ರಾಜಕೀಯ

ಕಮಲ ಎಸೆದು ಕೈ ಹಿಡಿದ ಜಗದೀಶ್ ಶೆಟ್ಟರ್

ಸಮಗ್ರ ನ್ಯೂಸ್: ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಸ್ಪರ್ಧಿಸಲು ಬಿಜೆಪಿಯಿಂದ ಟಿಕೆಟ್ ದೊರಕದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬಿಜೆಪಿಗೆ ಗುಡ್‌ ಬೈ ಹೇಳಿದ್ದು, ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಬಿಜೆಪಿ ವರಿಷ್ಠರ ಸಂಧಾನಕ್ಕೆ ಮಣಿಯದ ಶೆಟ್ಟರ್ ಕೆಪಿಸಿಸಿ ಕಚೇರಿಯಲ್ಲಿ ಇಂದು ಬೆಳಗ್ಗೆ 9.30ಗೆ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಇತರೆ ಕಾಂಗ್ರೆಸ್ ನಾಯಕರು ಶೆಟ್ಟರ್‌ರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

ಕಮಲ ಎಸೆದು ಕೈ ಹಿಡಿದ ಜಗದೀಶ್ ಶೆಟ್ಟರ್ Read More »

ಯಾಕಿಂಗಾಡ್ತಾರೋ ಸಿದ್ದರಾಮಯ್ಯ| ಬಿಜೆಪಿ ಬದಲು ಬಾಯಿ ತಪ್ಪಿ ಕಾಂಗ್ರೆಸ್ ಗೇ ಬೈದುಕೊಂಡ ಮಾಜಿ ಸಿಎಂ

ಸಮಗ್ರ ನ್ಯೂಸ್: ಭಾಷಣದ ಆವೇಗದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಎಡವಟ್ಟಿನ ಹೇಳಿಕೆ ನೀಡಿದ್ದಾರೆ. ನಿನ್ನೆ ಕೋಲಾರದಲ್ಲಿ ನಡೆದ ಪಕ್ಷದ ಕಾರ್ಯಕ್ರಮದಲ್ಲಿ ‘ರಾಜ್ಯದ ಮಾನ ಮರ್ಯಾದೆ ತೆಗೆದದ್ದು ಕಾಂಗ್ರೆಸ್’ ಎಂದು ಹೇಳಿದ್ದಾರೆ. ಬಳಿಕ ಸರಿಪಡಿಸಿಕೊಂಡ ಅವರು ಮಾತು ಮುಂದುವರೆಸಿದರು. ಮೇ ೧೦ರಂದು ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಯಾವ ಪಕ್ಷಕ್ಕೆ ಅಧಿಕಾರ ಮಾಡಲು ಅವಕಾಶ ಕೊಟ್ಟರೆ ಈ ರಾಜ್ಯದ ಜನರ ನೆಲ ಜಲ ಭಾಷೆಯನ್ನು ರಕ್ಷಣೆ ಮಾಡ್ತಾರೆ ಎಂಬುದನ್ನು ವಿಚಾರ ಮಾಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಯಾಕಿಂಗಾಡ್ತಾರೋ ಸಿದ್ದರಾಮಯ್ಯ| ಬಿಜೆಪಿ ಬದಲು ಬಾಯಿ ತಪ್ಪಿ ಕಾಂಗ್ರೆಸ್ ಗೇ ಬೈದುಕೊಂಡ ಮಾಜಿ ಸಿಎಂ Read More »

Bjp high command talked with shettar| ಬಿಜೆಪಿಯಲ್ಲಿ ರಾತ್ರೋರಾತ್ರಿ ಕ್ಷಿಪ್ರ ಬೆಳವಣಿಗೆ| ಶೆಟ್ಟರ್ ಜೊತೆಗೆ‌ ಮಾತನಾಡಿದ್ದಾರಂತೆ ಅಮಿತ್ ಶಾ!

ಸಮಗ್ರ ನ್ಯೂಸ್: ಜಗದೀಶ್ ಶೆಟ್ಟರ್ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾಗಿದೆ. ಆದರೆ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡದಂತೆ ಶೆಟ್ಟರ್ ಅವರ ಮೇಲೆ ಒತ್ತಡ ಹೆಚ್ಚಾಗುತ್ತಿದೆ. ರಾಜ್ಯ ನಾಯಕರು ಮಾತ್ರವಲ್ಲ, ಬಿಜೆಪಿಯ ಪವರ್ ಫುಲ್ ಮ್ಯಾನ್ ಅಮಿತ್ ಶಾ ಖುದ್ದು ಕರೆ ಮಾಡಿ ಶೆಟ್ಟರ್ ಜೊತೆ ಮಾತನಾಡಿದ್ದಾರಂತೆ. ಜಗದೀಶ್ ಶೆಟ್ಟರ್ ರಾಜೀನಾಮೆ ಬಿಜೆಪಿಗೆ ವಿಧಾನಸಭೆ ಚುನಾವಣೆಯಲ್ಲಿ ದೊಡ್ಡ ಪೆಟ್ಟು ನೀಡುವುದು ಪಕ್ಕಾ ಎನ್ನಲಾಗುತ್ತಿದೆ. ಈ ನಡುವೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಶೆಟ್ಟರ್ ಅವರನ್ನು ಹೇಗಾದರೂ ಮನವೊಲಿಸಿ, ಬಿಜೆಪಿಯಲ್ಲೇ

Bjp high command talked with shettar| ಬಿಜೆಪಿಯಲ್ಲಿ ರಾತ್ರೋರಾತ್ರಿ ಕ್ಷಿಪ್ರ ಬೆಳವಣಿಗೆ| ಶೆಟ್ಟರ್ ಜೊತೆಗೆ‌ ಮಾತನಾಡಿದ್ದಾರಂತೆ ಅಮಿತ್ ಶಾ! Read More »

ರಾಜ್ಯದ ಜನತೆ ಜಗದೀಶ್ ಶೆಟ್ಟರ್ ರನ್ನು ಕ್ಷಮಿಸುವುದಿಲ್ಲ: ಬಿ.ಎಸ್.ವೈ

ಸಮಗ್ರ ನ್ಯೂಸ್:‘ಜಗದೀಶ್ ಶೆಟ್ಟರ್ ಅವರು ಕೈಗೊಂಡ ನಿರ್ಧಾರ ಹಾಗೂ ನೀಡಿರುವ ಹೇಳಿಕೆಗಳಿಂದ ನಮಗೆ ಬೇಸರವಾಗಿದೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಜಗದೀಶ್ ಶೆಟ್ಟರ್ ರಾಜೀನಾಮೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿ, ಅವರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡಿದೆವು. ಆದರೆ, ಇಂದು ‘ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರಲು ಕಾರಣವೇನು?, ರಾಜ್ಯದ ಜನತೆ ಶೆಟ್ಟರ್ ಅವರನ್ನು ಕ್ಷಮಿಸುವುದಿಲ್ಲ’ ಎಂದು ವಾಗ್ದಾಳಿ ನಡೆಸಿದ್ದಾರೆ. ‘ಧರ್ಮೇಂದ್ರ ಪ್ರಧಾನ್ ಅವರು ಜಗದೀಶ್ ಶೆಟ್ಟರ್ ಕುಟುಂಬಕ್ಕೆ ಟಿಕೆಟ್

ರಾಜ್ಯದ ಜನತೆ ಜಗದೀಶ್ ಶೆಟ್ಟರ್ ರನ್ನು ಕ್ಷಮಿಸುವುದಿಲ್ಲ: ಬಿ.ಎಸ್.ವೈ Read More »

ಜೆಡಿಎಸ್ ಸಣ್ಣ ಪಕ್ಷ, ಜಗದೀಶ್ ಶೆಟ್ಟರ್ ರಂತಹ ದೊಡ್ಡ ನಾಯಕರ ಅವಶ್ಯಕತೆಯಿಲ್ಲ: ಎಚ್.ಡಿ.ಕೆ

Samagra news: ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಭೇಟಿಯ ವೇಳೆ ‘ಜೆಡಿಎಸ್ ಸಣ್ಣ ಪಕ್ಷ . ನಮ್ಮ ಪಕ್ಷಕ್ಕೆ ಜಗದೀಶ್ ಶೆಟ್ಟರ್ ಅವರಂತಹ ದೊಡ್ಡ ನಾಯಕರ ಅವಶ್ಯಕತೆಯಿಲ್ಲ’ ಎಂದು ಹೇಳಿದರು. ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭಾನುವಾರ ಭೇಟಿ ನೀಡಿ ಶ್ರೀಮಂಜುನಾಥ ಸ್ವಾಮಿ ಹಾಗೂ ಪರಿವಾರ ದೇವರ ದರ್ಶನ ಪಡೆದ ಬಳಿಕ ಅವರು ಸುದ್ದಿಗಾರರ ಜೊತೆ ಮಾತನಾಡಿ, ಬಿಜೆಪಿಗೆ ಜಗದೀಶ್ ಶೆಟ್ಟರ್ ರಾಜೀನಾಮೆ ನೀಡಿದ ವಿಚಾರವಾಗಿ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ‘ಶೆಟ್ಟರ್ ಅವರ ರಾಜಿನಾಮೆ ಬಿಜೆಪಿಯ ಆಂತರಿಕ

ಜೆಡಿಎಸ್ ಸಣ್ಣ ಪಕ್ಷ, ಜಗದೀಶ್ ಶೆಟ್ಟರ್ ರಂತಹ ದೊಡ್ಡ ನಾಯಕರ ಅವಶ್ಯಕತೆಯಿಲ್ಲ: ಎಚ್.ಡಿ.ಕೆ Read More »

ಸುಳ್ಯ: ಬಿಜೆಪಿ ಆಭ್ಯರ್ಥಿ ಕುಮಾರಿ ಭಾಗೀರಥಿ ಮುರುಳ್ಯರಿಂದ ಮತ ಪ್ರಚಾರ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಕನಕಮಜಲು ಗ್ರಾಮದಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ-2023ರ ಭಾಜಪಾ ಸುಳ್ಯ ವತಿಯಿಂದ ಮತ ಪ್ರಚಾರ ಮಾ.16ರಂದು ನಡೆಸಲಾಯಿತು. ಸಭೆ ಗೆ ಆಗಮಿಸಿದ ಭಾಗೀರಥಿ ಮುರುಳ್ಯರನ್ನು ಮಾಜಿ.ತಾ.ಪಂ ಅಧ್ಯಕ್ಷೆ ಗುಣವತಿ ಕೊಲ್ಲಂತಡ್ಕ ಗ್ರಾಮಸ್ಥರ ಪರವಾಗಿ ಶಾಲು ಹೊದಿಸಿ ಸ್ಚಾಗತಿಸಿದರು. ಕ್ಷೇತ್ರ ಚುನಾವಣಾ ಮಾದ್ಯಮ ವಕ್ತಾರ ವೆಂಕಟ್ ದಂಬೆಕೋಡಿ ಮಾತನಾಡಿಕಾರ್ಯಕರ್ತರ ರಣೊತ್ಸಹ ನಮಗೆ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ಮಾಡಲು ಮತ್ತಷ್ಟು ಹುರುಪನ್ನು ಕೊಟ್ಟಿದೆ,ಈ ಉತ್ಸಾಹ ಮುಂದೆ ನಮ್ಮ ಅಭ್ಯರ್ಥಿಯು ಗೆಲ್ಲುವವರೆಗೆ ಮುಂದುವರಿಯಲಿ ಎಂದು ಹುರಿತುಂಬಿಸಿದರು.

ಸುಳ್ಯ: ಬಿಜೆಪಿ ಆಭ್ಯರ್ಥಿ ಕುಮಾರಿ ಭಾಗೀರಥಿ ಮುರುಳ್ಯರಿಂದ ಮತ ಪ್ರಚಾರ Read More »

ಜಗದೀಶ್ ಶೆಟ್ಟರ್ ರಾಜೀನಾಮೆಯಿಂದಪಕ್ಷಕ್ಕೆ ಡ್ಯಾಮೇಜ್ ಆಗೋದು ಖಂಡಿತ: ಬೊಮ್ಮಾಯಿ

Samagra news: ಜಗದೀಶ್ ಶೆಟ್ಟರ್ (Jagadish Shettar) ಅವರು ರಾಜೀನಾಮೆ ನೀಡಿರುವುದು ರಾಜೀನಾಮೆಯಿಂದ ಪಕ್ಷಕ್ಕೆ ಡ್ಯಾಮೇಜ್ ಆಗೋದು ಖಂಡಿತ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೆಟ್ಟರ್ ಈ ಭಾಗದ ಪ್ರಮುಖ ನಾಯಕರು ಹಾಗೂ ಹಿರಿಯರಾಗಿದ್ದಾರೆ. ಆದರೆ ಪಕ್ಷ ಹಲವಾರು ಸಂದರ್ಭದಲ್ಲಿ ಅನೇಕ ನಿರ್ಣಯ ಮಾಡಿದ್ದೆ. ಸ್ಥಾಪಿತ ರಾಜಕಾರಣದಲ್ಲಿ ಬದಲಾವಣೆ ತರುವ ಪ್ರಯತ್ನ ಮಾಡುತ್ತಿದೆ. ಮೋದಿ ನೇತೃತ್ವದಲ್ಲಿ ಬದಲಾವಣೆ ತರುವ ಪ್ರಯತ್ನ ಮಾಡಿದ್ದು, ಯಡಿಯೂರಪ್ಪ ನಮಗೆ ಆದರ್ಶರು, ಮುಖ್ಯಮಂತ್ರಿ ಇರುವಾಗಲೇ ರಾಜೀನಾಮೆ ಕೊಟ್ಟಿದ್ದಾರೆ

ಜಗದೀಶ್ ಶೆಟ್ಟರ್ ರಾಜೀನಾಮೆಯಿಂದಪಕ್ಷಕ್ಕೆ ಡ್ಯಾಮೇಜ್ ಆಗೋದು ಖಂಡಿತ: ಬೊಮ್ಮಾಯಿ Read More »

ಶಾಸಕ‌ ಸ್ಥಾನಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ರಾಜೀನಾಮೆ

ಸಮಗ್ರ ನ್ಯೂಸ್: ಹುಬ್ಬಳ್ಳಿ- ಧಾರವಾಡ ಸೆಂಟ್ರಲ್‌ ಕ್ಷೇತ್ರದಿಂದ ಹಿಂದೆ ಸರಿಯುವಂತೆ ಬಿಜೆಪಿ (BJP) ಹೈಕಮಾಂಡ್‌ ಸೂಚಿಸಿರುವ ಹಿನ್ನೆಲೆಯಲ್ಲಿ ಜಗದೀಶ್ ಶೆಟ್ಟರ್ ಶಾಸಕ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಹುಬ್ಬಳ್ಳಿಯ ಕೇಶ್ವಾಪುರದ ಮಧುರಾ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ ವರಿಷ್ಠರ ಜೊತೆ ಮಾತುಕತೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಈ ನಿರ್ಧಾರ ಪ್ರಕಟಿಸಿದರು. ಸದ್ಯ ಜಗದೀಶ್ ಶೆಟ್ಟರ್ ನಡೆ ಕುತೂಹಲ ಮೂಡಿಸಿದ್ದು, ಕಾಂಗ್ರೆಸ್ ಅಥವಾ ಜೆಡಿಎಸ್ ಕೈ‌ಹಿಡಿಯುತ್ತಾರಾ ಅಥವಾ ಪಕ್ಷೇತರ ಸ್ಪರ್ಧೆ ‌ಮಾಡ್ತಾರಾ ಕಾದುನೋಡಬೇಕಿದೆ.

ಶಾಸಕ‌ ಸ್ಥಾನಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ರಾಜೀನಾಮೆ Read More »

ಅರುಣ್ ಕುಮಾರ್ ಪುತ್ತಿಲ ಪಕ್ಷೇತರ ಸ್ಪರ್ಧೆ ಹಿನ್ನಲೆ| ಸುಳ್ಯದಲ್ಲೂ ಗರಿಗೆದರಿದ ರಾಜಕೀಯ ಚಟುವಟಿಕೆ| ಬಂಡಾಯದ ಬಾವುಟ ಬೀಸುವತ್ತ ಹಿಂದೂ ಯುವಮುಖಂಡ!?

ಸಮಗ್ರ ನ್ಯೂಸ್: ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಹಿಂದು ಪರ ಸಂಘಟನೆಯ ನಾಯಕರ ಅಭಿಮಾನಿ ಯುವಕರ ತಂಡವು ಮತ್ತೊಮ್ಮೆ ಗುಪ್ತ ಸಭೆ ಸೇರಿರುವುದಾಗಿ ಹೇಳಲಾಗುತ್ತಿದೆ. ಪುತ್ತೂರಿನಲ್ಲಿ ಆಶಾ ತಿಮ್ಮಪ್ಪ ಇವರನ್ನು ಬಿಜೆಪಿ ಕಣಕ್ಕಿಳಿಸಿದ್ದು, ಸುಳ್ಯದಲ್ಲಿ ಕು.ಭಾಗೀರಥಿ ಮುರುಳ್ಯ ಇವರನ್ನು ಬಿಜೆಪಿಯು ತನ್ನ ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದು ಪುತ್ತೂರು ಹಾಗೂ ಸುಳ್ಯದಲ್ಲಿ ಇದೀಗ ಮತ್ತೆ ಕೇಸರಿ ಕಲಿಗಳ ಮಧ್ಯೆ ಭಿನ್ನಾಭಿಪ್ರಾಯ ದಟ್ಟವಾಗಿ ಗೋಚರಿಸುತ್ತಿದೆ. ಪುತ್ತೂರಿನಲ್ಲಿ ಹಿಂದು ಯುವಕರ ಕಣ್ಮಣಿ ಅರುಣ್ ಕುಮಾರ್ ಪುತ್ತಿಲ ಸ್ಪರ್ದೆ ಖಚಿತವಾಗುತ್ತಿದ್ದಂತೆ ಸುಳ್ಯದಲ್ಲಿ ಇದೀಗ ಮತ್ತೆ

ಅರುಣ್ ಕುಮಾರ್ ಪುತ್ತಿಲ ಪಕ್ಷೇತರ ಸ್ಪರ್ಧೆ ಹಿನ್ನಲೆ| ಸುಳ್ಯದಲ್ಲೂ ಗರಿಗೆದರಿದ ರಾಜಕೀಯ ಚಟುವಟಿಕೆ| ಬಂಡಾಯದ ಬಾವುಟ ಬೀಸುವತ್ತ ಹಿಂದೂ ಯುವಮುಖಂಡ!? Read More »

ಕಾಂಗ್ರೆಸ್ ಕೈ ಹಿಡಿತಾರಾ ಶೆಟ್ಟರ್? ಇಂದು ರಾತ್ರಿಯೇ ಮಹತ್ವದ ನಿರ್ಧಾರ ಪ್ರಕಟ ಸಾಧ್ಯತೆ

ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ. ಹುಬ್ಬಳ್ಳಿಯ ತನ್ನ ನಿವಾಸದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಇಂದು ರಾತ್ರಿ ಪಕ್ಷದ ರಾಷ್ಟ್ರೀಯ ನಾಯಕರಾದ ಧರ್ಮೇಂದ್ರ ಪ್ರಧಾನ್, ಪ್ರಹ್ಲಾದ್ ಜೋಶಿ, ಸಿಎಂ ಬಸವರಾಜ ಬೊಮ್ಮಾಯಿ ವರಿಷ್ಠರ ಸಂದೇಶ ತಿಳಿಸಲಿದ್ದಾರೆ. ಅವರ ನಿರ್ಧಾರ ಏನೆಂಬುದನ್ನು ತಿಳಿಸುತ್ತೇನೆ. ನನಗೆ ಟಿಕೆಟ್ ನೀಡುತ್ತಾರೋ ಇಲ್ಲವೋ ಎಂಬುದಷ್ಟೇ ಈಗಿರುವ ಪ್ರಶ್ನೆ ಶೆಟ್ಟರ್ ತಿಳಿಸಿದ್ದಾರೆ. ನಮ್ಮ ಕುಟುಂಬದ ಸದಸ್ಯರೊಬ್ಬರಿಗೆ ಟಿಕೆಟ್ ಕೊಡುವುದಾಗಿ ಹೇಳಿದ್ದು,

ಕಾಂಗ್ರೆಸ್ ಕೈ ಹಿಡಿತಾರಾ ಶೆಟ್ಟರ್? ಇಂದು ರಾತ್ರಿಯೇ ಮಹತ್ವದ ನಿರ್ಧಾರ ಪ್ರಕಟ ಸಾಧ್ಯತೆ Read More »