ಟಿಪ್ಪು ಸುಲ್ತಾನ್ ಮಾದರಿಯಲ್ಲೇ ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕು| ವಿವಾದಾತ್ಮಕ ಹೇಳಿಕೆ ನೀಡಿದ ಸಚಿವ ಅಶ್ವತ್ಥ್ ನಾರಾಯಣ
ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದೆ. ಹೀಗಾಗಿ ರಾಜಕೀಯ ನಾಯಕರ ಪ್ರಚಾರದ ಭರಾಟೆ ಜೋರಾಗಿದೆ. ಈ ನಡುವೆ ಬಿಜೆಪಿ- ಕಾಂಗ್ರೆಸ್ ನಾಯಕ ನಡುವೆ ಮಾತಿನ ವಾಕ್ಸಮರ ಉಂಟಾಗಿದೆ. ಕಾಂಗ್ರೆಸ್ ಮೊದಲಿನಿಂದಲೂ ಟಿಪ್ಪು ಪರವಾಗಿ ಮಾತನಾಡುತ್ತಲೇ ಬಂದಿದ್ದರೆ, ಬಿಜೆಪಿ ಆತ ಒಬ್ಬ ದೇಶದ್ರೋಹಿ ಎಂದು ವಿರೋಧಿಸುತ್ತಲೇ ಬಂದಿದೆ. ಆದರೆ ಇದೀಗ ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಟಿಪ್ಪು ಸುಲ್ತಾನ್ ಮಾದರಿಯಲ್ಲೇ ಹೊಡೆದು ಹಾಕಬೇಕು ಎಂದು ಹೇಳಿಕೆ ನೀಡಿದ್ದಾರೆ. […]










