ರಾಜ್ಯಸರ್ಕಾರದಿಂದ ಮತಾಂತರ ನಿಷೇಧ ಕಾಯ್ದೆ ಸುಗ್ರೀವಾಜ್ಞೆ ಜಾರಿ| ಸುಗ್ರೀವಾಜ್ಞೆ ತಿರಸ್ಕರಿಸಲು ಸಿದ್ದರಾಮಯ್ಯ ಆಗ್ರಹ
ಸಮಗ್ರ ನ್ಯೂಸ್: ಕೆಲ ಸಮಯದಿಂದ ಪರ-ವಿರೋಧಕ್ಕೆ ಕಾರಣವಾಗಿದ್ದ ಬಲವಂತದ ಮತಾಂತರ ನಿಷೇಧ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದೆ. ವಿಧಾನಸಭೆಯಲ್ಲಿ ಅನುಮೋದನೆಗೊಂಡು, ಪರಿಷತ್ತಿನಲ್ಲಿ ಬಾಕಿ ಉಳಿದುಕೊಂಡಿದ್ದ ‘ಕರ್ನಾಟಕ ಧಾರ್ವಿುಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಅಧ್ಯಾದೇಶ, 2022’ಕ್ಕೆ ಮೇ 12ರಂದು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಸಂಪುಟದ ತೀರ್ವನವನ್ನು ಶುಕ್ರವಾರ ರಾಜಭವನಕ್ಕೆ ಕಳಿಸಲಾಗುತ್ತದೆ. ರಾಜ್ಯಪಾಲರು ಕಾನೂನು ತಂಡದ ಜತೆ ಸಮಾಲೋಚಿಸಿ ಸುಗ್ರೀವಾಜ್ಞೆಗೆ ಸಹಿ ಹಾಕಿದ ಕೂಡಲೇ ಮತಾಂತರ ನಿಷೇಧ ಕಾನೂನು ಜಾರಿಗೆ […]