ಸುಬ್ರಹ್ಮಣ್ಯ:ಇಂದಿನಿಂದ ಕುಮಾರಪರ್ವತ ಚಾರಣಕ್ಕೆ ಮತ್ತೆ ಅವಕಾಶ
ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಪ್ರಸಿದ್ಧ ಚಾರಣ ತಾಣ ಕುಮಾರಪರ್ವತಕ್ಕೆ ಚಾರಣಕ್ಕೆ ಸೆ. 7ರಿಂದ (ಇಂದಿನಿಂದ) ಮತ್ತೆ ಅವಕಾಶ ನೀಡಲಾಗಿದೆ. ಇದೀಗ ಮಳೆಯ ಪ್ರಮಾಣ ಕಡಿಮೆಯಾದ ಕಾರಣ ಮತ್ತೆ ಚಾರಣಿಗರಿಗೆ ಚಾರಣ ಮಾಡಲು ಅವಕಾಶ ಒದಗಿಸಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿಂದೆ ಜಿಲ್ಲೆಯಾದ್ಯಂತ ಸುರಿಯುತ್ತಿದ್ದ ಬಾರೀ ಮಳೆಯ ಕಾರಣ ಹಾಗೂ ಹವಾಮಾನ ಇಲಾಖೆಯು ನಿರಂತರವಾಗಿ ಜಿಲ್ಲೆಯಲ್ಲಿ ಆರೆಂಜ್ ಎಲರ್ಟ್ ಘೋಷಿಸಿದ ಕಾರಣ ಚಾರಣಿಗರ ಹಿತದೃಷ್ಠಿಯಿಂದ ಕುಮಾರಪರ್ವತ ಚಾರಣ ನಿಷೇಧಿಸಲಾಗಿತ್ತು.
ಸುಬ್ರಹ್ಮಣ್ಯ:ಇಂದಿನಿಂದ ಕುಮಾರಪರ್ವತ ಚಾರಣಕ್ಕೆ ಮತ್ತೆ ಅವಕಾಶ Read More »










