ರಾಜಕೀಯ

ಚುನಾವಣಾ ಅಖಾಡಕ್ಕೆ `ಹ್ಯಾಟ್ರಿಕ್ ಹೀರೋ’ಎಂಟ್ರಿ…!

ಸಮಗ್ರ ನ್ಯೂಸ್: ಚುನಾವಣಾ ಅಖಾಡಕ್ಕೆ ಹ್ಯಾಟ್ರಿಕ್ ಹೀರೋ,‘ಶಿವರಾಜ್ ಕುಮಾರ್ ಎಂಟ್ರಿ ಕೊಟ್ಟಿದ್ದು, ಕಾಂಗ್ರೆಸ್ ನ ಮಧು ಬಂಗಾರಪ್ಪ ಪರ ಮಾ.೩೦ರಂದು ನಟ ಶಿವರಾಜ್ ಕುಮಾರ್ ಪ್ರಚಾರ ಮಾಡಲಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಆನವಟ್ಟಿಯಲ್ಲಿ ಇಂದು ಮಧ್ಯಾಹ್ನ ೧೨ ಕ್ಕೆ ನಟ ಶಿವರಾಜ್ ಕುಮಾರ್ ಹಾಗೂ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ರೋಡ್ ಶೋ ನಡೆಸಲಿದ್ದಾರೆ. ಗೀತಾ ಶಿವರಾಜ್ ಕುಮಾರ್ ಈಗಾಗಲೇ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಪತಿ ಶಿವರಾಜ್ ಕುಮಾರ್ ಪತ್ನಿಗೆ ಸಾಥ್ ನೀಡುತ್ತಿದ್ದಾರೆ. ಮಧು ಬಂಗಾರಪ್ಪ […]

ಚುನಾವಣಾ ಅಖಾಡಕ್ಕೆ `ಹ್ಯಾಟ್ರಿಕ್ ಹೀರೋ’ಎಂಟ್ರಿ…! Read More »

ಇಂದು ಸುಳ್ಯಕ್ಕೆ ಆಗಮಿಸಲಿದ್ದಾರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ

ಸಮಗ್ರ ಸಮಾಚಾರ: ಸುಳ್ಯಕ್ಕೆ ಇಂದು ಸಂಜೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಆಗಮಿಸಲಿದ್ದಾರೆ. ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದ ಬಳಿ ಸಂಜೆ ೪.೩೦ಕ್ಕೆ ನಡೆಯುವ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ.ಇಂದು ಸಂಜೆ ೪ ಗಂಟೆಗೆ ಸುಳ್ಯಕ್ಕೆ ಹೆಲಿಕಾಫ್ಟರ್ ಮೂಲಕ ಜೆ.ಪಿ.ನಡ್ಡಾ ಆಗಮಿಸಲಿದ್ದಾರೆ. ಬಳಿಕ ರಸ್ತೆ ಮಾರ್ಗದ ಮೂಲಕ ಜೆ.ಪಿ.ನಡ್ಡಾ ಅವರು ನೇರವಾಗಿ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಅವರ ಮನೆಗೆ ಭೇಟಿ ನೀಡಲಿದ್ದಾರೆ. ನಳಿನ್‌ಕುಮಾರ್ ಕಟೀಲ್ ನೇತೃತ್ವದಲ್ಲಿ ಬಿಜೆಪಿ ವತಿಯಿಂದ ಪ್ರವೀಣ್ ನೆಟ್ಟಾರು

ಇಂದು ಸುಳ್ಯಕ್ಕೆ ಆಗಮಿಸಲಿದ್ದಾರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ Read More »

ಮೇ.೧ ರಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮಂಗಳೂರಿಗೆ

ಸಮಗ್ರ ನ್ಯೂಸ್; ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಮೇ ೧ರಂದು ಮಂಗಳೂರಿಗೆ ಆಗಮಿಸಿ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಕುರಿತು ವಿಧಾನ ಪರಿಷತ್ ಸದಸ್ಯ ಬಿ.ಎಂ. ಫಾರುಕ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಧ್ಯಾಹ್ನ ಕೃಷ್ಣಾಪುರದ ಫಿಝ ಗಾರ್ಡನ್ ಹೆಲಿಪಾಡ್ ಗೆ ಅಗಮಿಸಲಿದ್ದು, ಸುರತ್ಕಲ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಬಳಿಕ ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ನಂತರ ಬಲವಂಡಿ ದೈವಸ್ಥಾನ, ಗುರುಪುರ ಕಂಬಳ ದರ್ಗಾ ಭೇಟಿ ನೀಡಲಿದ್ದಾರೆ. ಸಂಜೆ ೫ ಗಂಟೆಗೆ ಗುರುಪುರ ಕೈಕಂಬದ ವಸ್ತು

ಮೇ.೧ ರಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮಂಗಳೂರಿಗೆ Read More »

ರಾಜ್ಯ ವಿಧಾನಸಭಾ ಚುನಾವಣೆ| ಎಲ್ಲರಿಗಿಂತ ಮೊದಲು ಮತ ಚಲಾಯಿಸಿದ ಹಿರಿಯ ನಟಿ ಲೀಲಾವತಿ

ಸಮಗ್ರ ನ್ಯೂಸ್: ಎಂಭತ್ತು ವರ್ಷ ತುಂಬಿದ ನಾಗರಿಕರಿಗೆ ಮನೆಯಲ್ಲೇ ಮತದಾನ ಮಾಡುವ ಅವಕಾಶವನ್ನ ಚುನಾವಣೆ ಆಯೋಗ ಕಲ್ಪಿಸಿದೆ. ಇದರ ಅಡಿಯಲ್ಲಿ ಹಿರಿಯ ನಟಿ ಲೀಲಾವತಿ, ನೆಲಮಂಗಲ ತಾಲೂಕಿನ ಮೈಲನಹಳ್ಳಿಯ ಮನೆಯಲ್ಲಿ ಮತದಾನ ಮಾಡಿದ್ದಾರೆ. ಮಗ ವಿನೋದ್ ರಾಜ್ ಸಹಾಯದಿಂದ ಅವರು ಮನೆಯಲ್ಲಿ ಮತದಾನ ಮಾಡಿದ್ದಾರೆ. ಮತದಾನ ಮಾಡಿದ ಹಿರಿಯ ನಟಿ ಲೀಲಾವತಿ “ಚುನಾವಣೆ ಆಯೋಗ ಈ ಅವಕಾಶ ಕಲ್ಪಿಸಿದ್ದು ನನ್ನಂತಹ ಹಿರಿಯರಿಗೆ ಅನುಕೂಲವಾಗಿದೆ. ಎಲ್ಲರೂ ತಪ್ಪದೇ ಮತದಾನ ಮಾಡಿ. ಎಲ್ಲರೂ ಮತದಾನದ ಪ್ರಕ್ರಿಯೆಯಲ್ಲಿ ಭಾಗಿಯಾಗಿ” ಅಂತ ಹೇಳಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆ| ಎಲ್ಲರಿಗಿಂತ ಮೊದಲು ಮತ ಚಲಾಯಿಸಿದ ಹಿರಿಯ ನಟಿ ಲೀಲಾವತಿ Read More »

ಅಭಿಮಾನಿಗಳತ್ತ ಕೈಬೀಸುವ ವೇಳೆ ಕುಸಿದ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ಬಿಸಿಲ ಝಳದ ನದುವೆಯೇ ಅಬ್ಬರದ ಪ್ರಚಾರ ನಡೆಸಿದ್ದಾರೆ. ಚುನಾವಣಾ ಪ್ರಚಾರಕ್ಕೆ ತೆರಳಿದ್ದ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕುಸಿದು ಬಿದ್ದ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಗಿಯಲ್ಲಿ ನಡೆದಿದೆ. ಕೂಡ್ಲಗಿ ಹೆಲಿ ಪ್ಯಾಡ್ ಗೆ ಆಗಮಿಸಿದ ಸಿದ್ದರಾಮಯ್ಯ, ಹೆಲಿಕಾಪ್ಟರ್ ನಿಂದ ಇಳಿದು ಜನರತ್ತ ಕೈ ಬೀಸುತ್ತಾ ಸಾಗಿ ಕಾರಿನ ಡೋರ್ ಮೇಲೆ ನಿಂತು ಜನರತ್ತ ಕೈಬೀಸುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಸ್ಥಳದಲ್ಲಿದ್ದ ಕಾಂಗ್ರೆಸ್ ನಾಯಕರು ತಕ್ಷಣ ಸಿದ್ದರಾಮಯ್ಯನವರನ್ನು ಬೀಳದಂತೆ ಹಿಡುದುಕೊಂಡಿದ್ದಾರೆ. ಬಳಿಕ ಸಿದ್ದರಾಮಯ್ಯನವರು ಸಾವರಿಸಿಕೊಂಡು

ಅಭಿಮಾನಿಗಳತ್ತ ಕೈಬೀಸುವ ವೇಳೆ ಕುಸಿದ ಸಿದ್ದರಾಮಯ್ಯ Read More »

ಮತದಾನ‌ ದಿನ ರಜೆ ಇದೆ ಎಂದು ಪ್ರವಾಸ ಹೋಗೋ ಪ್ಲ್ಯಾನ್ ಇದ್ರೆ ಬಿಟ್ಬಿಡಿ| ಚುನಾವಣಾ ಆಯೋಗದಿಂದ ಹದ್ದಿನ ಕಣ್ಣು!!

ಸಮಗ್ರ ನ್ಯೂಸ್: ಮೇ 10ರಂದು ಕರ್ನಾಟಕ ವಿಧಾನಸಭೆ ಚುನಾವಣೆ, ಅಂದು ಸರ್ಕಾರಿ ಕಚೇರಿ, ಖಾಸಗಿ ಕಚೇರಿಗಳಲ್ಲಿ ಉದ್ಯೋಗಿಗಳಿಗೆ ವೇತನ ಸಹಿತ ರಜೆ ನೀಡಲಾಗುತ್ತದೆ. ರಜೆಯೆಂದು ಹೊರಗಡೆ ಸುತ್ತಾಡಲು, ಪ್ರವಾಸಕ್ಕೆ ಹೋಗಿ ಮತದಾನ ಮಾಡುವುದನ್ನು ತಪ್ಪಿಸುವುದು ಬೇಡವೆಂದು ಸರ್ಕಾರ ಹೊಸ ಮಾರ್ಗೋಪಾಯ ಕಂಡುಕೊಂಡಿದೆ. ಅಂದು ಬಹುತೇಕ ಪ್ರವಾಸಿ ತಾಣಗಳು ಬಂದ್ ಆಗಲಿವೆ. ಪ್ರವಾಸಿ ತಾಣಗಳು ಮಾತ್ರವಲ್ಲದೆ ಹೊಟೇಲ್‍ಗಳು,ರೆಸಾರ್ಟ್‍ಗಳಲ್ಲಿ ಸಹ ಮೇ 10ರಂದು ಬುಕ್ಕಿಂಗ್ ಗೆ ಅವಕಾಶವಿರುವುದಿಲ್ಲ. ಕಡ್ಡಾಯವಾಗಿ ಮತದಾರರು ಅಂದು ತಮ್ಮ ಹಕ್ಕು ಚಲಾಯಿಸಬೇಕೆಂಬುದು ಚುನಾವಣಾ ಆಯೋಗದ ಉದ್ದೇಶವಾಗಿದೆ.

ಮತದಾನ‌ ದಿನ ರಜೆ ಇದೆ ಎಂದು ಪ್ರವಾಸ ಹೋಗೋ ಪ್ಲ್ಯಾನ್ ಇದ್ರೆ ಬಿಟ್ಬಿಡಿ| ಚುನಾವಣಾ ಆಯೋಗದಿಂದ ಹದ್ದಿನ ಕಣ್ಣು!! Read More »

ಡಾ.ಜಿ ಪರಮೇಶ್ವರ್ ಮೇಲೆ ಕಲ್ಲೆಸೆದ ಕಿಡಿಗೇಡಿಗಳು| ಕ್ರಮ ಜರುಗಿಸಲು ರಮೇಶ್ ಬಾಬು ಒತ್ತಾಯ

ಸಮಗ್ರ ನ್ಯೂಸ್: ಕೊರಟಗೆರೆಯ ಭೈರೇನಹಳ್ಳಿಯಲ್ಲಿ ಇಂದು ಚುನಾವಣಾ ಪ್ರಚಾರ ನಡೆಸುತ್ತಿದ್ದ ಸಂದರ್ಭದಲ್ಲಿ ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ್ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ ನಡೆಸಲಾಗಿತ್ತು. ಈ ವೇಳೆ ತಲೆಗೆ ಕಲ್ಲು ಬಿದ್ದು ಗಾಯಗೊಂಡಿದ್ದರು. ಇದು ಜಿಲ್ಲಾಡಳಿತದ ವೈಫಲ್ಯವಾಗಿದೆ. ಚುನಾವಣಾ ಆಯೋಗವು ಕಳಂಕಿತ ಅಧಿಕಾರಿಯನ್ನು ವರ್ಗಾಯಿಸುವಂತೆ ಮಾಜಿ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷ ರಮೇಶ್ ಬಾಬು ಒತ್ತಾಯಿಸಿದ್ದಾರೆ. ಈ ಕುರಿತಂತೆ ಇಂದು ಟ್ವಿಟ್ ಮಾಡಿರುವಂತ ಅವರು, ಡಾ.ಜಿ.ಪರಮೇಶ್ವರ ಮೇಲೆ ಕಲ್ಲು ತೂರಿ ಗಾಯಮಾಡಿರುವುದು ಹತಾಷೆ

ಡಾ.ಜಿ ಪರಮೇಶ್ವರ್ ಮೇಲೆ ಕಲ್ಲೆಸೆದ ಕಿಡಿಗೇಡಿಗಳು| ಕ್ರಮ ಜರುಗಿಸಲು ರಮೇಶ್ ಬಾಬು ಒತ್ತಾಯ Read More »

ಇಂದಿನಿಂದ ಮೇ6 ರವರೆಗೆ ಅಂಚೆ ಮತದಾನ

ಸಮಗ್ರ ನ್ಯೂಸ್: ಮುಂದಿನ ತಿಂಗಳ 10 ರಂದು ನಡೆಯಲಿರುವ ರಾಜ್ಯ ವಿಧಾನಸಭೆಗೆ ನಾಳೆಯಿಂದ ಬ್ಯಾಲೇಟ್ ಪೇಪರ್ ವೋಟಿಂಗ್ ಶುರುವಾಗುತ್ತಿದೆ. 80 ವರ್ಷ ಮೇಲ್ಪಟ್ಟ ವೃದ್ದರು ಹಾಗೂ ವಿಕಲಚೇತನರು ಮನೆಯಿಂದ, ಪೊಲೀಸರು, ಚುನಾವಣಾ ಸಿಬ್ಬಂದಿಗಳು ಹಾಗೂ ಪತ್ರಕರ್ತರು ಬ್ಯಾಲೇಟ್ ಪೇಪರ್ ಮೂಲಕ ತಮ್ಮ ಹಕ್ಕು ಚಲಾಯಿಸಬಹುದಾಗಿದೆ. 80 ವರ್ಷ ಮೇಲ್ಪಟ್ಟ ವೃದ್ಧರಿಗೆ ಹಾಗೂ ಅಂಗವಿಕಲರಿಗೆ ಮನೆ ಬಳಿಯೇ ವೋಟಿಂಗ್ ವ್ಯವಸ್ಥೆ ಮಾಡಲಾಗಿದ್ದರೆ, ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳು ಮತ್ತು ಪತ್ರಕರ್ತರು ಅವರವರ ಕ್ಷೇತ್ರಗಳಲ್ಲಿ ನಾಳೆಯಿಂದ ಬ್ಯಾಲೇಟ್ ವೋಟಿಂಗ್ ಮಾಡಬಹುದಾಗಿದೆ. ಚುನಾವಣಾ

ಇಂದಿನಿಂದ ಮೇ6 ರವರೆಗೆ ಅಂಚೆ ಮತದಾನ Read More »

‘ಜೆಡಿಎಸ್ ಗೆ ಮತ ಹಾಕಿದರೆ ಬಿಜೆಪಿಗೆ ಹಾಕಿದಂತೆ; ಮೋದಿ – ದೇವೇಗೌಡ್ರ ನಡುವೆ ಮಾತುಕತೆ ಆಗಿದೆ’ | ವೈರಲ್ ಆಗ್ತಿದೆ ಪ್ರೀತಂಗೌಡ ಹೇಳಿಕೆ

ಸಮಗ್ರ ನ್ಯೂಸ್: ‘ಜೆಡಿಎಸ್‌ಗೆ ಮತ ಹಾಕಿದರೆ, ಬಿಜೆಪಿಗೇ ಹಾಕಿದಂತೆ. ದೇವೇಗೌಡರು, ಮೋದಿ ಸಾಹೇಬರು ಮಾತನಾಡಿಕೊಂಡಿದ್ದಾರೆ. ಏಕೆಂದರೆ ಅವರಿಗೆ ಬರೋದು 20- 25 ಮಾತ್ರ’ ಎಂದು ಶಾಸಕ ಪ್ರೀತಂ ಗೌಡ ಹೇಳಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಹಾಸನ ನಗರ ವ್ಯಾಪ್ತಿಯಲ್ಲಿ ರಾತ್ರಿ ವೇಳೆ ಪ್ರಚಾರದ ಸಂದರ್ಭದಲ್ಲಿ ಪ್ರೀತಂ ಮಾತನಾಡಿದ್ದು, ‘ಮೈಸೂರಿನ ಮೇಲೆ ಬೆಂಗಳೂರಿಗೆ ಹೋಗೋದು ಬೇಡ. ಹಾಸನದಿಂದ ಬೆಳ್ಳೂರು ಕ್ರಾಸ್‌ ಮೇಲೆ ಹೋಗಿ ಎಂದು ಹೇಳುತ್ತೇನೆ. ಅದರ ಮೇಲೆ ನಿಮ್ಮಿಷ್ಟ’ ಎಂದಿದ್ದಾರೆ. ‘ಮೈಸೂರಿನ ಮೇಲೆಯೇ ಬೆಂಗಳೂರಿಗೆ ಹೋಗೋದಕ್ಕೆ

‘ಜೆಡಿಎಸ್ ಗೆ ಮತ ಹಾಕಿದರೆ ಬಿಜೆಪಿಗೆ ಹಾಕಿದಂತೆ; ಮೋದಿ – ದೇವೇಗೌಡ್ರ ನಡುವೆ ಮಾತುಕತೆ ಆಗಿದೆ’ | ವೈರಲ್ ಆಗ್ತಿದೆ ಪ್ರೀತಂಗೌಡ ಹೇಳಿಕೆ Read More »

ಕಾಂಗ್ರೆಸ್ ನಿಂದ ಮತ್ತೊಂದು ಗ್ಯಾರಂಟಿ ಘೋಷಣೆ| ಮಹಿಳೆಯರಿಗೆ ಉಚಿತ ಪ್ರಯಾಣದ ಭರವಸೆ

ಸಮಗ್ರ ನ್ಯೂಸ್: ವಿಧಾನಸಭಾ ಚುನಾವಣೆಗೆ ಭರದ ಸಿದ್ಧತೆ ನಡೆಸಿರುವ ಕಾಂಗ್ರೆಸ್ ಪಕ್ಷ, ತನ್ನ ಗ್ಯಾರಂಟಿ ಘೋಷಣೆಗಳನ್ನು ಮುಂದುವರೆಸಿದೆ. ಇಂದು ಮಂಗಳೂರಿನಲ್ಲಿ ನಡೆದ ಬಹಿರಂಗ ಸಮಾರಂಭದಲ್ಲಿ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ, ಪಕ್ಷದ 5ನೇ ಗ್ಯಾರಂಟಿ ಘೋಷಣೆಯನ್ನು ನೀಡಿದರು. ಕಾಂಗ್ರೆಸ್​ ಪಕ್ಷ ಗೆದ್ದು ಬಂದರೆ ರಾಜ್ಯದ ಎಲ್ಲ ಮಹಿಳೆಯರಿಗೆ ಸರ್ಕಾರಿ ಸಾರಿಗೆ ಬಸ್​ನಲ್ಲಿ ಉಚಿತ ಪ್ರಯಾಣ ಸೇವೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಕಾಂಗ್ರೆಸ್ ನಿಂದ ಮತ್ತೊಂದು ಗ್ಯಾರಂಟಿ ಘೋಷಣೆ| ಮಹಿಳೆಯರಿಗೆ ಉಚಿತ ಪ್ರಯಾಣದ ಭರವಸೆ Read More »