Weather report

ಹವಾಮಾನ ವರದಿ; ಡಿ. 12ರವರೆಗೂ ಮುಂದುವರಿಯಲಿದೆ ಮಳೆ; ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್

ಸಮಗ್ರ ನ್ಯೂಸ್: ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಉಂಟಾಗಿರುವ ಮ್ಯಾಂಡೌಸ್‌ ಚಂಡಮಾರುತದ ಪರಿಣಾಮ ರಾಜ್ಯದ ವಿವಿಧ ಭಾಗಗಳಲ್ಲಿ ಡಿಸೆಂಬರ್ 12ರ ವರೆಗೆ ಮೋಡ ಕವಿದ ವಾತಾವರಣ, ಚಳಿಯ ಜೊತೆಗೆ ಮಳೆ ಸುರಿಯಲಿದೆ. ಮುಂದಿನ 24 ಗಂಟೆಗಳ ಕಾಲ ದಕ್ಷಿಣ ಒಳನಾಡಿನ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಭಾಗಗಳಲ್ಲಿ ಮೋಡ ಕವಿದ ವಾತಾವರಣ, ಮಳೆ ಚಳಿಯ ವಾತಾವರಣ ಸೃಷ್ಟಿಯಾಗಿದೆ. ನಾಳೆ ಗುಡುಗು ಮತ್ತು ಬಿರುಗಾಳಿಯೊಂದಿಗೆ ಮಳೆಯಾಗುವ ನಿರೀಕ್ಷೆಯಿದೆ. […]

ಹವಾಮಾನ ವರದಿ; ಡಿ. 12ರವರೆಗೂ ಮುಂದುವರಿಯಲಿದೆ ಮಳೆ; ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ Read More »

ಮುಂದಿನ ಮೂರು ತಿಂಗಳು ಮುಂದುವರಿಯುತ್ತೆ ವರುಣಾರ್ಭಟ| ಹವಾಮಾನ ತಜ್ಞರಿಂದ ಮಾಹಿತಿ

ಸಮಗ್ರ ನ್ಯೂಸ್: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಮೂರು ತಿಂಗಳು ಮಳೆಯಾಗಲಿದೆ. ಈ ಮಳೆ ಎದುರಿಸಲು ಜನ ಸಿದ್ಧರಾಗಬೇಕಿದೆ ಎಂದು ಹವಾಮಾನ ತಜ್ಞ ಪ್ರಸಾದ್ ಎಚ್ಚರಿಕೆ ನೀಡಿದರು. ಕಳೆದೊಂದು ವಾರದಿಂದ ಮಳೆಗೆ ತತ್ತರಿಸಿರುವ ಬೆಂಗಳೂರಲ್ಲಿ ಇನ್ನೂ 3 ತಿಂಗಳ ಕಾಲ ಮುಂದುವರಿಯಲಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ನವೆಂಬರ್ ವರೆಗೂ ಮಳೆಯಾಗಲಿದೆ. ಒಟ್ಟಾರೆಯಾಗಿ ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಸೆ. 1 ರಿಂದ ಇದುವರೆಗೂ 211 ಎಂ.ಎಂ ಮಳೆಯಾಗಿದೆ. ಕರಾವಳಿಗೆ

ಮುಂದಿನ ಮೂರು ತಿಂಗಳು ಮುಂದುವರಿಯುತ್ತೆ ವರುಣಾರ್ಭಟ| ಹವಾಮಾನ ತಜ್ಞರಿಂದ ಮಾಹಿತಿ Read More »

ಕರಾವಳಿ, ಉತ್ತರ‌ ಕರ್ನಾಟಕದಲ್ಲಿ ಇಂದೂ ಭಾರೀ ಮಳೆ ಸಂಭವ

ಸಮಗ್ರ ನ್ಯೂಸ್: ಕರಾವಳಿ ಸೇರಿದಂತೆ ಉತ್ತರ ಕರ್ನಾಟಕ, ಹಾಗೂ ರಾಜ್ಯಾದ್ಯಂತ ಇಂದೂ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಲ್ಲಿ ಅರೆಂಜ್, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕೊಡಗು, ಹಾಸನ, ಚಿಕ್ಕಮಗಳುರು, ಶಿವಮೊಗ್ಗ, ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲೂ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನಾಳೆ ಬೀದರ್, ಕಲಬುರಗಿ, ಬಾಗಲಕೋಟೆ, ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಧಾರವಾಡ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ

ಕರಾವಳಿ, ಉತ್ತರ‌ ಕರ್ನಾಟಕದಲ್ಲಿ ಇಂದೂ ಭಾರೀ ಮಳೆ ಸಂಭವ Read More »

ಇಂದು ಯಾವ ರಾಜ್ಯಗಳಲ್ಲಿ ಮಳೆ? ಇಲ್ಲಿದೆ ಫುಲ್ ಡೀಟೈಲ್ಸ್

ಸಮಗ್ರ ನ್ಯೂಸ್: ಇಂದು ಕರ್ನಾಟಕ, ಗೋವಾ, ಕೇರಳ ಮತ್ತು ಲಕ್ಷದ್ವೀಪದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಕೂಡ ಭಾರೀ ಮಳೆಯನ್ನು ನಿರೀಕ್ಷಿಸಲಾಗಿದೆ. ಸಿಕ್ಕಿಂ, ಪಶ್ಚಿಮ ಬಂಗಾಳ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಜಾರ್ಖಂಡ್, ಛತ್ತೀಸ್‌ಗಢ, ಒಡಿಶಾ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ ಮತ್ತು ತಮಿಳುನಾಡುಗಳಲ್ಲಿ ಸಾಕಷ್ಟು ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ. ಬಿಹಾರ ಮತ್ತು ಮಧ್ಯಪ್ರದೇಶದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಲಡಾಖ್, ಜಮ್ಮು

ಇಂದು ಯಾವ ರಾಜ್ಯಗಳಲ್ಲಿ ಮಳೆ? ಇಲ್ಲಿದೆ ಫುಲ್ ಡೀಟೈಲ್ಸ್ Read More »

ಮುಳುಗಿದ ಬೆಂಗಳೂರು; ಮಳೆಹಾನಿ ನಿರ್ವಹಣೆಗೆ 600 ಕೋಟಿ ಬಿಡುಗಡೆ

ಸಮಗ್ರ ನ್ಯೂಸ್: ಸಿಎಂ ಬೊಮ್ಮಾಯಿ ಬೆಂಗಳೂರು ಮಳೆ ಹಾನಿ ಮಾಹಿತಿ ಪಡೆದಿದ್ದು, ರಾಜ್ಯದ ಮಳೆ ಪರಿಸ್ಥಿತಿ ನಿರ್ವಹಣೆಗೆ 600 ಕೋಟಿ ರಿಲೀಸ್​ ಮಾಡಿದೆ. ಬೆಂಗಳೂರಿಗೆ 300 ಕೋಟಿ ಬಿಡುಗಡೆ ಮಾಡಲು ತೀರ್ಮಾನ ಮಾಡಿದೆ. ಸ್ಟಾರ್ಮ್​​​ ವಾಟರ್ ಡ್ರೈನ್ ಮಾಡಲು 300 ಕೋಟಿ ಬಿಡುಗಡೆ ಮಾಡಲಾಗುತ್ತದೆ. ಬೆಂಗಳೂರಿಗೆ ಕಾವೇರಿ ನೀರು ಪಂಪ್​ ಮಾಡುವ ಸ್ಥಳಕ್ಕೂ ಭೇಟಿ ನೀಡಿದ್ಧಾರೆ. ತೊರೆಕಾಡನಹಳ್ಳಿಯಲ್ಲಿ BWSSB ಪಂಪ್​​ ಹೌಸ್​ ಮುಳುಗಿದೆ. ಸೆಪ್ಟೆಂಬರ್​​ ಆರಂಭದಲ್ಲೇ ಶೇ.51ರಷ್ಟು ದಾಖಲೆ ಮಳೆ ಆಗಿದೆ. 17 ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ

ಮುಳುಗಿದ ಬೆಂಗಳೂರು; ಮಳೆಹಾನಿ ನಿರ್ವಹಣೆಗೆ 600 ಕೋಟಿ ಬಿಡುಗಡೆ Read More »

ರಾಜ್ಯದಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ| ಹವಾಮಾನ ಇಲಾಖೆಯಿಂದ ಮಾಹಿತಿ

ಸಮಗ್ರ ನ್ಯೂಸ್ : ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ. ಬೆಂಗಳೂರಿನಲ್ಲಿ ಮಳೆ ಕೊಂಚ ಕಡಿಮೆಯಾಗಿದ್ದರೂ ಇನ್ನೂ 1 ವಾರ ಹಗುರ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ, ಮಲೆನಾಡಿನಲ್ಲೂ ಸೆ. 9ರವರೆಗೆ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ಕಳೆದೊಂದು ತಿಂಗಳಿನಿಂದ ವರುಣನ ಆರ್ಭಟ ಹೆಚ್ಚಾಗಿರುವುದರಿಂದ ಕಂಗೆಟ್ಟಿರುವ ಜನರಿಗೆ ಇದರಿಂದ ಇನ್ನಷ್ಟು ಆತಂಕ ಎದುರಾಗಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ವೇಗವಾಗಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಮುಂದಿನ

ರಾಜ್ಯದಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ| ಹವಾಮಾನ ಇಲಾಖೆಯಿಂದ ಮಾಹಿತಿ Read More »

ದಕ್ಷಿಣ ಕನ್ನಡ: ಹವಾಮಾನ ವರದಿ ಹಾಗೂ ಮುನ್ಸೂಚನೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹವಾಮಾನ ಇಲಾಖೆಯು ಈ ಹಿಂದೆ ಘೋಷಿಸಿದ್ದ ಯೆಲ್ಲೋ ಅಲರ್ಟ್ ಶುಕ್ರವಾರ ಆರೆಂಜ್‌ಗೆ ಬದಲಾಗಿದೆ. ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಇನ್ನೂ ಎರಡು ದಿನ ಮಳೆಯ ಅಬ್ಬರ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಮುದ್ರದಲ್ಲಿ ಗಾಳಿ ಬಲವಾಗಿ ಇರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ನೀಡಲಾಗಿರುವ ಎಚ್ಚರಿಕೆಯನ್ನು ಮುಂದುವರಿಸಲಾಗಿದೆ. ಗುರುವಾರ ಮಳೆ ಕಡಿಮೆಯಾಗಿದ್ದರೂ ಬಲವಾಗಿ ಬೀಸುವ ಗಾಳಿಯಿಂದಾಗಿ ಸಮುದ್ರದ ಪ್ರಕ್ಷುಬ್ಧತೆ ಮುಂದುವರಿಸಿದೆ.  ದ.ಕ.ಜಿಲ್ಲೆಯಲ್ಲಿ ಗುರುವಾರ ಸಾಧಾರಣ ಮಳೆಯೊಂದಿಗೆ ಬಿಸಿಲ ವಾತಾವರಣವಿತ್ತು.

ದಕ್ಷಿಣ ಕನ್ನಡ: ಹವಾಮಾನ ವರದಿ ಹಾಗೂ ಮುನ್ಸೂಚನೆ Read More »