಲ್ಲಿ ಆತಂಕ ಮೂಡಿಸಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಪಕ್ಷಿಧಾಮದ ಬಳಿಯ ಪಾಲಹಳ್ಳಿ ಗ್ರಾಮದ ಬಳಿ ನಡೆದಿದೆ. ಕಳೆದ ಒಂದು ತಿಂಗಳಿನಿಂದ ರಂಗನತಿಟ್ಟು ಪಕ್ಷಿಧಾಮದ ಪಾಲಹಳ್ಳಿ ಗ್ರಾಮದ ಬಳಿಯ ವಿರಿಜಾ ನಾಲೆಯಲ್ಲಿ ಮೊಸಳೆಯೊಂದು ಸೇರಿಕೊಂಡಿದ್ದು, ಈಗಾಗಲೇ ನಾಲೆಯಿಂದ ಮೇಲೆ ಬಂದ ಮೂರ್ನಾಲ್ಕು ಕುರಿ ಮೇಕೆಗಳನ್ನು ತಿಂದಿದೆ. ಇದೀಗ ಮತ್ತೊಮ್ಮೆ ಭಾರೀ ಗಾತ್ರದ ಈ ಮೊಸಳೆ ವಿರಿಜಾ ನಾಲೆಯ ಪಕ್ಕದಲ್ಲೇ ರಾತ್ರಿಯಲ್ಲಿ ರಸ್ತೆಗೆ ಬಂದು ಆಹಾರಕ್ಕಾಗಿ

ರಾತ್ರಿಯಾಗ್ತಿದ್ದಂತೆ ರಸ್ತೆಗಿಳಿಯೋ ಮೊಸಳೆ Read More »

”ಗಣೇಶ” ಹೆಸರಿರುವವರಿಗೆ ಬಂಪರ್ ಆಫರ್ – ವಂಡರ್ ಲಾದಿಂದ 100 ಮಂದಿಗೆ ಉಚಿತ ಪಾಸ್

ಬೆಂಗಳೂರು: ಗಣೇಶ ಹಬ್ಬದ ಪ್ರಯುಕ್ತ ಬೆಂಗಳೂರಿನ ಮೈಸೂರು ರಸ್ತೆಯಲ್ಲಿರುವ ವಂಡರ್ ಲಾದಿಂದ ಈ ಬಾರಿ ಗಣೇಶ ಹಬ್ಬಕ್ಕೆ ಬಂಪರ್ ಆಫರ್ ನೀಡಿದೆ. ಗಣೇಶ ಚತುರ್ಥಿ ದಿನದ ಅಂಗವಾಗಿ ವಂಡರ್ ಲಾ ವತಿಯಿಂದ ವಿಶೇಷ ಕೊಡುಗೆ ನೀಡಲಾಗಿದೆ. ಭಗವಾನ್ ಶ್ರೀ ಗಣೇಶನ 108 ಹೆಸರುಗಳ ಪೈಕಿ ಯಾವುದೇ ಹೆಸರು ನೀವು ಇಟ್ಟುಕೊಂಡಿದ್ದರೆ, ಅವರಿಗೆ ಸೆಪ್ಟೆಂಬರ್ 10ರ ಗಣೇಶ ಹಬ್ಬದಂದು ಉಚಿತ ಪಾಸ್ ನೀಡುತ್ತಿದೆ. ಇಂಥ 100 ಪಾಸ್ ನೀಡಲು ನಿರ್ಧರಿಸಿದೆ. ಶ್ರೀ ಗಣೇಶನ ವಿವಿಧ ಹೆಸರು ಹೊಂದಿರುವ ಜನರು

”ಗಣೇಶ” ಹೆಸರಿರುವವರಿಗೆ ಬಂಪರ್ ಆಫರ್ – ವಂಡರ್ ಲಾದಿಂದ 100 ಮಂದಿಗೆ ಉಚಿತ ಪಾಸ್ Read More »

ಕೇರಳದಲ್ಲಿ ಮತ್ತೆ ಕಾಣಿಸಿಕೊಂಡ ನಿಫಾ| ಬಾಲಕನ ಬಲಿ ಪಡೆದ ಬಾವಲಿ ಜ್ವರ

ಕೋಝಿಕೋಡ್: ಕೇರಳದಲ್ಲಿ ಆತಂಕ ಮೂಡಿಸಿದ್ದ ನಿಫಾ ವೈರಸ್ ಮತ್ತೆ ಕಾಣಿಸಿಕೊಂಡಿದೆ. ರಾಜ್ಯದ ಕೋಳಿಕೋಡ್ ನಲ್ಲಿ 13 ವರ್ಷದ ಬಾಲಕ ನಿಫಾ ವೈರಸ್ ನಿಂದ ಸಾವನ್ನಪ್ಪಿದ್ದಾನೆ ಎಂದು ಆರೋಗ್ಯ ಇಲಾಖೆ ಮೂಲಗಳು ಭಾನುವಾರ ತಿಳಿಸಿವೆ. ಸೋಂಕಿಗೊಳಗಾಗಿರುವ ಬಾಲಕ ಛತಮಂಗಳಂ ಹತ್ತಿರ ಬಳಿಯಿರುವ ಚುಲೂರ್ ಮೂಲದವನೆಂದು ತಿಳಿದುಬಂದಿದೆ.ಪುಣೆ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿಗೆ ಕಳುಹಿಸಲಾದ ಹುಡುಗನ ಮಾದರಿಗಳು ನಿಫಾ ವೈರಸ್ ಇರುವಿಕೆಯನ್ನು ದೃಢಪಡಿಸಿವೆ. ಕೇಂದ್ರ ಸರ್ಕಾರವು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರದ ತಂಡವನ್ನು ರಾಜ್ಯಕ್ಕೆ ರವಾನಿಸಿದೆ, ಅದು ಭಾನುವಾರ ತಲುಪಲಿದೆ.

ಕೇರಳದಲ್ಲಿ ಮತ್ತೆ ಕಾಣಿಸಿಕೊಂಡ ನಿಫಾ| ಬಾಲಕನ ಬಲಿ ಪಡೆದ ಬಾವಲಿ ಜ್ವರ Read More »

ಮಂಗಳೂರು: ದುಷ್ಕರ್ಮಿಗಳ ತಂಡದಿಂದ ಯುವಕನಿಗೆ ಚೂರಿ ಇರಿತ

ಮಂಗಳೂರು: ವಕ್ತಿಯೊಬ್ಬನಿಗೆ ತಂಡವೊಂದು ಚೂರಿ ಇರಿದ ಘಟನೆ ಮಂಗಳೂರು ಹೊರವಲಯದ ಎದುರುಪದವು ಎಂಬಲ್ಲಿ ನಿನ್ನೆ ತಡರಾತ್ರಿ ನಡೆದಿದೆ.ಇರಿತಕ್ಕೊಳಗಾದವರನ್ನು ಬಾಗಲಕೋಟೆ ಮೂಲದ ನಿಂಗಣ್ಣ ಎಂದು ಗುರುತಿಸಲಾಗಿದೆ. ಚೂರಿ ಎದುರುಪದವು ನಿವಾಸಿ ದಿವಾಕರ್ ಯಾನೆ ದೀವ ತಂಡದಿಂದ ಈ ಕೃತ್ಯ ನಡೆದಿದೆ ಎಂದು ತಿಳಿದು ಬಂದಿದೆ. ಮದ್ಯಪಾನದ ಅಮಲಿನಲ್ಲಿ ನಿಂಗಣ್ಣ ಹಾಗೂ ತಂಡದೊಂದಿಗೆ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಜಗಳ ಪ್ರಾರಂಭವಾಗಿ ಕೊನೆಗೆ ಚೂರಿ ಇರಿಯುವ ಹಂತಕ್ಕೆ ಹೋಗಿದೆ.ಚೂರಿ ಇರಿತದ ಪರಿಣಾಮ ನಿಂಗಣ್ಣ ತಲೆಗೆ ಗಂಭೀರ ಗಾಯವಾಗಿದ್ದು

ಮಂಗಳೂರು: ದುಷ್ಕರ್ಮಿಗಳ ತಂಡದಿಂದ ಯುವಕನಿಗೆ ಚೂರಿ ಇರಿತ Read More »