ರಾಯಚೂರು ಕಾಂಗ್ರೆಸ್ ಅಭ್ಯರ್ಥಿ ಜಿ ಕುಮಾರ ನಾಯಕ್ ಪರವಾಗಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಪ್ರಚಾರ
ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ನಿಮಿತ್ತ ರಾಯಚೂರು ನಗರದ ತಿಮ್ಮಾಪುರ ಪೇಟೆ ಬಡಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿ ಜಿ ಕುಮಾರ ನಾಯಕ್ ಪರವಾಗಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಮಂತರ್ ಗೌಡ ರವರು ಬಹಿರಂಗ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಈ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಜನಪ್ರಿಯ ಗ್ಯಾರಂಟಿ ಯೋಜನೆಗಳ ಬಗ್ಗೆ ತಿಳಿಸಿ, ವಿದ್ಯಾವಂತರನ್ನು ಲೋಕಸಭೆಗೆ ಆರಿಸಿ ಕಳುಹಿಸುವ ಜವಾಬ್ದಾರಿ ಜನರ ಮೇಲಿದೆ, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಬೇಕಾಗಿದೆ ಎಂದು ಮನವಿ ಮಾಡಿದರು. […]