ರಾಜಕೀಯ

ಇಂದು ಮಂಗಳೂರಿಗೆ ಪ್ರಿಯಾಂಕಾ ಗಾಂಧಿ

ಸಮಗ್ರ ನ್ಯೂಸ್: ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮಂಗಳೂರಿಗೆ ಮೇ 7ರಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಜಿಲ್ಲೆಗೆ ಆಗಮಿಸಲಿದ್ದಾರೆ. ಮುಲ್ಕಿ ಕೊಲ್ನಾಡು ಮೈದಾನದಲ್ಲಿ ಅಪರಾಹ್ನ ಒಂದು ಗಂಟೆಗೆ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಮಂಜುನಾಥ ಭಂಡಾರಿ ಸುದ್ದಿ ಗೋಷ್ಠಿಯಲ್ಲಿಂದು ತಿಳಿಸಿದ್ದಾರೆ. ಇನ್ನು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ, ಮೂಡಬಿದ್ರೆ ಕ್ಷೇತ್ರ, ಕಾಪು ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಒಟ್ಟು ಸುಮಾರು 50 ಸಾವಿರ ಮಂದಿ ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಮಂಜುನಾಥ […]

ಇಂದು ಮಂಗಳೂರಿಗೆ ಪ್ರಿಯಾಂಕಾ ಗಾಂಧಿ Read More »

‘ಟ್ರಬಲ್ ಇಂಜಿನ್ ಸರ್ಕಾರ’ ಎಂದು ಆರೋಪಿಸಿದ್ದ ಕಾಂಗ್ರೆಸ್ ಗೆ ‘ಟ್ರಬಲ್’| ನೋಟೀಸ್ ಜಾರಿ ಮಾಡಿದ ಚು. ಆಯೋಗ

ಸಮಗ್ರ ನ್ಯೂಸ್: ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ ಜಾಹೀರಾತು ನೀಡಿದ್ದ ಹಿನ್ನಲೆಯಲ್ಲಿ ಚುನಾವಣಾ ಆಯೋಗದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ನೋಟಿಸ್ ಜಾರಿ ಮಾಡಲಾಗಿದೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಡಿ.ಕೆ. ಶಿವಕುಮಾರ್ ಗೆ ನೋಟಿಸ್ ಜಾರಿ ನೀಡಲಾಗಿದೆ. ವಿವಿಧ ನೇಮಕಾತಿ, ವರ್ಗಾವಣೆಗೆ ಹುದ್ದೆಗಳಿಗೆ ರೇಟ್ ಫಿಕ್ಸ್ ಜಾಹೀರಾತು ನೀಡಲಾಗಿತ್ತು. ಈ ಸಂಬಂಧ ಡಿಕೆಶಿಗೆ ನೋಟಿಸ್ ಜಾರಿ ಮಾಡಲಾಗಿದೆ. ರೇಟ್ ಕಾರ್ಡ್ ಗೆ ಸಂಬಂಧಿಸಿದಂತೆ ಜಾಹೀರಾತು ನೀಡಿದ ಹಿನ್ನೆಲೆಯಲ್ಲಿ ಚುನಾವಣೆನೀತಿ ಸಂಹಿತೆ

‘ಟ್ರಬಲ್ ಇಂಜಿನ್ ಸರ್ಕಾರ’ ಎಂದು ಆರೋಪಿಸಿದ್ದ ಕಾಂಗ್ರೆಸ್ ಗೆ ‘ಟ್ರಬಲ್’| ನೋಟೀಸ್ ಜಾರಿ ಮಾಡಿದ ಚು. ಆಯೋಗ Read More »

ಯುವಜನತೆಗೆ ಉದ್ಯೋಗ ಗ್ಯಾರಂಟಿ : ಸುಮನ ಬೆಳ್ಳಾರ್ಕರ್

ಸಮಗ್ರ ನ್ಯೂಸ್: ಕೃಷಿಕರನ್ನು ಬಾಧಿಸುತ್ತಿರುವ ಅಡಿಕೆ ಎಲೆ ಹಳದಿ ರೋಗಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವುದು ಹಾಗೂ ಸುಳ್ಯದ 110 ಕೆ.ವಿ. ವಿದ್ಯುತ್ ಸಬ್‌ಸ್ಟೇಶನ್ ಕಾಮಗಾರಿ ಮಾಡಿಸುವ ಉದ್ದೇಶದಿಂದ ಎ.ಎ.ಪಿ ಬದ್ಧವಾಗಿದ್ದು, ಕ್ಷೇತ್ರದಲ್ಲಿ ಶಾಸಕರಾಗಿ ಆಯ್ಕೆಯಾದರೆ ಮೊದಲು ಇದನ್ನೇ ಮಾಡುತ್ತೇವೆ. ಅದಕ್ಕಾಗಿ ಯಾವ ಹೋರಾಟಕ್ಕೂ ನಾವು ಬದ್ಧರಾಗಿದ್ದು ಆ ಕೆಲಸವನ್ನು ಮಾಡಿಲು ಸಿದ್ಧ ಎಂದು ಎ.ಎ.ಪಿ. ಅಭ್ಯರ್ಥಿ ಸುಮನಾ ಬೆಳ್ಳಾರ್ಕರ್ ಹಾಗೂ ಜಿಲ್ಲಾಧ್ಯಕ್ಷ ಅಶೋಕ್ ಎಡಮಲೆ ಹೇಳಿದ್ದಾರೆ. ಮೇ.9ರಂದು ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಶೋಕ್

ಯುವಜನತೆಗೆ ಉದ್ಯೋಗ ಗ್ಯಾರಂಟಿ : ಸುಮನ ಬೆಳ್ಳಾರ್ಕರ್ Read More »

ಮೇ.7: ದ.ಕ ಜಿಲ್ಲೆಯಲ್ಲಿ ಪ್ರಿಯಾಂಕಾ ಗಾಂಧಿ ಚುನಾವಣಾ ಪ್ರಚಾರ

ಸಮಗ್ರ ನ್ಯೂಸ್: ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಭಾನುವಾರ ಕರಾವಳಿ ಭಾಗದಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಪ್ರಿಯಾಂಕಾ ಗಾಂಧಿ ಮಂಗಳೂರಿಗೆ ಬರಲಿದ್ದು, ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತ ಯಾಚಿಸಲಿದ್ದಾರೆ. ನಾಳೆ ಮಧ್ಯಾಹ್ನ ಹೆಲಿಕಾಪ್ಟರ್​​ನಲ್ಲಿ ಆಗಮಿಸುವ ಪ್ರಿಯಾಂಕಾ ಗಾಂಧಿ, ಮೂಡಬಿದಿರೆ ಕ್ಷೇತ್ರದ ಮೂಲ್ಕಿಯಲ್ಲಿ ಚುನಾವಣಾ ಮತಬೇಟೆ ನಡೆಸಲಿದ್ದಾರೆ. ಮುಲ್ಕಿಯ ಕೊಳ್ನಾಡುವಿನ ಮೈದಾನದಲ್ಲಿ ಮಧ್ಯಾಹ್ನ 1 ಗಂಟೆಗೆ ಹಮ್ಮಿಕೊಂಡಿರುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ, ಮಂಗಳೂರು ಉತ್ತರ, ಮೂಡಬಿದಿರೆ ಮತ್ತು ಕಾಪು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳ ಪರ ಪ್ರಚಾರ

ಮೇ.7: ದ.ಕ ಜಿಲ್ಲೆಯಲ್ಲಿ ಪ್ರಿಯಾಂಕಾ ಗಾಂಧಿ ಚುನಾವಣಾ ಪ್ರಚಾರ Read More »

ವೋಟ್ ಪ್ರಂ ಹೋಮ್; ಎಷ್ಟು ಸಕ್ಸಸ್ ಆಯ್ತು ಗೊತ್ತಾ?

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ 80 ವರ್ಷ ಮೇಲ್ಪಟ್ಟವರಿಗೆ ಮತ್ತು ಅಂಗವಿಕಲರಿಗೆ ಮನೆಯಿಂದಲೇ ಮತದಾನ ಮಾಡಲು ಚುನಾವಣಾ ಆಯೋಗ ನೀಡಿರುವ ಅವಕಾಶ ಬಹುತೇಕ ಯಶಸ್ವಿಯಾಗಿದೆ. ಚುನಾವಣಾ ಆಯೋಗ ನೀಡಿರುವ ಮಾಹಿತಿ ಪ್ರಕಾರ, ಮೇ 4ರ ವರೆಗೆ 80 ವರ್ಷ ಮೇಲ್ಪಟ್ಟವರು ಮತ್ತು ಅಂಗವಿಕಲರ ಪೈಕಿ ಶೇ 92ರಷ್ಟು ಮಂದಿ ಮತದಾನ ಮಾಡಿದ್ದಾರೆ. ಒಟ್ಟು 80,250 ಮಂದಿ ಮನೆಯಿಂದಲೇ ಮತದಾನ ಮಾಡುವ ಆಯ್ಕೆಯನ್ನು ಆರಿಸಿಕೊಂಡಿದ್ದರು ಎಂದು ಆಯೋಗ ಹೇಳಿದೆ. 80 ವರ್ಷ ಮೇಲ್ಪಟ್ಟ 80,250 ಮಂದಿ ಹಾಗೂ

ವೋಟ್ ಪ್ರಂ ಹೋಮ್; ಎಷ್ಟು ಸಕ್ಸಸ್ ಆಯ್ತು ಗೊತ್ತಾ? Read More »

ಇಂದು(ಮೇ.6) ಪುತ್ತೂರಿಗೆ ಯುಪಿ ಸಿಎಂ ಯೋಗಿ| ಸ್ವಾಗತ ಕೋರಿ ಪಕ್ಷೇತರ ಅಭ್ಯರ್ಥಿ ಪುತ್ತಿಲ ಬ್ಯಾನರ್; ಬಿಜೆಪಿಯಿಂದ ದೂರು

ಸಮಗ್ರ ನ್ಯೂಸ್: ಪುತ್ತೂರಿನಲ್ಲಿ ಬಿಜೆಪಿಗೆ ಠಕ್ಕರ್ ಕೊಡುತ್ತಿರುವ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ವಿರುದ್ದ ಇದೀಗ ಬಿಜೆಪಿ ಗರಂ ಆಗಿದ್ದು ಚುನಾವಣಾಧಿಕಾರಿಗೆ ದೂರು ನೀಡಿದೆ. ಪುತ್ತೂರು ಹೈವೋಲ್ಟೆಜ್ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿ ಪುತ್ತಿಲರನ್ನು ಸೊಲೀಸಲು ಇದೀಗ ಬಿಜೆಪಿ ಸ್ಟಾರ್ ಕ್ಯಾಂಪೈನರ್ ಗಳನ್ನು ನೆಚ್ಚಿಕೊಂಡಿದ್ದು, ಈಗ ಪುತ್ತೂರು ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಆಗಿಸುತ್ತಿದ್ದಾರೆ. ಇನ್ನು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಸ್ವಾಗತ ಕೋರಿ ಪೋಸ್ಟರ್ ಹಾಕಿದ ಪಕ್ಷೇತರ ಅಭ್ಯರ್ಥಿ

ಇಂದು(ಮೇ.6) ಪುತ್ತೂರಿಗೆ ಯುಪಿ ಸಿಎಂ ಯೋಗಿ| ಸ್ವಾಗತ ಕೋರಿ ಪಕ್ಷೇತರ ಅಭ್ಯರ್ಥಿ ಪುತ್ತಿಲ ಬ್ಯಾನರ್; ಬಿಜೆಪಿಯಿಂದ ದೂರು Read More »

ನೀಟ್ ಪರೀಕ್ಷೆ ನಡುವೆ ಪ್ರಧಾನಿ ಮೋದಿ ರೋಡ್ ಶೋ| ಪರೀಕ್ಷಾರ್ಥಿಗಳಿಗೆ ತೊಂದರೆ ಹಿನ್ನಲೆ ಸಮಯ ಬದಲಾವಣೆಗೆ ಹೆಚ್ ಡಿಕೆ ಆಗ್ರಹ

ಸಮಗ್ರ ನ್ಯೂಸ್: ಇದೇ 7ರಂದು ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣೆಗಾಗಿ ಹಮ್ಮಿಕೊಂಡಿರುವ ರೋಡ್ ಶೋದಿಂದ ನೀಟ್ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಲಿದೆ. ಈ ಕಾರಣಕ್ಕೆ ಪ್ರಧಾನಿಗಳು ರೋಡ್ ಶೋ ವೇಳಾಪಟ್ಟಿಯನ್ನು ಬದಲಿಸಿಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಭಾನುವಾರ ನೀಟ್ ಪರೀಕ್ಷೆಯ ( NEET Exam ) ನಡುವೆಯೂ ಪ್ರಧಾನಿ ಮೋದಿ ರೋಡ್ ಶೋ ವಿಚಾರದ ಬಗ್ಗೆ ವಿದ್ಯಾರ್ಥಿಗಳ ಪೋಷಕರು ಹಾಗೂ ಸಾರ್ವಜನಿಕರಿಂದ ಬರುತ್ತಿರುವ

ನೀಟ್ ಪರೀಕ್ಷೆ ನಡುವೆ ಪ್ರಧಾನಿ ಮೋದಿ ರೋಡ್ ಶೋ| ಪರೀಕ್ಷಾರ್ಥಿಗಳಿಗೆ ತೊಂದರೆ ಹಿನ್ನಲೆ ಸಮಯ ಬದಲಾವಣೆಗೆ ಹೆಚ್ ಡಿಕೆ ಆಗ್ರಹ Read More »

ಸುಳ್ಯ ಕ್ಷೇತ್ರಕ್ಕೆ ಬಿಜೆಪಿ ಶಾಸಕ, ಸಂಸದರ ಕೊಡುಗೆ ಏನು? ಬೆಳ್ತಂಗಡಿ, ಪುತ್ತೂರುಗೆ ಬರುವ ಅನುದಾನ ಸುಳ್ಯಕ್ಕೆ ಏಕಿಲ್ಲ? ಕಾಂಗ್ರೆಸ್ ನಿಂದ ಪ್ರಶ್ನೆಗಳ ಸುರಿಮಳೆ

ಸಮಗ್ರ ನ್ಯೂಸ್: ಕಳೆದ ೫ ವರ್ಷದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಮೂರುವರೆ ಸಾವಿರ ಕೋಟಿ ಅನುದಾನ ತಂದಿದ್ದಾರೆ, ಪುತ್ತೂರಿನ ಅಭಿವೃದ್ಧಿಗೆ ಎರಡೂವರೆ ಸಾವಿರ ಕೋಟಿ ಅನುದಾನ ತರಿಸಲಾಗಿದೆಯೆಂದು ಎಂದು ನಳಿನ್ ಕುಮಾರ್ ಕಟೀಲ್ ಹೇಳುತ್ತಾರೆ. ಸುಳ್ಯ ಕ್ಷೇತ್ರದ ಅಭಿವೃದ್ಧಿಗೆ ಕೇವಲ 150 ರಿಂದ 200 ಕೋಟಿ ಮಾತ್ರ ಬಂದಿದೆಯಂತೆ. ಹಾಗಾದರೆ ಇಲ್ಲಿಗೆ ಇದು ಸಾಕೇ? ಸುಳ್ಯ ಕ್ಷೇತ್ರಕ್ಕೆ ಬಿಜೆಪಿ ಶಾಸಕರ, ಸಂಸದರ ಕೊಡುಗೆ ಏನು? ಎಂದು ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ ಪ್ರಶ್ನಿಸಿದ್ದಾರೆ.

ಸುಳ್ಯ ಕ್ಷೇತ್ರಕ್ಕೆ ಬಿಜೆಪಿ ಶಾಸಕ, ಸಂಸದರ ಕೊಡುಗೆ ಏನು? ಬೆಳ್ತಂಗಡಿ, ಪುತ್ತೂರುಗೆ ಬರುವ ಅನುದಾನ ಸುಳ್ಯಕ್ಕೆ ಏಕಿಲ್ಲ? ಕಾಂಗ್ರೆಸ್ ನಿಂದ ಪ್ರಶ್ನೆಗಳ ಸುರಿಮಳೆ Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಇಬ್ಬರು ಪಿಎಫ್ಐ ಕಾರ್ಯಕರ್ತರ ವಿರುದ್ಧ ಎನ್ಐಎ ಚಾರ್ಜ್ ಶೀಟ್ ಸಲ್ಲಿಕೆ

ಸಮಗ್ರ ನ್ಯೂಸ್: ಸುಳ್ಯದ ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಅವರ ಹತ್ಯೆಗೆ ಸಂಬಂಧಿಸಿದಂತೆ ಇಬ್ಬರು ಪಿಎಫ್ಐ ಕಾರ್ಯಕರ್ತರ ವಿರುದ್ದ ರಾಷ್ಟ್ರೀಯ ತನಿಖಾ ದಳ (NIA) ಪೂರಕ ಆರೋಪಗಳೊಂದಿಗೆ ಚಾರ್ಜ್‌ ಶೀಟ್ ಸಲ್ಲಿಸಿದೆ. ಮೇ 2ರಂದು ಎನ್ಐಎ ತನಿಖಾಧಿಕಾರಿಗಳು ಇತ್ತೀಚೆಗೆ ಬಂಧಿಸಲ್ಪಟ್ಟ ಮಡಿಕೇರಿ ಮೂಲದ ಎಂ.ಹೆಚ್. ತುಫೈಲ್ ಮತ್ತು ಮಹಮದ್ ಜುಬೇರ್ ಎಂಬ ಆರೋಪಿಗಳ ವಿರುದ್ದ ಚಾರ್ಜ್ ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಮಡಿಕೇರಿ ಮೂಲದ ಪಿಎಫ್ಐ ಸಂಘಟನೆಯ ಕೊಡಗು ಜಿಲ್ಲಾ ಮಾಜಿ ಕಾರ್ಯದರ್ಶಿ ಆಗಿದ್ದ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಇಬ್ಬರು ಪಿಎಫ್ಐ ಕಾರ್ಯಕರ್ತರ ವಿರುದ್ಧ ಎನ್ಐಎ ಚಾರ್ಜ್ ಶೀಟ್ ಸಲ್ಲಿಕೆ Read More »

ಭಜರಂಗದಳ ನಿಷೇಧ ಪ್ರಸ್ತಾಪದಿಂದ ಹಿಂದೆ ಸರಿಯಿತೇ ಕಾಂಗ್ರೆಸ್| ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದ್ದೇನು?

ಸಮಗ್ರ ನ್ಯೂಸ್: ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇಧ ಮಾಡುವುದಾಗಿ ಭರವಸೆಯನ್ನು ಘೋಷಿಸಿದೆ. ಈ ಘೋಷಣೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇಂದು ಕೂಡ ಕಾಂಗ್ರೆಸ್ ಈ ಪ್ರಸ್ತಾಪದ ಬಗ್ಗೆ ಹನುಮಾನ್ ಚಾಲೀಸ್ ಪಠಿಸುವ ನಿರ್ಧಾರ ಕೈಗೊಂಡಿದೆ. ಈ ಬೆನ್ನಲ್ಲೇ ರಾಜ್ಯ ಸರ್ಕಾರದಿಂದ ಬಜರಂಗದಳವನ್ನು ಬ್ಯಾನ್ ಮಾಡುವುದಕ್ಕೆ ಆಗುವುದಿಲ್ಲ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಎಂ. ವೀರಪ್ಪ ಮೊಯ್ಲಿ ಹೇಳುವ ಮೂಲಕ, ಭಜರಂಗದಳ ನಿಷೇಧ ಪ್ರಸ್ತಾಪದಿಂದ ಕೈ ಹಿಂದೆ ಸರಿದಿರುವುದನ್ನು ಪ್ರಾಸಂಗಿಕವಾಗಿ ಬಿಚ್ಚಿಟ್ಟಿದ್ದಾರೆ. ಬೆಂಗಳೂರಿನಲ್ಲಿ‌ ಸುದ್ದಿಗೋಷ್ಠಿ ನಡೆಸಿ

ಭಜರಂಗದಳ ನಿಷೇಧ ಪ್ರಸ್ತಾಪದಿಂದ ಹಿಂದೆ ಸರಿಯಿತೇ ಕಾಂಗ್ರೆಸ್| ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದ್ದೇನು? Read More »