Uncategorized

ನಿಮ್ಮ ಕೂದಲು ಚೆನ್ನಾಗಿ ಕಾಣಬೇಕು ಅಂದ್ರೆ ಪಾರ್ಲರ್ ಗೆ ಹೋಗಬೇಕು ಅಂತೇನಿಲ್ಲ? ಈ ಟಿಪ್ಸ್ ಫಾಲೋ ಮಾಡಿ ಸಾಕು

ಕೂದಲು ನಮ್ಮ ಸೌಂದರ್ಯವನ್ನು ಹೆಚ್ಚಿಸುತ್ತದೆ. ಹಾಗಾಗಿ ಕೂದಲನ್ನು ಆರೋಗ್ಯಕರವಾಗಿ, ಬಲವಾಗಿಡಲು ಸರಿಯಾದ ಪೋಷಣೆಯ ಅಗತ್ಯವಿದೆ. ಕೂದಲಿನ ಆರೈಕೆಗಾಗಿ ಹಲವು ರೀತಿಯ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಅದರಲ್ಲೂ ನಾವು ಸೇವಿಸುವ ಆಹಾರ ಪ್ರಮುಖ ಪಾತ್ರ ವಹಿಸುತ್ತದೆ. ಕೂದಲಿಗೆ ಪ್ರೋಟೀನ್ ಮತ್ತು ಕ್ಯಾಲ್ಸಿಯಂನ ಅಗತ್ಯವನ್ನು ಪೂರೈಸಲು ಮೊಸರು ಅತ್ಯುತ್ತಮ ಮೂಲವೆಂದು ಪರಿಗಣಿಸಲಾಗಿದೆ. ಮೊಸರು ಹೆಚ್ಚಾಗಿ ಪ್ರೋಬಯಾಟಿಕ್ಗಳನ್ನು ಹೊಂದಿರುತ್ತದೆ. ಅದು ಕೂದಲಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯಕವಾಗಿದೆ ಮತ್ತು ಬೋಳು ತಲೆಯಿಂದ ನಿಮ್ಮನ್ನು ರಕ್ಷಿಸುತ್ತದೆ. ಮೊಟ್ಟೆಗಳು ಕೂದಲಿಗೆ ಸಂಪೂರ್ಣ ಪೋಷಣೆಯ ಪ್ರಮುಖ ಮೂಲವಾಗಿದೆ. ಇವುಗಳಲ್ಲಿ […]

ನಿಮ್ಮ ಕೂದಲು ಚೆನ್ನಾಗಿ ಕಾಣಬೇಕು ಅಂದ್ರೆ ಪಾರ್ಲರ್ ಗೆ ಹೋಗಬೇಕು ಅಂತೇನಿಲ್ಲ? ಈ ಟಿಪ್ಸ್ ಫಾಲೋ ಮಾಡಿ ಸಾಕು Read More »

ಟೊಮ್ಯಾಟೊ ಬಳಿಕ ಈರುಳ್ಳಿ ‌ಬೆಲೆ ಗಗನಕ್ಕೆ| ಕಣ್ಣೀರು ಸುರಿಸುತ್ತಿರುವ ಗ್ರಾಹಕ

ಸಮಗ್ರ ನ್ಯೂಸ್: ಎರಡು ತಿಂಗಳ ಹಿಂದೆ ಬೆಲೆ ಹೆಚ್ಚಿಸಿಕೊಂಡು ಬೀಗುತ್ತಿದ್ದ ಟೊಮೆಟೊ ಜಾಗವನ್ನು ಈಗ ಈರುಳ್ಳಿ ಆಕ್ರಮಿಸಿದೆ. ಈರುಳ್ಳಿ ಬೆಲೆ ಬುಧವಾರಕ್ಕಿಂತ ದುಪ್ಪಟ್ಟಾಗಿದ್ದು ಗ್ರಾಹಕರು ಬೆಚ್ಚಿ ಬೀಳುತ್ತಿದ್ದಾರೆ. ಬುಧವಾರ ಪ್ರತಿ ಕೆ.ಜಿಗೆ ₹ 30-₹ 40ನಂತೆ ಮಾರಾಟವಾಗಿದ್ದ ಈರುಳ್ಳಿ ಸ್ಥಳೀಯ ಮಾರುಕಟ್ಟೆಯಲ್ಲಿ ಗುರುವಾರ ಪ್ರತಿ ಕೆ.ಜಿಗೆ ₹ 60-₹ 70ನಂತೆ ಮಾರಾಟವಾಗಿದೆ. ಕಳೆದ ಹತ್ತು ದಿನಗಳಿಂದ ಈರುಳ್ಳಿ ಪೂರೈಕೆಯಲ್ಲಿ ದಿಢೀರ್ ಇಳಿಕೆಯಾಗಿದೆ ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಎಂಪಿಸಿ) ಅಧಿಕಾರಿಗಳು ಮತ್ತು ಚಿಲ್ಲರೆ ಮಾರಾಟಗಾರರು ತಿಳಿಸಿದ್ದಾರೆ.

ಟೊಮ್ಯಾಟೊ ಬಳಿಕ ಈರುಳ್ಳಿ ‌ಬೆಲೆ ಗಗನಕ್ಕೆ| ಕಣ್ಣೀರು ಸುರಿಸುತ್ತಿರುವ ಗ್ರಾಹಕ Read More »

54ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ/ ಪ್ರದರ್ಶನ ಕಾಣಲಿರುವ ಕನ್ನಡದ ಕಾಂತಾರ

ಸಮಗ್ರ ನ್ಯೂಸ್: ಕರಾವಳಿಯ ದೈವಾರಾಧನೆಯನ್ನು ಆಧಾರವಾಗಿಟ್ಟುಕೊಂಡು ರಿಷಭ್ ಶೆಟ್ಟಿ ನಟಿಸಿ, ನಿರ್ದೇಶಿಸಿದ ಕಾಂತಾರ ಸಿನಿಮಾ ವಿಶ್ವಾದ್ಯಾಂತ ಜನಮನ್ನಣೆ ಗಳಿಸಿ. ಇದೀಗ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ. ಗೋವಾದಲ್ಲಿ ನವೆಂಬರ್ 20 ರಿಂದ 28 ರವರೆಗೆ ನಡೆಯಲಿರುವ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಕಾಂತಾರ ಪ್ರದರ್ಶನ ಕಾಣಲಿದೆ. ವಿಭಿನ್ನ ಕಥಾಹಂದರವನ್ನು ಇಟ್ಟುಕೊಂಡು ತಯಾರಾಗಿದ್ದ ಕಾಂತಾರ, ರಿಷಭ್ ಶೆಟ್ಟಿಯ ಅದ್ಭುತ ನಟನೆಯ ಮೂಲಕ ಜನರ ಮನಗೆದ್ದಿತು. ಇದೀಗ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿರುವುದು ಹೆಮ್ಮೆಯ ವಿಷಯವಾಗಿದೆ

54ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ/ ಪ್ರದರ್ಶನ ಕಾಣಲಿರುವ ಕನ್ನಡದ ಕಾಂತಾರ Read More »

ಮಡಿಕೇರಿ: ಕಾರಿನ ಮೇಲೆ ಕಾಡಾನೆಗಳ ದಾಳಿ

ಸಮಗ್ರ ನ್ಯೂಸ್: ಕುಶಾಲನಗರದಿಂದ ಮಡಿಕೇರಿಯತ್ತ ತೆರಳುವ ಕಾರಿಗೆ ರಸ್ತೆ ದಾಟುತ್ತಿದ್ದ ಆರೇಳು ಕಾಡಾನೆ ಪಡೆಗಳು ದಾಳಿ ಮಾಡಿದ ಘಟನೆ ಆ.27 ರಂದು ಸಂಭವಿಸಿದೆ. ಬೈಲುಕೊಪ್ಪೆಯ ಸಿದ್ದಾರ್ಥ್ ಎಂಬವರಿಗೆ ಸೇರಿದ ಕಾರಾಗಿದ್ದು. ಅದೃಷ್ಟವಶಾತ್ ಕಾರಿನ ಮಾಲೀಕ ಹಾಗೂ ಸ್ನೇಹಿತ ಅಪಾಯದಿಂದ ಪಾರಾಗಿದ್ದಾರೆ. ಆನೆಕಾಡು ಮೀಸಲು ಅರಣ್ಯ ವ್ಯಾಪ್ತಿಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.

ಮಡಿಕೇರಿ: ಕಾರಿನ ಮೇಲೆ ಕಾಡಾನೆಗಳ ದಾಳಿ Read More »

ಧರ್ಮಸ್ಥಳ ದೇವಸ್ಥಾನ ನಿಯಮಗಳಡಿ ನೋಂದಣಿಯಾಗಿಲ್ಲ| ಆಡಳಿತ ಮಂಡಳಿ ವಿರುದ್ದ ಕ್ರಮಕ್ಕೆ ಒತ್ತಾಯ

ಸಮಗ್ರ ನ್ಯೂಸ್: ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ದೇವಸ್ಥಾನವು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮದಂತೆ ನೋಂದಣಿಯೇ ಆಗಿಲ್ಲ ಎಂಬುದು ಆರ್‌ ಟಿಐನಡಿ ಬಹಿರಂಗಗೊಂಡಿದ್ದು, ಹೀಗಾಗಿ ಧರ್ಮಸ್ಥಳ ಮಂಜುನಾಥೇಶ್ವರ ಆಡಳಿತ ಮಂಡಳಿಯ ವಿರುದ್ಧ ಕಾನೂನು ಕ್ರಮಗಳನ್ನು ಜರುಗಿಸಬೇಕು ಎಂದು ʼನೈಜ ಹೋರಾಟಗಾರರ ವೇದಿಕೆʼ ಒತ್ತಾಯಿಸಿದೆ. ಈ ಸಂಬಂಧ ದಕ್ಷಿಣ‌ ಕನ್ನಡ ಜಿಲ್ಲಾಧಿಕಾರಿ ಅವರಿಗೆ ಪತ್ರ ಬರೆದಿರುವ ʼನೈಜ ಹೋರಾಟಗಾರರ ವೇದಿಕೆʼಯ ಹೆಚ್ ಎಂ ವೆಂಕಟೇಶ್ , ಲೋಕೇಶ್ ಬಿಎಸ್, ಹಂದ್ರಾಳ್

ಧರ್ಮಸ್ಥಳ ದೇವಸ್ಥಾನ ನಿಯಮಗಳಡಿ ನೋಂದಣಿಯಾಗಿಲ್ಲ| ಆಡಳಿತ ಮಂಡಳಿ ವಿರುದ್ದ ಕ್ರಮಕ್ಕೆ ಒತ್ತಾಯ Read More »

ಅಂತರ್ರಾಷ್ಟ್ರೀಯ ಮಹಿಳಾ ಕಬಡ್ಡಿ ಕ್ರೀಡಾಪಟು ಆತ್ಮಹತ್ಯೆ ಶರಣು

ಸಮಗ್ರ ನ್ಯೂಸ್: ಅಂತಾರಾಷ್ಟ್ರೀಯ ಮಹಿಳಾ ಕಬಡ್ಡಿ ಕ್ರೀಡಾಪಟು ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರು ಗ್ರಾಮಾಂತರದ ನೆಲಮಂಗಲದ ಅರಿಶಿನಕುಂಟೆಯಲ್ಲಿ ವರದಿಯಾಗಿದೆ. ಮೃತರನ್ನು ಅಂತಾರಾಷ್ಟ್ರೀಯ ಮಹಿಳಾ ಕಬಡ್ಡಿ ಕ್ರೀಡಾಪಟು ಧನಲಕ್ಷ್ಮೀ (25) ಎಂದು ಗುರುತಿಸಲಾಗಿದೆ. ಸ್ನೇಹಿತರೊಂದಿಗೆ ಮೈಸೂರು ದಸರಾ ನೋಡಿಕೊಂಡು ಬಂದಿದ್ದ ಧನಲಕ್ಷ್ಮೀ, ತಂದೆ ಹಾಗೂ ತಮ್ಮ ಮನೆಯಲ್ಲಿರುವಾಗಲೇ ರೂಂನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ 3 ಬಾರಿ ಕಬ್ಬಡಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಧನಲಕ್ಷ್ಮೀ, ಕಾಡುಗೋಡಿ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು. ಈ

ಅಂತರ್ರಾಷ್ಟ್ರೀಯ ಮಹಿಳಾ ಕಬಡ್ಡಿ ಕ್ರೀಡಾಪಟು ಆತ್ಮಹತ್ಯೆ ಶರಣು Read More »

ಸುಬ್ರಹ್ಮಣ್ಯ: ಕೆಎಸ್ಎಸ್ ಕಾಲೇಜಿನ ಮೆಮೊರಂಡಮ್ ಆಫ್ ಅಂಡರ್ಸ್ಟ್ಯಾಂಡಿಂಗ್ ದಾಖಲೆ ಹಸ್ತಾಂತರ

ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯ, ಸುಬ್ರಹ್ಮಣ್ಯ ವಾಣಿಜ್ಯ ಹಾಗೂ ಉದ್ಯಮಾಡಳಿತ ವಿಭಾಗ ಮತ್ತು ಶ್ರೀ ರಾಮ ಪ್ರಥಮ ದರ್ಜೆ ಮಹಾವಿದ್ಯಾಲಯ, ಕಲ್ಲಡ್ಕದ ವಾಣಿಜ್ಯಶಾಸ್ತ್ರ ವಿಭಾಗದೊಂದಿಗೆ “ಮೆಮೊರಂಡಮ್ ಆಫ್ ಅಂಡರ್ಸ್ಟ್ಯಾಂಡಿಂಗ್”ಗೆ ದಾಖಲೆಯನ್ನು ಹಸ್ತಾಂತರಿಸುವ ಮೂಲಕ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಪ್ರಾಂಶುಪಾಲ ಕೃಷ್ಣಪ್ರಸಾದ್ ಕಾಯರ್ಕಟ್ಟೆ ಶುಭ ಹಾರೈಸಿದರು. ಕೆಎಸ್ಎಸ್ ಮಹಾವಿದ್ಯಾಲಯದ ವಾಣಿಜ್ಯಶಾಸ್ತ್ರ ಉಪನ್ಯಾಸಕ ಶಿವಪ್ರಸಾದ್ ಎಸ್. ಎಮ್ಓಯು ಇದರ ಮಾಹಿತಿ ನೀಡಿದರು. ಎಮ್ಓಯು ಕಾರ್ಯಕ್ರಮದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯ ಸುಬ್ರಹ್ಮಣ್ಯದ ವಾಣಿಜ್ಯ

ಸುಬ್ರಹ್ಮಣ್ಯ: ಕೆಎಸ್ಎಸ್ ಕಾಲೇಜಿನ ಮೆಮೊರಂಡಮ್ ಆಫ್ ಅಂಡರ್ಸ್ಟ್ಯಾಂಡಿಂಗ್ ದಾಖಲೆ ಹಸ್ತಾಂತರ Read More »

ಚುನಾವಣಾ ಬಾಂಡ್/ ರಾಜಕೀಯ ಪಕ್ಷಗಳಿಗೆ ಮತ್ತೊಂದು ಶಾಕಿಂಗ್ ನ್ಯೂಸ್

ಸಮಗ್ರ ನ್ಯೂಸ್: ದೇಶಾದ್ಯಂತ ತೀವ್ರ ವಿವಾದ, ಚರ್ಚೆಗೆ ಗ್ರಾಸವಾಗಿರುವ ಚುನಾವಣಾ ಬಾಂಡ್‌ ಪ್ರಕರಣಗಳ ವಿಚಾರಣೆಯನ್ನು,ಪಂಚ ರಾಜ್ಯಗಳಲ್ಲಿ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವ ಮೊದಲೇ ಸುಪ್ರೀಂ ಕೋರ್ಟ್‌ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠಕ್ಕೆ (Constitution Bench) ವರ್ಗಾಯಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯನ್ನು ಅಕ್ಟೋಬರ್‌ 31ರಂದು ನಡೆಸಲಾಗುವುದು ಎಂದು ಸರ್ವೋಚ್ಚ ನ್ಯಾಯಾಲಯ ತಿಳಿಸಿದೆ. ಚುನಾವಣಾ ಬಾಂಡ್ ಯೋಜನೆಯನ್ನು 2017ರಲ್ಲಿ ಹಣಕಾಸು ಸಚಿವ ಅರುಣ್ ಜೇಟ್ಲಿ ಬಜೆಟ್ ಅಧಿವೇಶನದಲ್ಲಿ ಪ್ರಸ್ತಾಪಿಸಿ, ಹಣಕಾಸು ಕಾಯ್ದೆ ಹಾಗೂ

ಚುನಾವಣಾ ಬಾಂಡ್/ ರಾಜಕೀಯ ಪಕ್ಷಗಳಿಗೆ ಮತ್ತೊಂದು ಶಾಕಿಂಗ್ ನ್ಯೂಸ್ Read More »

ಗೆಸ್ಟ್​ ಫ್ಯಾಕಲ್ಟಿ ಹುದ್ದೆಗಳು ಖಾಲಿ ಇವೆ, ಇವತ್ತೇ ಲಾಸ್ಟ್​ ಡೇಟ್​

ಸಮಗ್ರ ಉದ್ಯೋಗ: Employees State Insurance Corporation Karnatakaನಲ್ಲಿ ಹುದ್ದೆಗಳು ಖಾಲಿ ಇವೆ. ಒಟ್ಟು 4 Guest Faculty​ ಖಾಲಿ ಇವೆ. ಕಲಬುರಗಿಯಲ್ಲಿ ಕೆಲಸ ಹುಡುಕುತ್ತಿರುವ ಉದ್ಯೋಗಾಂಕ್ಷಿಗಳಿಗೆ ಇದೊಂದು ಒಳ್ಳೆಯ ಅವಕಾಶ. ಅಕ್ಟೋಬರ್ 16, 2023 ಅಂದರೆ ಇವತ್ತೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಇನ್ನಷ್ಟು ಉದ್ಯೋಗದ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ.Education:ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂ.ಎಸ್ಸಿ, ಎಂ.ಎ, ಬಿ.ಎಡ್, ಎಂ.ಎಡ್

ಗೆಸ್ಟ್​ ಫ್ಯಾಕಲ್ಟಿ ಹುದ್ದೆಗಳು ಖಾಲಿ ಇವೆ, ಇವತ್ತೇ ಲಾಸ್ಟ್​ ಡೇಟ್​ Read More »

ಹಾಸ್ಯ ನಟ ನಾಗಭೂಷಣ್ ಕಾರು ಅಪಘಾತ: ಪಾದಾಚಾರಿ ಸಾವು

ಸಮಗ್ರ ನ್ಯೂಸ್:‌ ಕನ್ನಡ ಚಿತ್ರರಂಗದಲ್ಲಿ ಹಾಸ್ಯ ನಟ ನಾಗಭೂಷಣ್ ನ ಕಾರು ಅಪಘಾತಕ್ಕೆ ಒಳಗಾಗಿ ದಾರಿ ಪಾದಾಚಾರಿ ಸಾವನಪ್ಪಿ ಘಟನೆ ಸೆ. 30 ಕೋಣನಕುಂಟೆ ಕ್ರಾಸ್​ ಬಳಿ ಸಂಭವಿಸಿದೆ. ಮೃತರನ್ನು ಪ್ರೇಮಾ​ ಎಸ್​. (48) ಎಂದು ಗುರುತಿಸಲಾಗಿದೆ. ಕೃಷ್ಣ ಬನ್ನೇರುಘಟ್ಟದ ಫೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಫುಟ್ ಪಾತ್ ಮೇಲೆ ವಾಕಿಂಗ್ ಮಾಡ್ತಿದ್ದಾಗ ಘಟನೆ ಸಂಭವಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರೇಮಾ ಮತ್ತು ಕೃಷ್ಣ ದಂಪತಿಯ ಪುತ್ರ ಪಾರ್ಥ ಕೆ. ಅವರು ದೂರು ನೀಡಿದ್ದಾರೆ. ನಾಗಭೂಷಣ್

ಹಾಸ್ಯ ನಟ ನಾಗಭೂಷಣ್ ಕಾರು ಅಪಘಾತ: ಪಾದಾಚಾರಿ ಸಾವು Read More »