ಹಿಜಾಬ್ ಕುರಿತು ಕೋರ್ಟ್ ಮೆಟ್ಟಿಲೇರಿದವರು ಭಯೋತ್ಪಾದಕರಂತೆ! – ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಮುಖಂಡ
ಸಮಗ್ರ ನ್ಯೂಸ್: ಶಾಲಾ-ಕಾಲೇಜ್ ಗಳಲ್ಲಿ ಹಿಜಾಬ್ ಧರಿಸಲು ಅನುಮತಿ ನೀಡುವಂತೆ ಕೋರಿ ಕೋರ್ಟ್ ಮೆಟ್ಟಿಲೇರಿರುವ ವಿದ್ಯಾರ್ಥಿನಿಯರು ಉಗ್ರ ಸಂಘಟನೆಯ ಸದಸ್ಯರು ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ ಅವರು ಆರೋಪಿಸಿದ್ದಾರೆ. ಹೈಕೋರ್ಟ್ ತೀರ್ಪಿನ ವಿರುದ್ಧ ಮಾತನಾಡಿದ ಆರು ವಿದ್ಯಾರ್ಥಿನಿಯರು ದೇಶ ವಿರೋಧಿಗಳು ಮತ್ತು ಭಯೋತ್ಪಾದಕ ಸಂಘಟನೆಯ ಸದಸ್ಯರು ಎಂದು ಉಡುಪಿ ಸರ್ಕಾರಿ ಮಹಿಳಾ ಪದವಿ ಪೂರ್ವ ಕಾಲೇಜಿನ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಯಶ್ಪಾಲ್ ಸುವರ್ಣ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. […]