ರಾಜಕೀಯ

ಸಂಸತ್ತಿನ ಮೇಲೆ ದಾಳಿ/ ನಾಲ್ವರ ಬಂಧನ, ಇಬ್ಬರು ಪರಾರಿ

ಸಮಗ್ರ ನ್ಯೂಸ್: ಸಂಸತ್ತಿನ ಮೇಲೆ ದಾಳಿ ಪ್ರಕರಣದ ಯೋಜನೆ ಮತ್ತು ಕಾರ್ಯಗತಗೊಳಿಸುವಲ್ಲಿ ಆರು ಜನರು ಭಾಗಿಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಭಾಗಿಯಾದವರಲ್ಲಿ ಇಬ್ಬರು ಸಾಗರ್ ಶರ್ಮಾ ಮತ್ತು ಡಿ ಮನೋರಂಜನ್. ಸಂಸತ್ತಿನ ಹೊರಗಡೆಯ ಘಟನೆಯಲ್ಲಿ ಭಾಗಿಯಾದವರು ನೀಲಂ ದೇವಿ ಮತ್ತು ಅಮೋಲ್ ಶಿಂಧೆ. ಐದನೆಯ ವ್ಯಕ್ತಿಯನ್ನು ಲಲಿತ್ ಝಾ ಎಂದು ಹೆಸರಿಸಲಾಗಿದ್ದು, ಆತನ ಗುರುಗ್ರಾಮದ ಮನೆಯಲ್ಲಿ ಐವರು ಉಳಿದುಕೊಂಡಿದ್ದರು ಎನ್ನಲಾಗಿದೆ. ಆರನೇ ವ್ಯಕ್ತಿಯ ಹೆಸರು ವಿಕ್ರಂ ಎನ್ನಲಾಗಿದೆ. ಲಲಿತ್ ಝಾ ಜೊತೆ ಆತನೂ ಪರಾರಿಯಾಗಿದ್ದಾನೆ. ಲೋಕಸಭೆಯೊಳಗೆ […]

ಸಂಸತ್ತಿನ ಮೇಲೆ ದಾಳಿ/ ನಾಲ್ವರ ಬಂಧನ, ಇಬ್ಬರು ಪರಾರಿ Read More »

ಸಮ್ಮಕ್ಕ ಸಾರಕ್ಕ ಕೇಂದ್ರೀಯ ಬುಡಕಟ್ಟು ವಿಶ್ವವಿದ್ಯಾಲಯ/ ಸಂಸತ್ತಿನಲ್ಲಿ ಅಂಗೀಕಾರ

ಸಮಗ್ರ ನ್ಯೂಸ್: ತೆಲಂಗಾಣದಲ್ಲಿ ಸಮ್ಮಕ್ಕ ಸಾರಕ್ಕ ಕೇಂದ್ರೀಯ ಬುಡಕಟ್ಟು ವಿಶ್ವವಿದ್ಯಾಲಯ ಆರಂಭಿಸಲು ಅವಕಾಶ ಕಲ್ಪಿಸುವ ಮಸೂದೆಗೆ ಸಂಸತ್ತು ಅಂಗೀಕಾರ ನೀಡಿದೆ. ಈ ಮಸೂದೆಗೆ ಲೋಕಸಭೆಯು ಕಳೆದ ವಾರ ಅಂಗೀಕಾರ ನೀಡಿತ್ತು. ಸಂಸತ್ತಿನಲ್ಲಿ ಭದ್ರತಾ ಲೋಪ ಆಗಿರುವ ಬಗ್ಗೆ ಗೃಹ ಸಚಿವ ಅಮಿತ್ ಶಾ ಅವರು ಉತ್ತರ ನೀಡಬೇಕು ಎಂದು ಒತ್ತಾಯಿಸಿ ವಿರೋಧ ಪಕ್ಷಗಳ ಸದಸ್ಯರು ಸಭಾತ್ಯಾಗ ನಡೆಸಿದ್ದ ಸಂದರ್ಭದಲ್ಲಿ, ರಾಜ್ಯಸಭೆಯು ಈ ಮಸೂದೆಗೆ ಬುಧವಾರ ಧ್ವನಿಮತದ ಮೂಲಕ ಅಂಗೀಕಾರ ನೀಡಿತು. ಆಂಧ್ರಪ್ರದೇಶ ಮರುವಿಂಗಡಣೆ ಕಾಯ್ದೆ 2014ರ ಅನ್ವಯ,

ಸಮ್ಮಕ್ಕ ಸಾರಕ್ಕ ಕೇಂದ್ರೀಯ ಬುಡಕಟ್ಟು ವಿಶ್ವವಿದ್ಯಾಲಯ/ ಸಂಸತ್ತಿನಲ್ಲಿ ಅಂಗೀಕಾರ Read More »

ರಾಜಸ್ಥಾನದ ನೂತನ ಮುಖ್ಯ ಮಂತ್ರಿಯಾಗಿ ಭಜನ್‍ಲಾಲ್ ಶರ್ಮಾ

ಸಮಗ್ರ ನ್ಯೂಸ್: ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್‍ಲಾಲ್ ಶರ್ಮಾ ಅವರನ್ನು ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ. ಇದರ ಜೊತೆಗೆ ಸ್ಪೀಕರ್ ಆಗಿ ಶಾಸಕ ವಾಸುದೇವ್ ದೇವ್ವಾನಿ ಅವರನ್ನು ನೇಮಿಸಲಾಗಿದೆ. ಸಿಎಂ ರೇಸ್‍ನಲ್ಲಿದ್ದ ಮಾಜಿ ಸಿಎಂ ವಸುಂಧರಾ ರಾಜೇ, ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್, ಗಜೇಂದ್ರ ಸಿಂಗ್ ಶೇಖಾವತ್, ಅಶ್ವಿನಿ ವೃಷ್ಣವ್, ಸಂಸದರಾದ ಬಾಬಾ ಬಾಲಕನಾಥ್, ದಿಯಾ ಕುಮಾರಿ ಸೇರಿದಂತೆ ಅನೇಕ ಹಿರಿಯ ನಾಯಕರನ್ನು ಹಿಂದಿಕ್ಕಿ ಭಜನ್‍ಲಾಲ್ ಶರ್ಮಾ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಕೇಂದ್ರ ವೀಕ್ಷಕರಾದ

ರಾಜಸ್ಥಾನದ ನೂತನ ಮುಖ್ಯ ಮಂತ್ರಿಯಾಗಿ ಭಜನ್‍ಲಾಲ್ ಶರ್ಮಾ Read More »

ರಾಜಸ್ಥಾನಕ್ಕೆ ನೂತನ ಮುಖ್ಯಮಂತ್ರಿ/ ಇಂದು ಘೋಷಣೆಯಾಗುವ ಸಾಧ್ಯತೆ.

ಸಮಗ್ರ ನ್ಯೂಸ್: ರಾಜಸ್ಥಾನದ ನೂತನ ಮುಖ್ಯಮಂತ್ರಿ ಯಾರು ಎಂಬ ಕುತೂಹಲಕ್ಕೆ ಇಂದು ತೆರೆ ಬೀಳುವ ಸಾಧ್ಯತೆ ಇದೆ. ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಇಂದು (ಮಂಗಳವಾರ) ಸಂಜೆ ನಿಗದಿಯಾಗಿದ್ದು,ರಕ್ಷಣಾ ಸಚಿವ ಹಾಗೂ ಪಕ್ಷದ ಕೇಂದ್ರ ವೀಕ್ಷಕರಾದ ರಾಜನಾಥ್ ಸಿಂಗ್, ರಾಷ್ಟ್ರೀಯ ಉಪಾಧ್ಯಕ್ಷ ಸರೋಜ್‌ ಪಾಂಡೆ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವೆ ನೇತೃತ್ವದಲ್ಲಿ ಸಭೆ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ಶಾಸಕ ಭಜನ್‌ಲಾಲ್ ಶರ್ಮಾ ಹೇಳಿದ್ದಾರೆ. ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬುದನ್ನು ಸಭೆ ಬಳಿಕ ಘೋಷಿಸಲಾಗುತ್ತದೆ

ರಾಜಸ್ಥಾನಕ್ಕೆ ನೂತನ ಮುಖ್ಯಮಂತ್ರಿ/ ಇಂದು ಘೋಷಣೆಯಾಗುವ ಸಾಧ್ಯತೆ. Read More »

ಛತ್ತೀಸಗಢದ ನೂತನ ಮುಖ್ಯಮಂತ್ರಿಯಾಗಿ ವಿಷ್ಣುದೇವ್ ಸಾಯ್

ಸಮಗ್ರ ನ್ಯೂಸ್: 90 ಸ್ಥಾನಗಳ ಛತ್ತೀಸಗಢ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 54ರಲ್ಲಿ ಗೆಲುವು ಸಾಧಿಸುವ ಮೂಲಕ ಅಧಿಕಾರದ ಗದ್ದುಗೆ ಏರಿದ್ದು, ಶಾಸಕರ ಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ವಿಷ್ಣುದೇವ್ ಸಾಯ್ ಅವರನ್ನು ಆಯ್ಕೆ ಮಾಡಲಾಗಿದೆ. ವಿಷ್ಣುದೇವ್ ಸಾಯ್ ಅವರು 2020ರಿಂದ 2022ರ ವರೆಗೆ ಛತ್ತೀಸಗಢದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿದ್ದರು. ಪ್ರಧಾನಿ ಮೋದಿ ಅವರ ಸಂಪುಟದಲ್ಲಿ ಸಚಿವರಾಗಿಯೂ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಡಿಸೆಂಬರ್ 3ರ ಫಲಿತಾಂಶಕ್ಕೂ ಮುನ್ನ ಬಹುತೇಕ ಸಮೀಕ್ಷೆಗಳು ಛತ್ತೀಸಗಢದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಹೇಳಿದ್ದವು.

ಛತ್ತೀಸಗಢದ ನೂತನ ಮುಖ್ಯಮಂತ್ರಿಯಾಗಿ ವಿಷ್ಣುದೇವ್ ಸಾಯ್ Read More »

ಬಹುಜನ ಸಮಾಜ ಪಕ್ಷಕ್ಕೆ ಉತ್ತರಾಧಿಕಾರಿ ಆಯ್ಕೆ/ ಮಾಯಾವತಿ ಸೋದರಳಿಯ ಆಕಾಶ್ ಆನಂದ್ ನೂತನ ಉತ್ತರಾಧಿಕಾರಿ

ಸಮಗ್ರ ನ್ಯೂಸ್: ಬಹುಜನ ಸಮಾಜ ಪಕ್ಷದ (ಬಿಎಸ್‍ಪಿ) ಉತ್ತರಾಧಿಕಾರಿಯಾಗಿ ತನ್ನ ಸೋದರಳಿಯ ಆಕಾಶ್ ಆನಂದ್ ಅವರನ್ನು ಮುಖ್ಯಸ್ಥೆ ಮಾಯಾವತಿ ಅವರು ನೇಮಕ ಮಾಡಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ಆಕಾಶ್ ಆನಂದ್ ರಾಜಕೀಯ ಪ್ರವೇಶಿಸಿದ್ದು, ಸದ್ಯ ಮಾಯಾವತಿಯ ರಾಜಕೀಯ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದರು. ಉತ್ತರ ಪ್ರದೇಶ ಮತ್ತು ಉತ್ತರಾಖಂಡದ ಮೇಲ್ವಿಚಾರಣೆಯನ್ನು ಮಾಯಾವತಿ ಅವರೇ ಮುಂದುವರಿಸಲಿದ್ದಾರೆ ಎಂದು ಪಕ್ಷದ ಮುಖಂಡ ಉದಯ್‍ವೀರ್ ಸಿಂಗ್ ತಿಳಿಸಿದ್ದಾರೆ.

ಬಹುಜನ ಸಮಾಜ ಪಕ್ಷಕ್ಕೆ ಉತ್ತರಾಧಿಕಾರಿ ಆಯ್ಕೆ/ ಮಾಯಾವತಿ ಸೋದರಳಿಯ ಆಕಾಶ್ ಆನಂದ್ ನೂತನ ಉತ್ತರಾಧಿಕಾರಿ Read More »

ತೆಲಂಗಾಣದ ನೂತನ ಸಿಎಂ ಆಗಿ ರೇವಂತ್‌ ರೆಡ್ಡಿ/ ಮಲ್ಲಿಕಾರ್ಜುನ ಖರ್ಗೆ ಘೋಷಣೆ

ಸಮಗ್ರ ನ್ಯೂಸ್: ರೇವಂತ್ ರೆಡ್ಡಿ ಅವರನ್ನು ತೆಲಂಗಾಣ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಘೋಷಣೆ ಮಾಡಲಾಗಿದೆ. ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ 119 ಸ್ಥಾನಗಳ ಪೈಕಿ 64 ಸ್ಥಾನಗಳ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಸಾಧಿಸಿತ್ತು. ಚುನಾವಣಾ ಫಲಿತಾಂಶ ಪ್ರಕಟ ಆದ ತಕ್ಷಣ ಮುಖ್ಯಮಂತ್ರಿ ಸ್ಥಾನಕ್ಕೆ ರೇವಂತ್ ರೆಡ್ಡಿ ಹೆಸರು ಕೇಳಿಬಂದಿತ್ತು. ಆದರೆ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಮತ್ತು ವೀಕ್ಷಕರು ಸಿಎಂ ಹೆಸರನ್ನು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಕಟಿಸುತ್ತಾರೆ ಎಂದು ಹೇಳಿದ್ದರು. ಇದೀಗ ಖರ್ಗೆ ರೇವಂತ್ ರೆಡ್ಡಿ ಹೆಸರನ್ನು ಘೋಷಣೆ

ತೆಲಂಗಾಣದ ನೂತನ ಸಿಎಂ ಆಗಿ ರೇವಂತ್‌ ರೆಡ್ಡಿ/ ಮಲ್ಲಿಕಾರ್ಜುನ ಖರ್ಗೆ ಘೋಷಣೆ Read More »

ಪಕ್ಷಾಂತರ ವಿರೋಧಿ ಕಾನೂನಿನಡಿಯಲ್ಲಿ ಅನರ್ಹಗೊಂಡ ಮೊದಲ ಸಂಸದ/ ಇಂದು ಮಿಜೋರಾಂನ ನೂತನ ಮುಖ್ಯಮಂತ್ರಿ

ಸಮಗ್ರ ನ್ಯೂಸ್: ಈಶಾನ್ಯ ರಾಜ್ಯವಾದ ಮಿಜೋರಾಂನ ವಿಧಾನಸಭೆಯಲ್ಲಿ ಜೋರಾಮ್ ಪೀಪಲ್ಸ್ ಮೂವ್‍ಮೆಂಟ್ 40 ಸದಸ್ಯ ಬಲದ ವಿಧಾನಸಭೆಯಲ್ಲಿ 27 ಸ್ಥಾನಗಳನ್ನು ಗೆದ್ದು ಸ್ವಂತ ಬಲದಿಂದ ಬಹುಮತ ಗಳಿಸಿದೆ. ಜೋರಾಮ್ ಪೀಪಲ್ಸ್ ಮೂವ್‍ಮೆಂಟ್ ಪಕ್ಷದ ಮುಖ್ಯಸ್ಥ, ಪಕ್ಷಾಂತರ ನಿಷೇಧ ಕಾಯ್ದೆಯಡಿ ಸದಸ್ಯತ್ವ ಕಳೆದುಕೊಂಡ ಮೊದಲ ಸಂಸದ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮತ್ತು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಭದ್ರತಾ ಉಸ್ತುವಾರಿಯಾಗಿದ್ದ ಲಾಲ್ದುಹೋಮ 30 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. 1984 ರಲ್ಲಿ ಆಗಿನ

ಪಕ್ಷಾಂತರ ವಿರೋಧಿ ಕಾನೂನಿನಡಿಯಲ್ಲಿ ಅನರ್ಹಗೊಂಡ ಮೊದಲ ಸಂಸದ/ ಇಂದು ಮಿಜೋರಾಂನ ನೂತನ ಮುಖ್ಯಮಂತ್ರಿ Read More »

ವಿಪಕ್ಷ ನಾಯಕರಾಗಿ ಆರ್. ಅಶೋಕ್/ ಬಿಜೆಪಿ ಶಾಸಕಾಂಗ ಸಭೆಯಲ್ಲಿ ನಿರ್ಣಯ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಬಿಜೆಪಿಯ ಹಿರಿಯ ಮುಖಂಡ ಆರ್. ಅಶೋಕ್ ಅವರನ್ನು ಆಯ್ಕೆ ಮಾಡಲಾಗಿದೆ. ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಬಿಜೆಪಿಯ ಶಾಸಕಾಂಗ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಚುನಾವಣೆ ನಡೆದು ಹಲವು ಸಮಯ ಕಳೆದರೂ ವಿರೋಧ ಪಕ್ಷದ ನಾಯಕನ ಆಯ್ಕೆ ನಡೆದಿರಲಿಲ್ಲ. ವಿಧಾನ ಸಭೆಯ ಮೊದಲ ಅಧಿವೇಶನ ವಿಪಕ್ಷ ನಾಯಕನಿಲ್ಲದೇ ನಡೆದುಹೋಗಿತ್ತು. ಕಳೆದ ವಾರವಷ್ಟೇ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಬಿವೈ ವಿಜಯೇಂದ್ರ ಅವರನ್ನು ನೇಮಕ ಮಾಡಲಾಗಿದ್ದು,

ವಿಪಕ್ಷ ನಾಯಕರಾಗಿ ಆರ್. ಅಶೋಕ್/ ಬಿಜೆಪಿ ಶಾಸಕಾಂಗ ಸಭೆಯಲ್ಲಿ ನಿರ್ಣಯ Read More »

ಜೆಡಿಎಸ್‍ನಲ್ಲಿ ಮುಂದುವರಿದ ಭಿನ್ನಮತ/ ಸಿ ಎಂ ಇಬ್ರಾಹಿಂ ಅಮಾನತು

ಸಮಗ್ರ ನ್ಯೂಸ್: ಜೆಡಿಎಸ್ ಪಕ್ಷದಲ್ಲಿ ಭಿನ್ನಮತ ಮುಂದುವರೆದಿದ್ದು, ಇದೀಗ ಜೆಡಿಎಸ್‍ನ ಮಾಜಿ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಅವರನ್ನು ಅಮಾನತು ಮಾಡಲಾಗಿದೆ. ಪಕ್ಷ ವಿರೋಧಿ ಚಟುವಟಿಕೆಗಳ ಹಿನ್ನಲೆಯಲ್ಲಿ ಈ ಕೂಡಲೇ ಜಾರಿಗೆ ಬರುವಂತೆ ಸಿ ಎಂ ಇಬ್ರಾಹಿಂ ಅವರನ್ನು ಅಮಾನತು ಮಾಡಲಾಗಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್ ಡಿ ದೇವೇಗೌಡ ಆದೇಶ ಹೊರಡಿಸಿದ್ದಾರೆ. ಜೆಡಿಎಸ್ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಮಾಡಿಕೊಂಡಿರುವ ಒಪ್ಪಂದ ಒಮ್ಮತದ ನಿರ್ಣಯವಾಗಿದ್ದರೂ, ಬಹಿರಂಗವಾಗಿ ಪಕ್ಷ ವಿರೋಧಿ ಹೇಳಿಕೆಗಳನ್ನು ನೀಡಿರುತ್ತಾರೆ. ಇದು

ಜೆಡಿಎಸ್‍ನಲ್ಲಿ ಮುಂದುವರಿದ ಭಿನ್ನಮತ/ ಸಿ ಎಂ ಇಬ್ರಾಹಿಂ ಅಮಾನತು Read More »