ಪ್ರತಿಭಟನೆ ವೇಳೆ ಸಾವನ್ನಪ್ಪಿದ ಅಂಗನವಾಡಿ ಸಹಾಯಕಿ| ಸರ್ಕಾರಕ್ಕೆ ಛೀಮಾರಿ ಹಾಕಿದ ಮಾಜಿ ಸಿಎಂ ಸಿದ್ದರಾಮಯ್ಯ
ಸಮಗ್ರ ನ್ಯೂಸ್: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ನಡೆಸುತ್ತಿದ್ದ ಪ್ರತಿಭಟನೆಯ ವೇಳೆ ಅಂಗನವಾಡಿ ಸಹಾಯಕಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಮಹಿಳೆಯನ್ನು ನೀಲಮ್ಮ ದಾನಪ್ಪಗೌಡ (58) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದಿದ್ದ ಪ್ರತಿಭಟನೆ ಬಳಿಕ ಊರಿಗೆ ಮರಳಿದ್ದ ಶಿವಮೊಗ್ಗ ಮೂಲದ ಅಂಗನವಾಡಿ ಸಹಾಯಕಿ ಸಾವನ್ನಪ್ಪಿದ್ದಾರೆ. ಈ ಕುರಿತು ಸರ್ಕಾರದ ವಿರುದ್ದ ಹರಿಹಾಯ್ದ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ, ಅಂಗನವಾಡಿ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆಯಲ್ಲಿ […]










