ಮಾಜಿ ಸಿಎಂ ಬಿಎಸ್ ವೈಗೆ ಮತ್ತೊಂದು ಸಂಕಷ್ಟ| ಅಕ್ರಮ ಡಿನೋಟಿಫಿಕೇಶನ್ ಪ್ರಕರಣದಲ್ಲಿ ಲೋಕಾಯುಕ್ತದಿಂದ ಸಮನ್ಸ್
ಸಮಗ್ರ ನ್ಯೂಸ್: ಪೋಕ್ಸೋ ಕೇಸಲ್ಲಿ ಸಂಕಷ್ಟ ಎದುರಿಸುತ್ತಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಮತ್ತೊಂದು ಶಾಕ್ ನೀಡಲಾಗಿದೆ. ಅದೇ ಅಕ್ರಮ ಡಿನೋಟಿಫಿಕೇಷನ್ ಕೇಸಲ್ಲಿ ಲೋಕಾಯುಕ್ತದಿಂದ ಸಮನ್ಸ್ ಜಾರಿಗೊಳಿಸಲಾಗಿದೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಸಚಿವ ಕೃಷ್ಣಭೈರೇಗೌಡ ಸೇರಿದಂತೆ ವಿವಿಧ ಸಚಿವರು ಅಕ್ರಮ ಡಿನೋಟಿಫಿಕೇಷನ್ ಆರೋಪ ಮಾಡಿದ್ದರು. ಈ ಬೆನ್ನಲ್ಲೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರುದ್ಧದ ಡಿನೋಟಿಫಿಕೇಷನ್ ಹಗರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತದಿಂದ ಸಮನ್ಸ್ ಜಾರಿಗೊಳಿಸಲಾಗಿದೆ. […]










