Mangalore

ಸಂಪಾಜೆ: ಗೂನಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್‍ಗೆ ಕಾರು ಢಿಕ್ಕಿ

ಸಮಗ್ರ ನ್ಯೂಸ್ : ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯ ಹೋಟೆಲ್‍ಗೆ ಢಿಕ್ಕಿ ಹೊಡೆದು ಪಲ್ಟಿಯಾದ ಘಟನೆ ದ.ಕ. ಸಂಪಾಜೆ ಗ್ರಾಮದ ಗೂನಡ್ಕದಲ್ಲಿ ಮಾ.11ರಂದು ಸಂಭವಿಸಿದೆ. ಸುಳ್ಯದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಸಂಪಾಜೆ ಮಸೀದಿಯ ಜಮಾಲುದ್ದೀನ್ ಎಂಬವರ ಕಾರು ಗೂನಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹನೀಫ್ ಎಂಬವರ ಹೋಟೆಲ್‍ಗೆ ಢಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ನಾಲ್ಕು ಜನ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಅವರನ್ನು ಸುಳ್ಯದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

ಸಂಪಾಜೆ: ಗೂನಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್‍ಗೆ ಕಾರು ಢಿಕ್ಕಿ Read More »

ಮಂಗಳೂರು: ವೇಶ್ಯಾವಾಟಿಕೆ ಅಡ್ಡೆಗೆ ದಾಳಿ| ಮಹಿಳೆ ಸೇರಿ ನಾಲ್ವರ ಬಂಧನ

ಸಮಗ್ರ ನ್ಯೂಸ್: ಯುವತಿಯರನ್ನು ಇಟ್ಟು ವೇಶ್ಯಾವಾಟಿಕೆ ನಡೆಸುತ್ತಿದ್ದುದಲ್ಲದೆ ಮಾಂಸ ಧಂದೆ ನಡೆಸುತ್ತಿದ್ದ ಅಡ್ಡೆಗೆ ಉಳ್ಳಾಲ ಪೊಲೀಸರು ದಾಳಿ ನಡೆಸಿ ದಂಪತಿ ಸಹಿತ ನಾಲ್ವರನ್ನ ಬಂಧಿಸಿದ ಘಟನೆ ಮಂಗಳೂರಿನ ಉಳ್ಳಾಲದ ಕೋಟೆಕಾರು ಬೀರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯ ಬಾಡಿಗೆ ಮನೆಯೊಂದರಲ್ಲಿ ನಡೆದಿದೆ. ಬೀರಿ ಬಾಡಿಗೆ ಮನೆ ನಿವಾಸಿ ಮೊಹಮ್ಮದ್ ಇಕ್ಬಾಲ್, ಆತನ ಪತ್ನಿ ಅಲಿಮಮ್ಮ, ಉಳ್ಳಾಲ ನಿವಾಸಿ ಶರ್ಫುದ್ದೀನ್, ಇರ್ಶಾದ್ ಅಡ್ಯನಡ್ಕ ಬಂಧಿತರು. ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಮೊಹಮ್ಮದ್ ಇಕ್ಬಾಲ್ ಈ ಪ್ರಕರಣದ ಮುಖ್ಯ

ಮಂಗಳೂರು: ವೇಶ್ಯಾವಾಟಿಕೆ ಅಡ್ಡೆಗೆ ದಾಳಿ| ಮಹಿಳೆ ಸೇರಿ ನಾಲ್ವರ ಬಂಧನ Read More »

ಮಂಗಳೂರು: ಮತಾಂತರಗೊಳಿಸಿ ಲೈಂಗಿಕ ಕಿರುಕುಳ| ಮುಸ್ಲಿಂ ಯುವಕನ ವಿರುದ್ದ ದೂರಿತ್ತ ಯುವತಿ

ಸಮಗ್ರ ನ್ಯೂಸ್: ಮತಾಂತರಗೊಳಿಸಿ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಯುವತಿಯೋರ್ವಳು ಮಂಗಳೂರು ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ಬಿಕರ್ನಕಟ್ಟೆಯಲ್ಲಿರುವ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದಾಗ ಬಿಕರ್ನಕಟ್ಟೆಯ ಕೈಕಂಬದಲ್ಲಿರುವ ಖಲೀಲ್‌ನ ಮೊಬೈಲ್‌ ಶಾಪ್‌ನಲ್ಲೇ ಮೊಬೈಲ್‌ ರಿಚಾರ್ಜ್‌ ಮಾಡುತ್ತಿದ್ದೆ.ಆಗ ಖಲೀಲ್‌ನ ಪರಿಚಯವಾಗಿತ್ತು. 2021ರ ಜ.14ರಂದು ಖಲೀಲ್‌ ಒಳ್ಳೆಯ ಕೆಲಸ ಮತ್ತು ಹಣ ಕೊಡುವುದಾಗಿ ಆಮಿಷವೊಡ್ಡಿ ಪುಸಲಾಯಿಸಿ ಆತನ ಕುಟುಂಬದ ಮನೆಯಾದ ಕಲ್ಲಾಪುಗೆ ಕರೆದುಕೊಂಡು ಹೋಗಿ ಅಲ್ಲಿದ್ದ ಮಹಿಳೆಯರಿಗೆ ಪರಿಚಯಿಸಿದ. ಮುಸ್ಲಿಂ ಧರ್ಮಕ್ಕೆ ಮತಾಂತರವಾಗಲು, ಕುರಾನ್‌ ಓದಲು ಒತ್ತಾಯ ಮಾಡಿ ನಮಾಝ್ ಮಾಡಿಸಿದ್ದ.

ಮಂಗಳೂರು: ಮತಾಂತರಗೊಳಿಸಿ ಲೈಂಗಿಕ ಕಿರುಕುಳ| ಮುಸ್ಲಿಂ ಯುವಕನ ವಿರುದ್ದ ದೂರಿತ್ತ ಯುವತಿ Read More »

ತೀವ್ರ ವಿರೋಧದ ಹಿನ್ನೆಲೆ| ಬೆಂಗಳೂರಿನಲ್ಲಿ ನಡೆಯಬೇಕಿದ್ದ ಕೊರಗಜ್ಜ ನೇಮ ರದ್ದು

ಸಮಗ್ರ ನ್ಯೂಸ್: ಬೆಂಗಳೂರಿನ ಯಲಹಂಕದಲ್ಲಿ ಕೊರಗಜ್ಜ ನೇಮ ಆಚರಣೆ ಮಾಡಲು ನಿರ್ಧರಿಸಲಾಗಿದ್ದ‌ ಕೊರಗಜ್ಜ ನೇಮಕ್ಕೆ ತುಳುನಾಡಿನ ಕೆಲವರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ನೇಮೋತ್ಸವವನ್ನು ರದ್ದುಪಡಿಸಲಾಗಿದೆ. ಬೆಂಗಳೂರಿನ ಯಲಹಂಕದ ಚೊಕ್ಕನಹಳ್ಳಿಯಲ್ಲಿ ಇಂದು (ನವೆಂಬರ್ 26) ಕೆಲವರು ಕೊರಗಜ್ಜ ನೇಮ ಆಚರಿಸಲು ಮುಂದಾಗಿದ್ದರು. ಆದರೆ, ಇದಕ್ಕೆ ತುಳುವರಿಂದ ವಿರೋಧ ವ್ಯಕ್ತವಾಯಿತು. ‘ಇದನ್ನು ನಾವು ಸ್ವಾಗತಿಸುವುದಿಲ್ಲ. ಈ ರೀತಿಯ ಕಾರ್ಯಕ್ರಮಗಳಿಂದ ಸಂಘಟಕರು ಹಣ ಮಾಡುತ್ತಿದ್ದಾರೆ. ದೈವಾರಾಧನೆ ಎಂದರೆ ದೇವತಾರಾಧನೆ ಎಂದರ್ಥ. ದೇವತೆ ನೆಲೆಸಿರುವ ಭೂಮಿಯಲ್ಲಿ ಮಾತ್ರ ಅದನ್ನು ಮಾಡಬೇಕು’ ಎಂದು ತುಳು

ತೀವ್ರ ವಿರೋಧದ ಹಿನ್ನೆಲೆ| ಬೆಂಗಳೂರಿನಲ್ಲಿ ನಡೆಯಬೇಕಿದ್ದ ಕೊರಗಜ್ಜ ನೇಮ ರದ್ದು Read More »

ಮಂಗಳೂರು: ವಿವಾದಿತ ಮಳಲಿ ಮಸೀದಿ ತೀರ್ಪು ಅ.17ರವರೆಗೆ ಕಾಯ್ದಿರಿಸಿದ ಕೋರ್ಟ್

ಸಮಗ್ರ ನ್ಯೂಸ್: ಮಂಗಳೂರು ನಗರದ ಹೊರವಲಯದ ಗಂಜಿಮಠ ಬಳಿಯ ಮಳಲಿ ಮಸೀದಿ ವಿವಾದ ಹಿನ್ನೆಲೆ ಸ್ಥಳದಲ್ಲಿ ಸರ್ವೇ ಮಾಡಿಸುವಂತೆ ಕೋರಿ ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ 3ನೇ ಹೆಚ್ಚುವರಿ ಸಿವಿಲ್ ಕೋರ್ಟ್, ಆದೇಶವನ್ನು ಕಾಯ್ದಿರಿಸಿದೆ. ಅಲ್ಲದೆ ಅ.17ರಂದು ಆದೇಶ ಹೊರಡಿಸುವುದಾಗಿ ಸ್ಪಷ್ಟಪಡಿಸಿದೆ. ಏಪ್ರಿಲ್ 21ರಂದು ನಗರದ ಹೊರವಲಯದ ಮಳಲಿಯಲ್ಲಿರುವ ಅಸಯ್ಯಿದ್ ಅಬ್ದುಲ್ಲಾಹಿಲ್ ಮದನಿ ಮಸೀದಿಯನ್ನು ನವೀಕರಣ ಹಿನ್ನೆಲೆಯಲ್ಲಿ ಕೆಡವಿ ಹಾಕಲಾಗಿತ್ತು. ನವೀಕರಣಕ್ಕೆ ಮುಂದಾದಾಗ ಹಿಂದೂ ದೇಗುಲ ಹೋಲುವ ಆಕೃತಿಯ ವಾಸ್ತುಶಿಲ್ಪದ ಕಟ್ಟಡ ಪತ್ತೆಯಾಗಿತ್ತು.‌

ಮಂಗಳೂರು: ವಿವಾದಿತ ಮಳಲಿ ಮಸೀದಿ ತೀರ್ಪು ಅ.17ರವರೆಗೆ ಕಾಯ್ದಿರಿಸಿದ ಕೋರ್ಟ್ Read More »

ಪ್ರಧಾನಿ ಮೋದಿ ಸ್ವಾಗತಕ್ಕೆ ಕುಡ್ಲ ಸಜ್ಜು| ಇಂದಿನ ಕಾರ್ಯಕ್ರಮಗಳು ಹೀಗಿರಲಿವೆ…

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಇಂದು ಮಂಗಳೂರು ಭೇಟಿ ನೀಡಲಿದ್ದಾರೆ. ಕೊಚ್ಚಿನ್​ನಿಂದ ವಿಶೇಷ ವಿಮಾನದ ಮೂಲಕ ಪ್ರಧಾನಿ ಮಧ್ಯಾಹ್ನ 12.55ರ ಸುಮಾರಿಗೆ ಮಂಗಳೂರು ವಿಮಾನ ನಿಲ್ದಾಣ ತಲುಪಲಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜ್ಯ, ಕೇಂದ್ರ ಸಚಿವರು ಪ್ರಧಾನಿ ಮೋದಿಯವರನ್ನು ಸ್ವಾಗತಿಸಲಿದ್ದಾರೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಧ್ಯಾಹ್ನ 1.20ಕ್ಕೆ ಸೇನಾ ಹೆಲಿಕಾಪ್ಟರ್ ಮೂಲಕ ಪ್ರಧಾನಿ ಮೋದಿ ಪಣಂಬೂರುನಲ್ಲಿರುವ ಎನ್​.ಎಂ.ಪಿ.ಎ ಹೆಲಿಪ್ಯಾಡ್​ಗೆ ಬರಲಿದ್ದಾರೆ. ಮಧ್ಯಾಹ್ನ 1.30 ಗಂಟೆಗೆ ಎನ್​.ಎಂ.ಪಿ.ಎ ಹೆಲಿಪ್ಯಾಡ್​ನಿಂದ ಒಂದೂವರೆ ಕಿ.ಮೀ

ಪ್ರಧಾನಿ ಮೋದಿ ಸ್ವಾಗತಕ್ಕೆ ಕುಡ್ಲ ಸಜ್ಜು| ಇಂದಿನ ಕಾರ್ಯಕ್ರಮಗಳು ಹೀಗಿರಲಿವೆ… Read More »

ಮಂಗಳೂರು ರೈಲಿನಲ್ಲಿ ಭಾರೀ ರಾಬರಿ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ರೈಲಿನಲ್ಲಿ ಬರುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಮಹಿಳೆಯ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ದರೋಡೆ ಮಾಡಿರುವ ಘಟನೆ ನಡೆದಿದೆ. ಕಾರವಾದ ಮೂಲದ ಶಿಕ್ಷಕ ರಮೇಶ್‌ ಮತ್ತು ನಿರ್ಮಲಾ ದಂಪತಿ ರೈಲಿನಲ್ಲಿ ರಾತ್ರಿ ಕಾರವಾರಕ್ಕೆ ರೈಲಿನಲ್ಲಿ ಹೊರಟಿದ್ದರು.ಈ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ವ್ಯಾನಿಟಿ ಬ್ಯಾಗ್‌ ತೆಗೆದುಕೊಂಡು ಪರಾರಿಯಾಗಿದ್ದಾನೆ. ನಂತರ ಆತ ರೈಲಿನಿಂದ ಹಾರಲು ಯತ್ನಿಸಿದ್ದಾನೆ. ಕೂಡಲೇ ಮಹಿಳೆ ತುರ್ತು ಸಂದರ್ಭ ರೈಲು ನಿಲ್ಲಿಸುವ ಚೈನ್‌ ಎಳೆದಿದ್ದಾರೆ. ಅದರಂತೆ ರೈಲಿನ ವೇಗ

ಮಂಗಳೂರು ರೈಲಿನಲ್ಲಿ ಭಾರೀ ರಾಬರಿ Read More »

ಮೋದಿ ಕಾರ್ಯಕ್ರಮಕ್ಕೆ ಜರ್ಮನ್ ಪೆಂಡಾಲ್| ಭರದಿಂದ ನಡೆಯುತ್ತಿರುವ ತಯಾರಿ

ಸಮಗ್ರ ನ್ಯೂಸ್: ಸಪ್ಟೆಂಬರ್​ 2 ರಂದು ಮಂಗಳೂರಿನಲ್ಲಿ ನಡೆಯುವ ಪ್ರಧಾನಿ ನರೇಂದ್ರ ಮೋದಿ ಅವರ ಸರಕಾರಿ ಸಮಾವೇಶಕ್ಕೆ ವಿಶಾಲ ಜರ್ಮನ್ ಪೆಂಡಾಲ್ ಅಳವಡಿಸಲು ಮತ್ತು ವೇದಿಕೆ ಸಹಿತ ಇಡೀ ಸಭಾಂಗಣ ಪೂರ್ತಿ ನೆಲದಿಂದ ಎತ್ತರದಲ್ಲಿ ಇರುವಂತೆ ಸಿದ್ಧತೆ ಆರಂಭವಾಗಿದೆ. ಕೂಳೂರಿನಲ್ಲಿರುವ ಗೋಲ್ಡ್ ಪಿಂಚ್ ಸಿಟಿಯಲ್ಲಿ ಕಾರ್ಯಕ್ರಮ ನಡೆಯಲಿದೆ. ಕರಾವಳಿಯಲ್ಲಿ ಪದೇ ಪದೇ ಮಳೆಯಾಗುತ್ತಿದ್ದು ಪ್ರಧಾನಿ ಸಮಾವೇಶಕ್ಕೆ ತೊಂದರೆಯಾಗದಂತೆ ಇಡೀ ಸಮಾವೇಶ ಸ್ಥಳವನ್ನು ಪೂರ್ತಿಯಾಗಿ ನೆಲಮಟ್ಟದಿಂದ ತುಸು ಎತ್ತರದಲ್ಲಿ ಫ್ಲ್ಯಾಟ್‌ಫಾರಂ ರಚಿಸಲಾಗುತ್ತದೆ. ಇದರಿಂದಾಗಿ ಒಂದು ವೇಳೆ ಮಳೆ ಬಂದರೂ

ಮೋದಿ ಕಾರ್ಯಕ್ರಮಕ್ಕೆ ಜರ್ಮನ್ ಪೆಂಡಾಲ್| ಭರದಿಂದ ನಡೆಯುತ್ತಿರುವ ತಯಾರಿ Read More »

ಸೆ.02 ಮಂಗಳೂರಿಗೆ ಪ್ರಧಾನಿ ಮೋದಿ| ಪ್ರಮುಖ ವಿಷಯಗಳ ಚರ್ಚೆ ಸಾಧ್ಯತೆ

ಸಮಗ್ರ ನ್ಯೂಸ್: ಕೇಂದ್ರ ಗೃಹ ಸಚಿವ ಅಮಿತ್ ಶಾ ಇತ್ತೀಚೆಗಷ್ಟೇ ರಾಜ್ಯಕ್ಕೆ ಭೇಟಿ ನೀಡಿದ್ದು, ಇದರ ಬೆನ್ನಲ್ಲೇ ಪ್ರಧಾನಿ ಮೋದಿ ಕೂಡ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಸೆ. 2 ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸಲಿದ್ದಾರೆ. ಸರ್ಕಾರದ ಅಧಿಕೃತ ಕಾರ್ಯಕ್ರಮ ಹಿನ್ನೆಲೆಯಲ್ಲಿ ಪ್ರಧಾನಿ ಅಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಮೋದಿ ಮಂಗಳೂರು ಪ್ರವಾಸ ಕೈಗೊಂಡ ಹಿನ್ನೆಲೆಯಲ್ಲಿ ಪ್ರಧಾನಿ ಕಾರ್ಯಾಲಯದ ಅಧಿಕಾರಿಗಳು, ಪ್ರಧಾನಿ ಭದ್ರತಾ ಅಧಿಕಾರಿಗಳು ಮಂಗಳೂರಿಗೆ ಆಗಮಿಸಿ ಪೂರ್ವ ಸಿದ್ಧತೆ ಮತ್ತು ಭದ್ರತೆ ವ್ಯವಸ್ಥೆ ಪರಿಶೀಲನೆ

ಸೆ.02 ಮಂಗಳೂರಿಗೆ ಪ್ರಧಾನಿ ಮೋದಿ| ಪ್ರಮುಖ ವಿಷಯಗಳ ಚರ್ಚೆ ಸಾಧ್ಯತೆ Read More »

ಮಂಗಳೂರಿನಿಂದ ಕಾಶ್ಮೀರ

ಏಕಾಂಗಿಯಾಗಿ ಬೈಕ್ ನಲ್ಲಿ ದೇಶಾದ್ಯಂತ ಪರ್ಯಟನೆ ಮಾಡಿದ ಅಮೃತಾ ಮಂಗಳೂರು: ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆ ಸವಿನೆನಪಿನಲ್ಲಿ ಕಾಸರಗೋಡು ಮೂಲದ, ಮಂಗಳೂರಿನ ಕೆನರಾ ಗರ್ಲ್ಸ್ ಹೈಸ್ಕೂಲ್ ನ ಹಳೆ ವಿದ್ಯಾರ್ಥಿನಿ ಅಮೃತಾ ಜೋಷಿ ಏಕಾಂಗಿಯಾಗಿ ಬೈಕ್ ನಲ್ಲಿ ದೇಶಾದ್ಯಂತ ಪರ್ಯಟನೆ ಮಾಡಿದ್ದಾರೆ. 21 ವರ್ಷ ಅಮೃತಾ ಜೋಷಿ ತಿರಂಗಾ ಯಾತ್ರಾ ಅಭಿಯಾನದ ಅಂಗವಾಗಿ , ದೇಶದ ಏಕತೆಯನ್ನು ಸಾರಲು ಕಳೆದ 3 ತಿಂಗಳುಗಳಿಂದ ಏಕಾಂಗಿಯಾಗಿ ಬೈಕ್ ನಲ್ಲಿ 22000 ಕಿ.ಮೀ ಸಂಚರಿಸಿ ದೇಶಾದ್ಯಂತ ಪರ್ಯಟನೆ ಮಾಡಿದ್ದಾರೆ.

ಮಂಗಳೂರಿನಿಂದ ಕಾಶ್ಮೀರ Read More »