Uncategorized

ಭೀಕರ ಅಗ್ನಿ ದುರಂತ, 39 ಕ್ಕೂ ಹೆಚ್ಚು ಮಂದಿ ಸಾವು

ಕೈರೋ: ದಕ್ಷಿಣ ಇರಾಕ್ ನ ನಾಸಿರಿಯಾದ ಕೊರೊನಾ ವೈರಸ್ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 39 ಜನರು ಮೃತಪಟ್ಟಿದ್ದು, 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಆರೋಗ್ಯ ಅಧಿಕಾರಿಗಳು ಮತ್ತು ಪೊಲೀಸರು ತಿಳಿಸಿದ್ದಾರೆ ಬೆಂಕಿಯನ್ನು ನಿಯಂತ್ರಣಕ್ಕೆ ತಂದ ನಂತರ ಅಲ್-ಹುಸೇನ್ ಕೊರೊನಾವೈರಸ್ ಆಸ್ಪತ್ರೆಯಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಆರೋಗ್ಯ ಸಚಿವಾಲಯದ ಅಧಿಕಾರಿಗಳನ್ನು ಉಲ್ಲೇಖಿಸಿ ಸರ್ಕಾರಿ ಇರಾಕ್ ಸುದ್ದಿ ಸಂಸ್ಥೆ ಹೇಳಿದೆ. ದಕ್ಷಿಣ ಇರಾಕಿನ ನಗರ ನಾಸಿರಿಯಾದ ಅಲ್ ಹುಸೇನ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ […]

ಭೀಕರ ಅಗ್ನಿ ದುರಂತ, 39 ಕ್ಕೂ ಹೆಚ್ಚು ಮಂದಿ ಸಾವು Read More »

ಸ್ವಪಕ್ಷದ ಕಾರ್ಯಕರ್ತನಿಗೆ ಡಿಕೆಶಿ ಯಿಂದ ಕಾಪಾಳಮೋಕ್ಷ

ಮಂಡ್ಯ: ತನ್ನ ಹೆಗಲ ಮೇಲೆ ಕೈ ಇಟ್ಟರು ಎಂಬ ಕಾರಣಕ್ಕೆ ಸ್ವಪಕ್ಷದ ಕಾರ್ಯಕರ್ತನಿಗೆ ಡಿ.ಕೆ.ಶಿವಕುಮಾರ್ ಕಾಪಾಳಮೋಕ್ಷ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಈ ನಡೆ ಭಾರೀ ವೈರಲ್ ಆಗಿದ್ದು ಇದು ಇದೀಗ ಬಿಜೆಪಿಗರಿಗೆ ಕಾಂಗ್ರೆಸ್ ನ್ನು ಟೀಕಿಸಲು ಬಂಡವಾಳ ಸಿಕ್ಕಿದಂತಾಗಿದೆ. ಡಿಕೆಶಿ, ಅನಾರೋಗ್ಯಕ್ಕೆ ಒಳಗಾಗಿರುವ ಮಾಜಿ ಸಂಸದ ಜಿ.ಮಾದೇಗೌಡ ಅವರ ಆರೋಗ್ಯ ವಿಚಾರಿಸಲು ಶುಕ್ರವಾರ ಸಂಜೆ ಭಾರತೀನಗರಕ್ಕೆ ಬಂದ ಸಂದರ್ಭದಲ್ಲಿ ಘಟನೆ ನಡೆದಿದೆ. ಹಿಂದಿನಿಂದ ಬಂದ ಕಾರ್ಯಕರ್ತ ಅಣ್ಣಾ ಎನ್ನುತ್ತಾ ಡಿಕೆಶಿ ಹೆಗಲ ಮೇಲೆ ಕೈ ಇಟ್ಟಿದ್ದಾರೆ. ಇದರಿಂದ

ಸ್ವಪಕ್ಷದ ಕಾರ್ಯಕರ್ತನಿಗೆ ಡಿಕೆಶಿ ಯಿಂದ ಕಾಪಾಳಮೋಕ್ಷ Read More »

ಕೆ-ಸೆಟ್ ಪರೀಕ್ಷೆಗೆ ಮರುದಿನಾಂಕ ನಿಗದಿ – ಮೈಸೂರು ವಿವಿ ಪ್ರಕಟಣೆ

ಮೈಸೂರು: ಕೊರೋನಾ ಕಾರಣದಿಂದ ಮುಂದೂಡಲಾಗಿದ್ದ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ- ಸೆಟ್)ಯ ದಿನಾಂಕವನ್ನು ಮರು ನಿಗದಿಗೊಳಿಸಲಾಗಿದೆ. ಜುಲೈ 25ರಂದು ಪರೀಕ್ಷೆಯು ನಡೆಯಲಿದೆ ಎಂದು ಪರೀಕ್ಷೆಯನ್ನು ಆಯೋಜಿಸುವ ಮೈಸೂರು ವಿಶ್ವವಿದ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ. ಈ ಮೊದಲು ಏಪ್ರಿಲ್ 11ರಂದು ಕೆ- ಸೆಟ್ ಪರೀಕ್ಷೆಯನ್ನು ಆಯೋಜಿಸಲಾಗಿತ್ತು. ದೇಶದಲ್ಲಿ ಕರೊನಾ ಸೋಂಕು ಹೆಚ್ಚಾದ ಕಾರಣ ಎರಡನೇ ಹಂತದ ಲಾಕ್​ಡೌನ್​ ಹೇರಲಾಗಿತ್ತು. ಈ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಿ ವಿಶ್ವವಿದ್ಯಾಲಯವು ಆದೇಶಹೊರಡಿಸಿತ್ತು. ಈಗ ಮತ್ತೆ ದಿನಾಂಕವನ್ನು ನಿಗದಿ ಮಾಡಿ ಮೈಸೂರು ವಿವಿ

ಕೆ-ಸೆಟ್ ಪರೀಕ್ಷೆಗೆ ಮರುದಿನಾಂಕ ನಿಗದಿ – ಮೈಸೂರು ವಿವಿ ಪ್ರಕಟಣೆ Read More »

ಶಾರ್ಟ್ ಸರ್ಕ್ಯೂಟ್ ಗೆ ಚಾಲಕ ಸಮೇತ ಹೊತ್ತಿ‌ ಉರಿದ ಕಾರು

ಚಿಕ್ಕಮಗಳೂರು: ಶಾರ್ಟ್ ಸರ್ಕ್ಯೂಟ್ ನಿಂದ ಅಲ್ಟೋ ಕಾರೊಂದು ಹೊತ್ತಿ ಉರಿದ ಪರಿಣಾಮ ಕಾರಿನಲ್ಲಿದ್ದ ವ್ಯಕ್ತಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಸಮೀಪದ ವಸ್ತಾರೆ ಗ್ರಾಮದ ಬಳಿ ಶುಕ್ರವಾರ ರಾತ್ರಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಆರೆನೂರು ಗ್ರಾಮದ ನಿವಾಸಿ ರಘು ಎಂದು ತಿಳಿದು ಬಂದಿದ್ದು ಕಾರಿನಲ್ಲಿ ಒಬ್ಬರೆ ಇದ್ದು ಚಿಕ್ಕಮಗಳೂರಿಗೆ ಹೋಗಿ ಆಲ್ದೂರಿಗೆ ಬರುವ ಮಾರ್ಗ ಮಧ್ಯೆ ಈ ದುರ್ಘಟನೆ ಸಂಭವಿಸಿದೆ. ಕಾರಿಗೆ ಬೆಂಕಿ ಹಬ್ಬಿದ ಕೂಡಲೆ ಸ್ಥಳೀಯರು ಬೆಂಕಿ ನಂದಿಸಲು

ಶಾರ್ಟ್ ಸರ್ಕ್ಯೂಟ್ ಗೆ ಚಾಲಕ ಸಮೇತ ಹೊತ್ತಿ‌ ಉರಿದ ಕಾರು Read More »

ಡಿ.ವಿ ಕರ್ನಾಟಕದ ಮುಂದಿನ ಸಿಎಂ!? ಮೌನ ಮುರಿದ ಡಿವಿಎಸ್ ಏನು ಹೇಳಿದ್ರು ಗೊತ್ತಾ?

ಬೆಂಗಳೂರು: ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರಾಗಿದ್ದ ಡಿ.ವಿ ಸದಾನಂದಗೌಡ ಬೆಂಗಳೂರಿಗೆ ವಾಪಸ್​​ ಆಗಿದ್ದು, ಗೌಡರ ಆಗಮನ ಹಿನ್ನೆಲೆಯಲ್ಲಿ ಅವರನ್ನು ನೋಡಿ ಮಾತನಾಡಿಸಲು ಬಿಜೆಪಿ ಕಾರ್ಯಕರ್ತರ ದಂಡು ಡಾಲರ್ಸ್ ಕಾಲೋನಿಯ ಸದಾನಂದಗೌಡರ ನಿವಾಸಕ್ಕೆ ಆಗಮಿಸಿತ್ತು. ನೂರಾರು ಸಂಖ್ಯೆಯ ಕಾರ್ಯಕರ್ತರು ಗೌಡರಿಗೆ ಜೈಕಾರ ಹಾಕಿ, ಮಾಜಿ ಸಚಿವರನ್ನು ಸ್ವಾಗತಿಸಿದ್ದು, ಕಾರ್ಯಕರ್ತರನ್ನು ಉದ್ದೇಶಿಸಿ ಸದಾನಂದಗೌಡರು ಮಾತನಾಡಿದರು. ‘ ನನ್ನ ಮತ್ತು ಪಕ್ಷದ ಕಾರ್ಯಕರ್ತರ ಸಂಬಂಧ ಎಲ್ಲೆ ಇದ್ರು ನಾವೆಲ್ಲರೂ ಒಟ್ಟಾಗಿ ಇದ್ದೇವೆ ಎಂಬ ಸಂದೇಶ ಇದು. ನಾನು ಪಕ್ಷದ

ಡಿ.ವಿ ಕರ್ನಾಟಕದ ಮುಂದಿನ ಸಿಎಂ!? ಮೌನ ಮುರಿದ ಡಿವಿಎಸ್ ಏನು ಹೇಳಿದ್ರು ಗೊತ್ತಾ? Read More »

ಕಾರ್ಕಳ: ಕಾಂಗ್ರೆಸ್ ಕಾರ್ಯಕರ್ತನ ಮೇಲೆ ದೌರ್ಜನ್ಯ ಆರೋಪ, ಮಾಜಿ ಸಿಎಂ ಸಿದ್ದು ಖಂಡ‌ನೆ

ಕಾರ್ಕಳದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಪೊಲೀಸ್ ದೌರ್ಜನ್ಯದ ಆರೋಪ ಕೇಳಿಬಂದಿದ್ದು, ಇದೀಗ ಕಾರ್ಯಕರ್ತನ ಸ್ಥಿತಿ ಗಂಭೀರವಾಗಿದೆ. ಹಿರ್ಗಾನ ನಿವಾಸಿ ರಾಧಾಕೃಷ್ಣ ಹಲ್ಲೆಗೆ ಒಳಗಾದವರು. ಇವರು ಸೈನಿಕರ ಬಗ್ಗೆ ಫೇಸ್‌ಬುಕ್‌ ನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದರು ಎಂಬ ಆರೋಪದ ಮೇಲೆ ಠಾಣಾಧಿಕಾರಿ ಹಲ್ಲೆ ನಡೆಸಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ರಾಧಾಕೃಷ್ಣ ಎಂಬವರು ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದು, ತನ್ನ ಫೇಸ್ ಬುಕ್ ನಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಪೋಸ್ಟ್ ಗಳನ್ನು ಹಾಕುತ್ತಿದ್ದರು. ಆದರೆ 2020

ಕಾರ್ಕಳ: ಕಾಂಗ್ರೆಸ್ ಕಾರ್ಯಕರ್ತನ ಮೇಲೆ ದೌರ್ಜನ್ಯ ಆರೋಪ, ಮಾಜಿ ಸಿಎಂ ಸಿದ್ದು ಖಂಡ‌ನೆ Read More »

ಮಂಗಳೂರು ವಿ.ವಿ ಗ್ರೂಪ್ ನಲ್ಲಿ ಹರಿದಾಡಿತು ಹಸಿಬಿಸಿ ವಿಡಿಯೋ, ಪ್ರೊಫೆಸರ್ ನ ಎಡವಟ್ಟಿಗೆ ಎಲ್ಲೆಡೆ ಆಕ್ರೋಶ

ಮಂಗಳೂರು: ಇಲ್ಲಿನ ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ವಿವಿಧ ಕಾಲೇಜುಗಳ ಪ್ರೊಫೆಸರ್ ಮತ್ತು ಉಪನ್ಯಾಸಕರನ್ನು ಒಳಗೊಂಡ ಟೆಲಿಗ್ರಾಮ್ ಗ್ರೂಪಿನಲ್ಲಿ ಕೊಡಗು ಮೂಲದ ಪ್ರೊಫೆಸರ್ ಒಬ್ಬರು ಅಶ್ಲೀಲ ವಿಡಿಯೋ ಪೋಸ್ಟ್ ಮಾಡಿರುವ ಘಟನೆ ನಡೆದಿದ್ದು, ವಿವಿಯಿಂದ ತನಿಖೆಗೆ ಆದೇಶ ಮಾಡಲಾಗಿದೆ. ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವ ವಿಚಾರದಲ್ಲಿ ಮಂಗಳೂರು ವಿವಿಯಿಂದ ಗ್ರೂಪ್ ರಚಿಸಲಾಗಿತ್ತು. ವಾಟ್ಸಪ್ ಮಾದರಿಯದ್ದೇ ಟೆಲಿಗ್ರಾಮ್ ನಲ್ಲಿ ಗ್ರೂಪ್ ರಚಿಸಿದ್ದು, ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ವ್ಯಾಪ್ತಿಯ ವಿವಿಧ ಕಾಲೇಜುಗಳ ಸಾವಿರಕ್ಕಿಂತಲೂ ಹೆಚ್ಚು ಸದಸ್ಯರನ್ನು ಸೇರಿಸಲಾಗಿತ್ತು.

ಮಂಗಳೂರು ವಿ.ವಿ ಗ್ರೂಪ್ ನಲ್ಲಿ ಹರಿದಾಡಿತು ಹಸಿಬಿಸಿ ವಿಡಿಯೋ, ಪ್ರೊಫೆಸರ್ ನ ಎಡವಟ್ಟಿಗೆ ಎಲ್ಲೆಡೆ ಆಕ್ರೋಶ Read More »

ಪಕ್ಷನಿಷ್ಠೆ, ಜವಾಬ್ದಾರಿ ನಿರ್ವಹಣೆಗೆ ಕೇಂದ್ರ ಸಚಿವೆ ಸ್ಥಾನ. ಇದು‌ ಲಕ್ ಅಲ್ಲ, ಪರಿಶ್ರಮದ ಪ್ರತಿಫಲ

ಶೋಭಾ ಕರಂದ್ಲಾಜೆ, ಕರಾವಳಿಯ ಈ ಹೆಣ್ಣು‌ಮಗಳು ಈಗ ರಾಷ್ಟ್ರೀಯ ರಾಜಕಾರಣಕ್ಕೆ ಸಕ್ರಿಯವಾಗಿ‌ ಎಂಟ್ರಿಕೊಟ್ಟಿದ್ದಾರೆ. ಪ್ರಧಾನಿ ಮೋದಿ ನೇತೃತ್ವದ ಸಚಿವ ಸಂಪುಟದಲ್ಲಿ ಕೃಷಿ ಹಾಗೂ ರೈತಕಲ್ಯಾಣ ಸಹಾಯಕ ಸಚಿವೆಯಾಗಿ ನಿನ್ನೆಯಷ್ಟೇ ಅಧಿಕಾರ ವಹಿಸಿಕೊಂಡರು. ಇವರ ಈ ಆಯ್ಕೆ ರಾಜಕೀಯ ವಲಯದಲ್ಲಿ ಅಚ್ಚರಿ ಹಾಗೂ ಆಶ್ಚರ್ಯಕ್ಕೆ ಎಡೆಮಾಡಿಕೊಟ್ಟಿತ್ತು. ಶೋಭಾ ಕರಂದ್ಲಾಜೆಯವರ ರಾಜಕೀಯ ಗುರು ಡಿ.ವಿ ಸದಾನಂದ ಗೌಡರನ್ನೇ ಕೈಬಿಟ್ಟು, ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಈ ಸಂಸದೆಯನ್ನು ಆಯ್ಕೆ ಮಾಡಿರುವುದು ಇವರ ರಾಜಕೀಯ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಎಂಬುದು ಬಿಜೆಪಿ

ಪಕ್ಷನಿಷ್ಠೆ, ಜವಾಬ್ದಾರಿ ನಿರ್ವಹಣೆಗೆ ಕೇಂದ್ರ ಸಚಿವೆ ಸ್ಥಾನ. ಇದು‌ ಲಕ್ ಅಲ್ಲ, ಪರಿಶ್ರಮದ ಪ್ರತಿಫಲ Read More »

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸಿಂಗಂ ಅಣ್ಣಾಮಲೈ

ದೆಹಲಿ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರನ್ನು ನೇಮಿಸಿ ಬಿಜೆಪಿ ಹೈಕಮಾಂಡ್ ಅಧಿಕೃತ ಆದೇಶ ಹೊರಡಿಸಿದೆ.ಕಳೆದ ಬಾರಿ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದ ಅಣ್ಣಾಮಲೈ ಅವರಿಗೆ ಇದೀಗ ತಮಿಳುನಾಡು ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೇಮಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಆದೇಶ ಹೊರಡಿಸಿದ್ದಾರೆ. 2024 ರ ಲೋಕಸಭಾ ಚುನಾವಣೆಗಳನ್ನು ಕೇಂದ್ರೀಕರಿಸಿ ಬಿಜೆಪಿ ಪಕ್ಷವು ಪ್ರಸ್ತುತ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಎಲ್. ಮುರುಗನ್ ಅವರನ್ನು ಮೀನುಗಾರಿಕೆ, ಪಶುಸಂಗೋಪನೆ ಮತ್ತು

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸಿಂಗಂ ಅಣ್ಣಾಮಲೈ Read More »

ವಾಹನ ಸವಾರರಿಗೆ ಗುಡ್ ನ್ಯೂಸ್, ಪೊಲೀಸ್ ತಪಾಸಣೆಗೆ ಡಿಜಿಟಲ್ ‌ದಾಖಲೆ‌ ಸಾಕು

ಬೆಂಗಳೂರು, ಜು.8- ಇನ್ನು ಮುಂದೆ ಪೊಲೀಸರ ತಪಾಸಣೆಯ ವೇಳೆ ವಾಹನ ಸವಾರರು ಡಿಜಿಟಲ್ ದಾಖಲೆಗಳನ್ನೇ ಪ್ರದರ್ಶನ ಮಾಡಬಹುದು ಎಂದು ಬೆಂಗಳೂರು ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಡಾ.ಬಿ.ಆರ್.ರವಿಕಾಂತೇಗೌಡ ಸ್ಪಷ್ಟಪಡಿಸಿದ್ದಾರೆ. ಡಿಜಿಟಲ್ ಕ್ರಾಂತಿ ಎಲ್ಲೆಡೆ ಕಾಣಿಸಿಕೊಳ್ಳುತ್ತಿದ್ದು , ಬೆಂಗಳೂರು ನಗರ ಪೊಲೀಸ್ ವಿಭಾಗವು ಡಿಜಿಟಿಲೀಕರಣದ ಮುಂಚೂಣಿಯಲ್ಲಿದೆ. ವಾಹನ ಸವಾರರಿಗೆ ಎಲ್ಲಾ ಸಮಯದಲ್ಲಿಯೂ ಅಗತ್ಯ ದಾಖಲಾತಿಗಳನ್ನು ಭೌತಿಕವಾಗಿ ತೆಗೆದುಕೊಂಡು ಹೋಗುತ್ತಿರುವ ಕಿರಿಕಿರಿಯಾಗುತ್ತಿರುವ ಹಿನ್ನೆಲೆಯಲ್ಲಿ ಡಿಜಿಟಲ್ ರೂಪದ ದಾಖಲೆಗಳನ್ನು ಹಾಜರುಪಡಿಸಲು ಅವಕಾಶ ನೀಡಲಾಗಿದೆ. ಕೇಂದ್ರ ಹೆದ್ದಾರಿ ಮತ್ತು ರಸ್ತೆ

ವಾಹನ ಸವಾರರಿಗೆ ಗುಡ್ ನ್ಯೂಸ್, ಪೊಲೀಸ್ ತಪಾಸಣೆಗೆ ಡಿಜಿಟಲ್ ‌ದಾಖಲೆ‌ ಸಾಕು Read More »