ರಾಜಕೀಯ

ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮೊಹಮ್ಮದ್ ನಲಪಾಡ್ ಅಧಿಕಾರ ಸ್ವೀಕಾರ

ಸಮಗ್ರ ನ್ಯೂಸ್ ಡೆಸ್ಕ್: ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮೊಹಮ್ಮದ್‌ ನಲಪಾಡ್‌ ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ. ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಆಯ್ಕೆಯಲ್ಲಿ ಈ ಹಿಂದೆ ಗೊಂದಲ ಉಂಟಾಗಿದ್ದು, ಯುವ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ನಡೆದಿದ್ದ ಚುನಾವಣೆಯಲ್ಲಿ ಹೆಚ್ಚು ಮತಗಳಿಸಿದ್ದ ಮೊಹಮ್ಮದ್‌ ನಲಪಾಡ್‌ ಅವರನ್ನು ಅನರ್ಹಗೊಳಿಸಿ, ನಂತರದ ಸ್ಥಾನಗಳಿಸಿದ್ದ ರಕ್ಷಾ ರಾಮಯ್ಯ ಅವರನ್ನು ಅಧ್ಯಕ್ಷರನ್ನಾಗಿ ಘೋಷಿಸಲಾಗಿತ್ತು. ಇನ್ನು ಕಾಂಗ್ರೆಸ್‌ನ ಹಿರಿಯ ನಾಯಕರು ಸಂಧಾನ ನಡೆಸಿ ರಕ್ಷಾ ರಾಮಯ್ಯ ಅವರನ್ನು ಅಧ್ಯಕ್ಷರನ್ನಾಗಿ ಘೋಷಿಸಿ ಅವರ ಅಧಿಕಾರದ ಅವಧಿ […]

ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮೊಹಮ್ಮದ್ ನಲಪಾಡ್ ಅಧಿಕಾರ ಸ್ವೀಕಾರ Read More »

ವಿಧಾನಸಭೆ ಕಾಂಗ್ರೆಸ್ ಶಾಸಕಾಂಗ ಉಪನಾಯಕರಾಗಿ ಯು.ಟಿ ಖಾದರ್ ನೇಮಕ

ಸಮಗ್ರ ನ್ಯೂಸ್ ಡೆಸ್ಕ್: ಕಾಂಗ್ರೆಸ್ ಹಿರಿಯ ನಾಯಕ ಯುಟಿ ಖಾದರ್ ಅವರನ್ನು ವಿಧಾನಸಭೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪ ನಾಯಕರಾಗಿ ನೇಮಕ ಮಾಡಲಾಗಿದೆ. ಈ ಕುರಿತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಅಧಿಕೃತ ಘೋಷಣೆ ಮಾಡಿದ್ದಾರೆ. ವಿಧಾನ ಪರಿಷತ್‌ನಲ್ಲಿ ವಿಪಕ್ಷ ನಾಯಕ ಸ್ಥಾನ ಮುಸ್ಲಿಂ ಸಮುದಾಯದ ನಾಯಕನಿಗೆ ತಪ್ಪಿದ ಹಿನ್ನೆಲೆ ವಿಧಾನ ಸಭೆಯಲ್ಲಿ ವಿಪಕ್ಷ ಉಪನಾಯಕನ ಸ್ಥಾನ ಮುಸ್ಲಿಂ ಸಮುದಾಯಕ್ಕೆ ಕಾಂಗ್ರೆಸ್ ಹೈಕಮಾಂಡ್ ನೀಡಿದೆ ಎಂದು ತಿಳಿದುಬಂದಿದೆ. ಯು.ಟಿ ಖಾದರ್ ಮಂಗಳೂರು ಕ್ಷೇತ್ರದ ಶಾಸಕರಾಗಿದ್ದಾರೆ. 2018ರ

ವಿಧಾನಸಭೆ ಕಾಂಗ್ರೆಸ್ ಶಾಸಕಾಂಗ ಉಪನಾಯಕರಾಗಿ ಯು.ಟಿ ಖಾದರ್ ನೇಮಕ Read More »

ಫೆ.14ರಿಂದ ರಾಜ್ಯ ಬಜೆಟ್ ಅಧಿವೇಶನ

ಬೆಂಗಳೂರು: ಫೆಬ್ರವರಿ 14ರಿಂದ ವಿಧಾನಮಂಡಲ ಜಂಟಿ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ, ಬಿಬಿಎಂಪಿ ಚುನಾವಣೆ ಕುರಿತು ಸುದೀರ್ಘ ಚರ್ಚೆ ನಡೆದಿದೆ. ಕೋವಿಡ್ ನಿರ್ವಹಣೆ ಕುರಿತಾಗಿಯೂ ಹಲವು ಸಲಹೆ ಸೂಚನೆಗಳು ಬಂದಿವೆ. ಸಂಪುಟ ಸಭೆಯಲ್ಲಿ ಹಲವು ವಿಚಾರಗಳು ಚರ್ಚೆಯಾಗಿವೆ ಎಂದರು. ಫೆಬ್ರವರಿ 14ರಿಂದ ಜಂಟಿ ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ. ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡಿಸುತ್ತೇವೆ. ಸಂಪುಟ ಸಭೆಯಲ್ಲಿ ಆದ ತೀರ್ಮಾನಗಳ

ಫೆ.14ರಿಂದ ರಾಜ್ಯ ಬಜೆಟ್ ಅಧಿವೇಶನ Read More »

ಕಾಂಗ್ರೆಸ್ ಗೆ ಗುಡ್ ಬೈ ಹೇಳಲು ರೆಡಿಯಾದ ಎಂಎಲ್ ಸಿ ಇಬ್ರಾಹಿಂ|

ಬೆಂಗಳೂರು : ಸಿದ್ದರಾಮಯ್ಯಗಾಗಿ ದೇವೇಗೌಡರನ್ನು ಬಿಟ್ಟಿದ್ದೇವು. ಜೈಲಿನಲ್ಲಿದ್ದು ಕಟ್ಟಿದ್ದ ಪಕ್ಷ ಜೆಡಿಎಸ್ ಬಿಟ್ಟಿದ್ದೇವು, ಕಾಂಗ್ರೆಸ್ ಗೂ ನಮಗೂ ಇನ್ನೂ ಮುಗಿದ ಅಧ್ಯಾಯ ಎಂದು ಎಂ.ಎಲ್.ಸಿ ಸಿ.ಎಂ ಇಬ್ರಾಹಿಂ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗಾಗಿ ದೇವೇಗೌಡರನ್ನು ಬಿಟ್ಟಿದ್ದೇವು.ಜೈಲಿನಲ್ಲಿದ್ದು ಕಟ್ಟಿದ್ದ ಪಕ್ಷ ಜೆಡಿಎಸ್ ಬಿಟ್ಟಿದ್ದೇವು, ಒಂದೇ ಬಾರಿಗೆ ಎಲ್ಲ ವಿಚಾರಗಳನ್ನು ಹೇಳುವುದಿಲ್ಲ. ಕಂತು ಕಂತಾಗಿ ಎಲ್ಲಾ ವಿಚಾರಗಳನ್ನು ಹೇಳುತ್ತೇನೆ. ಶೀಘ್ರದಲ್ಲೇ ನನ್ನ ನಿರ್ಧಾರವನ್ನು ತಿಳಿಸುತ್ತೇನೆ. ಕಾಂಗ್ರೆಸ್ ಗೂ ನಮಗೂ ಇನ್ನು ಮುಗಿದ ಅಧ್ಯಾಯ ಎಂದು ಹೇಳಿದ್ದಾರೆ. ಈ ಮೂಲಕ

ಕಾಂಗ್ರೆಸ್ ಗೆ ಗುಡ್ ಬೈ ಹೇಳಲು ರೆಡಿಯಾದ ಎಂಎಲ್ ಸಿ ಇಬ್ರಾಹಿಂ| Read More »

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ -ದ.ಕ. ಜಿಲ್ಲೆಗೆ ಸುನೀಲ್ ಕುಮಾರ್ – ಉಡುಪಿಗೆ ಎಸ್. ಅಂಗಾರ

ಬೆಂಗಳೂರು: ಕಳೆದ ವರ್ಷ ಸೆಪ್ಟೆಂಬರ್​ನಲ್ಲಿ ಹೊರಡಿಸಲಾಗಿದ್ದ ಆದೇಶವನ್ನು ಮಾರ್ಪಡಿಸಿ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು ಮತ್ತು ಸಚಿವರುಗಳಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಈ ಕೆಳಕಂಡ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ, ಕರ್ನಾಟಕ ಸರ್ಕಾರದ ಸಚಿವಾಲಯ ಆದೇಶ ಹೊರಡಿಸಿದೆ. ಈ ಪೈಕಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಜಿಲ್ಲೆಗೆ ಸಚಿವ ಸುನೀಲ್ ಕುಮಾರ್, ಉಡುಪಿ ಜಿಲ್ಲೆಗೆ ಎಸ್. ಅಂಗಾರ ಕೋಟಾ ಶ್ರೀನಿವಾಸ ಪೂಜಾರಿ ಅವರು ಉತ್ತರ ಕನ್ನಡ ಜಿಲ್ಲೆಗೆ ಉಸ್ತುವಾರಿ ಸಚಿವರಾಗಿ ನೇಮಕಗೊಂಡಿದ್ದಾರೆ. ಬಸವರಾಜ ಬೊಮ್ಮಾಯಿ

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ -ದ.ಕ. ಜಿಲ್ಲೆಗೆ ಸುನೀಲ್ ಕುಮಾರ್ – ಉಡುಪಿಗೆ ಎಸ್. ಅಂಗಾರ Read More »

ಗರಿಗೆದರಿದ ಸಂಪುಟ ವಿಸ್ತರಣೆ| ಅರ್ಹತೆಯ ಪ್ರಶ್ನೆ ಮಾಡಿದ ರೇಣುಕಾಚಾರ್ಯ

ದಾವಣಗೆರೆ: ರಾಜ್ಯದಲ್ಲಿ ಸಚಿವ ಸ್ಥಾನಕ್ಕಾಗಿ ಸಂಪುಟ ವಿಸ್ತರಣೆ ಗರಿಗೆದರಿದೆ. ಇದರ ಬೆನ್ನಲ್ಲೇ ಸಚಿವಸ್ಥಾನದ ಆಕಾಂಕ್ಷಿಗಳು ತೆರೆ ಮರೆಯಲ್ಲಿ ಕೆಲವರು ಕಸರತ್ತು ನಡೆಸುತ್ತಿದ್ದರೆ, ಮತ್ತೆ ಕೆಲವರು ನೇರವಾಗಿಯೇ ಸಿಡಿದೆದ್ದಿದ್ದಾರೆ. ನನಗೇನು ಸಚಿವನಾಗೋ ಅರ್ಹತೆ ಇಲ್ಲವೇ.? ಎಂಬುದಾಗಿ ಸಚಿವ ಸ್ಥಾನಕ್ಕಾಗಿ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಸಿಡಿದೆದ್ದಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಎಂ.ಪಿ.ರೇಣುಕಾಚಾರ್ಯ, ಬಿಜೆಪಿ ಸರ್ಕಾರ ಅಸ್ಥತ್ವಕ್ಕೆ ಬರಲು ನಾನು ಮತ್ತು ಬಸವನಗೌಡ ಪಾಟೀಲ್ ಯತ್ನಾಳ್ ಪ್ರಯತ್ನಿಸಿದ್ದೇವೆ. ಮೈತ್ರಿ ಸರ್ಕಾರದ ಪತನದ ಹಿಂದೆ ನಮ್ಮ ಪ್ರಯತ್ನ ಕೂಡ ಇದೆ ಎಂದಿದ್ದಾರೆ.

ಗರಿಗೆದರಿದ ಸಂಪುಟ ವಿಸ್ತರಣೆ| ಅರ್ಹತೆಯ ಪ್ರಶ್ನೆ ಮಾಡಿದ ರೇಣುಕಾಚಾರ್ಯ Read More »

ಲಾಕ್ ಡೌನ್ ಕರ್ಪ್ಯೂ ವಿರುದ್ದ ಕೆರಳಿದ ಸಿಂಹ| ವ್ಯಾಕ್ಸಿನ್ ಕೊಟ್ಟ ಮೇಲೆ ನಿರ್ಬಂಧ ಏಕೆಂದು ಪ್ರಶ್ನಿಸಿದ ಮೈಸೂರು ಸಂಸದ

ಮೈಸೂರು : ಲಾಕ್ ಡೌನ್, ಕರ್ಫ್ಯೂ ವಿಧಿಸುವುದಾದಾಗಿದ್ದರೆ ವ್ಯಾಕ್ಸಿನ್ ಯಾಕೆ ಬೇಕಿತ್ತು ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ಸರಕಾರವನ್ನು ಪ್ರಶ್ನಿಸಿ ಬುಧವಾರ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚ ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿದೆ, ಅವುಗಳಿಗೆ ನಿರ್ಬಂಧವಿಲ್ಲ, ಹೀಗಿರುವಾಗ ಕರ್ನಾಟಕದಲ್ಲಿ ಯಾಕೆ ಕರ್ಫ್ಯೂ, ಲಾಕ್ ಡೌನ್ ಅಂತಾ ಜನರನ್ನು ಮತ್ತೆ ಕಂಗಾಲು ಮಾಡುತ್ತಿದ್ದೀರಿ? ಜನರನ್ನು ಭೀತಿಯಲ್ಲಿ ಇಡುವುದನ್ನು ಮೊದಲು ಸರಕಾರ ನಿಲ್ಲಿಸಲಿ ಎಂದರು. ಕರ್ಫ್ಯೂ, ಲಾಕ್ ಡೌನ್ ನಿಂದ ಜನರಿಗೆ ಬಹಳ ತೊಂದರೆಯಾಗಿದೆ. ಜನರ

ಲಾಕ್ ಡೌನ್ ಕರ್ಪ್ಯೂ ವಿರುದ್ದ ಕೆರಳಿದ ಸಿಂಹ| ವ್ಯಾಕ್ಸಿನ್ ಕೊಟ್ಟ ಮೇಲೆ ನಿರ್ಬಂಧ ಏಕೆಂದು ಪ್ರಶ್ನಿಸಿದ ಮೈಸೂರು ಸಂಸದ Read More »

ಸಿಎಂ ಮನೆಮುಂದೆ ಏಕಾಂಗಿ ಧರಣಿ ಕುಳಿತ ಎಚ್.ಡಿ ರೇವಣ್ಣ

ಬೆಂಗಳೂರು: ಹೊಳೆನರಸೀಪುರ ಸರ್ಕಾರಿ ಮಹಿಳಾ ಗೃಹ ವಿಜ್ಞಾನ ಕಾಲೇಜಿನಲ್ಲಿ ಎಂಎಸ್‍ಸಿ ಸೈಕಾಲಜಿ ಮತ್ತು ಫುಡ್ ಮತ್ತು ನ್ಯೂಟ್ರೀಷಿಯನ್ ಕೋರ್ಸ್‍ಗಳ ಆರಂಭಕ್ಕೆ ಆಗ್ರಹಿಸಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಇಂದು ಏಕಾಂಗಿ ಧರಣಿ ನಡೆಸಿದರು. ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾ ಆವರಣದಲ್ಲಿ ಧರಣಿ ನಡೆಸಿ 2022-23ನೆ ಶೈಕ್ಷಣಿಕ ಸಾಲಿನಲ್ಲಿ ಎರಡು ಹೊಸ ಕೋರ್ಸ್‍ಗಳ ಪ್ರಾರಂಭಕ್ಕೆ ಸರ್ಕಾರ ಅನುಮತಿ ನೀಡಬೇಕೆಂದು ಒತ್ತಾಯಿಸಿದರು. ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಎರಡೂ ಕೋರ್ಸ್‍ಗಳ ಉಪನ್ಯಾಸಕರಿಗೆ ತಗುಲುವ ವೇತನ ವೆಚ್ಚವನ್ನು ತಾತ್ಕಾಲಿಕವಾಗಿ ಸಿಡಿಸಿ ಸಮಿತಿ ಅಥವಾ

ಸಿಎಂ ಮನೆಮುಂದೆ ಏಕಾಂಗಿ ಧರಣಿ ಕುಳಿತ ಎಚ್.ಡಿ ರೇವಣ್ಣ Read More »

ಪಂಜಾಬ್ ವಿಧಾನಸಭಾ ಚುನಾವಣೆ ಮುಂದೂಡಿಕೆ| ಫೆ.14 ರಂದು ನಡೆಯಬೇಕಿದ್ದ‌ ಮತದಾನ|

ನವದೆಹಲಿ: ಪಂಜಾಬ್ ವಿಧಾನಸಭಾ ಚುನಾವಣಾ ದಿನಾಂಕ ಮುಂದೂಡಲಾಗಿದ್ದು, ಫೆ.20ರಂದು ಮತದಾನ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ. ಫೆ.14ರಂದು ನಡೆಯಬೇಕಿದ್ದ ವಿಧಾನಸಭಾ ಚುನಾವಣೆ ದಿನಾಂಕವನ್ನು ಮುಂದೂಡುವಂತೆ ಪಂಜಾಬ್ ಆಡಳಿತ ಹಾಗೂ ವಿಪಕ್ಷಗಳು ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದವು. ಮನವಿಗೆ ಸ್ಪಂದಿಸಿದ ಆಯೋಗ ಇದೀಗ ಫೆ.14 ರ ಬದಲು ಫೆ.20ಕ್ಕೆ ಮುಂದೂಡಿದೆ. ಚುನಾವಣೆ ಮುಂದೂಡುವಂತೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಮುಖ್ಯಚುನಾವಣಾ ಆಯುಕ್ತರಿಗೆ ಪತ್ರದ ಮೂಲಕ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಚುನಾವಣೆ ದಿನಾಂಕ ಮುಂದೂಡಲಾಗಿದ್ದು, ಪಂಜಾಬ್

ಪಂಜಾಬ್ ವಿಧಾನಸಭಾ ಚುನಾವಣೆ ಮುಂದೂಡಿಕೆ| ಫೆ.14 ರಂದು ನಡೆಯಬೇಕಿದ್ದ‌ ಮತದಾನ| Read More »

ಹೈಕೋರ್ಟ್ ಆದೇಶಿಸಿದರೆ ಪಾದಯಾತ್ರೆ ಕೈಬಿಡಲು ಸಿದ್ಧ – ಸಿದ್ದರಾಮಯ್ಯ

ರಾಮನಗರ: ಹೈಕೋರ್ಟ್ ಆದೇಶದ ವಿರುದ್ಧ ಕಾಂಗ್ರೆಸ್ ನಡೆದುಕೊಳ್ಳುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಹೈಕೋರ್ಟ್ ಛೀಮಾರಿ ಹಾಕಿದ ಬೆನ್ನಲ್ಲಿಯೇ ಅವರು ಈ ಕುರಿತು ಮಾತನಾಡಿದ್ದಾರೆ. ಪಾದಯಾತ್ರೆ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಕಾನೂನಿಗೆ ತಲೆ ಬಾಗುತ್ತೇವೆ. ಹೈಕೋರ್ಟ್ ಪಾದಯಾತ್ರೆ ನಿಲ್ಲಿಸಲು ಸೂಚಿಸಿದರೆ, ನಾವು ಕೋರ್ಟ್ ಗೆ ತಲೆ ಬಾಗುತ್ತೇವೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಯಾವಾಗಲೂ ಕಾನೂನನ್ನು ಗೌರವಿಸುತ್ತದೆ. ಆದರೆ, ಬಿಜೆಪಿಗೆ ಕಾನೂನಿನ ಬಗ್ಗೆ ಗೌರವವಿಲ್ಲ. ಕೋವಿಡ್ ನಿಯಮವನ್ನು ಉಲ್ಲಂಘಿಸಿದ್ದು, ಬಿಜೆಪಿಯೇ ಹೊರತು, ಕಾಂಗ್ರೆಸ್ ಅಲ್ಲ.

ಹೈಕೋರ್ಟ್ ಆದೇಶಿಸಿದರೆ ಪಾದಯಾತ್ರೆ ಕೈಬಿಡಲು ಸಿದ್ಧ – ಸಿದ್ದರಾಮಯ್ಯ Read More »