ಕ್ರೀಡೆ

ಟಿ-20 ವಿಶ್ವಕಪ್| ಸೆಮೀಸ್‌ ಗೆ ಲಗ್ಗೆ ಇಟ್ಟ‌ ಟೀಂ ಇಂಡಿಯಾ

ಸಮಗ್ರ ನ್ಯೂಸ್: ನಾಯಕ ರೋಹಿತ್ ಶರ್ಮಾ ಅವರ (92 ರನ್​, 41 ಎಸೆತ, 8 ಸಿಕ್ಸರ್, 7 ಫೋರ್​) ಪ್ರಚಂಡ ಬ್ಯಾಟಿಂಗ್ ನೆರವಿನಿಂದ ಆಸ್ಟ್ರೇಲಿಯಾ ವಿರುದ್ಧದ ಸೂಪರ್ ಸುತ್ತಿನ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ ಅಮೋಘ ಗೆಲುವು ದಾಖಲಿಸಿ, ಸೆಮಿಪೈನಲ್​ಗೆ ಲಗ್ಗೆ ಇಟ್ಟಿದೆ. ಸೇಂಟ್ ಲೂಸಿಯಾದ ಗ್ರಾಸ್ ಐಲೆಟ್‌ನಲ್ಲಿರುವ ಡ್ಯಾರೆನ್ ಸಾಮಿ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯ ಟಾಸ್​ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 20 […]

ಟಿ-20 ವಿಶ್ವಕಪ್| ಸೆಮೀಸ್‌ ಗೆ ಲಗ್ಗೆ ಇಟ್ಟ‌ ಟೀಂ ಇಂಡಿಯಾ Read More »

ಟಿ-20 ವಿಶ್ವಕಪ್/ ಸೂಪರ್-8 ತಲುಪಿದ ಎಂಟು ತಂಡಗಳು

ಸಮಗ್ರ ನ್ಯೂಸ್: ಟಿ20 ವಿಶ್ವಕಪ್‌ನ ಸೂಪರ್-8 ಆಡಲಿರುವ ಎಂಟು ತಂಡಗಳು ಅಂತಿಮಗೊಂಡಿದೆ. ಈ ಎಂಟು ತಂಡಗಳನ್ನು ತಲಾ 4 ರಂತೆ ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಜೂನ್ 19 ರಿಂದ ಸೂಪರ್-8 ಪಂದ್ಯಗಳು ವೆಸ್ಟ್ ಇಂಡೀಸ್‌ನಲ್ಲಿ ಆರಂಭವಾಗಲಿವೆ. ಬಾಂಗ್ಲಾದೇಶ ಇಂದು ನೇಪಾಳ ತಂಡವನ್ನು ಸೋಲಿಸುವ ಮೂಲಕ ಸೂಪ‌ರ್-8 ತಲುಪಿದ ಕೊನೆಯ ತಂಡವಾಯಿತು. ಈಗ ಸೂಪರ್-8 ಸುತ್ತಿಗೆ ಭಾರತ, ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ, ವೆಸ್ಟ್ ಇಂಡೀಸ್, ಯುಎಸ್‌ಎ, ಇಂಗ್ಲೆಂಡ್, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದ ತಂಡಗಳು ಅರ್ಹತೆ ಪಡೆದಿವೆ. ಈ ಎಲ್ಲಾ

ಟಿ-20 ವಿಶ್ವಕಪ್/ ಸೂಪರ್-8 ತಲುಪಿದ ಎಂಟು ತಂಡಗಳು Read More »

ಟಿ-20 ವಿಶ್ವಕಪ್| ಪಾಕಿಸ್ತಾನ ವಿರುದ್ಧ ಭಾರತಕ್ಕೆ 6 ರನ್ ಗಳ ರೋಚಕ ಜಯ

ಸಮಗ್ರ ನ್ಯೂಸ್: ನ್ಯೂಯಾರ್ಕ್ ನ ನಸ್ಸೌ ಕೌಂಟಿ ಇಂಟರ್‌ನ್ಯಾಶನಲ್ ಸ್ಟೇಡಿಯಂನಲ್ಲಿ ನಡೆದ T20 World Cup 2024ನ ರೋಚಕ ಪಂದ್ಯದಲ್ಲಿ ಭಾರತ ಆರು ರನ್‌ಗಳಿಂದ ಪಾಕಿಸ್ತಾನವನ್ನು ಸೋಲಿಸಿದೆ. ಇದರೊಂದಿಗೆ ಲೀಗ್​ನಲ್ಲಿ ಸತತ ಎರಡನೇ ಗೆಲುವು ದಾಖಲಿಸಿದ ಟೀಂ ಇಂಡಿಯಾ 4 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಸತತ ಎರಡನೇ ಸೋಲು ಅನುಭವಿಸಿದ ಪಾಕ್ ತಂಡ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲೇ ಉಳಿದುಕೊಂಡಿದ್ದು, ಈ ಸೋಲಿನ ನಂತರ ಲೀಗ್ ಹಂತದಲ್ಲೇ ತನ್ನ ಪ್ರಯಾಣ ಮುಗಿಸುವ ಆತಂಕದಲ್ಲಿದೆ. ಮೊದಲು ಬ್ಯಾಟಿಂಗ್

ಟಿ-20 ವಿಶ್ವಕಪ್| ಪಾಕಿಸ್ತಾನ ವಿರುದ್ಧ ಭಾರತಕ್ಕೆ 6 ರನ್ ಗಳ ರೋಚಕ ಜಯ Read More »

ಟಿ-20 ವಿಶ್ವಕಪ್| ಪಾಕಿಸ್ತಾನ ಸದೆಬಡಿದ ಅಮೇರಿಕಾ

ಸಮಗ್ರ ನ್ಯೂಸ್: ಟೆಕ್ಸಾಸ್‌ನ ಗ್ರ್ಯಾಂಡ್ ಪ್ರೈರಿ ಕ್ರೀಡಾಂಗಣದಲ್ಲಿ ನಡೆದ ಪಾಕಿಸ್ತಾನ ಹಾಗೂ ಅಮೆರಿಕ ನಡುವಿನ ರಣರೋಚಕ ಪಂದ್ಯದಲ್ಲಿ ಆತಿಥೇಯ ಅಮೆರಿಕ ತಂಡ ಸೂಪರ್​ ಓವರ್​ನಲ್ಲಿ ಪಂದ್ಯವನ್ನು ಗೆದ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡ ನಿಗದಿತ 20 ಓವರ್​​ಗಳಲ್ಲಿ 7 ವಿಕೆಟ್ ಕಳೆದುಕೊಂಡು 159 ರನ್ ಕಲೆಹಾಕಿತು. ಗೆಲುವಿಗೆ 160 ರನ್​ಗಳ ಟಾರ್ಗೆಟ್ ಬೆನ್ನಟ್ಟಿದ ಅಮೆರಿಕ ಕೂಡ 20 ಓವರ್​​ಗಳಲ್ಲಿ 3 ವಿಕೆಟ್ ಕಳೆದುಕೊಂಡು 159 ರನ್ ಕಲೆಹಾಕಿತು. ಹೀಗಾಗಿ ಪಂದ್ಯ ಸೂಪರ್​ ಓವರ್​ನತ್ತ

ಟಿ-20 ವಿಶ್ವಕಪ್| ಪಾಕಿಸ್ತಾನ ಸದೆಬಡಿದ ಅಮೇರಿಕಾ Read More »

ಐಸಿಸಿ ಟಿ-20 ವಿಶ್ವಕಪ್| ಶುಭಾರಂಭ ಮಾಡಿದ ಟೀಂ ಇಂಡಿಯಾ

ಸಮಗ್ರ ನ್ಯೂಸ್: ಐಸಿಸಿ ಟಿ20 ವಿಶ್ವಕಪ್ 2024 ಟೂರ್ನಿಯಲ್ಲಿ ಟೀಮ್ ಇಂಡಿಯಾ ಗೆಲುವಿನ ಅಭಿಯಾನ ಆರಂಭಿಸಿದೆ. ನ್ಯೂಯಾರ್ಕ್​​ನ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಐರ್ಲೆಂಡ್ ತಂಡದ ವಿರುದ್ಧ ಭರ್ಜರಿ 8 ವಿಕೆಟ್​ಗಳ ಗೆಲುವು ಸಾಧಿಸಿತು. ಈ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಸಿಡಿಸಿದ ಟೀಮ್ ಇಂಡಿಯಾ ನಾಯಕ ರೋಹಿತ್​ ಶರ್ಮಾ (Rohit Sharma) ಹಲವು ದಾಖಲೆ ಬರೆದಿದ್ದಾರೆ. ನಾಯಕನಾಗಿಯೂ ವಿಶೇಷ ಸಾಧನೆ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. 37 ಎಸೆತಗಳಲ್ಲಿ 4 ಬೌಂಡರಿ, 3 ಸಿಕ್ಸರ್​ ಸಹಿತ

ಐಸಿಸಿ ಟಿ-20 ವಿಶ್ವಕಪ್| ಶುಭಾರಂಭ ಮಾಡಿದ ಟೀಂ ಇಂಡಿಯಾ Read More »

ಟಿ20 ವಿಶ್ವಕಪ್/ ದಾಖಲೆಯ ಮೊತ್ತದ ಬಹುಮಾನ ಘೋಷಿಸಿದ ಐಸಿಸಿ

ಸಮಗ್ರ ನ್ಯೂಸ್: ಜೂನ್ 2 ರಿಂದ ಆರಂಭವಾಗಿರುವ ಈ ಬಾರಿಯ ಟಿ20 ವಿಶ್ವಕಪ್ ಹಲವು ವಿಶೇಷತೆಯಿಂದ ಕೂಡಿದ್ದು, ಈ ಬಾರಿ ಮೊದಲ ಬಾರಿಗೆ 20 ತಂಡಗಳು ಈ ಟೂರ್ನಿಯಲ್ಲಿ ಭಾಗವಹಿಸುತ್ತಿವೆ. ಇದರ ಜೊತೆಗೆ ಐಸಿಸಿ ಈ ಆವೃತ್ತಿಯ ದಾಖಲೆಯ ಮೊತ್ತದ ಬಹುಮಾನವನ್ನು ಪ್ರಕಟಿಸಿದೆ. ಐಸಿಸಿ ಘೋಷಿಸಿರುವ ಪ್ರಕಾರ ಈ ಬಾರಿಯ ಟಿ20 ವಿಶ್ವಕಪ್ ಬಹುಮಾನದ ಗಾತ್ರ 11.25 ಮಿಲಿಯನ್ ಯುಎಸ್ ಡಾಲರ್ ಆಗಿದೆ. ಅಂದರೆ ಭಾರತೀಯ ರೂಪಾರಿಯಲ್ಲಿ ಸುಮಾರು ರೂ 93.50 ಕೋಟಿ ರೂಗಳನ್ನು ಬಹುಮಾನದ ಮೊತ್ತವಾಗಿ

ಟಿ20 ವಿಶ್ವಕಪ್/ ದಾಖಲೆಯ ಮೊತ್ತದ ಬಹುಮಾನ ಘೋಷಿಸಿದ ಐಸಿಸಿ Read More »

ಐಸಿಸಿ ವರ್ಷದ ಏಕದಿನ ಆಟಗಾರ ಪ್ರಶಸ್ತಿಗೆ ಭಾಜನರಾದ ಕೊಹ್ಲಿ

ಸಮಗ್ರ ನ್ಯೂಸ್: ಐಸಿಸಿ ವರ್ಷದ ಏಕದಿನ ಆಟಗಾರ (ICC ODI Player Of The Year 2023) ಪ್ರಶಸ್ತಿಗೆ ಭಾರತ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರು ಭಾಜನರಾಗಿದ್ದಾರೆ. ಟಿ20 ವಿಶ್ವಕಪ್ ಆಡುವ ಸಲುವಾಗಿ ನ್ಯೂಯಾರ್ಕ್ ನಲ್ಲಿರು ಕೊಹ್ಲಿ ಈ ಪ್ರಶಸ್ತಿಯನ್ನು ಇಲ್ಲಿಯೇ ಸ್ವೀಕರಿಸಿದ್ದಾರೆ. ಇದರ ವಿಡಿಯೊವನ್ನು ಐಸಿಸಿ ತನ್ನ ಅಧಿಕೃತ ಟ್ವಿಟರ್ ಎಕ್ಸ್‌ನಲ್ಲಿ ಹಂಚಿಕೊಂಡಿದೆ. 2012, 2017, 2018 ರಲ್ಲಿಯೂ ಕೊಹ್ಲಿ ಈ ಪ್ರಶಸ್ತಿ ಪಡೆದಿದ್ದರು. 35 ವರ್ಷದ ಕೊಹ್ಲಿ 2023 ರಲ್ಲಿ 27

ಐಸಿಸಿ ವರ್ಷದ ಏಕದಿನ ಆಟಗಾರ ಪ್ರಶಸ್ತಿಗೆ ಭಾಜನರಾದ ಕೊಹ್ಲಿ Read More »

ಎಲ್ಲಾ ಮಾದರಿಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ ದಿನೇಶ್ ಕಾರ್ತಿಕ್

ಸಮಗ್ರ ನ್ಯೂಸ್: ಭಾರತ ಕ್ರಿಕೆಟ್ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್‍ಮನ್ ಹಾಗೂ ಆರ್‍ಸಿಬಿಯ ದಿನೇಶ್ ಕಾರ್ತಿಕ್ ಎಲ್ಲಾ ಮಾದರಿಯ ಕ್ರಿಕೆಟ್‍ಗೆ ವಿದಾಯ ಘೋಷಣೆ ಮಾಡಿದ್ದು, ವಿದಾಯದ ಮಾಹಿತಿಯನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. “ನಾನು ಅಧಿಕೃತವಾಗಿ ನನ್ನ ನಿವೃತ್ತಿಯನ್ನು ಘೋಷಿಸುತ್ತೇನೆ ಮತ್ತು ಮುಂದೆ ಇರುವ ಹೊಸ ಸವಾಲುಗಳಿಗೆ ನಾನು ಸಿದ್ಧನಾಗಿರುವಾಗ, ಆಟದ ದಿನಗಳನ್ನು ನನ್ನ ಹಿಂದೆ ಇಡುತ್ತೇನೆ” ಎಂದು ಕಾರ್ತಿಕ್ ಬರೆದುಕೊಂಡಿದ್ದಾರೆ. ಆರ್‍ಸಿಬಿ ಪರವಾಗಿ ಪ್ಲೇಆಫ್‍ನಲ್ಲಿ ಆಡಿದ ಬೆನ್ನಲ್ಲಿಯೇ ಅವರು ನಿವೃತ್ತಿಯಾಗುತ್ತಾರೆ ಎನ್ನಲಾಗಿತ್ತು. ಶನಿವಾರ ಇವರು ಅಧಿಕೃತವಾಗಿ

ಎಲ್ಲಾ ಮಾದರಿಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ ದಿನೇಶ್ ಕಾರ್ತಿಕ್ Read More »

ಟೀಮ್ ಇಂಡಿಯಾಕ್ಕೆ ನೂತನ ಕೋಚ್/ ಅರ್ಜಿ ಸಲ್ಲಿಸಿದ ಮೋದಿ, ಅಮಿತಾ ಷಾ

ಸಮಗ್ರ ನ್ಯೂಸ್: ಭಾರತೀಯ ಕ್ರಿಕೆಟ್ ತಂಡದ ಕೋಚ್ ಹುದ್ದೆಗೆ ಸೂಕ್ತ ವ್ಯಕ್ತಿಯ ಹುಡುಕಾಟ ನಡೆಯುತ್ತಿರುವ ಹೊತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ, ಸಚಿನ್ ತೆಂಡೂಲ್ಕರ್, ಎಂ.ಎಸ್ ಧೋನಿ, ಅಮಿತ್ ಶಾ ಸೇರಿ ಹಲವು ಪ್ರಮುಖರು ಅರ್ಜಿ ಸಲ್ಲಿದ್ದಾರೆ. ಆದ್ರೆ ಅಸಲಿಗೆ ಇವರಾರು ಈ ಹುದ್ದೆಗೆ ಅರ್ಜಿ ಸಲ್ಲಿಸಿಲ್ಲ. ಬದಲಾಗಿ ನೆಟ್ಟಿಗರು ಇವರ ಹೆಸರಿನಲ್ಲಿ ನಕಲಿ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಸಲು ಮೇ 27 ಅಂತಿಮ ದಿನವಾಗಿದ್ದು, ಇದಕ್ಕೂ ಮುನ್ನ ಅನೇಕ ಕ್ರಿಕೆಟ್ ಅಭಿಮಾನಿಗಳು ಅರ್ಜಿ ಪಡೆದುಕೊಂಡು ಕೋಚ್ ಹುದ್ದೆಗೆ

ಟೀಮ್ ಇಂಡಿಯಾಕ್ಕೆ ನೂತನ ಕೋಚ್/ ಅರ್ಜಿ ಸಲ್ಲಿಸಿದ ಮೋದಿ, ಅಮಿತಾ ಷಾ Read More »

ಟೀಮ್ ಇಂಡಿಯಾಗೆ ನೂತನ ಕೋಚ್/ ಷರತ್ತುಗಳೊಂದಿಗೆ ಕೋಚ್ ಆಗುತ್ತೇನೆ ಎಂದ ಗಂಭೀರ್

ಸಮಗ್ರ ನ್ಯೂಸ್: ಭಾರತ ಕ್ರಿಕೆಟ್ ತಂಡದ ಕೋಚ್ ರಾಹುಲ್ ದ್ರಾವಿಡ್ ಟಿ20 ವಿಶ್ವಕಪ್ ಬಳಿಕ ಹುದ್ದೆಯಿಂದ ಕೆಳಗಿಳಿಯಲಿರುವ ಹಿನ್ನಲೆಯಲ್ಲಿ ಬಿಸಿಸಿಐ ನೂತನ ಕೋಚ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಮೇ 27 ಕೊನೆಯ ದಿನವಾಗಿದೆ. ಇದರ ಬೆನ್ನಲ್ಲೇ ಭಾರತ ತಂಡದ ಮಾಜಿ ಆಟಗಾರ ಗೌತಮ್ ಗಂಭೀರ್, ತಮ್ಮ ಒಂದು ಷರತ್ತು ಒಪ್ಪಿದರೆ ಕೋಚ್ ಆಗಲು ಸಿದ್ದ ಎಂದು ಹೇಳಿದ್ದಾರೆ. ಗೌತಮ್ ಗಂಭೀರ್ ಭಾರತದ ಮುಖ್ಯ ಕೋಚ್ ಆಗಲು ಉತ್ಸುಕರಾಗಿದ್ದು, ‘ಆಯ್ಕೆಯ ಗ್ಯಾರಂಟಿ’ ನೀಡಿದರೆ ಮಾತ್ರ ಗಂಭೀರ್ ಈ ಹುದ್ದೆಗೆ

ಟೀಮ್ ಇಂಡಿಯಾಗೆ ನೂತನ ಕೋಚ್/ ಷರತ್ತುಗಳೊಂದಿಗೆ ಕೋಚ್ ಆಗುತ್ತೇನೆ ಎಂದ ಗಂಭೀರ್ Read More »