ವ್ಯಕ್ತಿ ಚಿತ್ರಣ

ಜ್ಞಾನಧಾರೆ ಎರೆದ ಗುರುವಿಗೆ ಶರಣು ಶರಣಾರ್ಥಿ| ಗುರುವಲ್ಲವೇ ಗುರಿ ತೋರುವವನು?

ಅಜ್ಞಾನವೆಂಬ ಅಂಧಕಾರದಲ್ಲಿ ಮುಳುಗಿರುವವನ ಬಾಳಿನಲ್ಲಿ ಕತ್ತಲು ಹೊಡೆದೋಡಿಸಿ, ವಿದ್ಯೆಯೆಂಬ ಸುಜ್ಞಾನದ ಬೆಳಕನ್ನು ತರುವ ಶ್ರೇಷ್ಠ ವ್ಯಕ್ತಿಯೇ ಗುರು. ಗುರುವಿನ ಸ್ಥಾನದಲ್ಲಿ ತಂದೆ-ತಾಯಿಗಳು, ಶಿಕ್ಷಕರು, ಹಿರಿಯರು, ಹಿತೈಷಿಗಳು, ಸ್ನೇಹಿತರು ಮುಂತಾದವರು ನಿಲ್ಲುತ್ತಾರೆ. ಹೆಚ್ಚಾಗಿ ಗುರು ಎಂದ ತಕ್ಷಣ ನಮ್ಮ ನೆನಪಿಗೆ ಬರುವುದು ವಿದ್ಯಾದಾನದ ಮೂಲಕ ನಮ್ಮನ್ನು ವಿದ್ಯಾವಂತರನ್ನಾಗಿ ಮಾಡಿ, ಸಮಾಜಕ್ಕೆ ಹಾಗೂ ನಾಡಿಗೆ ಉತ್ತಮ ಪ್ರಜೆಗಳನ್ನಾಗಿ ಕೊಡುಗೆ ನೀಡಲು ತಮ್ಮ ಜೀವನವನ್ನೇ ಮುಡುಪಾಗಿಟ್ಟಂತಹ ಶಾಲಾ ಶಿಕ್ಷಕರು, ಕಾಲೇಜು ಉಪನ್ಯಾಸಕರು ಹಾಗೂ ಅಧ್ಯಾಪಕ ವರ್ಗದವರು. ಪ್ರತಿ ವರ್ಷ ಸೆಪ್ಟೆಂಬರ್ 5ರಂದು […]

ಜ್ಞಾನಧಾರೆ ಎರೆದ ಗುರುವಿಗೆ ಶರಣು ಶರಣಾರ್ಥಿ| ಗುರುವಲ್ಲವೇ ಗುರಿ ತೋರುವವನು? Read More »

ರಕ್ತಚರಿತ್ರೆಯ ಇತಿಹಾಸಕ್ಕೆ ಹೊಸ ಭಾಷ್ಯ ಬರೆದ ಮಿಲ್ಖಾ ಸಿಂಗ್ | ಜೀವರಕ್ಷಣೆಯ ಓಟ ಸ್ಥಾಪಿಸಿತ್ತು ಹೊಸ ಮೈಲಿಗಲ್ಲು | ಇದು ಪ್ಲೇಯಿಂಗ್ ಸಿಖ್ ನ ಬದುಕಿನ ಅನಾವರಣ

ಮಿಲ್ಕಾ ಸಿಂಗ್..ಈ ಹೆಸರೇ ಸ್ಫೂರ್ತಿಯ ಚಿಲುಮೆ. ಟ್ರ್ಯಾಕ್ ನಲ್ಲಿ ಓಡಲು ಶುರು ಮಾಡುವ ಪ್ರತಿ ಅಥ್ಲೀಟ್ ಗೆ ಭರವಸೆಯ ಬೆಳಕು ಈ ಒಂದು ಹೆಸರು. ಮಿಲ್ಕಾ ಸಿಂಗ್ ಅಂದ್ರೆ ಓಟ.. ಓಟ ಅಂದ್ರೆ ಮಿಲ್ಕಾ ಸಿಂಗ್.. ಅಂತಹುದ್ದೊಂದು ಮಾಂತ್ರಿಕತೆ ಮಿಲ್ಕಾ ಸಿಂಗ್ ಹೆಸರಿನಲ್ಲಿದೆ.ಭಾಘ್ ಮಿಲ್ಕಾ.. ಭಾಘ್ ಮಿಲ್ಕಾ.. ಹೌದು ಮಿಲ್ಕಾ ಸಿಂಗ್ ಮೊದಲು ಜೀವ ಉಳಿಸಿಕೊಳ್ಳಲು ಓಡಲು ಶುರು ಮಾಡಿದ್ದರು. ನಂತರ ಅಕ್ಷರ ಕಲಿಯಲು ಕಿಲೋ ಮೀಟರ್‌ ಗಟ್ಟಲೇ ಓಡುತ್ತಿದ್ದರು. ಬಳಿಕ ದಂಗೆಯ ಭಯದಿಂದ ಓಡುತ್ತಾ ಗಡಿ

ರಕ್ತಚರಿತ್ರೆಯ ಇತಿಹಾಸಕ್ಕೆ ಹೊಸ ಭಾಷ್ಯ ಬರೆದ ಮಿಲ್ಖಾ ಸಿಂಗ್ | ಜೀವರಕ್ಷಣೆಯ ಓಟ ಸ್ಥಾಪಿಸಿತ್ತು ಹೊಸ ಮೈಲಿಗಲ್ಲು | ಇದು ಪ್ಲೇಯಿಂಗ್ ಸಿಖ್ ನ ಬದುಕಿನ ಅನಾವರಣ Read More »

ಕನ್ನಡ ನೆಲದ ಹೆಮ್ಮೆಯ ಸುಪುತ್ರ ಹೆಚ್.ಡಿ.ದೇವೇಗೌಡ

ಶ್ರೀ ಹೆಚ್.ಡಿ.ದೇವೇಗೌಡರ ಅವರು ಸಾಮಾಜಿಕ-ಆರ್ಥಿಕ ಅಭಿವೃದ್ಧಿಯ ಸುಧಾರಕರು ಹಾಗೂ ಭಾರತದ ಭವ್ಯ ಸಂಸ್ಕೃತಿ ಪರಂಪರೆಯ ಪ್ರಶಂಸಕರು. ಇವರು ಮೇ 18, 1933ರಂದು ಕರ್ನಾಟಕದ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿ ಗ್ರಾಮದಲ್ಲಿ ಜನಿಸಿದರು. ಸಿವಿಲ್ ಎಂಜಿನಿಯರಿಂದ ಡಿಪ್ಲೊಮಾ ಪಡೆದಿರುವ ಶ್ರೀದೇವೇಗೌಡರು 20 ವರ್ಷದ ಯುವಕನಾಗಿದ್ದಾಗಲೇ ಸಕ್ರಿಯ ರಾಜಕಾರಣಕ್ಕೆ ಧುಮುಕಿದರು. ಶಿಕ್ಷಣ ಪೂರೈಸಿದ ನಂತರ 1953ರಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರಿ 1962ರ ತನಕ ಆ ಪಕ್ಷದಲ್ಲೇ ಸದಸ್ಯರಾಗಿ ಉಳಿದಿದ್ದರು. ಮಧ್ಯಮ ವರ್ಗದ ಕೃಷಿ ಕುಟುಂಬದ ಹಿನ್ನೆಲೆಯಿಂದ ಬಂದ ಗೌಡರಿಗೆ

ಕನ್ನಡ ನೆಲದ ಹೆಮ್ಮೆಯ ಸುಪುತ್ರ ಹೆಚ್.ಡಿ.ದೇವೇಗೌಡ Read More »

25 ಬಾರಿ ಮೌಂಟ್ ಎವರೆಸ್ಟ್ ಏರಿದ ಕಮಿ ರೀಟಾ ಶೆರ್ಪಾ

ನೇಪಾಳ: ಜಗತ್ತಿನ ಅತ್ಯಂತ ಎತ್ತರದ ಶಿಖರವಾದ ಮೌಂಟ್ ಎವರೆಸ್ಟ್ ಅನ್ನು 25 ಬಾರಿ ಏರುವ ಮೂಲಕ ನೇಪಾಳದ ಕಮಿ ರೀಟಾ ಶೆರ್ಪಾರವರು ಹಲವು ವರ್ಷಗಳಿಂದ ತಾವೇ ಸೃಷ್ಠಿಸಿದ್ದ ದಾಖಲೆಯನ್ನು ಮುರಿದಿದ್ದಾರೆ. ಕಮಿ ರೀಟಾ ಶೆರ್ಪಾರವರ ವಯಸ್ಸು 49. ಇವರು 1994ರಲ್ಲಿ ಮೊದಲ ಬಾರಿಗೆ 8848 ಮೀ. ಎತ್ತರದ ಮೌಂಟ್ ಎವರೆಸ್ಟ್ ಶಿಖರ ಏರಿದ್ದ ಬಳಿಕ ಪ್ರತಿ ವರ್ಷವೂ ಹಿಮಪರ್ವತವನ್ನ ಏರುತ್ತಲೇ ಇದ್ದಾರೆ. 2017ರಲ್ಲಿ ಅಪಾ ಶೆರ್ಪಾ ಮತ್ತು ಪುರ್ಬಾ ತಶಿ ಶೆರ್ಪಾ ಮತ್ತು ಕಮಿ ರಿತಾ 21ನೇ

25 ಬಾರಿ ಮೌಂಟ್ ಎವರೆಸ್ಟ್ ಏರಿದ ಕಮಿ ರೀಟಾ ಶೆರ್ಪಾ Read More »

ಅಸ್ಪರ್ಶ ಹುಡುಗ ಅಸಾಮಾನ್ಯನಾದ ಕಥೆ. ಈ‌ ಭೀಮ‌ ಸಂವಿಧಾನದ ಬಲಭೀಮ

ಬಾಬಾಸಾಹೇಬ್ ಅಂಬೇಡ್ಕರ್ ಎಂದೇ ಜನಪ್ರಿಯರಾಗಿರುವ ಡಾ. ಭೀಮ್ ರಾವ್ ಅಂಬೇಡ್ಕರ್ ಅವರು ಭಾರತದ ಸಂವಿಧಾನವನ್ನು ರಚಿಸಿ, ಭಾರತಕ್ಕೆ ಒಂದು ದೊಡ್ಡ ಕೊಡುಗೆಯನ್ನೇ ನೀಡಿದ ಪ್ರಸಿದ್ಧ ನಾಯಕರು.ಆದರೆ ಎಲ್ಲವನ್ನೂ ಗೆದ್ದು ನಿಂತಿದ್ದರಿಂದಲೇ ಇವತ್ತು ದೇಶ ಮರೆಯಲಾರದ ಚೇತನವಾಗಿ, ಸಂವಿಧಾನ ಶಿಲ್ಪಿಯಾಗಿ ಡಾ.ಬಿ.ಆರ್.ಅಂಬೇಡ್ಕರ್ ನಿಲ್ಲುವಂತಾಯಿತು. ಡಾ.ಬಿ.ಆರ್.ಅಂಬೇಡ್ಕರ್ ಜನಿಸಿದ್ದು ೧೮೯೧ರ ಏಪ್ರಿಲ್ ೧೪ರಂದು ಮಹರ್ ಎಂಬ ದಲಿತ ಜನಾಂಗದಲ್ಲಿ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಅಂಬವಾಡೆ ಗ್ರಾಮದಲ್ಲಿ ಸುಭೇದಾರ್ ರಾಮ್‌ಜೀ ಸಕ್ಬಾಲ್, ತಾಯಿ ಶ್ರೀಮತಿ ಭೀಮಾಬಾಯಿರವರ ಪುತ್ರರಾಗಿ ಜನಿಸಿದರು. ಅವರು ದಲಿತರ ಮತ್ತು

ಅಸ್ಪರ್ಶ ಹುಡುಗ ಅಸಾಮಾನ್ಯನಾದ ಕಥೆ. ಈ‌ ಭೀಮ‌ ಸಂವಿಧಾನದ ಬಲಭೀಮ Read More »

ಖಿನ್ನತೆಯ ಮೆಟ್ಟಿ ನಿಂತವ ಜಗತ್ತಿಗೆ ದೊಡ್ಡಣ್ಣನಾದ. ಅಬ್ರಾಹಂ ಲಿಂಕನ್ ಎಂಬ ಅಜಾತಶತ್ರು

ಮನೋಖಿನ್ನತೆ… ಇದು ಬಹುತೇಕ ಎಲ್ಲರನ್ನೂ ಕಾಡಿರುವ ಭೂತ. ಇದರ ತೀಕ್ಷ್ಣತೆ ಹಲವರನ್ನು ಕುಗ್ಗಿಸಿಬಿಟ್ಟರೆ ಮನೋ ದಾರ್ಢ್ಯತೆ, ಛಲ ಮತ್ತು ಹೊಣೆಗಾರಿಕೆಗಳಿಂದ ಬದ್ಧರಾದ ವ್ಯಕ್ತಿಗಳು ಅದರಿಂದ ಹೊರಬಂದು ಜಗತ್ತನ್ನೇ ಬೆರಗುಗೊಳಿಸುವಂತಹ ಸಾಧನೆ ಮಾಡಿ ಮಹಾಪುರುಷರು ಎನಿಸುತ್ತಾರೆ. ಇಂತಹವರ ಸಾಲಿನಲ್ಲಿ ಅಚ್ಚರಿಪಡುವಂತಹ ವ್ಯಕ್ತಿ ಎಂದರೆ ಅಮೆರಿಕದ 16ನೇ ಅಧ್ಯಕ್ಷ ಅಬ್ರಹಾಂ ಲಿಂಕನ್.! ಆಧುನಿಕ ಪ್ರಜಾಪ್ರಭುತ್ವಕ್ಕೆ ಭಾಷ್ಯ ಬರೆದು, ಗುಲಾಮಗಿರಿಯನ್ನೇ ಹೊಡೆದೋಡಿಸಿದ ಅಜಾತಶತ್ರು. ಅಮೆರಿಕದ ಅಧ್ಯಕ್ಷರಾಗಿ ಆ ದೇಶದ ಆರ್ಥಿಕ ಪರಿಸ್ಥಿತಿ ಉನ್ನತ ಶೃಂಗಕ್ಕೇರಲು ಭದ್ರ ಬುನಾದಿ ಹಾಕಿದ ಅಬ್ರಹಾಂ ಲಿಂಕನ್

ಖಿನ್ನತೆಯ ಮೆಟ್ಟಿ ನಿಂತವ ಜಗತ್ತಿಗೆ ದೊಡ್ಡಣ್ಣನಾದ. ಅಬ್ರಾಹಂ ಲಿಂಕನ್ ಎಂಬ ಅಜಾತಶತ್ರು Read More »