ನಾಯಕತ್ವ ಬದಲಾವಣೆ, ಸಂಪುಟ ಪುನರ್ ರಚನೆಗೆ ನಾಳೆಯೇ ಮುಹೂರ್ತ ಫಿಕ್ಸ್!?| ಹೈಕಮಾಂಡ್ ನಿಂದ ಸಿಎಂ ಸಿದ್ದುಗೆ ಬುಲಾವ್
ಸಮಗ್ರ ನ್ಯೂಸ್: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಬೆಳವಣಿಗೆಯೊಂದರಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್‌ನಿಂದ ದಿಢೀರ್ ಬುಲಾವ್ ಬಂದಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ರಾಷ್ಟ್ರ ರಾಜಧಾನಿ ನವದೆಹಲಿಗೆ ಪ್ರಯಾಣ ಬೆಳೆಸಲಿದ್ದು, ರಾಜ್ಯ ಕಾಂಗ್ರೆಸ್ ವಲಯದಲ್ಲಿ ಸಂಚಲನ ಮೂಡಿಸಿದೆ. ನಾಳೆ ಬೆಳಿಗ್ಗೆ 11 ಗಂಟೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಈ ಮಹತ್ವದ ಸಭೆ ಆಯೋಜನೆಯಾಗಿದೆ. ಸಭೆಯಲ್ಲಿ ಹೈಕಮಾಂಡ್ ನಾಯಕರು ಮತ್ತು ಸಿಎಂ ಸಿದ್ದರಾಮಯ್ಯ ಅವರು ಪ್ರಸಕ್ತ ರಾಜ್ಯ ರಾಜಕೀಯ ವಿದ್ಯಮಾನಗಳ ಕುರಿತು […]

