ರಾಜಕೀಯ

ಸರ್ಕಾರ ಬಿದ್ರೆ ಬೀಳಲಿ ಜಾತಿಗಣತಿ ವರದಿ ಜಾರಿ ಮಾಡಲೇಬೇಕು: ಕಾಂಗ್ರೆಸ್ MLC ಬಿ.ಕೆ ಹರಿಪ್ರಸಾದ್ ಸ್ಫೋಟಕ ಹೇಳಿಕೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಜಾತಿ ಜನಗಣತಿ ವರದಿ ಜಾರಿ ಜಟಾಪಟಿ ಇದೀಗ ಪ್ರಾರಂಭವಾದಂತೆ ಕಾಣುತ್ತಿದೆ. ಹೌದು ಸರ್ಕಾರ ಬಿದ್ದರೆ ಬೀಳಲಿ. ಕರ್ನಾಟಕದಲ್ಲಿ ಜಾತಿಗಣತಿ ಜಾರಿ ಮಾಡಲೇಬೇಕು ಎಂದು ಕಾಂಗ್ರೆಸ್ ಎಂಎಲ್ಸಿ ಬಿ.ಕೆ ಹರಿಪ್ರಸಾದ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಜಾತಿಗಣತಿ ಜಾರಿ ವಿಚಾರ ಕಾಂಗ್ರೆಸ್ ಪ್ರಣಾಳಿಕೆಯಲ್ಲೇ ಇದೆ. ಆದರೆ ಜಾತಿಗಣತಿ ಜಾರಿಗೆ ಸರ್ಕಾರ ಯಾಕೆ ಯೋಚನೆ ಮಾಡುತ್ತಿದೆ? ಮೀನಾಮೇಷ ಎಣಿಸದೆ ಮೊದಲು ಜಾತಿಗಣತಿ ಜಾರಿ ಮಾಡಲಿ ಎಂದು ಆಗ್ರಹಿಸಿದರು. ಇಷ್ಟೇ ಅಲ್ಲದೆ ಜಾತಿಗಣತಿ ಜಾರಿಯಿಂದ ಎಲ್ಲ ಸಮುದಾಯಗಳಿಗೆ ಅನುಕೂಲ […]

ಸರ್ಕಾರ ಬಿದ್ರೆ ಬೀಳಲಿ ಜಾತಿಗಣತಿ ವರದಿ ಜಾರಿ ಮಾಡಲೇಬೇಕು: ಕಾಂಗ್ರೆಸ್ MLC ಬಿ.ಕೆ ಹರಿಪ್ರಸಾದ್ ಸ್ಫೋಟಕ ಹೇಳಿಕೆ Read More »

ಹರ್ಯಾಣ: ವಿಧಾನಸಭಾ ಚುನಾವಣಾ ಮತದಾನ

ಸಮಗ್ರ ನ್ಯೂಸ್:ಹರ್ಯಾಣ ವಿಧಾನಸಭಾ ಚುನಾವಣೆ ಮತದಾನ ಪ್ರಕ್ರಿಯೆ ಅ.05 ರಂದು ಬೆಳಗ್ಗೆ ಆರಂಭವಾಗಿದ್ದು, ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ, ಕಾಂಗ್ರೆಸ್‌ನ ಭೂಪಿಂದ‌ರ್ ಸಿಂಗ್ ಹೂಡಾ ಮತ್ತು ಕುಸ್ತಿಪಟು ವಿನೇಶ್ ಫೋಗಟ್, ಬಿಜೆಪಿಯ ದುಶ್ಯಂತ್ ಚೌಟಾಲಾ ಸೇರಿ 1031 ಮಂದಿ ಅಭ್ಯರ್ಥಿಗ ಭವಿಷ್ಯ ನಿರ್ಧಾರವಾಗಲಿದೆ. 2019ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 40, ಕಾಂಗ್ರೆಸ್ ಮತ್ತು ಜೆಜೆಪಿ 10 ಸ್ಥಾನ ಗೆದ್ದಿದ್ದವು. ಬಿಜೆಪಿಗೆ ಬಹುಮತ ಬಾರದ ಕಾರಣ ಜೆಜೆಪಿ ಬೆಂಬಲ ನೀಡಿತ್ತು. ಈ ಸಲ ಬಿಜೆಪಿ ಹಾಗೂ ಜೆಜೆಪಿ ಮೈತ್ರಿ

ಹರ್ಯಾಣ: ವಿಧಾನಸಭಾ ಚುನಾವಣಾ ಮತದಾನ Read More »

ಕೇಂದ್ರ ಸಚಿವ ಹೆಚ್‌.ಡಿ ಕುಮಾರ ಸ್ವಾಮಿ ವಿರುದ್ಧ ಎಫ್ ಐ ಆರ್ 50 ಕೋಟಿ ರೂ. ಹಣಕ್ಕೆ ಬೇಡಿಕೆ ಆರೋಪ..!

ಸಮಗ್ರ ನ್ಯೂಸ್: ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಾಗಿದೆ.50 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಉದ್ಯಮಿ ಹಾಗೂ ಜೆಡಿಎಸ್‌ ಸೋಶಿಯಲ್ ಮೀಡಿಯಾ ಉಪಾಧ್ಯಕ್ಷ ವಿಜಯ್ ಟಾಟಾ ಎಂಬುವರು ದೂರು ನೀಡಿದ್ದರು. ಚನ್ನಪಟ್ಟಣ ಉಪಚುನಾವಣೆಗೆ ನಿಖಿಲ್ ಕುಮಾರಸ್ವಾಮಿ ಟಿಕೆಟ್ ಫಿಕ್ಸ್ ಆಗಿದೆ. ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದ್ದು 50 ಕೋಟಿ ರೂ. ಹೊಂದಿಸಿಕೊಡಬೇಕು. ಹಣ ಹೊಂದಿಸಿ ಕೊಡದಿದ್ದರೆ ನಾನು ಏನು ಮಾಡುತ್ತೇನೋ ಗೊತ್ತಿಲ್ಲ.ನೀನು ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮ ನಡೆಸುವುದಷ್ಟೇ

ಕೇಂದ್ರ ಸಚಿವ ಹೆಚ್‌.ಡಿ ಕುಮಾರ ಸ್ವಾಮಿ ವಿರುದ್ಧ ಎಫ್ ಐ ಆರ್ 50 ಕೋಟಿ ರೂ. ಹಣಕ್ಕೆ ಬೇಡಿಕೆ ಆರೋಪ..! Read More »

ಅಶೋಕ್ ವಿರುದ್ಧ ನೂರಾರು ಕೋಟಿ ಭೂ ಅಕ್ರಮ ಆರೋಪ.. ದಾಖಲೆ ಬಿಡುಗಡೆ ಮಾಡಿದ ಕಾಂಗ್ರೆಸ್

ಸಮಗ್ರ ನ್ಯೂಸ್: ವಿಪಕ್ಷ ನಾಯಕ ಆರ್.ಅಶೋಕ್ ವಿರುದ್ಧದ ನೂರಾರು ಕೋಟಿ ರೂ. ಬೆಲೆಬಾಳುವ ಜಮೀನಿನ ಹಗರಣದ ದಾಖಲೆಯನ್ನು ಕಾಂಗ್ರೆಸ್ ಸಚಿವರು ಇದೀಗ ಬಿಡುಗಡೆ ಮಾಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಮತ್ತು ಸಚಿವ ಹೆಚ್.ಕೆ ಪಾಟೀಲ್ ರಿಂದ ದಾಖಲೆ ಬಿಡುಗಡೆ ಮಾಡಲಾಗಿದೆ. ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಗೃಹ ಸಚಿವ ಡಾ. ಜಿ.ಪರಮೇಶ್ವರ್, ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಕಾಲದಲ್ಲಿ ಏನಾಗಿತ್ತು ಎಂಬುದನ್ನು ನಿಮ್ಮ ಮುಂದೆ ತರುತ್ತಿದ್ದೇವೆ. ಲೊಟ್ಟೆಗೊಲ್ಲಹಳ್ಳಿ ನೂರಾರು

ಅಶೋಕ್ ವಿರುದ್ಧ ನೂರಾರು ಕೋಟಿ ಭೂ ಅಕ್ರಮ ಆರೋಪ.. ದಾಖಲೆ ಬಿಡುಗಡೆ ಮಾಡಿದ ಕಾಂಗ್ರೆಸ್ Read More »

ಸಿದ್ದರಾಮಯ್ಯ ಶರ್ಟ್ ಗೆ ತಗುಲಿದ ಬೆಂಕಿಯ ಶಾಖ

ಸಮಗ್ರ ನ್ಯೂಸ್: ಸಿಎಂ ಸಿದ್ದದರಾಮಯ್ಯ ಅವರು ಕಿತ್ತೂರು ಉತ್ಸವಕ್ಕೆ ಚಾಲನೆ ನೀಡಿದ ವೇಳೆ ಅವಘಡವೊಂದು ಸಂಭವಿಸಿದ್ದು, ಸಿಎಂ ಸಿದ್ದರಾಮಯ್ಯ ಶರ್ಟ್ ಗೆ ಉತ್ಸವ ಜ್ಯೋತಿಯ ಬೆಂಕಿಯ ಶಾಖ ತಗುಲಿದೆ. ಸಿಎಂ ಸಿದ್ದರಾಮಯ್ಯ ಅವರು ಜ್ಯೋತಿ ಬೆಳಗಿಸುವ ವೇಳೆ ಶರ್ಟ್ ಗೆ ಬೆಂಕಿಯ ಶಾಖ ತಗುಲಿದೆ.ಕೂಡಲೇ ಗನ್ ಮ್ಯಾನ್ ಸಿಎಂ ಸಿದ್ದರಾಮಯ್ಯ ನವರನ್ನು ಸರಿಸಿದ್ದು, ಗನ್ ಮ್ಯಾನ್ ಸಮಯ ಪ್ರಜ್ಞೆಯಿಂದ ಸಿಎಂ ಸಿದ್ದರಾಮಯ್ಯನವರು ಪಾರಾಗಿದ್ಧರೆ.

ಸಿದ್ದರಾಮಯ್ಯ ಶರ್ಟ್ ಗೆ ತಗುಲಿದ ಬೆಂಕಿಯ ಶಾಖ Read More »

ವಿಧಾನ ಪರಿಷತ್ ಉಪಚುನಾವಣೆ| ದ.ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಬೊಟ್ಯಾಡಿ

ಸಮಗ್ರ ನ್ಯೂಸ್: : ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು ಆಯ್ಕೆಯಾಗಿದ್ದಾರೆ. ಕಿಶೋರ್ ಕುಮಾರ್ ಪುತ್ತೂರು ಅವರನ್ನು ಅಭ್ಯರ್ಥಿಯಾಗಿ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಘೋಷಣೆ ಮಾಡಿದೆ. ಪುತ್ತೂರಿನ ಸರ್ವೆಯ ಬೊಟ್ಯಾಡಿಯ ನಿವಾಸಿಯಾದ ಕಿಶೋರ್ ಕುಮಾರ್ ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕಿಶೋರ್ ಕುಮಾರ್ ಕಳೆದ ವಿಧಾನ ಸಭಾ ಚುನಾವಣೆಯ ಸಂದರ್ಭ ಪುತ್ತೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಈ ಬಾರಿ ವಿಧಾನ

ವಿಧಾನ ಪರಿಷತ್ ಉಪಚುನಾವಣೆ| ದ.ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಬೊಟ್ಯಾಡಿ Read More »

ಜನಾರ್ದನ ರೆಡ್ಡಿ ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂಕೋರ್ಟ್‌ ಅನುಮತಿ

ಸಮಗ್ರ ನ್ಯೂಸ್: 14 ವರ್ಷಗಳಿಂದ ಬಳ್ಳಾರಿಯಿಂದ ದೂರವಾಗಿದ್ದ ಮಾಜಿ ಸಚಿವ, ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅವರಿಗೆ ಕೊನೆಗೂ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಬಳ್ಳಾರಿ ಸೇರಿದಂತೆ ಆಂಧ್ರ ಪ್ರದೇಶದ ಅನಂತಪುರ ಹಾಗೂ ಕಡಪ ಜಿಲ್ಲೆಗಳ ಪ್ರವೇಶಕ್ಕೆ ವಿಧಿಸಿದ್ದ ನಿರ್ಬಂಧವನ್ನು ಸುಪ್ರೀಂ ಕೋರ್ಟ್ ತೆರವು ಮಾಡಿದೆ. ಅಕ್ರಮ ಗಣಿಗಾರಿಕೆ ಆರೋಪದ ಹಿನ್ನೆಲೆ ತವರು ಜಿಲ್ಲೆಯ ಪ್ರವೇಶವಿಲ್ಲದೆ ವನವಾಸ ಅನುಭವಿಸಿದ್ದ ಮಾಜಿ ಸಚಿವ, ಹಾಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂ ಕೋರ್ಟ್

ಜನಾರ್ದನ ರೆಡ್ಡಿ ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂಕೋರ್ಟ್‌ ಅನುಮತಿ Read More »

ಮುಡಾ ಹಗರಣ: 14 ನಿವೇಶನ ವಾಪಸ್ ನೀಡಲು ಸಿಎಂ ಪತ್ನಿ ನಿರ್ಧಾರ, ಲೋಕಾಯುಕ್ತಕ್ಕೆ ಪತ್ರ

ಸಮಗ್ರ ನ್ಯೂಸ್: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬಕ್ಕೆ ಸಂಕಷ್ಟ ಎದುರಾಗಿದು, ಇದೀಗ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು ಮುಡಾಗೆ ಸೈಟ್ಗಳನ್ನು ಹಿಂದಿರುಗಿಸಲು ಮುಂದಾಗಿದ್ದಾರೆ. ಮೈಸೂರಿನ ವಿಜಯನಗರದ 3 ಮತ್ತು 4ನೇ ಹಂತದಲ್ಲಿ ಪಡೆದ 14 ನಿವೇಶನಗಳನ್ನು ಹಿಂದಿರುಗಿಸುವುದಾಗಿ ಸಿಎಂ ಪತ್ನಿ ಪಾರ್ವತಿ ಅವರು ಮುಡಾ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಸಿದ್ದರಾಮಯ್ಯನವರಿಗೆ ಇದೀಗ ಆಗುತ್ತಿರುವ ರಾಜಕೀಯ ಸಂಕಷ್ಟವನ್ನು ನೋಡಲಾಗದೇ ಪತ್ನಿ ಈ ನಿರ್ಧಾರಕ್ಕೆ ಬಂದಿದ್ದಾರೆ. ಈ ಬಗ್ಗೆ ಖುದ್ದು ಮುಡಾಗೆ ಬರೆದ ಪತ್ರದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ.

ಮುಡಾ ಹಗರಣ: 14 ನಿವೇಶನ ವಾಪಸ್ ನೀಡಲು ಸಿಎಂ ಪತ್ನಿ ನಿರ್ಧಾರ, ಲೋಕಾಯುಕ್ತಕ್ಕೆ ಪತ್ರ Read More »

ಹೈಕೋರ್ಟ್‌ನಲ್ಲಿ ಹಿನ್ನಡೆ/ ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ ಎಂದ ಸಿಎಂ

ಸಮಗ್ರ ನ್ಯೂಸ್‌: ಮುಡಾ ಪ್ರಕರಣದಲ್ಲಿ ಹೈಕೋರ್ಟ್‌ ತೀರ್ಪು ಬಂದ ಬಳಿಕ ಸಿಎಂ ಸಿದ್ದರಾಮಯ್ಯ ಇದೇ ಮೊದಲ ಬಾರಿಗೆ ರಿಯಾಕ್ಷನ್ ನೀಡಿದ್ದು, ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ಆದೇಶ ಪ್ರತಿ ಪಡೆದು ಓದಿದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ. ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ಕೋರ್ಟ್ ತಿರಸ್ಕರಿಸಿದೆ. ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕೋರ್ಟ್ ತೀರ್ಪಿನ ಬಳಿಕ ಮಾಧ್ಯಮ ಪ್ರಕರಣ ಹೊರಡಿಸಿದ್ದು. ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ಆದೇಶ ಪ್ರತಿ ಪಡೆದು ಓದಿದ

ಹೈಕೋರ್ಟ್‌ನಲ್ಲಿ ಹಿನ್ನಡೆ/ ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ ಎಂದ ಸಿಎಂ Read More »

ಮುಡಾ ಅಕ್ರಮ ಹಗರಣ|ಸಿಎಂ ಸಿದ್ದರಾಮಯ್ಯಗೆ ಬಿಗ್ ಶಾಕ್| ರಾಜ್ಯಪಾಲರ ಆದೇಶ ಎತ್ತಿ ಹಿಡಿದ ಹೈಕೋರ್ಟ್

ಸಮಗ್ರ ನ್ಯೂಸ್: ಮುಡಾ ಅಕ್ರಮ ಸಂಬಂಧಿಸಿದಂತೆ ಹೈಕೋರ್ಟ್‌ ತೀರ್ಪು ಪ್ರಕಟಿಸಿದ್ದು ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ವಜಾ ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುದೀರ್ಘ ವಿಚಾರಣೆ ನಡೆದಿತ್ತು. 30 ಗಂಟೆಗೂ ಅಧಿಕ ಸಮಯ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಾದ-ಪ್ರತಿವಾದವನ್ನು ನ್ಯಾಯಾಧೀಶರು ಆಲಿಸಿದ್ದರು. ರಾಜ್ಯಪಾಲರ ಕ್ರಮವನ್ನು ಪ್ರಶ್ನಿಸಿ ಅರ್ಜಿ ಹಾಕಿದ್ದ ಸಿಎಂ ಸಿದ್ದರಾಮಯ್ಯ ಪರ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಅಭಿಷೇಕ್‌ ಮನು ಸಿಂಘ್ವಿ ನೇತೃತ್ವದ ತಂಡ ವಾದ ಮಂಡಿಸಿತ್ತು. ರಾಜ್ಯಪಾಲರ ಕಚೇರಿ ಪರ ಸುಪ್ರೀಂ ಕೋರ್ಟ್ ಸಾಲಿಸಿಟರ್‌ ಜನರಲ್

ಮುಡಾ ಅಕ್ರಮ ಹಗರಣ|ಸಿಎಂ ಸಿದ್ದರಾಮಯ್ಯಗೆ ಬಿಗ್ ಶಾಕ್| ರಾಜ್ಯಪಾಲರ ಆದೇಶ ಎತ್ತಿ ಹಿಡಿದ ಹೈಕೋರ್ಟ್ Read More »