ರಾಜಕೀಯ

ವಿಧಾನಪರಿಷತ್ ಚುನಾವಣೆ| ಗೆದ್ದುಬೀಗಿದ ಕಾಂಗ್ರೆಸ್ ನ ಪ್ರಕಾಶ್ ಹುಕ್ಕೇರಿ

ಸಮಗ್ರ ನ್ಯೂಸ್: ವಾಯುವ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ಅರುಣ್ ಶಹಾಪುರರನ್ನು ಹಿಂದಿಕ್ಕಿ ಜಯಭೇರಿ ಬಾರಿಸಿದ್ದಾರೆ. ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ ಬಾಕಿಯಿದೆ. ಪ್ರಕಾಶ್ ಹುಕ್ಕೇರಿ ಮೊದಲ ಸುತ್ತಿನಲ್ಲಿ 1692 ಮತಗಳ ಮುನ್ನಡೆ ಕಾಯ್ದುಕೊಂಡಿದ್ದರು.2ನೇ ಸುತ್ತಿನಲ್ಲಿ 3400 ಮತಗಳನ್ನು ಪಡೆದಿದ್ದರು. ಪ್ರಸ್ತುತ ಮಾಹಿತಿಯ ಪ್ರಕಾರ ಹುಕ್ಕೇರಿ 10 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದು, 4 ಸಾವಿರಕ್ಕಿಂತ ಹೆಚ್ಚಿನ ಮತಗಳ ಮುನ್ನಡೆ ಸಾಧಿಸಿದ್ದಾರೆ. ಈ ಕ್ಷೇತ್ರದಲ್ಲಿ ಹಿಂದೆ ಎರಡು ಬಾರಿ ಗೆಲುವು […]

ವಿಧಾನಪರಿಷತ್ ಚುನಾವಣೆ| ಗೆದ್ದುಬೀಗಿದ ಕಾಂಗ್ರೆಸ್ ನ ಪ್ರಕಾಶ್ ಹುಕ್ಕೇರಿ Read More »

ವಿಧಾನ ಪರಿಷತ್ ಚುನಾವಣೆ| ಬಿಜೆಪಿಯ ಬಸವರಾಜ್ ಹೊರಟ್ಟಿಗೆ ಗೆಲುವು

ಸಮಗ್ರ ನ್ಯೂಸ್: ವಿಧಾನಪರಿಷತ್ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ನಡೆಯುತ್ತಿದೆ. ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲ ಬಸವರಾಜ ಹೊರಟ್ಟಿ ಭರ್ಜರಿ ಗೆಲುವು ಸಾಧಿಸಿದ್ದು, ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ. ಪಶ್ಚಿಮ ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಗುರಿಕಾರ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದು, ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ ಮಾಡಲಿದೆ. ಈ

ವಿಧಾನ ಪರಿಷತ್ ಚುನಾವಣೆ| ಬಿಜೆಪಿಯ ಬಸವರಾಜ್ ಹೊರಟ್ಟಿಗೆ ಗೆಲುವು Read More »

ಅಡ್ಡ ಮತದಾನದ ಅಡ್ಡ ಪರಿಣಾಮ| ಮಾಜಿ ಸಿಎಂ ಕುಮಾರಸ್ವಾಮಿ ಹೆಸರಲ್ಲೂ ತಿಥಿಕಾರ್ಡ್ ಪೋಸ್ಟರ್ ಮಾಡಿ ವಿಕೃತಿ

ಸಮಗ್ರ ನ್ಯೂಸ್: ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದರಿಂದ ಉಂಟಾಗಿರುವ ಅಡ್ಡಪರಿಣಾಮ ಶಾಸಕರ ತಿಥಿ ಹಾಗೂ ಮಾಜಿ ಮುಖ್ಯಮಂತ್ರಿಯ ಕೈಲಾಸ ಸಮಾರಾಧನೆ ಕಾರ್ಡ್ ಮಾಡಿ ವಿಕೃತಿ ಮೆರೆಯುವ ಮಟ್ಟಕ್ಕೆ ತಲುಪಿದೆ. ಶುಕ್ರವಾರ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಎಸ್.ಆರ್.ಶ್ರೀನಿವಾಸ್ ಅಡ್ಡ ಮತದಾನ ಮಾಡಿದ್ದರು. ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಗರಂ ಆಗಿದ್ದರು. ಶನಿವಾರ ಬೆಳಗ್ಗೆ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದ ಶ್ರೀನಿವಾಸ್​, ತಾಕತ್ತಿದ್ದರೆ ನನ್ನ ಕ್ಷೇತ್ರದಲ್ಲಿ ನನ್ನ ವಿರುದ್ಧ ಚುನಾವಣೆಗೆ

ಅಡ್ಡ ಮತದಾನದ ಅಡ್ಡ ಪರಿಣಾಮ| ಮಾಜಿ ಸಿಎಂ ಕುಮಾರಸ್ವಾಮಿ ಹೆಸರಲ್ಲೂ ತಿಥಿಕಾರ್ಡ್ ಪೋಸ್ಟರ್ ಮಾಡಿ ವಿಕೃತಿ Read More »

ಬದುಕಿರುವಾಗಲೇ ರೆಡಿಯಾಯ್ತು ಗುಬ್ಬಿ ಶಾಸಕ ಶ್ರೀನಿವಾಸ್ ತಿಥಿಕಾರ್ಡ್| ಜಾಲತಾಣಗಳಲ್ಲಿ ಹರಡಿದ ಜೆಡಿಎಸ್ ಕಾರ್ಯಕರ್ತರ ಕಿಚ್ಚು!!

ಸಮಗ್ರ ನ್ಯೂಸ್: ರಾಜ್ಯಸಭೆ ಚುನಾವಣೆಯಲ್ಲಿ ಗುಬ್ಬಿ ಶ್ರೀನಿವಾಸ್‌ ಗೌಡ ಹಾಗೂ ಕೋಲಾರ ಶ್ರೀನಿವಾಸ್ ಅಡ್ಡಮತದಾನ ಮಾಡಿದ್ದು, ಜೆಡಿಎಸ್‌ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅಲ್ಲದೇ ಎಚ್‌ಡಿ ಕುಮಾರಸ್ವಾಮಿ ಸೇರಿದಂತೆ ಕಾರ್ಯಕರ್ತರು ಶ್ರೀನಿವಾಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಇಷ್ಟಕ್ಕೆ ಬಿಡದೇ ಜೆಡಿಎಸ್ ಕಾರ್ಯಕರ್ತರು ಇನ್ನು ಒಂದು ಹೆಜ್ಜೆ ಮುಂದೆ ಹೋಗಿ ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಎಸ್.ಆರ್.ಶ್ರೀನಿವಾಸ್ ಬದುಕಿದ್ದರೂ ಅವರ ಫೋಟೋ ಸಹಿತ ತಿಥಿ ಕಾರ್ಡ್​ ತಯಾರಿಸಿ ಜಾಲತಾಣದಲ್ಲಿ ಅಪ್​ಲೋಡ್​ ಮಾಡಿದ್ದಾರೆ.

ಬದುಕಿರುವಾಗಲೇ ರೆಡಿಯಾಯ್ತು ಗುಬ್ಬಿ ಶಾಸಕ ಶ್ರೀನಿವಾಸ್ ತಿಥಿಕಾರ್ಡ್| ಜಾಲತಾಣಗಳಲ್ಲಿ ಹರಡಿದ ಜೆಡಿಎಸ್ ಕಾರ್ಯಕರ್ತರ ಕಿಚ್ಚು!! Read More »

ಮಣ್ಣುಮುಕ್ಕಿದ ಆತ್ಮಸಾಕ್ಷಿ| ಬಿಜೆಪಿಯ ಲೆಹರ್ ಸಿಂಗ್ ಗೆ ರೋಚಕ ಗೆಲುವು

ಸಮಗ್ರ‌ ನ್ಯೂಸ್: ರಣರೋಚಕತೆ ಸೃಷ್ಟಿಸಿದ್ದ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಯ ಮೂರನೇ ಅಭ್ಯರ್ಥಿ ಲೆಹರ್‌ ಸಿಂಗ್‌ ಗೆಲುವಿನ ನಗೆ ಬೀರಿದ್ದಾರೆ.ಕಾಂಗ್ರೆಸ್‌ ಮತ್ತು ಜೆಡಿಎಸ್‌ನ ಆತ್ಮಸಾಕ್ಷಿಯ ಕಚ್ಚಾಟದಲ್ಲಿ ಬಿಜೆಪಿ ಲಾಭ ಮಾಡಿಕೊಂಡಿದ್ದು, ಈ ಮೂಲಕ ಕಾಂಗ್ರೆಸ್‌ ತೀವ್ರ ಮುಖಭಂಗ ಅನುಭವಿಸಿದೆಕಾಂಗ್ರೆಸ್‌ನ ಮನ್ಸೂರ್‌ ಅಲಿಖಾನ್‌ ಮತ್ತು ಜೆಡಿಎಸ್‌ನ ಕುಪೇಂದ್ರ ರೆಡ್ಡಿಯವರು ಸೋಲನುಭವಿಸಿದ್ದಾರೆ.

ಮಣ್ಣುಮುಕ್ಕಿದ ಆತ್ಮಸಾಕ್ಷಿ| ಬಿಜೆಪಿಯ ಲೆಹರ್ ಸಿಂಗ್ ಗೆ ರೋಚಕ ಗೆಲುವು Read More »

ರಾಜ್ಯಸಭೆ ಚುನಾವಣೆ: ಬಿಜೆಪಿ 2 ಕಾಂಗ್ರೆಸ್ 1ರಲ್ಲಿ ಗೆಲುವು ನಿಶ್ಚಿತ| 4 ನೇ ಸ್ಥಾನಕ್ಕಾಗಿ ಪೈಪೋಟಿ

ಸಮಗ್ರ ನ್ಯೂಸ್‌: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ರಾಜ್ಯಸಭೆ ಚುನಾವಣೆಯ ಮತದಾನ ಇಂದು ನಡೆಯಲಿದ್ದು, ನಾಲ್ಕನೆಯ ಸ್ಥಾನ ಯಾವ ಪಕ್ಷದ ಪಾಲಾಗಲಿದೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ. ಒಟ್ಟು ನಾಲ್ಕು ಸ್ಥಾನಗಳ ಪೈಕಿ ಮೊದಲ ಮೂರು ಸ್ಥಾನಗಳ ಗೆಲುವು ಬಹುತೇಕ ನಿಶ್ಚಿತವಾಗಿವೆ.ಆದರೆ, ನಾಲ್ಕನೇ ಸ್ಥಾನಕ್ಕಾಗಿ ಮೂರೂ ಪ್ರಮುಖ ಪಕ್ಷಗಳ ಅಭ್ಯರ್ಥಿಗಳು ಪೈಪೋಟಿ ನಡೆಸಿರುವುದರಿಂದ ಯಾರು ಗೆಲುವು ಸಾಧಿಸಲಿದ್ದಾರೆ ಎಂಬುದಕ್ಕೆ ಇಂದಿನ ಸಂಜೆವರೆಗೆ ಕಾಯಬೇಕಾಗಿದೆ. ಬಿಜೆಪಿಗೆ ಎರಡು ಮತ್ತು ಕಾಂಗ್ರೆಸ್‌ಗೆ ಒಂದು ಸ್ಥಾನ ಖಚಿತವಾಗಿವೆ. ಬಿಜೆಪಿಯ ನಿರ್ಮಲಾ ಸೀತಾರಾಮನ್‌

ರಾಜ್ಯಸಭೆ ಚುನಾವಣೆ: ಬಿಜೆಪಿ 2 ಕಾಂಗ್ರೆಸ್ 1ರಲ್ಲಿ ಗೆಲುವು ನಿಶ್ಚಿತ| 4 ನೇ ಸ್ಥಾನಕ್ಕಾಗಿ ಪೈಪೋಟಿ Read More »

ಪ್ರಚೋದನಕಾರಿ ಹೇಳಿಕೆ| ನೂಪುರ್ ಶರ್ಮಾ ಬಳಿಕ ಓವೈಸಿ ವಿರುದ್ದ ಕೇಸ್ ದಾಖಲು

ಸಮಗ್ರ ನ್ಯೂಸ್: ಪ್ರಚೋದನಕಾರಿ ಹೇಳಿಕೆಗಳನ್ನ ನೀಡಿದ ಆರೋಪದ ಮೇಲೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ವಿರುದ್ಧ ದೆಹಲಿ ಸೈಬರ್‌ ಪೊಲೀಸ ಠಾಣೆಯಲ್ಲಿ ಎರಡು ಎಫ್‌ಐಆರ್‌ ದಾಖಲಿಸಲಾಗಿದೆ. ಇನ್ನು ಇದರೊಂದಿಗೆ, ಯತಿ ನರಸಿಂಗಾನಂದ್ ಹೆಸರನ್ನ ಸಹ ಎಫ್‌ಐಆರ್ ನಲ್ಲಿ ಸೇರಿಸಲಾಗಿದೆ. ನೂಪುರ್ ಶರ್ಮಾ ಮತ್ತು ನವೀನ್ ಜಿಂದಾಲ್ ಸೇರಿದಂತೆ ಎಂಟು ಜನರ ವಿರುದ್ಧ ಈಗಾಗಲೇ ಪ್ರಕರಣ ದಾಖಲಿಸಿರುವ ಎಫ್‌ಐಆರ್‌ನಲ್ಲಿ ಇಬ್ಬರ ಹೆಸರುಗಳನ್ನು ಸೇರಿಸಲಾಗಿದೆ. ವಾತಾವರಣವನ್ನು ಕಲುಷಿತಗೊಳಿಸಿದ ಪ್ರಕರಣದಲ್ಲಿ ದಾಖಲಾದ ಎರಡು ಎಫ್‌ಐಆರ್‌ಗಳಿಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಸಾಮಾಜಿಕ ಮಾಧ್ಯಮ

ಪ್ರಚೋದನಕಾರಿ ಹೇಳಿಕೆ| ನೂಪುರ್ ಶರ್ಮಾ ಬಳಿಕ ಓವೈಸಿ ವಿರುದ್ದ ಕೇಸ್ ದಾಖಲು Read More »

ರಾಜಕೀಯದ ದೊಡ್ಮನೆಯಲ್ಲಿ ಸಂಭ್ರಮ| ನಿಖಿಲ್ ಪುತ್ರನಿಗೆ‌ ನೆರವೇರಿದ ನಾಮಕರಣ ಶಾಸ್ತ್ರ

ಸಮಗ್ರ ನ್ಯೂಸ್: ರಾಜಕೀಯ ಧುರೀಣ ದೇವೇಗೌಡರ ಮನೆಯಲ್ಲಿ ಸಂಭ್ರಮ ಮನೆ ಮಾಡಿದ್ದು, ಗೌಡರ ಮರಿ ಮೊಮ್ಮಗನಿಗೆ ನಾಮಕರಣ ಮಾಡಲಾಗಿದೆ. ಮಾಜಿ ಸಿಎಂ ಕುಮಾರಸ್ವಾಮಿ ಅವರ ಮಗ, ರಾಜಕೀಯ ಹಾಗೂ ಚಿತ್ರರಂಗ ಎರಡಲ್ಲೂ ಬ್ಯುಸಿ ಇರುವ ನಿಖಿಲ್ ಕುಮಾರಸ್ವಾಮಿ ಮಗನ ನಾಮಕರಣ ಶಾಸ್ತ್ರ ಇಂದು ನೆರವೇರಿದ್ದು ಅವ್ಯನ್ ದೇವ್ ಎಂದ ಹೆಸರಿಡಲಾಗಿದೆ. ಜೆಪಿ ನಗರದ ವೆಂಕಟೇಶ್ವರ ದೇವಸ್ಥಾನದಲ್ಲಿ ಶಾಸ್ತ್ರೋಕ್ತವಾಗಿ ನಾಮಕರಣ ಶಾಸ್ತ್ರ ಮಾಡಲಾಗಿದ್ದು, ಬೆಳಗ್ಗೆ 10:30 ರಿಂದ 12:20 ರವರೆಗೂ ನಡೆಯುವ ಶುಭ ಲಗ್ನದಲ್ಲಿ ನಾಮಕರಣ ಶಾಸ್ತ್ರ ನಡೆಯಿತು.

ರಾಜಕೀಯದ ದೊಡ್ಮನೆಯಲ್ಲಿ ಸಂಭ್ರಮ| ನಿಖಿಲ್ ಪುತ್ರನಿಗೆ‌ ನೆರವೇರಿದ ನಾಮಕರಣ ಶಾಸ್ತ್ರ Read More »

ಯಶಪಾಲ್ ಸುವರ್ಣ, ಪ್ರಮೋದ್ ಮುತಾಲಿಕ್ ತಲೆ ತೆಗೆಯಲು 20 ಲಕ್ಷ ಆಫರ್ ನೀಡಿದ ಕಿಡಿಗೇಡಿಗಳು

ಸಮಗ್ರ‌ ನ್ಯೂಸ್: ಬಿಜೆಪಿ ರಾಷ್ಟ್ರೀಯ ಹಿಂದುಳಿದ ಮೋರ್ಚಾಗಳ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಹಾಗೂ ಶ್ರೀರಾಮಸೇನೆಯ ವರಿಷ್ಠ ಪ್ರಮೋದ್ ಮುತಾಲಿಕ್ ಅವರನ್ನು ತಲೆ ಕಡಿದರೆ ಇಪ್ಪತ್ತು ಲಕ್ಷ ಬಹುಮಾನ ನೀಡುವುದಾಗಿ ಪೋಸ್ಟ್ ಹಾಕಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಸಾಮಾಜಿಕ ಜಾಲತಾಣದಲ್ಲಿ ಈ ರೀತಿ ಬೆದರಿಕೆ ಹಾಕಲಾಗಿದೆ. ಯುವಕ ಮಂಗಳೂರು ಮಾರಿಗುಡಿ ಎಂದು ಪೇಜ್ ಮೇಲ್ಭಾಗದಲ್ಲಿ ಬರೆಯಲಾಗಿದ್ದು ಮಂಗಳೂರಿನ ಯುವಕರು ಈ ಪೇಜ್ ಹಿಂದಿರುವ ಶಂಕೆಯಿದೆ. ಯಶ್ ಪಾಲ್ ಸುವರ್ಣ ಮತ್ತು ಪ್ರಮೋದ್ ಮುತಾಲಿಕ್ ಹಿಜಾಬ್

ಯಶಪಾಲ್ ಸುವರ್ಣ, ಪ್ರಮೋದ್ ಮುತಾಲಿಕ್ ತಲೆ ತೆಗೆಯಲು 20 ಲಕ್ಷ ಆಫರ್ ನೀಡಿದ ಕಿಡಿಗೇಡಿಗಳು Read More »

“ತಾಕತ್ತಿದ್ರೆ ವಿದೇಶಕ್ಕೆ ಹೋಗಿ ಬನ್ನಿ, ಆಗ ಭಾರತದ ಮಹತ್ವ ಗೊತ್ತಾಗುತ್ತೆ” ಹಿಜಬ್ ಹೋರಾಟಗಾರ್ತಿಯರ ಕಿವಿಹಿಂಡಿದ ಶಾಸಕ ಯು.ಟಿ ಖಾದರ್

ಸಮಗ್ರ ನ್ಯೂಸ್: ಹಿಜಾಬ್ ವಿದ್ಯಾರ್ಥಿನಿಯರು ಒಮ್ಮೆ ವಿದೇಶಕ್ಕೆ ಹೋಗಲಿ ಎಂದು ವಿಧಾನಸಭಾ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಹಿಜಬ್ ವಿದ್ಯಾರ್ಥಿನಿಯರಿಗೆ ತಿರುಗೇಟು ನೀಡಿದ್ದಾರೆ. ಹಿಜಾಬ್ ವಿವಾದದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿನಿಯರು ಒಮ್ಮೆ ವಿದೇಶಕ್ಕೆ ಹೋಗಲಿ, ಪಾಕಿಸ್ತಾನ, ಸೌದಿಯಂತಹ ದೇಶಗಳಿಗೆ ಹೋಗಲಿ. ಆಗ ಅವರಿಗೆ ನಮ್ಮ ದೇಶದ ಮಹತ್ವ ಗೊತ್ತಾಗುತ್ತೆ ಎಂದು ಸವಾಲು ಹಾಕಿದರು. ನಮ್ಮ ದೇಶದಲ್ಲಿ ಬೇಕಾದ ಹಾಗೆ ಮಾತನಾಡೋದು, ಡಿಸಿಯನ್ನು ಭೇಟಿಯಾಗೋದು, ಪ್ರೆಸ್ ಮೀಟ್ ಎಲ್ಲ ಮಾಡಬಹುದು. ಆದರೆ ಅದನ್ನೇ ವಿದೇಶಕ್ಕೆ ಹೋಗಿ

“ತಾಕತ್ತಿದ್ರೆ ವಿದೇಶಕ್ಕೆ ಹೋಗಿ ಬನ್ನಿ, ಆಗ ಭಾರತದ ಮಹತ್ವ ಗೊತ್ತಾಗುತ್ತೆ” ಹಿಜಬ್ ಹೋರಾಟಗಾರ್ತಿಯರ ಕಿವಿಹಿಂಡಿದ ಶಾಸಕ ಯು.ಟಿ ಖಾದರ್ Read More »