ಮಹತ್ವದ ಬೆಳವಣಿಗೆ; ಕನಕಪುರದಿಂದ ಡಿ.ಕೆ ಸುರೇಶ್ ನಾಮಪತ್ರ ಸಲ್ಲಿಕೆ
ಸಮಗ್ರ ನ್ಯೂಸ್: ಮಹತ್ವದ ಬೆಳವಣಿಗೆಯೊಂದರಲ್ಲಿ ಕನಕಪುರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಂಸದ ಡಿ.ಕೆ. ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನಾಮಪತ್ರ ತಿರಸ್ಕೃತಗೊಳ್ಳುವ ಸಾಧ್ಯತೆ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಚುನಾವಣಾ ಅಖಾಡದಿಂದ ಹಿಂದೆ ಸರಿಯಬಾರದು ಎಂಬ ನಿಟ್ಟಿನಲ್ಲಿ ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಮುಂಜಾಗೃತಾ ಕ್ರಮವಾಗಿ ಇದೀಗ ಡಿ.ಕೆ.ಸುರೇಶ್ ಕನಕಪುರದಿಂದ ನಾಮಪತ್ರ ಸಲ್ಲಿಸಿದ್ದಾರೆ. ಬಳಿಕ ಮಾತನಾಡಿದ ಅವರು,ಬಿಜೆಪಿಯ ಕುತಂತ್ರಕ್ಕೆ ತಕ್ಕ ಉತ್ತರ ಕೊಡಬೇಕಿದೆ. ಹೀಗಾಗಿ ಕೆಲವೊಂದು ಮಾಹಿತಿ ಆಧಾರದ ಮೇಲೆ ನಾಮಪತ್ರ ಸಲ್ಲಿಸಿದ್ದೇನೆ. […]
ಮಹತ್ವದ ಬೆಳವಣಿಗೆ; ಕನಕಪುರದಿಂದ ಡಿ.ಕೆ ಸುರೇಶ್ ನಾಮಪತ್ರ ಸಲ್ಲಿಕೆ Read More »