ರಾಜಕೀಯ

ಸಿಎಂ ಭಾಷಣದ ವೇಳೆ ಕಪ್ಪು ಬಟ್ಟೆ ತೋರಿಸಿ ಗದ್ದಲ ಎಬ್ಬಿಸಿದ ಬಿಜೆಪಿ ಕಾರ್ಯಕರ್ತೆಯರು

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನಾ ಸಮಾವೇಶದಲ್ಲಿ‌ ಸಿಎಂ ಸಿದ್ದರಾಮಯ್ಯ ಭಾಷಣ ವೇಳೆ ಕೆಲ ಬಿಜೆಪಿ ಕಾರ್ಯಕರ್ತೆಯರು ಕಪ್ಪುಬಟ್ಟೆ ಪ್ರದರ್ಶಿಸಿ ಗದ್ದಲ ನಡೆಸಿದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಇದೇ ಸಂದರ್ಭದಲ್ಲಿ ಕೋಪಗೊಂಡ ಸಿಎಂ ಸಿದ್ದರಾಮಯ್ಯ, ಎಸ್ಪಿ ಅವರನ್ನು ವೇದಿಕೆಯಲ್ಲೇ ತರಾಟೆಗೆ ತೆಗೆದುಕೊಂಡರು. ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಪ್ಪುಬಟ್ಟೆ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತೆಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನೂ ವೇದಿಕೆಯಲ್ಲಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಡಿಸಿಎಂ […]

ಸಿಎಂ ಭಾಷಣದ ವೇಳೆ ಕಪ್ಪು ಬಟ್ಟೆ ತೋರಿಸಿ ಗದ್ದಲ ಎಬ್ಬಿಸಿದ ಬಿಜೆಪಿ ಕಾರ್ಯಕರ್ತೆಯರು Read More »

ನಾಲಿಗೆ ಹರಿಬಿಟ್ಟು ಶಾಸಕ ಸ್ಥಾನ ಕಳೆದುಕೊಳ್ಳುವ ಭೀತಿಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ!!

ಸಮಗ್ರ ನ್ಯೂಸ್: 18 ಬಿಜೆಪಿ ಶಾಸಕರ ಅಮಾನತಿನೊಂದಿಗೆ ಇದೀಗ ಮತ್ತೊಂದು ಶಾಸಕರ ಎಂಎಲ್‌ಎ ಸ್ಥಾನವನ್ನೇ ಕಳೆದುಕೊಳ್ಳುವ ಸಾಧ್ಯತೆ ಇದೆ. ಸ್ಪೀಕರ್ ವಿರುದ್ದ ನಾಲಿಗೆ ಹರಿಬಿಟ್ಟು ಶಾಸಕ‌ ಸ್ಥಾನವನ್ನೇ ಕಳೆದುಕೊಳ್ಳುವ ಭೀತಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರಿಗೆ ಎದುರಾಗಿದೆ. ಕಳೆದ ವಿಧಾನಸಭಾ ಅಧಿವೇಶನದಲ್ಲಿ ಸ್ಪೀಕರ್ ಯು.ಟಿ ಖಾದರ್ 18 ಬಿಜೆಪಿ ಶಾಸಕರನ್ನು ಅಮಾನತು ಮಾಡಿದ್ದರು. ಆದರೆ ತಮ್ಮ ಪಕ್ಷದ ಶಾಸಕರ ಅಮಾನತು ಆದೇಶ ವಾಪಸ್ ಪಡೆಯಬೇಕು ಎಂಬ ಹೋರಾಟವನ್ನು ಬಿಜೆಪಿ ಮುಂದುವರೆಸಿದ್ದು ಈ ಅಮಾನತು ಆದೇಶದ ಮಧ್ಯೆ ಬಿಜೆಪಿ

ನಾಲಿಗೆ ಹರಿಬಿಟ್ಟು ಶಾಸಕ ಸ್ಥಾನ ಕಳೆದುಕೊಳ್ಳುವ ಭೀತಿಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ!! Read More »

ಬಿಜೆಪಿಗೆ ಮಾಜಿ ಶಾಸಕ‌ ಎ.ಟಿ ರಾಮಸ್ವಾಮಿ ರಾಜೀನಾಮೆ

ಸಮಗ್ರ ನ್ಯೂಸ್: ಬಿಜೆಪಿ ನಾಯಕ ಹಾಗೂ ಮಾಜಿ ಶಾಸಕರಾದ ಎ.ಟಿ.ರಾಮಸ್ವಾಮಿ ಅವರು ದಿಢೀರ್‌ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಪತ್ರ ಬರೆದು ರಾಜೀನಾಮೆ ವಿಚಾರ ತಿಳಿಸಿದ್ದಾರೆ ಎನ್ನಲಾಗಿದೆ. ಕಳೆದ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ರಾಮಸ್ವಾಮಿ ಅವರು ಜೆಡಿಎಸ್‌ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಇದೀಗ ದಿಢೀರನೆ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿರುವ ವಿಚಾರ ಸಂಚಲನ ಸೃಷ್ಟಿಸಿದೆ. ಬಿವೈ ವಿಜಯೇಂದ್ರ ಅವರಿಗೆ ಬರೆದಿರುವ ಪತ್ರದಲ್ಲಿ ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ. ಅಲ್ಲದೆ

ಬಿಜೆಪಿಗೆ ಮಾಜಿ ಶಾಸಕ‌ ಎ.ಟಿ ರಾಮಸ್ವಾಮಿ ರಾಜೀನಾಮೆ Read More »

ತಮಿಳುನಾಡು ಬಿಜೆಪಿ‌ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ

ಸಮಗ್ರ ನ್ಯೂಸ್: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆ.ಅಣ್ಣಾಮಲೈ ರಾಜೀನಾಮೆ ಘೋಷಿಸಿದ್ದಾರೆ. ತಮಿಳುನಾಡಿನ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ನಿರೀಕ್ಷೆಯಂತೆಯೇ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ ಘೋಷಿಸಿದ್ದಾರೆ. ಕೊಯಮತ್ತೂರಿನಲ್ಲಿ ಮಾತನಾಡಿದ ಅಣ್ಣಾಮಲೈ, ಬಿಜೆಪಿ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡುವ ಬಗ್ಗೆ ಹೇಳಿದ್ದಾರೆ. ಮುಂದಿನ ಅಧ್ಯಕ್ಷ ಸ್ಥಾನಕ್ಕೆ ನಾನು ಸ್ಪರ್ಧೆ ಮಾಡುವುದಿಲ್ಲ. ನಾವೆಲ್ಲರೂ ಒಗ್ಗಟ್ಟಿನಿಂದ ಪಕ್ಷಕ್ಕೆ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡುತ್ತೇವೆ. ನಾನು ಅಧ್ಯಕ್ಷ ಸ್ಥಾನದ ರೇಸ್‌ನಲ್ಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪಕ್ಷಕ್ಕೆ ಉಜ್ವಲ ಭವಿಷ್ಯ ಇರಬೇಕೆಂದು ನಾನು

ತಮಿಳುನಾಡು ಬಿಜೆಪಿ‌ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ Read More »

ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು‌ ಯತ್ನ| ವಿಪಕ್ಷನಾಯಕ ಆರ್.ಅಶೋಕ್ ಸೇರಿ ಹಲವರ ಬಂಧನ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಹಾಲಿನ ದರ, ವಿದ್ಯುತ್ ದರ ಸೇರಿ ಹಲವು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದು, ಬೆಲೆ ಏರಿಕೆ ಖಂಡಿಸಿ ಮುಖ್ಯಮಂತ್ರಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಿನ್ನೆಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ಪ್ರತಿಭಟನೆ ಮಾಡುತ್ತಿದ್ದು, ಇಂದು ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು.ಹೀಗಾಗಿ, ನೂರಾರು ಕಾರ್ಯಕರ್ತರೊಂದಿಗೆ ರಸ್ತೆಗಿಳಿದು ಸಿಎಂ ಮನೆ ಕಡೆ ತೆರಳಲು ಮುಂದಾದರು. ಅಷ್ಟರಲ್ಲೇ ಬ್ಯಾರಿಕೇಡ್

ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು‌ ಯತ್ನ| ವಿಪಕ್ಷನಾಯಕ ಆರ್.ಅಶೋಕ್ ಸೇರಿ ಹಲವರ ಬಂಧನ Read More »

ರಾಜ್ಯ ಸರ್ಕಾರಕ್ಕೆ ಕೇಂದ್ರ ಪುರಸ್ಕಾರ| ‘ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ’ ಗೆ ರಾಜ್ಯ ಭಾಜನ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ‌ ಕೇಂದ್ರದ ಕಾರ್ಯದಕ್ಷತೆಗಾಗಿ ಕೇಂದ್ರ ಸರ್ಕಾರದ 2024ನೇ ಸಾಲಿನ ‘ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ’ಗೆ ರಾಜ್ಯ ಭಾಜನವಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ ಸಂತಸ ಹಂಚಿಕೊಂಡಿದ್ದಾರೆ. ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರದ ಕಾರ್ಯದಕ್ಷತೆಗಾಗಿ ಕೇಂದ್ರ ಸರ್ಕಾರದ 2024ನೇ ಸಾಲಿನ ‘ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ’ಗೆ ರಾಜ್ಯ ಭಾಜನವಾಗಿದೆ ಎಂದು ತಿಳಿಸಲು ಹರ್ಷಿಸುತ್ತೇನೆ. ಕರ್ನಾಟಕವು ಪಾರದರ್ಶಕ, ಜನಸ್ನೇಹಿ ಆಡಳಿತಕ್ಕೆ ಇಡೀ ದೇಶಕ್ಕೆ ಮಾದರಿ ರಾಜ್ಯ. ಈ ಪ್ರಶಸ್ತಿಯು

ರಾಜ್ಯ ಸರ್ಕಾರಕ್ಕೆ ಕೇಂದ್ರ ಪುರಸ್ಕಾರ| ‘ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ’ ಗೆ ರಾಜ್ಯ ಭಾಜನ Read More »

ಪೋಕ್ಸೊ ಪ್ರಕರಣ| ನ್ಯಾಯಾಲಯಕ್ಕೆ ಖುದ್ದು ಹಾಜರಾಗುವುದರಿಂದ ಬಿ.ಎಸ್.ವೈ ಬಚಾವ್

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ವೈ ವಿರುದ್ಧದ ಪೋಕ್ಸೋ ಪ್ರಕರಣದಲ್ಲಿ ಖುದ್ದು ಹಾಜರಾಗುವಂತೆ ನೀಡಿದ್ದ ವಿಶೇಷ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್‌ ತಡೆ ನೀಡಿದೆ. ವಿಶೇಷ ನ್ಯಾಯಾಲಯದ ಸಮನ್ಸ್ ಹಾಗೂ ಕೋರ್ಟ್ ಕಾಗ್ನಿಜೆನ್ಸ್ ರದ್ದು ಮಾಡುವಂತೆ ಕೋರಿ ಬಿಎಸ್‍ವೈ ಮತ್ತು ಇತರ ಮೂವರು ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಪ್ರದೀಪ್ ಸಿಂಗ್ ಯೆರೂರ್ ಅವರಿದ್ದ ಏಕಸದಸ್ಯ ಪೀಠ ಸಮನ್ಸ್ ಆದೇಶಕ್ಕೆ ತಡೆ ನೀಡಿದೆ. ಮುಂದಿನ ವಿಚಾರಣೆಯವರೆಗೂ ಫಾಸ್ಟ್ ಟ್ರ್ಯಾಕ್ ಕೋರ್ಟ್‍ಗೆ ಹಾಜರಾತಿಗೆ ವಿನಾಯಿತಿ ನೀಡಲಾಗಿದೆ. ಈ

ಪೋಕ್ಸೊ ಪ್ರಕರಣ| ನ್ಯಾಯಾಲಯಕ್ಕೆ ಖುದ್ದು ಹಾಜರಾಗುವುದರಿಂದ ಬಿ.ಎಸ್.ವೈ ಬಚಾವ್ Read More »

ಕರಾವಳಿಯನ್ನು ಕಡೆಗಣಿಸಿದ್ರೆ ಪ್ರತ್ಯೇಕ ವಿಧಾನಸೌಧ ಕಟ್ಟಿಸಿಕೊಂಡು ಮಾತಾಡುತ್ತೇವೆ| ವಿಧಾನ ಮಂಡಲ ಅಧಿವೇಶನದಲ್ಲಿ ಶಾಸಕ ಹರೀಶ್ ಪೂಂಜಾ ಆಕ್ರೋಶ

ಸಮಗ್ರ ನ್ಯೂಸ್ : ಕರಾವಳಿ ಅಭಿವೃದ್ಧಿ ಕಡೆಗಣಿಸಿದ್ರೆ ನಾವು ಪ್ರತ್ಯೇಕ ವಿಧಾನಸೌಧ ಕಟ್ಟಿಸಿಕೊಂಡು ಮಾತಾಡುವ ವ್ಯವಸ್ಥೆ ತರಬೇಕಾಗುತ್ತದೆ ಎಂದು ಬಿಜೆಪಿ ಶಾಸಕ ಹರೀಶ್ ಪೂಂಜಾ ಈ ಕೂಗೆಬ್ಬಿಸಿದ್ದಾರೆ. ವಿಧಾನಸಭೆಯಲ್ಲಿ 69 ನಿಯಮದಡಿಯಲ್ಲಿ ಕರಾವಳಿ ಜಿಲ್ಲೆಗಳ ಸಮಸ್ಯೆಗಳ ಬಗ್ಗೆ ಇಂದು ಚರ್ಚೆ ನಡೆಯಿತು. ಈ ವೇಳೆ ಸುನಿಲ್ ಕುಮಾರ್ ಮಾತನಾಡಿ, ಸದನದಲ್ಲಿ ಉತ್ತರ ಕರ್ನಾಟಕ, ಬೆಂಗಳೂರು ಬಗ್ಗೆ ಚರ್ಚೆ ಆಗುತ್ತದೆ. ಆದರೆ ಕರಾವಳಿ ಬಗ್ಗೆ ಯಾವತ್ತೂ ಚರ್ಚೆಗಳು ನಡೆದಿಲ್ಲ. ಟೆಂಪಲ್ ಟೂರಿಸಂ ವಿಚಾರವಾಗಿ ಕರಾವಳಿಯನ್ನು ಅಭಿವೃದ್ಧಿ ಪಡಿಸಬೇಕು. 330 ಕಿ.ಮೀ

ಕರಾವಳಿಯನ್ನು ಕಡೆಗಣಿಸಿದ್ರೆ ಪ್ರತ್ಯೇಕ ವಿಧಾನಸೌಧ ಕಟ್ಟಿಸಿಕೊಂಡು ಮಾತಾಡುತ್ತೇವೆ| ವಿಧಾನ ಮಂಡಲ ಅಧಿವೇಶನದಲ್ಲಿ ಶಾಸಕ ಹರೀಶ್ ಪೂಂಜಾ ಆಕ್ರೋಶ Read More »

ಮುಸ್ಲಿಂ ಶಾಸಕರು ವಿಧಾನಸಭೆಯಿಂದ ಹೊರಕ್ಕೆ ?

ಸಮಗ್ರ ನ್ಯೂಸ್: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೊಸ ಸರ್ಕಾರ ರಚಿಸಿದ ಬಳಿಕ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರಕ್ಕೆ ಎಸೆಯುತ್ತೇವೆ ಎಂದು ಹೇಳಿಕೆ ನೀಡುವ ಮೂಲಕ ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂಧು ಅಧಿಕಾರಿ ಹೊಸ ವಿವಾದ ಹುಟ್ಟುಹಾಕಿದ್ದಾರೆ. ಈ ಹೇಳಿಕೆಯ ವಿರುದ್ಧ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಸದಸ್ಯರು ವ್ಯಾಪಕ ಪ್ರತಿಭಟನೆ ನಡೆಸಿದರು. ಇದನ್ನು ದ್ವೇಷಭಾಷಣ ಎಂದು ಬಣ್ಣಿಸಿದ ಅವರು, ಬಿಜೆಪಿಯ ಹಲ್ದಿಯಾ ಶಾಸಕ ತಪಸಿ ಮಂಡಲ್ ಬಂಡಾಯ ಎದ್ದ ಬಳಿಕ ಸುವೇಂಧು ಅಧಿಕಾರಿಯವರ ಮಾನಸಿಕ ಸ್ಥಿರತೆಯ

ಮುಸ್ಲಿಂ ಶಾಸಕರು ವಿಧಾನಸಭೆಯಿಂದ ಹೊರಕ್ಕೆ ? Read More »

ದೆಹಲಿ ವಿಧಾನಸಭಾ ಚುನಾವಣೆ/ ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ಸಮಗ್ರ ನ್ಯೂಸ್‌: ದೆಹಲಿ ವಿಧಾನಸಭಾ ಚುನಾವಣೆಗೆ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿರುವ ಸ್ಯಾರ್ ಪ್ರಚಾರಕರ ಪಟ್ಟಿಯನ್ನು ಭಾರತೀಯ ಜನತಾ ಪಕ್ಷ ಬಿಡುಗಡೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಪಕ್ಷದ ಎಲ್ಲಾ ಪ್ರಮುಖ ನಾಯಕರನ್ನು ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ. ಸ್ಟಾರ್ ಪ್ರಚಾರಕರಲ್ಲಿ ಕೇಂದ್ರ ಸಚಿವರಾದ ಪಿಯೂಷ್ ಗೋಯಲ್, ಶಿವರಾಜ್ ಸಿಂಗ್ ಚೌಹಾಣ್, ನಿತಿನ್ ಗಡ್ಕರಿ, ಮನೋಹರಲಾಲ್ ಖಟ್ಟರ್ ಧರ್ಮೇಂದ್ರ ಪ್ರಧಾನ್,

ದೆಹಲಿ ವಿಧಾನಸಭಾ ಚುನಾವಣೆ/ ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ Read More »