ರಾಜಕೀಯ

ಮುಂದೊಮ್ಮೆ ಕೇಸರಿ ಧ್ವಜವೇ ರಾಷ್ಟ್ರಧ್ವಜವಾದೀತು- ಕಲ್ಲಡ್ಕ ಪ್ರಭಾಕರ ಭಟ್

ಸಮಗ್ರ ನ್ಯೂಸ್: ಮುಂದೊಂದು ದಿನ ಕೇಸರಿ ಧ್ವಜವೇ ನಮ್ಮ ರಾಷ್ಟ್ರಧ್ವಜವಾದೀತು ಎಂದು RSS ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮಂಗಳೂರಿನ ಕುತ್ತಾರಿನಲ್ಲಿ ನಡೆದ ‘ಕೊರಗಜ್ಜನ ಆದಿಕ್ಷೇತ್ರಕ್ಕೆ ನಮ್ಮ ನಡೆ’ ಸಮಾರೋಪ ಸಮಾರಂಭದಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ತುಷ್ಟೀಕರಣ ನೀತಿಯಿಂದ ಭಾರತದ ರಾಷ್ಟ್ರಧ್ವಜ ಇಬ್ಭಾಗವಾಯಿತು. ಮುಂದೊಂದು ದಿನ ಕೇಸರಿ ಧ್ವಜವೇ ನಮ್ಮ ರಾಷ್ಟ್ರಧ್ವಜವಾದೀತು. ಇದು ಯಾಕೆ ಅಂತ ನಾನು ಈ ಬಗ್ಗೆ ಸ್ಪಷ್ಟೀಕರಣ ಕೊಡ್ತೇನೆ. ಈ ಮೂರು ಬಣ್ಣಗಳ ರಾಷ್ಟ್ರಧ್ವಜವನ್ನು […]

ಮುಂದೊಮ್ಮೆ ಕೇಸರಿ ಧ್ವಜವೇ ರಾಷ್ಟ್ರಧ್ವಜವಾದೀತು- ಕಲ್ಲಡ್ಕ ಪ್ರಭಾಕರ ಭಟ್ Read More »

ಪಠ್ಯಪುಸ್ರಕದಲ್ಲಿ ಭಗವದ್ಗೀತೆ ತರಲ್ಲ – ಮಾಧುಸ್ವಾಮಿ

ಸಮಗ್ರ ನ್ಯೂಸ್: ಪಠ್ಯಕ್ರಮದಲ್ಲಿ ಭಗವದ್ಗೀತೆ ಸೇರಿಸುವ ವಿಚಾರದ ಯಾವ ಪ್ರಸ್ತಾಪವೂ ಸರಕಾರದ ಮುಂದೆ ಇಲ್ಲ. ಪ್ರಸ್ತಾಪವೇ ಇಲ್ಲವೆಂದ ಮೇಲೆ ಚರ್ಚೆ ಯಾಕೆ? ಈ ಬಗ್ಗೆ ಶಿಕ್ಷಣ ಸಚಿವರೇ ಸ್ಪಷ್ಟಪಡಿಸಿದ್ದಾರೆ. ಉಳಿದ ವಿಚಾರ ನನಗೆ ಗೊತ್ತಿಲ್ಲ ಎಂದು ಕಾನೂನು ಸಚಿವ ಜೆ ಸಿ ಮಾಧುಸ್ವಾಮಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದನವನ್ನು ಈ ವಾರ ಮೊಟಕುಗೊಳಿಸುವುದಿಲ್ಲ. ಮಾರ್ಚ್ 30 ರವರೆಗೆ ಅಧಿವೇಶನ ನಡೆಯುತ್ತದೆ. ಯಾವುದೇ ಕಾರಣಕ್ಕೂ ಸದನ ಮೊಟಕು ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಭಗವದ್ಗೀತೆಯನ್ನು ಮುಂದಿನ ವರ್ಷದಿಂದ ಪಠ್ಯದಲ್ಲಿ

ಪಠ್ಯಪುಸ್ರಕದಲ್ಲಿ ಭಗವದ್ಗೀತೆ ತರಲ್ಲ – ಮಾಧುಸ್ವಾಮಿ Read More »

ಹಿಜಾಬ್ ತೀರ್ಪು- ಕೋರ್ಟ್ ನಿರ್ಧಾರ ವಿರೋಧಿಸಬಾರದು – ಸಿದ್ದರಾಮಯ್ಯ

ಸಮಗ್ರ ನ್ಯೂಸ್: ಹೈಕೋರ್ಟ್ ಹಿಜಾಬ್ ತೀರ್ಪು ವಿರೋಧಿಸಿ ಮುಸ್ಲಿಂ ಸಮುದಾಯದವರು ಅಂಗಡಿ ಮುಂಗಟ್ಟು ಬಂದ್ ಮಾಡಿ ಪ್ರತಿಭಟನೆ ಮಾಡಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಿದ್ಧರಾಮಯ್ಯ, ಅಸಮಾಧಾನ ಇರುವವರು ಬಂದ್ ಮಾಡಿದ್ದಾರೆ. ಕೋರ್ಟ್ ನಿರ್ಧಾರ ವಿರೋಧಿಸಬಾರದು ಎಂದಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಹೈಕೋರ್ಟ್, ಸುಪ್ರೀಂ ಕೋರ್ಟ್ ಯಾವುದರ ನಿರ್ಧಾರವನ್ನೂ ವಿರೋಧ ಮಾಡಬಾರದು. ಯಾವ ಧರ್ಮದವರೂ ಕೋಮುವಾದ ಮಾಡಬಾರದು. ಹಿಂದೂ, ಮುಸ್ಲಿಂ ಯಾರೇ ಆದರೂ ಕೋಮುವಾದ ಮಾಡಬಾರದು. ಎಲ್ಲಾ ಧರ್ಮಗಳನ್ನು ಸಮಾನವಾಗಿ ಕಾಣುವ ಕೆಲಸ ಆಗಲಿ ಅಂತಾ ಹೇಳಿದ್ದಾರೆ.

ಹಿಜಾಬ್ ತೀರ್ಪು- ಕೋರ್ಟ್ ನಿರ್ಧಾರ ವಿರೋಧಿಸಬಾರದು – ಸಿದ್ದರಾಮಯ್ಯ Read More »

ಗೋಧ್ರಾ ಹತ್ಯಾಕಾಂಡದ ಬಗ್ಗೆಯೂ ಸಿನಿಮಾವಾಗಲಿ – ಸಿದ್ದರಾಮಯ್ಯ

ಸಮಗ್ರ ನ್ಯೂಸ್: ದೇಶದಲ್ಲಿ ಸಂಚಲನ ಮೂಡಿಸಿರುವ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾವನ್ನು ಕನ್ನಡಕ್ಕೆ ಡಬ್ ಮಾಡುವ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಮಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಪಾಲ್ಗೊಳ್ಳುವ ಸಲುವಾಗಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಿದ್ದರಾಮಯ್ಯ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾವನ್ನು ಕನ್ನಡಕ್ಕೆ ಡಬ್ಬಿಂಗ್ ಮಾಡಿ ತೋರಿಸುತ್ತೇವೆ ಅಂದರೆ ಬೇಡ ಅಂದೋರು ಯಾರು? ಆದರೆ ಜನರಿಗೆ ಸತ್ಯ ಏನು ನಡೆದಿದೆ ಅನ್ನೋದನ್ನು ತೋರಿಸಬೇಕು.

ಗೋಧ್ರಾ ಹತ್ಯಾಕಾಂಡದ ಬಗ್ಗೆಯೂ ಸಿನಿಮಾವಾಗಲಿ – ಸಿದ್ದರಾಮಯ್ಯ Read More »

ಹಿಜಾಬ್ ಧರಿಸಿ ಪರೀಕ್ಷೆ, ತರಗತಿಗೆ ಹಾಜರಾಗಲು ನಿಯಮ ಸಡಿಲಿಕೆ ಇಲ್ಲವೇ ಇಲ್ಲ- ಸಚಿವ ಬಿ.ಸಿ‌ ನಾಗೇಶ್

ಸಮಗ್ರ ನ್ಯೂಸ್: ಹೈಕೋರ್ಟ್ ನೀಡಿದ ತೀರ್ಪಿನ ಅನ್ವಯ ಹಿಜಾಬ್ ಧರಿಸಿ ಶಾಲೆಗೆ ಹಾಜರಾಗಲು ಅಥವಾ ಪರೀಕ್ಷೆಗೆ ಹಾಜರಾಗಲು ಅವಕಾಶ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ವಿಚಾರವಾಗಿ ಹೈಕೋರ್ಟ್ ತೀರ್ಪು ನೀಡಿದೆ ಹೀಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗುವ ವಿದ್ಯಾರ್ಥಿಗಳಿಗೆ ಯಾವುದೇ ಕಾರಣಕ್ಕೂ ಮತ್ತೆ ಅವಕಾಶ ಸಡಿಲಿಕೆ ಇರುವುದಿಲ್ಲ. ಇನ್ನು ಮುಂದೆ ಪರೀಕ್ಷೆಯ ವಿಚಾರದಲ್ಲಿ ವಿಶೇಷ ಅವಕಾಶವನ್ನು ನೀಡಲ್ಲ. ಇಷ್ಟು ದಿನ ಕೋರ್ಟ್ ತೀರ್ಪು ಬಂದಿರಲಿಲ್ಲ. ಹೀಗಾಗಿ ಶಿಕ್ಷಣ

ಹಿಜಾಬ್ ಧರಿಸಿ ಪರೀಕ್ಷೆ, ತರಗತಿಗೆ ಹಾಜರಾಗಲು ನಿಯಮ ಸಡಿಲಿಕೆ ಇಲ್ಲವೇ ಇಲ್ಲ- ಸಚಿವ ಬಿ.ಸಿ‌ ನಾಗೇಶ್ Read More »

“ನಾಯಕತ್ವ ಬದಲಿಸಿಕೊಳ್ಳಿ, ಇಲ್ಲದಿದ್ದರೆ ಕರ್ನಾಟಕದಲ್ಲೂ ಆಪ್ ನಿಮ್ಮನ್ನ ಗುಡಿಸುತ್ತೆ”| ಮೂರೂ ಪಕ್ಷಗಳಿಗೆ ಎಚ್ಚರಿಕೆ ಇತ್ತ ಲೆಹರ್ ಸಿಂಗ್

ಸಮಗ್ರ ನ್ಯೂಸ್: ‘ರಾಜ್ಯದಲ್ಲಿ ಪ್ರಮುಖವಾಗಿರುವ ಮೂರೂ ಪಕ್ಷಗಳ ನಾಯಕತ್ವ ಬದಲಾವಣೆಯಾಗದಿದ್ದರೆ ಅವುಗಳು ಧೂಳಿಪಟವಾಗುತ್ತವೆ. ದೆಹಲಿ ರೀತಿಯಲ್ಲಿ ಆಮ್ ಆದ್ಮಿ ಪಕ್ಷವು ಎಲ್ಲರನ್ನೂ ಗುಡಿಸುತ್ತದೆ’ ಎಂದು ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್‌ಗೆ ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಲೆಹರ್ ಸಿಂಗ್ ಸಿರೋಯಾ ಎಚ್ಚರಿಕೆ ನೀಡಿದರು. ವಿಧಾನ ಪರಿಷತ್‌ನಲ್ಲಿ ಗುರುವಾರ ಬಜೆಟ್‌ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಲೆಹರ್‌ ಸಿಂಗ್‌, ‘ನಾನು 12 ವರ್ಷಗಳಿಂದ ಸದನದಲ್ಲಿದ್ದೇನೆ. ಪಕ್ಷ ನನಗೆ ಎರಡು ಅವಧಿಗೆ ಅವಕಾಶ‌ ನೀಡಿದೆ. ‌ಮತ್ತೆ ನಾನು ಅವಕಾಶ ಕೇಳುವುದಿಲ್ಲ.

“ನಾಯಕತ್ವ ಬದಲಿಸಿಕೊಳ್ಳಿ, ಇಲ್ಲದಿದ್ದರೆ ಕರ್ನಾಟಕದಲ್ಲೂ ಆಪ್ ನಿಮ್ಮನ್ನ ಗುಡಿಸುತ್ತೆ”| ಮೂರೂ ಪಕ್ಷಗಳಿಗೆ ಎಚ್ಚರಿಕೆ ಇತ್ತ ಲೆಹರ್ ಸಿಂಗ್ Read More »

ಹಿಜಾಬ್ ಕುರಿತು ಕೋರ್ಟ್ ಮೆಟ್ಟಿಲೇರಿದವರು ಭಯೋತ್ಪಾದಕರಂತೆ! – ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಮುಖಂಡ

ಸಮಗ್ರ ನ್ಯೂಸ್: ಶಾಲಾ-ಕಾಲೇಜ್ ಗಳಲ್ಲಿ ಹಿಜಾಬ್ ಧರಿಸಲು ಅನುಮತಿ ನೀಡುವಂತೆ ಕೋರಿ ಕೋರ್ಟ್ ಮೆಟ್ಟಿಲೇರಿರುವ ವಿದ್ಯಾರ್ಥಿನಿಯರು ಉಗ್ರ ಸಂಘಟನೆಯ ಸದಸ್ಯರು ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ ಅವರು ಆರೋಪಿಸಿದ್ದಾರೆ. ಹೈಕೋರ್ಟ್ ತೀರ್ಪಿನ ವಿರುದ್ಧ ಮಾತನಾಡಿದ ಆರು ವಿದ್ಯಾರ್ಥಿನಿಯರು ದೇಶ ವಿರೋಧಿಗಳು ಮತ್ತು ಭಯೋತ್ಪಾದಕ ಸಂಘಟನೆಯ ಸದಸ್ಯರು ಎಂದು ಉಡುಪಿ ಸರ್ಕಾರಿ ಮಹಿಳಾ ಪದವಿ ಪೂರ್ವ ಕಾಲೇಜಿನ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಯಶ್ಪಾಲ್ ಸುವರ್ಣ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಹಿಜಾಬ್ ಕುರಿತು ಕೋರ್ಟ್ ಮೆಟ್ಟಿಲೇರಿದವರು ಭಯೋತ್ಪಾದಕರಂತೆ! – ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಮುಖಂಡ Read More »

ಹಿಜಾಬ್ ವಿವಾದದಲ್ಲಿ ‌ಪರೀಕ್ಷೆ ತಪ್ಪಿಸಿಕೊಂಡರೆ ಮತ್ತೆ ಬರೆಯಲು ಅವಕಾಶವಿಲ್ಲ – ಸಚಿವ ಮಾಧುಸ್ವಾಮಿ

ಸಮಗ್ರ ನ್ಯೂಸ್: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಪರೀಕ್ಷೆ ತಪ್ಪಿಸಿಕೊಂಡರೆ ಮತ್ತೆ ಪರೀಕ್ಷೆ ಬರೆಯಲು ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಸಚಿವ ಜೆ. ಮಾಧುಸ್ವಾಮಿ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಶಾಸಕ ರಘುಪತಿ ಭಟ್, ಹಿಜಾಬ್ ಸಂಘರ್ಷದ ವೇಳೆ ಪರೀಕ್ಷೆಯಿಂದ ವಂಚಿತರಾದವರಿಗೆ ಮತ್ತೊಮ್ಮೆ ಪರೀಕ್ಷೆಗೆ ಅವಕಾಶ ಕೊಡಬೇಕು. ಹಿಜಾಬ್ ತೆಗೆದು ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಮನವಿ ಮಾಡಿದರು. ಅಲ್ಲದೇ ಕೋರ್ಟ್ ತೀರ್ಪು ಬಂದ ಬಳಿಕವೂ ಕೆಲ ಕಾಲೇಜಿನಲ್ಲಿ ವಿವಾದ ಮುಂದುವರೆದಿದೆ. ಅನಗತ್ಯ ವಿವಾದ

ಹಿಜಾಬ್ ವಿವಾದದಲ್ಲಿ ‌ಪರೀಕ್ಷೆ ತಪ್ಪಿಸಿಕೊಂಡರೆ ಮತ್ತೆ ಬರೆಯಲು ಅವಕಾಶವಿಲ್ಲ – ಸಚಿವ ಮಾಧುಸ್ವಾಮಿ Read More »

ವಂಶ ಪಾರಂಪರ್ಯ ರಾಜಕಾರಣಕ್ಕೆ ಬ್ರೇಕ್ ಹಾಕಿದ ಪ್ರಧಾನಿ‌ ಮೋದಿ| ರಾಜ್ಯ ಬಿಜೆಪಿಯಲ್ಲಿ ತಣ್ಣನೆಯ ಕಂಪನ| “ನಮ್ಗೆ ಟಿಕೆಟ್ ತಪ್ಪುತ್ತಾ ಗುರೂ?”

ಸಮಗ್ರ ನ್ಯೂಸ್: ರಾಷ್ಟ್ರೀಯ ಪಕ್ಷಗಳಲ್ಲಿ ಕುಟುಂಬ ರಾಜಕಾರಣ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಹೇಳಿಕೆ ಬೆನ್ನಲ್ಲೆ ರಾಜ್ಯ ಕೇಸರಿ ಪಡೆಯಲ್ಲಿ ತಣ್ಣನೆಯ ನಡುಕ ಶುರುವಾಗಿದೆ. ಪಕ್ಷದಲ್ಲಿ ವಂಶ ರಾಜಕಾರಣಕ್ಕೆ ಅವಕಾಶವಿಲ್ಲವೆಂದು ಸ್ಪಷ್ಟ ಸಂದೇಶ ರವಾನಿಸಿರುವ ಪ್ರಧಾನಿ ಮೋದಿ, ಸಂಸದೀಯ ಪಕ್ಷದ ಸಭೆಯಲ್ಲಿ ಕಠಿಣ ಸಂದೇಶ ರವಾನಿಸಿದ್ದಾರೆ. ಹೀಗಾಗಿ ರಾಜ್ಯ ಕೇಸರಿ ಪಡೆಯಲ್ಲಿ ಆತಂಕ ಶುರುವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚಿಗೆ ನಡೆದ ಸಂಸದೀಯ ಪಕ್ಷದ ಸಭೆಯಲ್ಲಿ ಪಕ್ಷದಲ್ಲಿ ವಂಶವಾದಕ್ಕೆ ಅವಕಾಶವಿಲ್ಲವೆಂದು

ವಂಶ ಪಾರಂಪರ್ಯ ರಾಜಕಾರಣಕ್ಕೆ ಬ್ರೇಕ್ ಹಾಕಿದ ಪ್ರಧಾನಿ‌ ಮೋದಿ| ರಾಜ್ಯ ಬಿಜೆಪಿಯಲ್ಲಿ ತಣ್ಣನೆಯ ಕಂಪನ| “ನಮ್ಗೆ ಟಿಕೆಟ್ ತಪ್ಪುತ್ತಾ ಗುರೂ?” Read More »

ಕಾಂಗ್ರೆಸ್ ಕೈ ಹಿಡಿದ ಕಲಾಸಾಮ್ರಾಟ್ ಎಸ್.‌ನಾರಾಯಣ್

ಸಮಗ್ರ ನ್ಯೂಸ್ ಡೆಸ್ಕ್: ಬೆಂಗಳೂರು ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ, ನಟನಾಗಿ ಗುರುತಿಸಿಕೊಂಡಿರುವ ಎಸ್​ ನಾರಾಯಣ್ ರಾಜಕೀಯಕ್ಕೆ ಧುಮುಕಿದ್ದಾರೆ. ಇಂದು ಅವರು ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಎಸ್​ ನಾರಾಯಣ್​ ಅಧಿಕೃತವಾಗಿ ಕೈ ಹಿಡಿದಿದ್ದಾರೆ. ಇದೇ ವೇಳೆ ರಾಜ್ಯ ಶಿಕ್ಷಕರ ಸಂಘದ ಅಧ್ಯಕ್ಣ ತಿಮ್ಮಯ್ಯ ಪುರ್ಲೆ ಸೇರಿದಂತೆ ಹಲವು ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆದರು.

ಕಾಂಗ್ರೆಸ್ ಕೈ ಹಿಡಿದ ಕಲಾಸಾಮ್ರಾಟ್ ಎಸ್.‌ನಾರಾಯಣ್ Read More »