“ಈ ರಸ್ತೆಗಳು ಹೇಮಮಾಲಿನಿ ಕೆನ್ನೆಗಳಂತೆ ನುಣುಪು” – ಸ್ವಕ್ಷೇತ್ರವನ್ನು ಹೊಗಳುವ ಭರದಲ್ಲಿ ಎಡವಟ್ಟು ಮಾಡಿಕೊಂಡ ಸಚಿವ| ಕೆರಳಿದ ಮಹಿಳಾ ಆಯೋಗ|
ಮುಂಬೈ: ಮಹಾರಾಷ್ಟ್ರ ಸಚಿವ ಹಾಗೂ ಶಿವಸೇನೆಯ ಹಿರಿಯ ನಾಯಕ ಗುಲಾಬ್ ರಾವ್ ಪಾಟೀಲ್, ತಮ್ಮ ಕ್ಷೇತ್ರದ ರಸ್ತೆಗಳನ್ನು ಖ್ಯಾತ ನಟಿ ಹೇಮಾ ಮಾಲಿನಿ ಅವರ ಕೆನ್ನೆಗೆ ಹೋಲಿಕೆ ಮಾಡಿ ಎಡವಟ್ಟು ಮಾಡಿಕೊಂಡಿದ್ದಾರೆ. ಈ ರೀತಿ ಹೇಳಿಕೆ ನೀಡಿರುವುದಕ್ಕೆ ರಾಜ್ಯ ಮಹಿಳಾ ಆಯೋಗ ಸಚಿವರಿಂದ ಕ್ಷಮೆಗೆ ಆಗ್ರಹಿಸಿದೆ. ಗುಲಾಬ್ ರಾವ್ ಪಾಟೀಲ್ ಬೋಧ್ವಾಡ್ ನಗರ್ ಪಂಚಾಯತ್ ಚುನಾವಣೆಗೆ ಸಂಬಂಧಿಸಿದ ಸಭೆಯೊಂದರಲ್ಲಿ ಮಾತನಾಡುತ್ತಾ, ತಮ್ಮ ಕ್ಷೇತ್ರದ ರಸ್ತೆಗಳನ್ನು ಹೇಮಮಾಲಿನಿ ಅವರ ಕೆನ್ನೆಗೆ ಹೋಲಿಕೆ ಮಾಡಿದ್ದ ವಿಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ […]










