ರಾಜಕೀಯ

ಸಚಿವ ಅಂಗಾರರದ್ದು ಪ್ರಜಾಪ್ರಭುತ್ವದ ಕಗ್ಗೊಲೆ; ಅನ್ಯಾಯವಾದವರಿಗೆ ನ್ಯಾಯ ಸಿಗಲೇಬೇಕು – ಬ್ಲಾಕ್ ಕಾಂಗ್ರೆಸ್

ಸಮಗ್ರ ನ್ಯೂಸ್: ಕಳೆದ ಮೂವತ್ತು ವರ್ಷಗಳಿಂದ ಶಾಸಕರಾಗಿದ್ದು ನನಗೆ ಯಾರೂ ಆಡಳಿತ ಹೇಳಿಕೊಡಬೇಕಾಗಿಲ್ಲ ಎಂದು ಹೇಳುತ್ತಿರುವ ಸಚಿವ ಎಸ್.ಅಂಗಾರರು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದ್ದಾರೆ. ಕಾರ್ಯಕರ್ತರಲ್ಲದವರಿಗೆ ಯೋಜನೆಯ ಲಾಭಕ್ಕೆ ಕೊಕ್ಕೆ ಹಾಕಿದ್ದು ಇದು ಅನ್ಯಾಯ ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ ಜಯರಾಮ ಹೇಳಿದ್ದಾರೆ. ಬಿಜೆಪಿ ಸುಳ್ಯ ಕಚೇರಿ ಕಾರ್ಯದರ್ಶಿ ಚಂದ್ರಶೇಖರ್ ಮಾತನಾಡಿರುವ ಆಡಿಯೋ ಕುರಿತಂತೆ ಪ್ರತಿಕ್ರಿಯಿಸಿದ ಅವರು ‘ಚುನಾಯಿತ ಜನಪ್ರತಿನಿಧಿಯಾಗಿ ಸಚಿವ ಅಂಗಾರರು ರಾಜ್ಯದ ಎಲ್ಲಾ ಜನರಿಗೆ ಸಮಾನರಾಗಿರಬೇಕು. ಪಕ್ಷಕ್ಕೆ ಸಂಬಂಧಪಟ್ಟವರಿಗೆ ಮಾತ್ರ ಯೋಜನೆಗಳ ಲಾಭಕ್ಕೆ […]

ಸಚಿವ ಅಂಗಾರರದ್ದು ಪ್ರಜಾಪ್ರಭುತ್ವದ ಕಗ್ಗೊಲೆ; ಅನ್ಯಾಯವಾದವರಿಗೆ ನ್ಯಾಯ ಸಿಗಲೇಬೇಕು – ಬ್ಲಾಕ್ ಕಾಂಗ್ರೆಸ್ Read More »

ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ

ಸಮಗ್ರ ನ್ಯೂಸ್: ಸಂಸತ್ತಿನ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗುತ್ತಿದ್ದು, ಮೊದಲ ದಿನ ರಾಷ್ಟ್ರಪತಿ ಆಯ್ಕೆಗೆ ಚುನಾವಣೆ ನಡೆಯಲಿದೆ. ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಹಾಗೂ ಪ್ರತಿಪಕ್ಷದ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ಅವರು ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಇಂದು ಮತದಾನದ ನಂತರ, ಇದೇ ೨೧ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಹಾಲಿ ಇರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧಿಕಾರವಧಿ ಇದೇ ೨೪ರಂದು ಕೊನೆಗೊಳ್ಳುತ್ತಿದೆ. ಈ ನಡುವೆ ಉಪರಾಷ್ಟ್ರಪತಿ ಸ್ಥಾನಕ್ಕೆ ಕೂಡ ಮುಂದಿನ ತಿಂಗಳು ಆಗಸ್ಟ್ ೬ರಂದು

ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ Read More »

ಸಚಿವ ಅಂಗಾರರು ಬಿಜೆಪಿಗೆ ಓಟು ನೀಡಿದವರಿಗಷ್ಟೇ ಶಿಫಾರಸು ಮಾಡ್ತಾರಂತೆ!?| ಸರ್ಕಾರಿ ಯೋಜನೆ ಪಡೆದುಕೊಳ್ಳಲು ಆತ ಬಿಜೆಪಿ ಕಾರ್ಯಕರ್ತನಾಗಿರಬೇಕು!!

ಸಮಗ್ರ ನ್ಯೂಸ್: ಕೆಲವೊಂದು ಸರ್ಕಾರಿ ಅನುದಾನಗಳನ್ನು ಪಡೆದುಕೊಳ್ಳಲು ಸ್ಥಳೀಯ ಶಾಸಕರ ಶಿಫಾರಸ್ಸು ಅಗತ್ಯ ಬೇಕಾಗಿರುತ್ತದೆ. ಹಾಗಾಗಿ ಬಡಜನರು ಯೋಜನೆಗಳ ಅನುದಾನಕ್ಕಾಗಿ ಕ್ಷೇತ್ರದ ಶಾಸಕರ ಕಚೇರಿ ಬಾಗಿಲು ತಟ್ಟುವುದು ಸಾಮಾನ್ಯ. ಆದರೆ ಸಂವಿಧಾನಾತ್ಮಕವಾಗಿ ಆಯ್ಕೆಯಾದ ಶಾಸಕರು ತಮ್ಮ ಪಕ್ಷದ ಕಾರ್ಯಕರ್ತರಿಗಷ್ಟೇ ಶಿಫಾರಸ್ಸು ಮಾಡ್ತಾರೆ ಅಂದ್ರೆ ನಂಬ್ತೀರಾ? ನೀವು ನಂಬಲೇಬೇಕು. ನಮ್ಮ ಸುಳ್ಯ ಶಾಸಕರು ಹಾಗೂ ಪ್ರಸ್ತುತ ಬಂದರು ಮತ್ತು ಮೀನುಗಾರಿಕಾ ಸಚಿವರಾಗಿರುವ ಎಸ್.ಅಂಗಾರರು ಮಾತ್ರ ಬಿಜೆಪಿ ಕಾರ್ಯಕರ್ತ ಅಥವಾ ಆ ಪಕ್ಷಕ್ಕೆ ಓಟು ಹಾಕಿದವರಿಗಷ್ಟೇ ಯಾವುದೇ ಅನುದಾನಕ್ಕೆ ಶಿಫಾರಸ್ಸು

ಸಚಿವ ಅಂಗಾರರು ಬಿಜೆಪಿಗೆ ಓಟು ನೀಡಿದವರಿಗಷ್ಟೇ ಶಿಫಾರಸು ಮಾಡ್ತಾರಂತೆ!?| ಸರ್ಕಾರಿ ಯೋಜನೆ ಪಡೆದುಕೊಳ್ಳಲು ಆತ ಬಿಜೆಪಿ ಕಾರ್ಯಕರ್ತನಾಗಿರಬೇಕು!! Read More »

ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಪ.ಬಂಗಾಳ ರಾಜ್ಯಪಾಲ ಜಗದೀಪ್ ಧಂಗರ್ | ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಘೋಷಣೆ

ಸಮಗ್ರ ನ್ಯೂಸ್: ರಾಷ್ಟ್ರಪತಿ ಚುನಾವಣೆಗೆ ದೇಶಾದ್ಯಂತ ಚುನಾವಣಾ ಪ್ರಚಾರ ನಡೆಯುತ್ತಿರುವ ನಡುವೆಯೇ, ಭಾರತೀಯ ಜನತಾ ಪಕ್ಷ ಸಂಸದೀಯ ಮಂಡಳಿ ಸಭೆ ಶನಿವಾರ ದೇಶದ ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧಂಕರ್ ಅವರನ್ನು ಪಕ್ಷದ ಅಭ್ಯರ್ಥಿಯಾಗಿ ಆಯ್ಕೆ ಮಾಡಿದೆ. ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ಎನ್ಡಿಎ ಅಭ್ಯರ್ಥಿ ಜಗದೀಪ್ ಧಂಕರ್’ ಎಂದು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ, ಕೇಂದ್ರ ಸಚಿವರಾದ ಅಮಿತ್ ಶಾ, ನಿತಿನ್ ಗಡ್ಕರಿ, ರಾಜನಾಥ್ ಸಿಂಗ್, ಬಿಜೆಪಿ

ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಪ.ಬಂಗಾಳ ರಾಜ್ಯಪಾಲ ಜಗದೀಪ್ ಧಂಗರ್ | ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಘೋಷಣೆ Read More »

ವಿಧಾನಸಭಾ ಚುನಾವಣೆ ಹಿನ್ನೆಲೆ| ಸುನಿಲ್ ಕುಮಾರ್ ಗೆ ಸಿಗುತ್ತಾ ಬಿಜೆಪಿ ಸಾರಥ್ಯ? ಹಿಂದುಳಿದ ವರ್ಗಗಳ ಓಲೈಕೆಗೆ ಮುಂದಾಗಿದೆ ಕೇಸರಿ ಪಡೆ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕೇಂದ್ರ ಬಿಜೆಪಿ ನಾಯಕತ್ವ ಹಿಂದುಳಿದ ವರ್ಗಗಳನ್ನು ಸೆಳೆಯಲು ಹವಣಿಸುತ್ತಿದೆ. ಇದಕ್ಕಾಗಿ ಬಿಜೆಪಿ ಪಾಳಯದಲ್ಲಿನ ಪ್ರಭಾವಿ ಯುವ ನಾಯಕರಿಗೆ ಮಣೆ ಹಾಕಲು ಕೇಸರಿ ಪಡೆ ಸಜ್ಜಾಗಿದೆ. ಜೆಡಿಎಸ್‌ನ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರಂತಹ ಪ್ರಾದೇಶಿಕ ನಾಯಕರಿಗೆ, ಪಕ್ಷವು ಪರ್ಯಾಯ ನಾಯಕರನ್ನು ಬೆಳೆಸಲು ನೋಡುತ್ತಿದೆ. ವಿಧಾನಸಭಾ ಚುನಾವಣೆಯಲ್ಲಿ ಜಾತಿ ಅಂಶವು ನಿರ್ಣಾಯಕ ಪಾತ್ರ ವಹಿಸಲಿದೆ ಎಂದು ಹೈಕಮಾಂಡ್ ಅರಿತುಕೊಂಡಿದೆ ಎಂದು ಮೂಲಗಳು ತಿಳಿಸಿವೆ. ಮುಖ್ಯಮಂತ್ರಿ ಬಸವರಾಜ

ವಿಧಾನಸಭಾ ಚುನಾವಣೆ ಹಿನ್ನೆಲೆ| ಸುನಿಲ್ ಕುಮಾರ್ ಗೆ ಸಿಗುತ್ತಾ ಬಿಜೆಪಿ ಸಾರಥ್ಯ? ಹಿಂದುಳಿದ ವರ್ಗಗಳ ಓಲೈಕೆಗೆ ಮುಂದಾಗಿದೆ ಕೇಸರಿ ಪಡೆ Read More »

ನೂಪುರ್ ಶರ್ಮಾ ತಲೆ ಕಡಿದು ತಂದವರಿಗೆ 5ಲಕ್ಷ| ವಿವಾದಿತ ಹೇಳಿಕೆ ನೀಡಿದ ಟಿಎಂಸಿ ಸಂಸದ

ಸಮಗ್ರ ನ್ಯೂಸ್: ಬಿಜೆಪಿ ವಿವಾದಿತ ನಾಯಕಿ ನೂಪುರ್ ಶರ್ಮಾ ವಿರುದ್ಧ ಮತ್ತೊಬ್ಬ ನಾಯಕ ನಾಲಿಗೆ ಹರಿಬಿಟ್ಟಿದ್ದಾನೆ. ನೂಪುರ್ ಶರ್ಮಾ ತಲೆ ಕಡಿದು ತಂದವರಿಗೆ 5 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಮಮತಾ ಬ್ಯಾನರ್ಜಿಯ ಟಿಎಂಸಿ ಪಕ್ಷದ ಸಂಸದ ವಾಸಿಮ್ ರಝಾ ಘೋಷಿಸಿದ್ದಾನೆ. ಇದು ಮತ್ತೊಂದು ಸಂಘರ್ಷಕ್ಕೆ ಕಾರಣವಾಗಿದೆ. ಪ್ರವಾದಿ ಮೊಹಮ್ಮದ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ನೂಪುರ್ ಶರ್ಮಾ ವಿರುದ್ಧ ದೇಶಾದ್ಯಂತ ಭಾರಿ ಪ್ರತಿಭಟನೆ, ಹಿಂಸಾಚಾರ ನಡೆದಿದೆ. ಇದೀಗ ನೂಪುರ್ ಬೆಂಬಲಿಸಿದವರ ಹತ್ಯೆಗಳು ನಡೆದಿದೆ. ಈ ಸಂಘರ್ಷಕ್ಕೆ

ನೂಪುರ್ ಶರ್ಮಾ ತಲೆ ಕಡಿದು ತಂದವರಿಗೆ 5ಲಕ್ಷ| ವಿವಾದಿತ ಹೇಳಿಕೆ ನೀಡಿದ ಟಿಎಂಸಿ ಸಂಸದ Read More »

ಕೆಪಿಸಿಸಿ ವಾರ್ ರೂಮ್ ಅಧ್ಯಕ್ಷರಾಗಿ ಸಸಿಕಾಂತ್ ಸೆಂಥಿಲ್ ನೇಮಕ

ಸಮಗ್ರ ನ್ಯೂಸ್: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಪಕ್ಷದ ಪರವಾಗಿ ರಾಜಕೀಯ ತಂತ್ರಗಾರಿಕೆ ರೂಪಿಸಲಿರುವ ಕೆಪಿಸಿಸಿ ‘ವಾರ್ ರೂಮ್’ ಅಧ್ಯಕ್ಷರನ್ನಾಗಿ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಅವರನ್ನು ನೇಮಿಸಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಗುರುವಾರ ಈ ನೇಮಕಾತಿ ಆದೇಶ ಹೊರಡಿಸಿದ್ದಾರೆ. ಸಸಿಕಾಂತ್ ಸೆಂಥಿಲ್ ಕರ್ನಾಟಕದಲ್ಲಿ ವಿವಿಧ ಇಲಾಖೆಗಳಲ್ಲಿ ಐಎಎಸ್ ದರ್ಜೆ ಅಧಿಕಾರಿಯಾಗಿ ಜನಮನ್ನಣೆ ಗಳಿಸಿದ್ದರು.

ಕೆಪಿಸಿಸಿ ವಾರ್ ರೂಮ್ ಅಧ್ಯಕ್ಷರಾಗಿ ಸಸಿಕಾಂತ್ ಸೆಂಥಿಲ್ ನೇಮಕ Read More »

ರಾಜ್ಯಸಭೆ ಸದಸ್ಯರಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಚಿತ್ರನಟ ಜಗ್ಗೇಶ್|ಇಲ್ಲಿದೆ ವಿಡಿಯೋ

ಸಮಗ್ರ ನ್ಯೂಸ್: ರಾಜ್ಯಸಭೆ ಸದಸ್ಯರಾಗಿ ಕನ್ನಡ ಚಿತ್ರನಟ ಜಗ್ಗೇಶ್ ಪ್ರಮಾಣವಚನ ಸ್ವೀಕರಿಸಿದರು. ರಾಘವೇಂದ್ರ ಸ್ವಾಮಿ ದೇವರ ಹೆಸರಿನಲ್ಲಿ ಕನ್ನಡದಲ್ಲಿಯೇ ಪ್ರಮಾಣವಚನ ಸ್ವೀಕರಿಸುವ ಮೂಲಕ ಜಗ್ಗೇಶ್ ಗಮನ ಸೆಳೆದರು. “ಜಗ್ಗೇಶ್ ಎಂಬ ಹೆಸರಿನವನಾದ ನಾನು, ರಾಜ್ಯಸಭೆಯ ಸದಸ್ಯನಾಗಿ ಚುನಾಯಿತನಾದವನಾಗಿ ಕಾನೂನು ಮೂಲಕ ಸ್ಥಾಪಿತವಾದ ಭಾರತದ ಸಂವಿಧಾನಕ್ಕೆ ಸತ್ಯ, ಶ್ರದ್ಧೆ ಮತ್ತು ನಿಷ್ಠೆಯನ್ನು ಹೊಂದಿರುತ್ತೇನೆ ಎಂದು ಭಾರತದ ಸಾರ್ವಭೌಮತ್ವವನ್ನು ಮತ್ತು ಅಖಂಡತೆಯನ್ನು ಎತ್ತಿ ಹಿಡಿಯುತ್ತೇನೆಂದು ಮತ್ತು ನಾನು ಈಗ ಕೈಗೊಳ್ಳಲಿರುವ ಕರ್ತವ್ಯವನ್ನು ಶ್ರದ್ಧಾಪೂರ್ವಕವಾಗಿ ನಿರ್ವಹಿಸುತ್ತೇನೆ ಎಂದು ರಾಘವೇಂದ್ರ ಸ್ವಾಮಿಗಳ ಹೆಸರಿನಲ್ಲಿ

ರಾಜ್ಯಸಭೆ ಸದಸ್ಯರಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಚಿತ್ರನಟ ಜಗ್ಗೇಶ್|ಇಲ್ಲಿದೆ ವಿಡಿಯೋ Read More »

ರಾಜ್ಯಸಭೆಗೆ ಡಾ. ಡಿ. ವೀರೇಂದ್ರ ಹೆಗ್ಗಡೆ ನಾಮನಿರ್ದೇಶನ

ಸಮಗ್ರ ನ್ಯೂಸ್: ರಾಜ್ಯಸಭೆ ಸದಸ್ಯರಾಗಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗಡೆ ಅವರನ್ನು ನಾಮನಿರ್ದೇಶನ ಮಾಡಲಾಗಿದೆ. ವೀರೇಂದ್ರ ಹೆಗ್ಗಡೆಯವರು ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದ್ದಾರೆ. ಧರ್ಮಸ್ಥಳದ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲು ಮತ್ತು ಆರೋಗ್ಯ, ಶಿಕ್ಷಣ ಮತ್ತು ಸಂಸ್ಕೃತಿಯಲ್ಲಿ ಅವರು ಮಾಡುತ್ತಿರುವ ಮಹತ್ತರವಾದ ಕಾರ್ಯ ಮಾದರಿಯಾಗಿದೆ. ಅವರು ಸಂಸತ್ತಿಗೆ ಆಯ್ಕೆಯಾಗಿರುವುದು ಅಭಿನಂದನಾರ್ಹ ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ರಾಜ್ಯಸಭೆ ಸದಸ್ಯರಾಗಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಕೇಂದ್ರ ಸರಕಾರ ನಾಮನಿರ್ದೇಶನ ಮಾಡಿದೆ.ಇವರ ಜೊತೆ ಖ್ಯಾತ ಅಥ್ಲೀಟ್ ಪಿ.ಟಿ.

ರಾಜ್ಯಸಭೆಗೆ ಡಾ. ಡಿ. ವೀರೇಂದ್ರ ಹೆಗ್ಗಡೆ ನಾಮನಿರ್ದೇಶನ Read More »

ಜಮೀರ್ ಸಂಪತ್ತಿಗೆ ಎಸಿಬಿ ಸವಾಲ್| ಆಸ್ತಿ ಮೌಲ್ಯ ನೋಡಿ ದಂಗಾದ ಅಧಿಕಾರಿಗಳು| ಲೆಕ್ಕ ಇಲ್ಲ ಪಕ್ಕಾ…! ಬಾದ್ ಷಾಗೆ ಬಂಧನ ಭೀತಿ

ಸಮಗ್ರ ನ್ಯೂಸ್: ಜಾರಿ ನಿರ್ದೇಶನಾಲಯ ವರದಿ ಆಧರಿಸಿ ಶಾಸಕ ಜಮೀರ್‌ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ ಎಸಿಬಿ, ಈಗ ಜಮೀರ್‌ ಸಾಮ್ರಾಜ್ಯದ ಸಂಪತ್ತಿನ ಶೋಧನೆಗೆ ಕಾರ್ಯಾಚರಣೆ ಶುರು ಮಾಡಿದೆ. ಎಸಿಬಿ ದಾಳಿ ಬಳಿಕ ಜಮೀರ್‌ಗೀಗ ಬಂಧನದ ಭೀತಿ ಎದುರಾಗಿದೆ. ಜಮೀರ್‌ ಅಹಮದ್‌ ಖಾನ್‌ ಅವರ ನಿವಾಸದ ಮೇಲೆ ನಡೆದ ದಾಳಿ ವೇಳೆ ಲಕ್ಷಾಂತರ ರು. ನಗದು, ಕೋಟ್ಯಂತರ ಮೌಲ್ಯದ ವಜ್ರ ವೈಢೂರ್ಯ, ಚಿನ್ನಾಭರಣ, ಬೆಳ್ಳಿ ವಸ್ತುಗಳು, 9 ಲೀಟರ್‌ ವಿದೇಶಿ ಮದ್ಯ,

ಜಮೀರ್ ಸಂಪತ್ತಿಗೆ ಎಸಿಬಿ ಸವಾಲ್| ಆಸ್ತಿ ಮೌಲ್ಯ ನೋಡಿ ದಂಗಾದ ಅಧಿಕಾರಿಗಳು| ಲೆಕ್ಕ ಇಲ್ಲ ಪಕ್ಕಾ…! ಬಾದ್ ಷಾಗೆ ಬಂಧನ ಭೀತಿ Read More »