Rain news

ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ| ಸೆ.29ರ ವರೆಗೆ ರಾಜ್ಯದ ಹಲವೆಡೆ ಮಳೆ‌ ಸಂಭವ

ಸಮಗ್ರ ನ್ಯೂಸ್: ಕೆಲವು ದಿನಗಳಿಂದ ಬಿಡುವು ನೀಡಿದ್ದ ಮಳೆ ಮತ್ತೆ ಆರಂಭವಾಗಿದ್ದು, ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಮಲೆನಾಡು, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಮಂಡ್ಯ, ಮೈಸೂರು, ಕೋಲಾರ, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಯಾದಗಿರಿ, ಕೊಪ್ಪಳ, ಗದಗ, […]

ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ| ಸೆ.29ರ ವರೆಗೆ ರಾಜ್ಯದ ಹಲವೆಡೆ ಮಳೆ‌ ಸಂಭವ Read More »

ಪುತ್ತೂರು: ಧಾರಾಕಾರ ಮಳೆಗೆ ರಾತ್ರೋರಾತ್ರಿ ಧರೆಗುರುಳಿದ ಮನೆ; ಅಪಾರ ನಷ್ಟ

ಸಮಗ್ರ ನ್ಯೂಸ್: ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಬಲ್ನಾಡು ಗ್ರಾಮದ ಸಾರ್ಯ ಸಮೀಪ ಮನೆಯೊಂದು ಕುಸಿದು ಬಿದ್ದು ಅಪಾರ ನಷ್ಟ ಉಂಟಾದ ಘಟನೆ ನಡೆದಿದೆ. ಬಲ್ನಾಡು ಗ್ರಾಮದ ಸಾರ್ಯ ಅಬರೆಗುರಿ ನಿವಾಸಿ ವಿಶ್ವನಾಥ ರೈ ಎಂಬವರ ಹಂಚಿನ ಮಾಡಿನ ಮನೆ ಮಳೆಗೆ ಕುಸಿದು ಬಿದ್ದಿರುವುದಾಗಿದೆ. ಕೂಲಿ ಕಾರ್ಮಿಕರಾಗಿ ಜೀವನ ನಿರ್ವಹಣೆ ಮಾಡುತ್ತಿರುವ ಇವರು ಪತ್ನಿ, ಇಬ್ಬರು ಪುತ್ರಿಯರು ಮನೆಯಲ್ಲಿ ವಾಸವಿದ್ದರು. ರಾತ್ರಿ ಸುಮಾರು ಒಂದೂವರೆ ಗಂಟೆ ವೇಳೆಗೆ ಮನೆ ಕುಸಿದು ಬಿದ್ದಿದೆ. ಮನೆ ಕುಸಿಯುತ್ತಿದ್ದ ಶಬ್ದ ಕೇಳಿ

ಪುತ್ತೂರು: ಧಾರಾಕಾರ ಮಳೆಗೆ ರಾತ್ರೋರಾತ್ರಿ ಧರೆಗುರುಳಿದ ಮನೆ; ಅಪಾರ ನಷ್ಟ Read More »

ಕರಾವಳಿ, ಉತ್ತರ‌ ಕರ್ನಾಟಕದಲ್ಲಿ ಇಂದೂ ಭಾರೀ ಮಳೆ ಸಂಭವ

ಸಮಗ್ರ ನ್ಯೂಸ್: ಕರಾವಳಿ ಸೇರಿದಂತೆ ಉತ್ತರ ಕರ್ನಾಟಕ, ಹಾಗೂ ರಾಜ್ಯಾದ್ಯಂತ ಇಂದೂ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಲ್ಲಿ ಅರೆಂಜ್, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕೊಡಗು, ಹಾಸನ, ಚಿಕ್ಕಮಗಳುರು, ಶಿವಮೊಗ್ಗ, ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲೂ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನಾಳೆ ಬೀದರ್, ಕಲಬುರಗಿ, ಬಾಗಲಕೋಟೆ, ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಧಾರವಾಡ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ

ಕರಾವಳಿ, ಉತ್ತರ‌ ಕರ್ನಾಟಕದಲ್ಲಿ ಇಂದೂ ಭಾರೀ ಮಳೆ ಸಂಭವ Read More »

ರಾಜಧಾನಿಯಲ್ಲಿ ಮಳೆ‌ ಅವಾಂತರ| ಕಾಂಗ್ರೆಸ್ ನಿಂದ ಕಾಣೆಯಾದ ಸಚಿವ, ಸಂಸದ, ಶಾಸಕರ ಪಟ್ಟಿ ಬಿಡುಗಡೆ| ಟ್ವೀಟ್ ಮಾಡಿ ಆಡಳಿತದ ಕಾಲೆಳದ ಪ್ರತಿಪಕ್ಷ

ಸಮಗ್ರ ನ್ಯೂಸ್: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆ ಹಾವಳಿಯಿಂದ ಅವಾಂತರ ಸೃಷ್ಟಿಯಾಗಿದ್ದು, ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದಿಗ್ಧತೆಯಲ್ಲಿ ಅವರ ಕಷ್ಟಗಳನ್ನು ಆಲಿಸದೇ ಸಚಿವರು ಕಾಣೆಯಾಗಿದ್ದಾರೆ ಎಂದು ಕಾಂಗ್ರೆಸ್‌ ಟೀಕಿಸಿದೆ. ಬಿಜೆಪಿ (BJP) ಆಡಳಿತದ ಕೆಲ ಸಚಿವರು, ಸಂಸದರ ಪಟ್ಟಿಯನ್ನು ಕಾಂಗ್ರೆಸ್‌ (Congress) ಬಿಡುಗಡೆ ಮಾಡಿದೆ. ಸಚಿವರು, ಸಂಸದರು ಕಾಣೆಯಾಗಿದ್ದಾರೆ ಎಂದು ಟ್ವೀಟ್‌ ಮಾಡಿ ಕಾಲೆಳೆದಿದೆ. ಟ್ವೀಟ್‌ನಲ್ಲೇನಿದೆ?ಸಚಿವ ಸುಧಾಕರ್‌ ಅವರು ಕೋವಿಡ್ ಕಾಲದಲ್ಲಿ ಸ್ವಿಮ್ಮಿಂಗ್ ಪೂಲ್‌ನಲ್ಲಿ ಸ್ವಿಮ್ಮಿಂಗ್ ಮಾಡ್ತಿದ್ರು. ಈಗ ಬೆಂಗಳೂರು ಸ್ವಿಮ್ಮಿಂಗ್ ಪೂಲ್ ಆಗಿದೆ, ಜನತೆ

ರಾಜಧಾನಿಯಲ್ಲಿ ಮಳೆ‌ ಅವಾಂತರ| ಕಾಂಗ್ರೆಸ್ ನಿಂದ ಕಾಣೆಯಾದ ಸಚಿವ, ಸಂಸದ, ಶಾಸಕರ ಪಟ್ಟಿ ಬಿಡುಗಡೆ| ಟ್ವೀಟ್ ಮಾಡಿ ಆಡಳಿತದ ಕಾಲೆಳದ ಪ್ರತಿಪಕ್ಷ Read More »

ಈ ಜಿಲ್ಲೆಗಳಲ್ಲಿ ಭಾರೀ ಮಳೆ‌ ಸಾಧ್ಯತೆ; ಹವಾಮಾನ ಕೇಂದ್ರದಿಂದ ರೆಡ್ ಅಲರ್ಟ್

ಸಮಗ್ರ ನ್ಯೂಸ್: ರಾಜ್ಯದ ಆರು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಭಾರತೀಯ ಹವಾಮಾನ ಕೇಂದ್ರ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಮೈಸೂರು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ 11.56 ಸೆ.ಮೀ. ನಿಂದ 20.44 ಸೆ.ಮೀ.ವರೆಗೆ ಮಳೆಯಾಗುವ ನಿರೀಕ್ಷೆಯಿದ್ದು, ‘ಆರೆಂಜ್ ಅಲರ್ಟ್ ನೀಡಲಾಗಿದೆ. ಮಂಡ್ಯ, ಚಿತ್ರದುರ್ಗ, ಶಿವಮೊಗ್ಗ, ಹಾವೇರಿ, ಬಳ್ಳಾರಿ, ಗದಗ, ಕೊಪ್ಪಳ, ಉತ್ತರ ಕನ್ನಡ, ತುಮಕೂರು, ಬಾಗಲಕೋಟೆ

ಈ ಜಿಲ್ಲೆಗಳಲ್ಲಿ ಭಾರೀ ಮಳೆ‌ ಸಾಧ್ಯತೆ; ಹವಾಮಾನ ಕೇಂದ್ರದಿಂದ ರೆಡ್ ಅಲರ್ಟ್ Read More »

ಇಂದು ಯಾವ ರಾಜ್ಯಗಳಲ್ಲಿ ಮಳೆ? ಇಲ್ಲಿದೆ ಫುಲ್ ಡೀಟೈಲ್ಸ್

ಸಮಗ್ರ ನ್ಯೂಸ್: ಇಂದು ಕರ್ನಾಟಕ, ಗೋವಾ, ಕೇರಳ ಮತ್ತು ಲಕ್ಷದ್ವೀಪದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಕೂಡ ಭಾರೀ ಮಳೆಯನ್ನು ನಿರೀಕ್ಷಿಸಲಾಗಿದೆ. ಸಿಕ್ಕಿಂ, ಪಶ್ಚಿಮ ಬಂಗಾಳ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಜಾರ್ಖಂಡ್, ಛತ್ತೀಸ್‌ಗಢ, ಒಡಿಶಾ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ ಮತ್ತು ತಮಿಳುನಾಡುಗಳಲ್ಲಿ ಸಾಕಷ್ಟು ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ. ಬಿಹಾರ ಮತ್ತು ಮಧ್ಯಪ್ರದೇಶದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಲಡಾಖ್, ಜಮ್ಮು

ಇಂದು ಯಾವ ರಾಜ್ಯಗಳಲ್ಲಿ ಮಳೆ? ಇಲ್ಲಿದೆ ಫುಲ್ ಡೀಟೈಲ್ಸ್ Read More »

ಜನ ಮಳೆನೀರಲ್ಲಿ ಮುಳುಗಿದರೆ ಸಚಿವರು ನಿದ್ದೆಯಲ್ಲಿ‌ ಮುಳುಗಿದರು!! ಸಭೆಯಲ್ಲಿ ಸುಖನಿದ್ರೆಗೆ ಜಾರಿದ ಕಂದಾಯ‌ ಮಂತ್ರಿ ಅಶೋಕ್

ಸಮಗ್ರ ನ್ಯೂಸ್: ವರುಣಾರ್ಭಟಕ್ಕೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿಯುಂಟಾಗಿದ್ದು, ರಾಜಧಾನಿ ಬೆಂಗಳೂರು ಅಕ್ಷರಶಃ ಮುಳುಗಡೆಯಾಗಿದೆ. ಇಂತಹ ಸಂದರ್ಭದಲ್ಲಿಯೂ ಕಂದಾಯ ಸಚಿವ ಆರ್.ಅಶೋಕ್ ಸಭೆಯಲ್ಲಿಯೂ ನಿದ್ದೆಗೆ ಜಾರಿದ್ದು, ಸಚಿವರ ಬೇಜವಾಬ್ದಾರಿಗೆ ಕಾಂಗ್ರೆಸ್ ಕಿಡಿಕಾರಿದೆ. ಸರಣಿ ಟ್ವೀಟ್ ಮೂಲಕ ಕಿಡಿ ಕಾರಿರುವ ಕಾಂಗ್ರೆಸ್, ಬಿಜೆಪಿ ಪ್ರಣಾಳಿಕೆಯ ಭರವಸೆಗಳು ಮಾತ್ರ ಆಕರ್ಷಕ, ಮನಮೋಹಕ. ಆದರೆ ಆಡಳಿತ ಮಾತ್ರ ಜನತೆಗೆ ಯಾತನಾದಾಯಕ, ಭ್ರಷ್ಟಾಚಾರವೇ ಕಾಯಕವಾಗಿದೆ. ಬೆಂಗಳೂರನ್ನು ವಿಶ್ವದರ್ಜೆಯ ನಗರ ಮಾಡುವೆವು ಎಂದ ಬಿಜೆಪಿ ಈಗ ರಸ್ತೆಗುಂಡಿಗಳ ನಗರ, ಮುಳುಗುವ ನಗರವನ್ನಾಗಿ ಮಾಡಿದೆ.

ಜನ ಮಳೆನೀರಲ್ಲಿ ಮುಳುಗಿದರೆ ಸಚಿವರು ನಿದ್ದೆಯಲ್ಲಿ‌ ಮುಳುಗಿದರು!! ಸಭೆಯಲ್ಲಿ ಸುಖನಿದ್ರೆಗೆ ಜಾರಿದ ಕಂದಾಯ‌ ಮಂತ್ರಿ ಅಶೋಕ್ Read More »

ಮುಂಗಾರು ಮಳೆ ಆರ್ಭಟ ಮತ್ತೆ ಮುಂದುವರೆಯುವ ಸಾಧ್ಯತೆ

ಸಮಗ್ರ ನ್ಯೂಸ್:ಕೆಲವು ದಿನಗಳಿಂದ ಕಡಿಮೆಯಾಗಿದ್ದ ಮುಂಗಾರು ಮಳೆ ಆರ್ಭಟ ಮತ್ತೆ ಮುಂದುವರೆಯುವ ಸಾಧ್ಯತೆ ಇದೆ. ಭಾನುವಾರ ಮತ್ತು ಸೋಮವಾರ ಸಾಧಾರಣ ಮಳೆಯಾಗಲಿದ್ದು, ಆಗಸ್ಟ್ 23, 24 ರ ಮಂಗಳವಾರ, ಬುಧವಾರ ಭಾರಿ ಮಳೆಯಾಗಲಿದೆ. ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಭಾನುವಾರ ಮತ್ತು ಸೋಮವಾರ ರಾಜ್ಯಾದ್ಯಂತ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಭಾರಿ ಮಳೆಯಾಗುವ ಸಾಧ್ಯತೆ ಹಿನ್ನಲೆಯಲ್ಲಿ ಆ. 23 ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ದಕ್ಷಿಣ ಒಳನಾಡಿನ ಕೊಡಗು,

ಮುಂಗಾರು ಮಳೆ ಆರ್ಭಟ ಮತ್ತೆ ಮುಂದುವರೆಯುವ ಸಾಧ್ಯತೆ Read More »

ಕರಾವಳಿಗರೇ ಎಚ್ಚರ; ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ರಾಜ್ಯದ ಮಳೆ ಮತ್ತು ಮುಂದಿನ 48 ಗಂಟೆಗಳ ಹವಾಮಾನ ವರದಿ ಪ್ರಕಾರ ನೈರುತ್ಯ ಮುಂಗಾರು ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕಾಗಿದೆ . ನಿನ್ನೆ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗಿದೆ . ಅತಿ ಭಾರಿ ಮಳೆಯ ಪ್ರಮಾಣ ಉಡುಪಿ ಜಿಲ್ಲೆ ಕೊಲ್ಲೂರು , ಕೊಡಗು ಜಿಲ್ಲೆಯ ಭಾಗಮಂಡಲ ತಲಾ 16 ಸೆ . ಮಿ ಮಳೆ ದಾಖಲಾಗಿದೆ . ಭಾರಿ ಮಳೆಯ

ಕರಾವಳಿಗರೇ ಎಚ್ಚರ; ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ Read More »