“ಟಿಕೆಟ್ ಆಕಾಂಕ್ಷಿಗಳಿಂದ ಕಾಂಗ್ರೆಸ್ ಲಕ್ಷ-ಲಕ್ಷ ಲೂಟಿ ಮಾಡಲು ಹೊರಟಿದೆ”| “ಜೇಬು ಖಾಲಿಯಾಗಲಿದೆಯೇ ಹೊರತು ಖಾಲಿಯಾದ ಜೇಬಿಗೆ ಟಿಕೆಟ್ ಬರುವುದಿಲ್ಲ”
ಬೆಂಗಳೂರು: ಟಿಕೆಟ್ ಆಕಾಂಕ್ಷಿಗಳಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಲಕ್ಷ-ಲಕ್ಷ ಲೂಟಿ ಮಾಡ್ತಿದ್ದಾರೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, 2018ರಲ್ಲಿ ನಾಮಪತ್ರ ಸಲ್ಲಿಸಲು ಕಾರ್ಯಕರ್ತರಿಂದ ಡಿಕೆ ಶಿವಕುಮಾರ್ 50-100 ಭಿಕ್ಷೆ ಬೇಡಿದರು. ಇದೀಗ ಕೋಟಿ-ಕೋಟಿ ರೂಪಾಯಿ ಆಸ್ತಿ ಇದ್ದರೂ, ಕೆಪಿಸಿಸಿ ಅಧ್ಯಕ್ಷರಾದ ಮೇಲೆ ಟಿಕೆಟ್ ಆಕಾಂಕ್ಷಿಗಳಿಂದ ಕಾಂಗ್ರೆಸ್ ಲಕ್ಷ-ಲಕ್ಷ ಲೂಟಿ ಮಾಡಲು ಹೊರಟಿದೆ. ಇದರಿಂದ ಆಕಾಂಕ್ಷಿಗಳ ಜೇಬು ಖಾಲಿಯಾಗಲಿದೆಯೇ ಹೊರತು ಖಾಲಿಯಾದ ಜೇಬಿಗೆ ಟಿಕೆಟ್ ಬರುವುದಿಲ್ಲ ಎಂದು ಕುಟುಕಿದೆ. […]










